< ಪ್ರಸಂಗಿ 3 >

1 ಪ್ರತಿಯೊಂದಕ್ಕೂ ಒಂದೊಂದು ಸಮಯವಿದೆ. ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ.
Toutes choses ont leur temps, et dans leurs limites elles passent toutes sous le ciel.
2 ಹುಟ್ಟುವುದಕ್ಕೆ ಒಂದು ಸಮಯ, ಸಾಯುವುದಕ್ಕೆ ಒಂದು ಸಮಯ. ನೆಡುವುದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕುವುದಕ್ಕೆ ಒಂದು ಸಮಯ.
Il est un temps de naître et un temps de mourir; Un temps de planter, et un temps d’arracher ce qui a été planté;
3 ಕೊಲ್ಲುವುದಕ್ಕೆ ಒಂದು ಸಮಯ, ಸ್ವಸ್ಥ ಮಾಡುವುದಕ್ಕೆ ಒಂದು ಸಮಯ, ಕೆಡವಿಬಿಡುವುದಕ್ಕೆ ಒಂದು ಸಮಯ, ಕಟ್ಟುವುದಕ್ಕೆ ಒಂದು ಸಮಯ.
Un temps de tuer, et un temps de guérir; Un temps d’abattre, et un temps de bâtir;
4 ಅಳುವುದಕ್ಕೆ ಒಂದು ಸಮಯ, ನಗುವುದಕ್ಕೆ ಒಂದು ಸಮಯ. ಗೋಳಾಡುವುದಕ್ಕೆ ಒಂದು ಸಮಯ, ಕುಣಿದಾಡುವುದಕ್ಕೆ ಒಂದು ಸಮಯ.
Un temps de pleurer, et un temps de rire; Un temps de gémir, et un temps de sauter de joie;
5 ಕಲ್ಲುಗಳನ್ನು ಎಸೆಯುವುದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸುವುದಕ್ಕೆ ಒಂದು ಸಮಯ. ಅಪ್ಪಿಕೊಳ್ಳುವುದಕ್ಕೆ ಒಂದು ಸಮಯ, ತಡೆದಿರುವುದಕ್ಕೂ ಒಂದು ಸಮಯ.
Un temps de disperser les pierres, et un temps de les rassembler; Un temps d’embrasser, et un temps de s’éloigner des embrassements;
6 ಗಳಿಸುವುದಕ್ಕೆ ಒಂದು ಸಮಯ, ಕಳೆದುಕೊಳ್ಳುವುದಕ್ಕೆ ಒಂದು ಸಮಯ. ಕಾಪಾಡುವುದಕ್ಕೆ ಒಂದು ಸಮಯ, ಬಿಸಾಡುವುದಕ್ಕೆ ಒಂದು ಸಮಯ.
Un temps d’acquérir, et un temps de perdre; Un temps de garder, et un temps de rejeter;
7 ಹರಿಯುವುದಕ್ಕೆ ಒಂದು ಸಮಯ, ಹೊಲಿಯುವುದಕ್ಕೆ ಒಂದು ಸಮಯ. ಸುಮ್ಮನೆ ಇರುವುದಕ್ಕೆ ಒಂದು ಸಮಯ, ಮಾತಾಡುವುದಕ್ಕೆ ಒಂದು ಸಮಯ.
Un temps de déchirer, et un temps de coudre; Un temps de se taire, et un temps de parler;
8 ಪ್ರೀತಿಸುವುದಕ್ಕೆ ಒಂದು ಸಮಯ, ದ್ವೇಷಿಸುವುದಕ್ಕೆ ಒಂದು ಸಮಯ. ಯುದ್ಧದ ಸಮಯ, ಸಮಾಧಾನದ ಸಮಯ, ಹೀಗೆ ಒಂದೊಂದಕ್ಕೂ ತಕ್ಕ ಸಮಯವಿದೆ.
Un temps d’amour, et un temps de haine; Un temps de guerre, et un temps de paix;
9 ಹಾಗಾದರೆ, ಪ್ರಯಾಸ ಪಡುವುದರಲ್ಲಿ ದುಡಿಯುವವನಿಗೆ ಲಾಭವೇನಿದೆ?
Quel avantage a l’homme de son travail?
10 ದೇವರು ಮಾನವ ಜನಾಂಗದ ಮೇಲೆ ಹೊರಿಸಿರುವ ಭಾರವನ್ನು ನಾನು ನೋಡಿದ್ದೇನೆ.
J’ai vu l’affliction qu’a donnée Dieu aux fils des hommes, pour qu’ils en soient tourmentés.
11 ದೇವರು ಪ್ರತಿಯೊಂದನ್ನು ತಮ್ಮ ಸೂಕ್ತ ಸಮಯದಲ್ಲಿ ಸುಂದರವಾಗಿ ನಿರ್ಮಿಸಿದ್ದಾರೆ. ಜನರ ಹೃದಯದಲ್ಲಿ ನಿತ್ಯತೆಯನ್ನು ದೇವರೇ ಇಟ್ಟಿದ್ದಾರೆ. ಆದರೂ ಆದಿಯಿಂದ ಅಂತ್ಯದವರೆಗೂ ದೇವರು ಏನು ಮಾಡಿದ್ದಾರೆಂದು ಯಾರಿಗೂ ಗ್ರಹಿಸಲು ಸಾಧ್ಯವಿಲ್ಲ.
Il a fait toutes choses bonnes en leur temps, et il a livré le monde à leurs disputes; en sorte que l’homme ne découvre pas l’œuvre que Dieu a opérée depuis le commencement jusqu’à la fin.
12 ಜನರು ತಮ್ಮ ಜೀವಮಾನದಲ್ಲಿ ಸಂತೋಷವಾಗಿದ್ದು ಒಳ್ಳೆಯದನ್ನು ಮಾಡುವುದಕ್ಕಿಂತ ಉತ್ತಮವಾದದ್ದೇನೂ ಇಲ್ಲವೆಂದು ನಾನು ಬಲ್ಲೆನು.
Et j’ai reconnu qu’il n’y avait rien de mieux que de se réjouir et de faire le bien pendant sa vie.
13 ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ಎಲ್ಲಾ ಪ್ರಯಾಸಗಳಲ್ಲಿ ಸುಖವನ್ನು ಅನುಭವಿಸುವುದು ದೇವರ ದಾನದಿಂದಲೇ.
Car tout homme qui mange, boit et voit le bien de son travail, c’est un don de Dieu.
14 ದೇವರು ಮಾಡುವ ಕಾರ್ಯವೆಲ್ಲವೂ ಶಾಶ್ವತವಾಗಿರುವುದೆಂದು ನಾನು ಬಲ್ಲೆನು; ಅದಕ್ಕೆ ಯಾವುದನ್ನೂ ಕೂಡಿಸಲಾಗದು ಮತ್ತು ಯಾವುದನ್ನೂ ತೆಗೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮನುಷ್ಯರು ಭಯಭಕ್ತಿಯಿಂದ ಜೀವಿಸಬೇಕೆಂದು ದೇವರು ಇದನ್ನು ಮಾಡಿದ್ದಾರೆ.
J’ai appris que les œuvres que Dieu a faites persévèrent à perpétuité; nous ne pouvons rien ajouter ni rien retrancher aux choses que Dieu a faites afin qu’il soit craint.
15 ಇರುವಂಥದ್ದು ಈಗಾಗಲೇ ಇತ್ತು, ಬರುವಂಥದ್ದು ಆಗಲೇ ಇದೆ. ಗತಿಸಿಹೋದದ್ದನ್ನು ದೇವರು ಪುನಃಸ್ಥಾಪಿಸುವರು.
Ce qui a été fait demeure: les choses qui doivent être ont déjà été; et Dieu rétablit ce qui est passé.
16 ಇದಕ್ಕಿಂತಲೂ ಬೇರೆಯಾದದ್ದನ್ನು ಸೂರ್ಯನ ಕೆಳಗೆ ನೋಡಿದೆನು: ನ್ಯಾಯತೀರ್ಪಿನ ಸ್ಥಳದಲ್ಲಿ ದುಷ್ಕೃತ್ಯ ಇತ್ತು. ನೀತಿಯ ಸ್ಥಾನದಲ್ಲಿಯೂ ದುಷ್ಟತ್ವ ಇತ್ತು.
J’ai vu sous le soleil, dans le lieu du jugement, l’impiété; et, dans le lieu de la justice, l’iniquité.
17 ನಾನು ನನ್ನ ಹೃದಯದಲ್ಲಿ ಹೀಗೆ ಅಂದುಕೊಂಡೆನು, “ನೀತಿವಂತರನ್ನೂ ದುಷ್ಟರನ್ನೂ ದೇವರು ನ್ಯಾಯತೀರಿಸುವನು. ಏಕೆಂದರೆ ಪ್ರತಿಯೊಂದು ಉದ್ದೇಶಕ್ಕೂ, ಪ್ರತಿಯೊಂದು ಕೆಲಸಕ್ಕೂ ಪರೀಕ್ಷೆಯ ಸಮಯವಿದೆ.”
Et j’ai dit dans mon cœur: Dieu jugera le juste et l’impie, et ce sera alors le temps de toute chose.
18 ಮತ್ತೆ ನನ್ನ ಮನಸ್ಸಿನಲ್ಲಿ ಯೋಚಿಸಿದೆ, “ಮನುಷ್ಯರು ಮೃಗಗಳಂತೆ ಇದ್ದಾರೆಂದು ತಿಳಿದುಕೊಳ್ಳಲು ದೇವರು ಅವರನ್ನು ಪರೀಕ್ಷಿಸುತ್ತಾರೆ.
J’ai dit en mon cœur touchant les fils des hommes: Que Dieu les éprouve, et montre qu’ils sont semblables à des bêtes.
19 ಏಕೆಂದರೆ ಮೃಗಗಳಿಗೆ ಸಂಭವಿಸುವುದು ಮನುಷ್ಯರಿಗೂ ಸಂಭವಿಸುತ್ತದೆ. ಇಬ್ಬರಿಗೂ ಒಂದೇ ಸಂಗತಿ ಸಂಭವಿಸುತ್ತದೆ. ಒಂದು ಹೇಗೆ ಸಾಯುತ್ತದೋ ಹಾಗೆ ಇನ್ನೊಂದೂ ಸಾಯುತ್ತದೆ. ಎಲ್ಲಕ್ಕೂ ಒಂದೇ ಪ್ರಾಣ ಇದೆ. ಆ ರೀತಿಯಲ್ಲಿ ಮೃಗಕ್ಕಿಂತ ಮನುಷ್ಯನಿಗೆ ಹೆಚ್ಚು ಶ್ರೇಷ್ಠತೆ ಇಲ್ಲ. ಎಲ್ಲವೂ ವ್ಯರ್ಥ.
C’est pour cela que le trépas est pour l’homme et pour les bêtes, et qu’égale est leur condition: comme l’homme meurt, ainsi elles meurent; de la même manière elles respirent toutes, et l’homme n’a rien de plus que la bête: toutes choses sont soumises à la vanité:
20 ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ. ಎಲ್ಲವೂ ಮಣ್ಣಿನಿಂದ ಆದವು. ಎಲ್ಲವೂ ಮಣ್ಣಿಗೆ ಸೇರುತ್ತವೆ.
Toutes choses vont vers un seul lieu: elles ont été faites de la terre, et elles retournent pareillement à la terre.
21 ಮನುಷ್ಯನ ಆತ್ಮವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಗೆ ಹೋಗುತ್ತದೆಂದೂ ಯಾರು ತಿಳಿದಾರು?”
Qui sait si l’esprit des fils d’Adam monte en haut, et si l’esprit des bêtes descend en bas?
22 ಆದಕಾರಣ ಮನುಷ್ಯನು ತನ್ನ ಕೆಲಸ ಕಾರ್ಯಗಳಲ್ಲಿ ಆನಂದಿಸುವುದಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲವೆಂದು ನಾನು ನೋಡಿದೆನು. ಏಕೆಂದರೆ ಇದೇ ಅವನ ಪಾಲು. ಆದ್ದರಿಂದ ತನ್ನ ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?
Et j’ai trouvé que rien n’est meilleur pour l’homme que de se réjouir en son œuvre, et que c’est là sa part: car qui l’amènera à connaître les choses qui doivent arriver après lui?

< ಪ್ರಸಂಗಿ 3 >