< ಎಫೆಸದವರಿಗೆ ಬರೆದ ಪತ್ರಿಕೆ 6 >
1 ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಇದು ಸೂಕ್ತವಾದದ್ದು.
Dítky poslouchejte rodičů svých v Pánu; neboť jest to spravedlivé.
2 “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು,” ಎಂಬುದು ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯಾಗಿದೆ.
Cti otce svého i matku, (toť jest přikázaní první s zaslíbením, )
3 “ಸನ್ಮಾನಿಸಿದರೆ ನಿನಗೆ ಶುಭವಾಗುವುದು. ನೀನು ಭೂಮಿಯ ಮೇಲೆ ಬಹುಕಾಲ ಬದುಕುವೆ.”
Aby dobře bylo tobě a abys byl dlouhověký na zemi.
4 ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸಬೇಡಿರಿ; ಕರ್ತನ ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಮಕ್ಕಳನ್ನು ಬೆಳೆಸಿರಿ.
A vy otcové nepopouzejte k hněvu dítek vašich, ale vychovávejte je v cvičení a v napomínání Páně.
5 ಸೇವಕರೇ, ಭಯಭಕ್ತಿಯಿಂದಲೂ ಸರಳ ಹೃದಯದಿಂದ ಕ್ರಿಸ್ತನಿಗೆ ವಿಧೇಯರಾಗುವ ಪ್ರಕಾರ ಲೌಕಿಕವಾಗಿ ನಿಮ್ಮ ಯಜಮಾನನಾಗಿರುವವರಿಗೆ ವಿಧೇಯರಾಗಿರಿ.
Služebníci, buďte poslušni pánů tělesných s bázní a s strachem, v sprostnosti srdce vašeho, jako Krista,
6 ಯಜಮಾನರನ್ನು ಮೆಚ್ಚಿಸುವವರಂತೆ ಕಣ್ಣಿಗೆ ಕಾಣುವಾಗ ಮಾತ್ರ ಅವರಿಗೆ ಸೇವೆಮಾಡದೆ, ಕ್ರಿಸ್ತನ ದಾಸರಿಗೆ ತಕ್ಕಂತೆ ಮನಃಪೂರ್ವಕವಾಗಿ ದೇವರ ಚಿತ್ತವನ್ನು ನೆರವೇರಿಸಿರಿ.
Ne na oko sloužíce, jako ti, jenž se lidem líbiti usilují, ale jako služebníci Kristovi, činíce vůli Boží z té duše,
7 ನೀವು ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರವೇ ಸೇವೆ ಮಾಡುವಂತೆ, ಪೂರ್ಣಮನಸ್ಸಿನಿಂದ ಸೇವೆಮಾಡಿರಿ.
S dobrou myslí sloužíce, jakožto Pánu, a ne lidem,
8 ದಾಸನಾಗಲಿ, ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತ ಯೇಸುವಿನಿಂದ ಹೊಂದುವನೆಂದು ನೀವು ತಿಳಿದಿದ್ದೀರಿ.
Vědouce, že, což by koli jeden každý učinil dobrého, za to odplatu vzíti má ode Pána, buďto služebník, buďto svobodný.
9 ಯಜಮಾನರೇ, ನೀವು ಸಹ ನಿಮ್ಮ ಸೇವಕರೊಡನೆ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೆ ಯಜಮಾನನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿರಿ.
A vy páni též se tak mějte k nim, zanechajíce pohrůžky, vědouce, že i vy také máte Pána v nebesích, a přijímání osob není u něho.
10 ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
Dále pak, bratří moji, posilňte se v Pánu a v moci síly jeho.
11 ನೀವು ಪಿಶಾಚನ ತಂತ್ರಗಳನ್ನು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
Oblecte se v celé odění Boží, abyste mohli státi proti útokům ďábelským.
12 ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ. (aiōn )
Neboť není bojování naše proti tělu a krvi, ale proti knížatstvu, proti mocnostem, proti světa pánům temností věku tohoto, proti duchovním zlostem, kteréž jsou vysoko. (aiōn )
13 ಆದುದರಿಂದ ವೈರಿಯು ದಾಳಿಮಾಡುವ ದಿನವು ಬರುವಾಗ ನೀವು ಅವನನ್ನು ಎದುರಿಸಿ ನಿಲ್ಲುವಂತೆಯು, ಎಲ್ಲವನ್ನು ಜಯಿಸಿ ಮುಗಿಸಿದ ಮೇಲೆ ನಿಲ್ಲಲು ಶಕ್ತರಾಗುವಂತೆ, ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
A protož vezměte celé odění Boží, abyste mohli odolati v den zlý, a všecko vykonajíce, státi.
14 ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು, ನೀತಿಯೆಂಬ ಕವಚವನ್ನು ಧರಿಸಿಕೊಳ್ಳಿರಿ.
Stůjtež tedy, majíce podpásaná bedra vaše pravdou, a oblečeni jsouce v pancíř spravedlnosti,
15 ಸಮಾಧಾನದ ಸುವಾರ್ತೆಯ ಸಿದ್ಧತೆಯೆಂಬ ಪಾದರಕ್ಷೆಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
A obuté majíce nohy v hotovost k evangelium pokoje,
16 ಇವೆಲ್ಲವುಗಳೊಂದಿಗೆ ವಿಶ್ವಾಸವೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಈ ಗುರಾಣಿಯಿಂದಲೇ, ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.
A zvláště pak vezmouce štít víry, kterýmž byste mohli všecky šípy ohnivé nešlechetníka toho uhasiti.
17 ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿರಿ. ದೇವರ ವಾಕ್ಯವೆಂಬ ಪವಿತ್ರಾತ್ಮರ ಖಡ್ಗವನ್ನು ಎತ್ತಿ ಹಿಡಿಯಿರಿ.
A lebku spasení vezměte, i meč Ducha, jenž jest slovo Boží,
18 ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.
Všelikou modlitbou a prosbou modléce se každého času v Duchu, a v tom bedlivi jsouce se vší ustavičností a prošením za všecky svaté,
19 ನಾನು ಬಾಯಿ ತೆರೆಯುವಾಗ ಸುವಾರ್ತೆಯ ರಹಸ್ಯವನ್ನು ಧೈರ್ಯವಾಗಿ ತಿಳಿಯಪಡಿಸುವುದಕ್ಕೆ ಮಾತನ್ನು ನನಗೆ ದಯಪಾಲಿಸಬೇಕೆಂದು ಪ್ರಾರ್ಥಿಸಿರಿ.
I za mne, aby mi dána byla řeč v otevření úst mých svobodně a směle, abych oznamoval tajemství evangelium svatého,
20 ಏಕೆಂದರೆ ಆ ಸುವಾರ್ತೆಗಾಗಿಯೇ ಸೆರೆಯಲ್ಲಿರುವ ರಾಯಭಾರಿಯಾದ ನಾನು ಅದನ್ನು ಸಾರುವುದರಲ್ಲಿ ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
Pro něžto úřad svůj konám v řetězu tomto, abych tak v něm svobodně a směle mluvil, jakž mně mluviti náleží.
21 ನನ್ನ ವಿಷಯವಾಗಿಯೂ ನಾನು ಮಾಡುತ್ತಿರುವುದರ ವಿಷಯವಾಗಿಯೂ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.
A abyste i vy věděli, co se se mnou děje a co činím, všecko vám to oznámí Tychikus, milý bratr a věrný služebník v Pánu,
22 ನೀವು ನಮ್ಮ ಸಮಾಚಾರವನ್ನು ತಿಳಿದುಕೊಳ್ಳುವಂತೆಯೂ ಅವನು ನಿಮ್ಮ ಹೃದಯಗಳನ್ನು ಉತ್ತೇಜಿಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
Jehož jsem pro to samo k vám poslal, abyste věděli o našich věcech a aby potěšil srdcí vašich.
23 ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ಶಾಂತಿಯೂ ಮತ್ತು ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರಿಗೆ ಇರಲಿ.
Pokoj budiž vám bratřím, a láska s věrou, od Boha Otce a Pána Jezukrista.
24 ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಳಿದು ಹೋಗದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ಕೃಪೆಯಿರಲಿ.
Milost Boží budiž se všemi milujícími Pána našeho Jezukrista v neporušitelnosti. Amen. List tento k Efezským psán byl z Říma po Tychikovi.