< ಎಸ್ತೇರಳು 2 >

1 ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನ ಕೋಪವು ಶಾಂತವಾಗಿ ಅವನು ವಷ್ಟಿಯನ್ನೂ ಅವಳನ್ನೂ, ಅವಳ ವರ್ತನೆಯನ್ನೂ, ಅವಳಿಗೆ ವಿರೋಧವಾಗಿ ತಾನು ನೀಡಿದ ತೀರ್ಪನ್ನೂ ಜ್ಞಾಪಿಸಿಕೊಂಡನು.
وَبَعْدَ ذَلِكَ خَمَدَتْ حِدَّةُ غَضَبِ الْمَلِكِ أَحَشْوِيرُوشَ، فَذَكَرَ وَشْتِي وَمَا فَعَلَتْهُ، وَالْقَرَارَ الَّذِي صَدَرَ ضِدَّهَا.١
2 ಆಗ ಅರಸನ ಸೇವೆ ಮಾಡುವ ದಾಸರು ಅವನಿಗೆ, “ಅರಸನಿಗೋಸ್ಕರ ರೂಪವತಿಯಾದ ಕನ್ಯೆಯರನ್ನು ಹುಡುಕಲಿ.
فَقَالَ لَهُ رِجَالُهُ الْقَائِمُونَ عَلَى خِدْمَتِهِ: «لِيُجْرَ بَحْثٌ عَنْ فَتَيَاتٍ عَذَارَى بَارِعَاتِ الْجَمَالِ مِنْ أَجْلِ الْمَلِكِ،٢
3 ರೂಪವತಿಯಾರಾದ ಸಮಸ್ತ ಕನ್ಯೆಯರು ರಾಜಧಾನಿಯಾದ ಶೂಷನಿಗೆ ಸ್ತ್ರೀಯರು ಇರುವ ಅರಮನೆಗೆ, ಸ್ತ್ರೀಯರ ಮೇಲೆ ಕಾವಲಾಗಿ ಇರುವ ಅರಸನ ಅಧಿಕಾರಿಗಳಾದ ಹೇಗೈ ಎಂಬವನ ವಶಕ್ಕೆ ಒಪ್ಪಿಸಲಿ. ಅರಸನು ತನ್ನ ರಾಜ್ಯದ ಸಮಸ್ತ ಪ್ರಾಂತಗಳಲ್ಲಿ ಅಧಿಕಾರಿಗಳನ್ನು ನೇಮಿಸಲಿ. ಹೇಗೈ ಅವರಿಗೆ ಸೌಂದರ್ಯವರ್ಧಕ ಸಾಧನಗಳನ್ನು ಕೊಡಲಿ.
وَلْيَعْهَدِ الْمَلِكُ إِلَى وُكَلائِهِ فِي كُلِّ أَرْجَاءِ مَمْلَكَتِهِ حَتَّى يَجْمَعُوا كُلَّ الْفَتَيَاتِ الْعَذَارَى الْفَاتِنَاتِ إِلَى جَنَاحِ الْحَرِيمِ فِي شُوشَنَ الْقَصْرِ، لِيَكُنَّ تَحْتَ إِشْرَافِ هَيْجَايَ خَصِيِّ الْمَلِكِ وَحَارِسِ النِّسَاءِ، حَيْثُ تُقَدَّمُ إِلَيْهُنَّ الدُّهُونُ الْمُعَطَّرَةُ.٣
4 ಅರಸನ ದೃಷ್ಟಿಗೆ ಮೆಚ್ಚಿಗೆಯಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ,” ಎಂದನು. ಆ ಮಾತು ಅರಸನಿಗೆ ಸರಿಕಂಡುಬಂದದ್ದರಿಂದ ಅದೇ ಪ್ರಕಾರ ಮಾಡಿದನು.
وَالْفَتَاةُ الَّتِي تَرُوقُ لِلْمَلِكِ تُصْبِحُ مَلِكَةً مَحَلَّ وَشْتِي». فَاسْتَحْسَنَ الْمَلِكُ هَذَا الْكَلامَ وَعَمِلَ بِهِ.٤
5 ಶೂಷನಿನ ಅರಮನೆಯಲ್ಲಿ ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಮೀಯ ಮೊಮ್ಮಗನೂ, ಯಾಯೀರನ ಮಗನೂ ಆದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.
وَكَانَ يُقِيمُ فِي شُوشَنَ الْقَصْرِ رَجُلٌ يَهُودِيٌّ يُدْعَى مُرْدَخَايَ بْنَ يَائِيرَ بْنِ شَمْعِي بْنِ قَيْسٍ، مِنْ سِبْطِ بِنْيَامِينَ،٥
6 ಅವನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೆರೆಯಾಗಿ ತಂದ ಯೆಹೂದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಹಿಡಿಯಲಾದವರಲ್ಲಿ ಒಬ್ಬನಾಗಿದ್ದನು.
قَدْ سُبِيَ مِنْ أُورُشَلِيمَ مَعَ جُمْلَةِ الْمَسْبِيِّينَ الَّذِينَ أَسَرَهُمْ نَبُوخَذْنَصَّرُ مَلِكُ بَابِلَ، مَعَ يَكُنْيَا مَلِكِ يَهُوذَا.٦
7 ಇವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರ್ ಎಂಬ ಹೆಸರನ್ನು ಪಡೆದ ಹದೆಸ್ಸಳನ್ನು ಸಾಕುತ್ತಿದ್ದನು. ಏಕೆಂದರೆ ಅವಳಿಗೆ ತಂದೆತಾಯಿಗಳು ಇರಲಿಲ್ಲ. ಈಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆತಾಯಿಗಳು ಸತ್ತು ಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಸ್ವಂತ ಮಗಳಂತೆ ನೋಡಿಕೊಳ್ಳುತ್ತಿದ್ದನು.
هَذَا أَشْرَفَ عَلَى تَرْبِيَةِ ابْنَةِ عَمِّهِ أَسْتِيرَ الْمَدْعُوَّةَ هَدَسَّةَ، لأَنَّهَا كَانَتْ يَتِيمَةَ الأَبَوَيْنِ. وَكَانَتِ الْفَتَاةُ رَائِعَةَ الْجَمَالِ، جَمِيلَةَ الطَّلْعَةِ تَبَنَّاهَا مُرْدَخَايُ عِنْدَ وَفَاةِ وَالِدَيْهَا.٧
8 ಅರಸನ ಮಾತನ್ನು ಮತ್ತು ಅವನ ಕಟ್ಟಳೆಯನ್ನು ಕೇಳಿದ ತರುವಾಯ ಶೂಷನಿನ ಅರಮನೆಯಲ್ಲಿ ಹೇಗೈಯನ ವಶಕ್ಕೆ ಅನೇಕ ಕನ್ಯೆಯರನ್ನು ಒಪ್ಪಿಸಲಾಯಿತು. ಎಸ್ತೇರಳು ಸಹ ಅರಸನ ಅರಮನೆಯಲ್ಲಿ ಸ್ತ್ರೀಯರ ಕಾವಲಿನವನಾದ ಹೇಗೈಯ ಜವಾಬ್ದಾರಿಕೆಯ ಕೋಣೆಯಲ್ಲಿ ಇದ್ದಳು.
فَلَمَّا بَلَغَهُ أَمْرُ الْمَلِكِ وَحُكْمُهُ، وَشَرَعُوا فِي جَمْعِ فَتَيَاتٍ كَثِيرَاتٍ إِلَى شُوشَنَ الْقَصْرِ حَيْثُ عُهِدَ بِهِنَّ إِلَى هَيْجَايَ، أُخِذَتْ أَسْتِيرُ إِلَى قَصْرِ الْمَلِكِ إِلَى هَيْجَايَ حَارِسِ الْحَرِيمِ،٨
9 ಎಸ್ತೇರಳು ಹೇಗೈಯ ಮೆಚ್ಚುಗೆಯನ್ನು ಗಳಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆ ದೊರಕಿತು. ಆದಕಾರಣ ಅವನು ತ್ವರೆಯಾಗಿ ಸೌಂದರ್ಯವರ್ಧಕ ಸಾಧನಗಳನ್ನೂ ಅರಸನ ಅರಮನೆಯಿಂದ ಏಳುಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರಿದ್ದ ಕೋಣೆಯಲ್ಲಿ ಉತ್ತಮವಾದ ಭೋಜನಾಂಶಗಳನ್ನು ಅವಳಿಗೂ ಅವಳ ದಾಸಿಯರಿಗೂ ಕೊಟ್ಟನು. ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.
فَحَظِيَتِ الْفَتَاةُ بِإِعْجَابِ هَيْجَايَ وَنَالَتْ رِضَاهُ، فَأَسْرَعَ يُقَدِّمُ إِلَيْهَا نَصِيبَهَا مِنَ الْعُطُورِ وَالأَطْعِمَةِ، وَخَصَّصَ لِخِدْمَتِهَا سَبْعَ فَتَيَاتٍ مِنْ قَصْرِ الْمَلِكِ، وَنَقَلَهَا مَعَ وَصِيفَاتِهَا إِلَى أَفْضَلِ مَكَانٍ فِي جَنَاحِ النِّسَاءِ.٩
10 ಆದರೆ ಎಸ್ತೇರಳು ತಾನು ಇಂಥ ದೇಶದವಳು ಮತ್ತು ಇಂಥ ಕುಟುಂಬದ ಹಿನ್ನೆಲೆಯವಳು ಎಂಬುದನ್ನು ತಿಳಿಸಲಿಲ್ಲ. ಏಕೆಂದರೆ ತಿಳಿಸಬಾರದೆಂದು ಮೊರ್ದೆಕೈ ಅವಳಿಗೆ ಆಜ್ಞಾಪಿಸಿದ್ದನು.
وَكَتَمَتْ أَسْتِيرُ أَصْلَهَا وَجِنْسَهَا لأَنَّ مُرْدَخَايَ أَوْصَاهَا بِذَلِكَ.١٠
11 ಆದರೆ ಎಸ್ತೇರಳ ಕ್ಷೇಮವನ್ನೂ, ಅವಳಿಗೆ ಆಗುವಂಥಾದ್ದನ್ನೂ ತಿಳಿದುಕೊಳ್ಳುವುದಕ್ಕೆ ಮೊರ್ದೆಕೈ ಪ್ರತಿದಿನವೂ ಸ್ತ್ರೀಯರಿದ್ದ ಮನೆಯ ಅಂಗಳದ ಮುಂದೆ ತಿರುಗಾಡುತ್ತಿದ್ದನು.
وَرَاحَ مُرْدَخَايُ يَتَمَشَّى كُلَّ يَوْمٍ أَمَامَ فِنَاءِ جَنَاحِ النِّسَاءِ، لِيَتَحَرَّى عَنْ سَلامَةِ أَسْتِيرَ وَمَا يَحْدُثُ لَهَا.١١
12 ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಸುಗಂಧ ತೈಲದಿಂದಲೂ ಆರು ತಿಂಗಳು ಸೌಂದರ್ಯವರ್ಧಕ ಸಾಧನಗಳಿಂದಲೂ ಕನ್ಯೆಯರ ಲೇಪನಕಾಲದ ಪ್ರಕಾರ ಹನ್ನೆರಡು ತಿಂಗಳಾದ ತರುವಾಯ ಅರಸನಾದ ಅಹಷ್ವೇರೋಷನ ಬಳಿಗೆ ಪ್ರತಿಯೊಬ್ಬ ಕನ್ಯೆಯು ಹೋಗಲು ಅವರವರ ಸರದಿ ಬರುತ್ತಿತ್ತು.
وَكَانَ يَحِقُّ لِكُلِّ فَتَاةٍ جَاءَ دَوْرُهَا لِلْمُثُولِ أَمَامَ الْمَلِكِ أَحَشْوِيرُوشَ، بَعْدَ أَنْ يَكُونَ قَدِ انْقَضَى عَلَيْهَا اثْنَا عَشَرَ شَهْراً، حَسَبَ سُنَّةِ النِّسَاءِ، أَنْفَقَتْ سِتَّةَ أَشْهُرٍ مِنْهَا فِي التَّعَطُّرِ بِزَيْتِ الْمُرِّ، وَسِتَّةَ أَشْهُرٍ بِالأَطْيَابِ وَالْعُطُورِ، وَهَكَذَا تَكْمُلُ أَيَّامُ تَعَطُّرِهِنَّ،١٢
13 ಈ ಪ್ರಕಾರ ಕನ್ಯೆಯು ಅರಸನ ಬಳಿಗೆ ಪ್ರವೇಶಿಸುವಾಗ ಸ್ತ್ರೀಯರ ಮನೆಯೊಳಗಿಂದ ತನ್ನ ಸಂಗಡ ಅರಸನ ಅರಮನೆಗೆ ಹೋಗಲು ಅವಳು ಏನು ಬೇಡುವಳೋ ಅದು ಅವಳಿಗೆ ಒದಗಿಸಲಾಗುತ್ತಿತ್ತು.
أَنْ يُعْطَى لَهَا عِنْدَمَا تَدْخُلُ لِلْمُثُولِ فِي حَضْرَةِ الْمَلِكِ كُلُّ مَا تَطْلُبُهُ مِنْ جَنَاحِ النِّسَاءِ لِتَنْقُلَهُ مَعَهَا إِلَى قَصْرِ الْمَلِكِ.١٣
14 ಆಗ ಅವಳು ಸಾಯಂಕಾಲದಲ್ಲಿ ರಾಜನಿವಾಸಕ್ಕೆ ಪ್ರವೇಶಿಸಿ ಮಾರನೆಯ ದಿವಸದಲ್ಲಿ ಉಪಪತ್ನಿಗಳ ಪಾಲಕನಾದ ಶವಷ್ಗಜ ಎಂಬ ರಾಜಕಂಚುಕಿಯ ವಶದಲ್ಲಿದ್ದ ಸ್ತ್ರೀಯರ ಎರಡನೆಯ ಮನೆಗೆ ಬರಬೇಕಾಗಿತ್ತು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದ ಹೊರತು ಅವಳು ಪುನಃ ಅರಸನ ಬಳಿಗೆ ಹೋಗಬಾರದು.
وَكَانَتِ الْفَتَاةُ تَدْخُلُ إِلَى الْمَلِكِ فِي الْمَسَاءِ، ثُمَّ تَرْجِعُ فِي الصَّبَاحِ إِلَى جَنَاحِ النِّسَاءِ الثَّانِي الَّذِي عُهِدَ بِهِ إِلَى شَعْشَغَازَ الْخَصِيِّ حَارِسِ الْمَحْظِيَّاتِ، وَتَمْكُثُ هُنَاكَ لَا تَدْخُلُ إِلَى الْمَلِكِ ثَانِيَةً إِلّا إِذَا حَظِيَتْ بِمَسَرَّتِهِ، وَدُعِيَتْ بِاسْمِهَا.١٤
15 ಮೊರ್ದೆಕೈಯ ದತ್ತುಮಗಳೂ, ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ, ಸ್ತ್ರೀಯರ ಪಾಲಕನೂ ರಾಜಕಂಚುಕಿಯೂ ಆದ ಹೇಗೈ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದಲೂ ದಯೆಹೊಂದಿದ್ದಳು.
وَلَمَّا جَاءَ دَوْرُ أَسْتِيرَ ابْنَةِ أَبِيحَائِلَ عَمِّ مُرْدَخَايَ الَّذِي تَبَنَّاهَا لِلْمُثُولِ فِي حَضْرَةِ الْمَلِكِ، لَمْ تَطْلُبْ شَيْئاً إِلّا مَا أَشَارَ بِهِ عَلَيْهَا هَيْجَايُ خَصِيُّ الْمَلِكِ وَحَارِسُ الْحَرِيمِ. وَكَانَتْ أَسْتِيرُ تَحْظَى بِإِعْجَابِ كُلِّ مَنْ رَآهَا.١٥
16 ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ತೇಬೆತ್ ಎಂಬ ಪುಷ್ಯ ಮಾಸದಲ್ಲಿ ಅರಸನ ಬಳಿಗೆ ಕರೆತರಲಾಯಿತು.
وَأُخِذَتْ أَسْتِيرُ إِلَى الْمَلِكِ أَحَشْوِيرُوشَ فِي قَصْرِهِ فِي شَهْرِ طِيبِيتَ (أَيْ كَانُونَ الثَّانِي – يَنَايِرَ)، فِي السَّنَةِ السَّابِعَةِ لِحُكْمِهِ،١٦
17 ಅರಸನು ಸಕಲ ಕನ್ಯೆಯರಿಗಿಂತ ಹೆಚ್ಚಾಗಿ ಎಸ್ತೇರಳನ್ನು ಮೆಚ್ಚಿಕೊಂಡನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯೆಯರಿಗಿಂತ ಹೆಚ್ಚು ದಯೆಯೂ ಮೆಚ್ಚುಗೆಯೂ ದೊರಕಿತು. ಆದ್ದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಎಸ್ತೇರಳನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಆರಿಸಿಕೊಂಡನು.
فَأَحَبَّ الْمَلِكُ أَسْتِيرَ أَكْثَرَ مِنْ سَائِرِ النِّسَاءِ، وَحَظِيَتْ بِرِضَاهُ وَبِإِعْجَابِهِ أَكْثَرَ مِنْ بَقِيَّةِ الْعَذَارَى، حَتَّى إِنَّهُ وَضَعَ تَاجَ الْمُلْكِ عَلَى رَأْسِهَا، وَمَلَّكَهَا بَدَلاً مِنْ وَشْتِي.١٧
18 ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಗೌರವಾರ್ಥವಾಗಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಎಲ್ಲಾ ಪ್ರಾಂತಗಳಿಗೂ ರಜೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.
وَأَقَامَ الْمَلِكُ مَأْدُبَةً عَظِيمَةً دَعَا إِلَيْهَا جَمِيعَ قَادَتِهِ وَرِجَالِهِ، احْتِفَاءً بِأَسْتِيرَ، وَأَعْفَى الْبِلادَ مِنَ الْجِزْيَةِ، وَوَزَّعَ الْهَدَايَا بِسَخَاءٍ مَلَكِيٍّ.١٨
19 ಕನ್ಯೆಯರನ್ನು ಎರಡನೆಯ ಸಾರಿ ಕೂಡಿಸುವಾಗ, ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.
وَعِنْدَمَا جُمِعَتِ الْعَذَارَى لِلْمَرَّةِ الثَّانِيَةِ. كَانَ مُرْدَخَايُ فِي ذَلِكَ الْوَقْتِ قَدْ صَارَ حَاجِبَ الْمَلِكِ.١٩
20 ಎಸ್ತೇರಳು ಮೊರ್ದೆಕೈಯು ತನಗೆ ಆಜ್ಞಾಪಿಸಿದ ಹಾಗೆ ತಾನು ಇಂಥ ದೇಶದವಳು ಮತ್ತು ಇಂಥ ಕುಟುಂಬದ ಹಿನ್ನೆಲೆಯವಳು ಎಂಬುದನ್ನು ಯಾರಿಗೂ ತಿಳಿಸಿರಲಿಲ್ಲ. ಏಕೆಂದರೆ ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಆಕೆ ಅವನ ಆಜ್ಞೆಯನ್ನು ಕೈಕೊಂಡು ನಡೆದಂತೆಯೇ ಈಗಲೂ ಅವನ ಆಜ್ಞೆಯನ್ನು ಪಾಲಿಸುತ್ತಿದ್ದಳು.
وَلَمْ تَكُنْ أَسْتِيرُ قَدْ كَشَفَتْ عَنْ جِنْسِهَا وَشَعْبِهَا كَمَا أَوْصَاهَا مُرْدَخَايُ، وَظَلَّتْ تَعْمَلُ بِوَصَايَا مُرْدَخَايَ وَكَأَنَّهَا مَا بَرِحَتْ فِي بَيْتِهِ تَحْتَ إِشْرَافِهِ.٢٠
21 ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ಕುಳಿತಿರುವಾಗ, ದ್ವಾರಪಾಲಕರಾದಂಥ ಅರಸನ ರಾಜಕಂಚುಕಿಗಳಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ಅರಸನಾದ ಅಹಷ್ವೇರೋಷನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಬೇಕೆಂದು ಒಳಸಂಚು ಮಾಡಿದರು.
وَذَاتَ يَوْمٍ تَآمَرَ بِغْثَانَا وَتَرَشُ خَصِيَّا الْمَلِكِ وَحَاجِبَاهُ لاِغْتِيَالِهِ لأَنَّهُمَا غَضِبَا مِنْهُ. وَكَانَ مُرْدَخَايُ آنَئِذٍ جَالِساً عِنْدَ بَابِ الْمَلِكِ،٢١
22 ಈ ಕಾರ್ಯವು ಮೊರ್ದೆಕೈಗೆ ತಿಳಿದದ್ದರಿಂದ ಅವನು ಅದನ್ನು ರಾಣಿಯಾದ ಎಸ್ತೇರಳಿಗೆ ತಿಳಿಸಿದನು. ಎಸ್ತೇರಳು ಮೊರ್ದೆಕೈಯ ಹೆಸರನ್ನು ಅರಸನಿಗೆ ಹೇಳಿ ಆ ಒಳಸಂಚಿನ ಬಗ್ಗೆ ತಿಳಿಸಿದಳು.
فَعَرَفَ مُرْدَخَايُ الأَمْرَ وَأَبْلَغَ بِهِ أَسْتِيرَ الْمَلِكَةَ الَّتِي أَخْبَرَتِ الْمَلِكَ بِدَوْرِهَا، بَعْدَ أَنْ عَزَتِ الْخَبَرَ إِلَى مُرْدَخَايَ.٢٢
23 ಈ ವಿಷಯ ವಿಚಾರಣೆಗೆ ಬಂದಾಗ ನಿಜವೆಂದು ಗೊತ್ತಾಯಿತು. ಆಗ ಆ ಇಬ್ಬರು ಅಧಿಕಾರಿಗಳನ್ನೂ ಗಲ್ಲಿಗೇರಿಸಲಾಯಿತು. ಇವೆಲ್ಲವನ್ನೂ ಅರಸನ ಮುಂದೆ ಇರುವ ರಾಜನ ಇತಿಹಾಸಗಳ ಪುಸ್ತಕದಲ್ಲಿ ಬರೆದಿಡಲಾಯಿತು.
وَبَعْدَ تَقَصِّي الأَمْرِ وَالتَّحَقُّقِ مِنْ صِحَّتِهِ صُلِبَ الْخَصِيَّانِ عَلَى خَشَبَةٍ، وَتَمَّ تَسْجِيلُ وَقَائِعِ الْحَادِثِ فِي سِجِلَّاتِ الْمَمْلَكَةِ فِي حُضُورِ الْمَلِكِ.٢٣

< ಎಸ್ತೇರಳು 2 >