< ಪ್ರಸಂಗಿ 4 >

1 ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.
וְשַׁ֣בְתִּֽי אֲנִ֗י וָאֶרְאֶה֙ אֶת־כָּל־הָ֣עֲשֻׁקִ֔ים אֲשֶׁ֥ר נַעֲשִׂ֖ים תַּ֣חַת הַשָּׁ֑מֶשׁ וְהִנֵּ֣ה ׀ דִּמְעַ֣ת הָעֲשֻׁקִ֗ים וְאֵ֤ין לָהֶם֙ מְנַחֵ֔ם וּמִיַּ֤ד עֹֽשְׁקֵיהֶם֙ כֹּ֔חַ וְאֵ֥ין לָהֶ֖ם מְנַחֵֽם׃
2 ಆದಕಾರಣ ನಾನು ಇದನ್ನು ನೋಡಿ ಜೀವದಿಂದ ಇರುವವರಿಗಿಂತ, ಮೃತಪಟ್ಟವರೇ ಮೇಲು ಎಂದು ನಾನು ತೀರ್ಮಾನಿಸಿದೆ.
וְשַׁבֵּ֧חַ אֲנִ֛י אֶת־הַמֵּתִ֖ים שֶׁכְּבָ֣ר מֵ֑תוּ מִן־הַ֣חַיִּ֔ים אֲשֶׁ֛ר הֵ֥מָּה חַיִּ֖ים עֲדֶֽנָה׃
3 ಆದರೆ ಇವರಿಬ್ಬರಿಗಿಂತಲೂ ಇನ್ನೂ ಹುಟ್ಟದೇ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಶ್ರೇಷ್ಠನು.
וְטוֹב֙ מִשְּׁנֵיהֶ֔ם אֵ֥ת אֲשֶׁר־עֲדֶ֖ן לֹ֣א הָיָ֑ה אֲשֶׁ֤ר לֹֽא־רָאָה֙ אֶת־הַמַּעֲשֶׂ֣ה הָרָ֔ע אֲשֶׁ֥ר נַעֲשָׂ֖ה תַּ֥חַת הַשָּֽׁמֶשׁ׃
4 ಮನುಷ್ಯನು ಪಡುವ ಎಲ್ಲಾ ಪ್ರಯಾಸವನ್ನೂ ಸಾಧಿಸುವ ಎಲ್ಲಾ ಕಾರ್ಯಗಳನ್ನೂ ನೋಡಿದಾಗ ಇವು ಪರಸ್ಪರ ಮತ್ಸರಕ್ಕೆ ಕಾರಣವೆಂದು ನಾನು ತಿಳಿದುಕೊಂಡೆನು. ಇದು ಕೂಡ ಗಾಳಿಯನ್ನು ಬೆನ್ನಟ್ಟಿದ ಹಾಗೆ ವ್ಯರ್ಥವೇ.
וְרָאִ֨יתִֽי אֲנִ֜י אֶת־כָּל־עָמָ֗ל וְאֵת֙ כָּל־כִּשְׁר֣וֹן הַֽמַּעֲשֶׂ֔ה כִּ֛י הִ֥יא קִנְאַת־אִ֖ישׁ מֵרֵעֵ֑הוּ גַּם־זֶ֥ה הֶ֖בֶל וּרְע֥וּת רֽוּחַ׃
5 ಸುಮ್ಮನೇ ಕೈಕಟ್ಟಿ ಕುಳಿತುಕೊಂಡು ಬುದ್ಧಿಹೀನರು, ತಮ್ಮನ್ನು ತಾವೇ ಹಾಳುಮಾಡಿಕೊಳ್ಳುತ್ತಾರೆ.
הַכְּסִיל֙ חֹבֵ֣ק אֶת־יָדָ֔יו וְאֹכֵ֖ל אֶת־בְּשָׂרֽוֹ׃
6 ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಿಂದ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.
ט֕וֹב מְלֹ֥א כַ֖ף נָ֑חַת מִמְּלֹ֥א חָפְנַ֛יִם עָמָ֖ל וּרְע֥וּת רֽוּחַ׃
7 ಆಗ ಮತ್ತೆ ನಾನು ಸೂರ್ಯನ ಕೆಳಗೆ ವ್ಯರ್ಥವಾದದ್ಡನ್ನು ಕಂಡೆನು:
וְשַׁ֧בְתִּי אֲנִ֛י וָאֶרְאֶ֥ה הֶ֖בֶל תַּ֥חַת הַשָּֽׁמֶשׁ׃
8 ಜೊತೆಗಾರನಿಲ್ಲದೆ ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದನು. ಅವನಿಗೆ ಮಗನಾಗಲಿ, ಸಹೋದರನಾಗಲಿ ಇರಲಿಲ್ಲ. ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ತನ್ನ ಸಂಪತ್ತಿನಿಂದ ಅವನ ಕಣ್ಣು ತೃಪ್ತಿ ಹೊಂದಿರಲಿಲ್ಲ. ಅವನು, “ನಾನು ಸುಖಸಂತೋಷವನ್ನು ತೊರೆದು, ಯಾರಿಗೋಸ್ಕರ ಕಷ್ಟಪಡುತ್ತಲೇ ಇದ್ದೇನೆ?” ಎಂದುಕೊಂಡನು. ಇದು ಕೂಡ ವ್ಯರ್ಥವೇ, ಪ್ರಯಾಸದ ಕೆಲಸವೇ ಸರಿ.
יֵ֣שׁ אֶחָד֩ וְאֵ֨ין שֵׁנִ֜י גַּ֣ם בֵּ֧ן וָאָ֣ח אֵֽין־ל֗וֹ וְאֵ֥ין קֵץ֙ לְכָל־עֲמָל֔וֹ גַּם־עיניו לֹא־תִשְׂבַּ֣ע עֹ֑שֶׁר וּלְמִ֣י ׀ אֲנִ֣י עָמֵ֗ל וּמְחַסֵּ֤ר אֶת־נַפְשִׁי֙ מִטּוֹבָ֔ה גַּם־זֶ֥ה הֶ֛בֶל וְעִנְיַ֥ן רָ֖ע הֽוּא׃
9 ಒಬ್ಬನಿಗಿಂತ ಇಬ್ಬರು ಲೇಸು, ಏಕೆಂದರೆ ಅವರ ಪ್ರಯಾಸಕ್ಕೆ ಒಳ್ಳೆಯ ಪ್ರತಿಫಲವಿದೆ:
טוֹבִ֥ים הַשְּׁנַ֖יִם מִן־הָאֶחָ֑ד אֲשֶׁ֧ר יֵשׁ־לָהֶ֛ם שָׂכָ֥ר ט֖וֹב בַּעֲמָלָֽם׃
10 ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು. ಆದರೆ ಅವನು ಒಬ್ಬೊಂಟಿಗನಾಗಿ ಬಿದ್ದರೆ ಅವನ ಗತಿ ದುರ್ಗತಿಯೇ ಏಕೆಂದರೆ ಅವನಿಗೆ ಸಹಾಯ ಮಾಡುವುದಕ್ಕೆ ಯಾರೂ ಇರುವುದಿಲ್ಲ.
כִּ֣י אִם־יִפֹּ֔לוּ הָאֶחָ֖ד יָקִ֣ים אֶת־חֲבֵר֑וֹ וְאִ֣יל֗וֹ הָֽאֶחָד֙ שֶׁיִּפּ֔וֹל וְאֵ֥ין שֵׁנִ֖י לַהֲקִימֽוֹ׃
11 ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ. ಆದರೆ ಒಬ್ಬನಷ್ಟೆ ಹೇಗೆ ಬೆಚ್ಚಗಿರುತ್ತಾನೆ?
גַּ֛ם אִם־יִשְׁכְּב֥וּ שְׁנַ֖יִם וְחַ֣ם לָהֶ֑ם וּלְאֶחָ֖ד אֵ֥יךְ יֵחָֽם׃
12 ಒಬ್ಬಂಟಿಗನ ಮೇಲೆ ಜಯ ಸಾಧಿಸಲು, ಇಬ್ಬರು ಎದುರಾಗಿ ನಿಲ್ಲಬಹುದು. ಆದರೆ ಮೂರು ಹುರಿಯ ಹಗ್ಗವು ಬೇಗನೆ ಕಿತ್ತು ಹೋಗುವುದಿಲ್ಲ.
וְאִֽם־יִתְקְפוֹ֙ הָאֶחָ֔ד הַשְּׁנַ֖יִם יַעַמְד֣וּ נֶגְדּ֑וֹ וְהַחוּט֙ הַֽמְשֻׁלָּ֔שׁ לֹ֥א בִמְהֵרָ֖ה יִנָּתֵֽק׃
13 ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮೂಢ ಮುದಿ ಅರಸನಿಗಿಂತ ಬಡವನಾದರೂ ಜ್ಞಾನಿಯಾದ ಒಬ್ಬ ಯುವಕನೇ ಮೇಲು.
ט֛וֹב יֶ֥לֶד מִסְכֵּ֖ן וְחָכָ֑ם מִמֶּ֤לֶךְ זָקֵן֙ וּכְסִ֔יל אֲשֶׁ֛ר לֹא־יָדַ֥ע לְהִזָּהֵ֖ר עֽוֹד׃
14 ಆ ಯುವಕನು ಸೆರೆಮನೆಯಿಂದ ರಾಜ್ಯವನ್ನಾಳುವುದಕ್ಕಾಗಿ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.
כִּֽי־מִבֵּ֥ית הָסוּרִ֖ים יָצָ֣א לִמְלֹ֑ךְ כִּ֛י גַּ֥ם בְּמַלְכוּת֖וֹ נוֹלַ֥ד רָֽשׁ׃
15 ಸೂರ್ಯನ ಕೆಳಗೆ ಜೀವಿಸಿ ನಡೆದಾಡಿದವರೆಲ್ಲರೂ ಅರಸನ ಪ್ರತಿಯಾಗಿ ಯುವಕನನ್ನು ಹಿಂಬಾಲಿಸಿದ್ದನ್ನೂ ನಾನು ನೋಡಿದೆನು.
רָאִ֙יתִי֙ אֶת־כָּל־ הַ֣חַיִּ֔ים הַֽמְהַלְּכִ֖ים תַּ֣חַת הַשָּׁ֑מֶשׁ עִ֚ם הַיֶּ֣לֶד הַשֵּׁנִ֔י אֲשֶׁ֥ר יַעֲמֹ֖ד תַּחְתָּֽיו׃
16 ಇವನ ಆಧಿಪತ್ಯಕ್ಕೆ ಒಳಪಟ್ಟ ಜನರ ಸಂಖ್ಯೆಯು ಅಪಾರ. ಆದರೆ ಯುವಕನ ಆಳ್ವಿಕೆಯ ಮುಂಚೆ ಇದ್ದವರು ಮತ್ತು ತರುವಾಯ ಬಂದವರು ಇವನನ್ನು ಮೆಚ್ಚಲಿಲ್ಲ. ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ ವ್ಯರ್ಥವೇ.
אֵֽין־קֵ֣ץ לְכָל־הָעָ֗ם לְכֹ֤ל אֲשֶׁר־הָיָה֙ לִפְנֵיהֶ֔ם גַּ֥ם הָאַחֲרוֹנִ֖ים לֹ֣א יִשְׂמְחוּ־ב֑וֹ כִּֽי־גַם ־זֶ֥ה הֶ֖בֶל וְרַעְי֥וֹן רֽוּחַ׃

< ಪ್ರಸಂಗಿ 4 >