< ಎಸ್ತೇರಳು 10 >

1 ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.
薛西斯王向陸地及各海島的居民徵稅。
2 ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿದ್ಧಿಯೂ ಮೇದ್ಯ ಮತ್ತು ಪಾರಸಿಯ ಅರಸರ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ.
他所行偉大英勇的事蹟,以及顯耀摩爾德開的詳細經過,都記載在瑪待和波斯君王的年鑑上。
3 ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.
猶太人摩爾德開,位僅次於薛西斯王,受猶太人的敬重,受他全體同胞的愛戴;他也努力為他的民族謀幸福,關心他的整個種族的安全。

< ಎಸ್ತೇರಳು 10 >