< ಎಸ್ತೇರಳು 5 >
1 ಮೂರನೆಯ ದಿವಸದಲ್ಲಿ, ಎಸ್ತೇರಳು ರಾಜವಸ್ತ್ರ ಆಭರಣಗಳನ್ನು ಧರಿಸಿಕೊಂಡು ಅರಮನೆಗೆ ಎದುರಾಗಿರುವ ಅರಸನ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ನಿಂತಳು. ಅರಸನು ರಾಜಮಂದಿರದೊಳಗೆ ತನ್ನ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.
১তিন দিন পর, ইষ্টের রাজকীয় পোশাক পরে রাজার ঘরের সামনে রাজবাড়ীর ভিতরের উঠানে গিয়ে দাঁড়ালেন; সেই দিন রাজা রাজবাড়ীর ঘরের দরজার সামনে রাজসিংহাসনে বসে ছিলেন।
2 ಅರಸನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ, ಆಕೆಗೆ ತನ್ನ ಮೆಚ್ಚುಗೆಯನ್ನು ತೋರಿ ತನ್ನ ಕೈಯಲ್ಲಿದ್ದ ಸ್ವರ್ಣದಂಡವನ್ನು ಎಸ್ತೇರಳ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಬಂದು ರಾಜದಂಡದ ತುದಿಯನ್ನು ಮುಟ್ಟಿದಳು.
২আর রাজা যখন দেখলেন যে ইষ্টের রাণী উঠানে দাঁড়িয়ে আছেন, তখন রাজার চোখে ইষ্টের অনুগ্রহ পেলেন, রাজা ইষ্টের প্রতি নিজের হাতে অবস্থিত সোনার রাজদণ্ড বাড়িয়ে দিলেন; তাতে ইষ্টের কাছে এসে রাজদণ্ডের মাথা স্পর্শ করলেন।
3 ಆಗ ಅರಸನು ಅವಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.
৩পরে রাজা তাকে জিজ্ঞাসা করলেন, “ইষ্টের রাণী, তুমি কি চাও? তোমার অনুরোধ কি? রাজ্যের অর্ধেক পর্যন্ত হলেও তা তোমাকে দেওয়া যাবে।”
4 ಅದಕ್ಕೆ ಎಸ್ತೇರಳು ಅರಸನಿಗೆ, “ಸಮ್ಮತಿಯಾದರೆ ನಾನು ಅರಸನಿಗಾಗಿ ಸಿದ್ಧಮಾಡಿಸಿರುವ ಔತಣಕ್ಕೆ ಅರಸನೂ ಹಾಮಾನನೂ ಈ ಹೊತ್ತು ಬರಬೇಕು,” ಎಂದಳು.
৪ইষ্টের উত্তর দিলেন, “যদি মহারাজ ভাল মনে হয়, তবে আপনার জন্য আজ আমি যে ভোজ তৈরী করেছি তাতে মহারাজ ও হামন যেন উপস্থিত হন।”
5 ಆಗ ಅರಸನು, “ಎಸ್ತೇರಳು ಹೇಳಿದ ಪ್ರಕಾರ ನಾವು ಮಾಡಲು, ಬೇಗನೆ ಹಾಮಾನನನ್ನು ಕರೆದುಕೊಂಡು ಬನ್ನಿರಿ,” ಎಂದು ಆಜ್ಞಾಪಿಸಿದನು. ಎಸ್ತೇರಳು ಏರ್ಪಡಿಸಿದ್ದ ಔತಣಕ್ಕೆ ಅರಸನೂ ಹಾಮಾನನೂ ಬಂದರು.
৫তখন রাজা বললেন, “ইষ্টেরের কথামত যেন কাজ হয়, সেইজন্য হামনকে তাড়াতাড়ি করতে বল।” পরে রাজা ও হামন ইষ্টেরের তৈরি ভোজে গেলেন।
6 ದ್ರಾಕ್ಷಾರಸವನ್ನು ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ಈಗ ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.
৬পরে আঙ্গুর রসের সঙ্গে ভোজের দিনের রাজা ইষ্টেরকে বললেন, “তোমার নিবেদন কি? তা তোমাকে দেওয়া হবে; তোমার অনুরোধ কি? রাজ্যের অর্ধেক পর্যন্ত হলেও তা সম্পূর্ণ হবে।”
7 ಅದಕ್ಕೆ ಎಸ್ತೇರಳು, “ನನ್ನ ಬೇಡಿಕೆಯೂ ನನ್ನ ವಿಜ್ಞಾಪನೆಯೂ ಇದೇ:
৭তাতে ইষ্টের উত্তর করে বললেন, “আমার নিবেদন ও অনুরোধ এই,
8 ಅರಸನಿಗೆ ಸಮ್ಮತಿಯಾದರೆ, ಅರಸನಿಗೂ ಹಾಮಾನನಿಗೂ ನಾನು ಮಾಡಲಿರುವ ಔತಣಕ್ಕೆ ನಾಳೆಯೂ ಬರಬೇಕು. ಆಗ ಅರಸನ ಪ್ರಶ್ನೆಗೆ ಉತ್ತರಕೊಡುವೆನು,” ಎಂದಳು.
৮আমি যদি মহারাজের চোখে অনুগ্রহ পেয়ে থাকি এবং আমার নিবেদন গ্রহণ করতে ও আমার অনুরোধ সম্পূর্ণ করতে যদি মহারাজের ভালো মনে হয়, তবে আমি আপনাদের জন্য যা তৈরী করব, মহারাজ ও হামন সেই ভোজে আসুন; এবং আমি কাল মহারাজের আদেশ অনুসারে সেই দিন আমি বলব আমি কি চাই।”
9 ಆ ದಿನದಲ್ಲಿ ಹಾಮಾನನು ಹರ್ಷಭರಿತನಾಗಿ ಹೊರಟುಹೋದನು. ಆದರೆ ಅರಮನೆಯ ಹೆಬ್ಬಾಗಿಲಲ್ಲಿರುವ ಮೊರ್ದೆಕೈ ತನಗೆ ಭಯಪಡದೆ ಕುಳಿತುಕೊಂಡೇ ಇರುವುದನ್ನು ಹಾಮಾನನು ಕಂಡು ಮೊರ್ದೆಕೈಯ ಮೇಲೆ ಕೋಪಗೊಂಡನು.
৯সেই দিন হামন খুশী হয়ে আনন্দিত মনে বাইরে গেল। কিন্তু সে যখন রাজবাড়ীর দরজায় মর্দখয়কে দেখতে পেল এবং তিনি তার সামনে উঠে দাঁড়ালেন না ও সরলেন না, তখন হামন মর্দখয়ের ওপর রেগে গেলেন।
10 ಆದರೂ ಹಾಮಾನನು ಬಿಗಿಹಿಡಿದುಕೊಂಡು ತನ್ನ ಮನೆಗೆ ಹೋದನು. ಅವನು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಯಿಸಿದನು.
১০তা সত্বেও হামন রাগ সংযত করল এবং নিজে বাড়ি এসে নিজের বন্ধুদেরকে ও নিজের স্ত্রী সেরশকে ডেকে আনাল।
11 ಹಾಮಾನನು ತನ್ನ ಐಶ್ವರ್ಯದ ಘನವನ್ನೂ, ತನ್ನ ಮಕ್ಕಳ ಹೆಚ್ಚಳವನ್ನೂ, ಅರಸನು ತನ್ನನ್ನು ಹೆಚ್ಚಿಸಿದ್ದನ್ನೂ, ಅರಸನ ಪ್ರಭುಗಳ ಹಾಗೂ ಸೇವಕರ ಮೇಲೆ ಎತ್ತಿದ್ದನ್ನೂ ಹೀಗೆ ಎಲ್ಲವನ್ನೂ ಅವರಿಗೆ ವಿವರವಾಗಿ ಹೇಳಿದನು.
১১আর হামন তাদের কাছে নিজের ধনসম্পদের জাঁকজমক ও তার ছেলেদের সংখ্যার কথা এবং রাজা কিভাবে তাকে শাসনকর্ত্তাদের ও রাজার দাসদের থেকে শ্রেষ্ঠ আসন দিয়েছেন, এই সমস্ত তাদের কাছে বিবরণ দিল।
12 ಇದಲ್ಲದೆ ಹಾಮಾನನು, “ಎಸ್ತೇರ್ ರಾಣಿಯು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೆ ಯಾರನ್ನು ಕರೆಯಲಿಲ್ಲ. ಮರುದಿನವೂ ಅರಸನೊಂದಿಗೆ ಔತಣಮಾಡಲು ನನ್ನನ್ನು ಆಹ್ವಾನಿಸಿದ್ದಾಳೆ.
১২হামন আরও বলল, “ইষ্টের রাণী নিজের তৈরী ভোজে রাজার সঙ্গে আর কাউকেও নিমন্ত্রণ করেন নি, শুধু আমাকেই করেছেন; কালও আমি রাজার সঙ্গে তাঁর কাছে নিমন্ত্রিত আছি।
13 ಆದರೆ ಯೆಹೂದ್ಯನಾದ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ನನ್ನ ಕಣ್ಣೆದುರು ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಎಂದನು.
১৩কিন্তু যে পর্যন্ত আমি রাজবাড়ির দরজায় বসে থাকা যিহূদী মর্দখয়কে দেখতে পাই, সে পর্যন্ত এই সব কিছুতে আমার শান্তি হয় না।”
14 ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಬೆಳಿಗ್ಗೆ ಗಲ್ಲಿಗೇರಿಸಲು ಇಪ್ಪತ್ತು ಮೀಟರ್ ಉದ್ದದ ಒಂದು ಗಲ್ಲುಮರವನ್ನು ಮಾಡು. ತರುವಾಯ ಅರಸನ ಸಂಗಡ ಔತಣಕ್ಕೆ ಹೋಗಿ ಸಂತೋಷವಾಗಿರು,” ಎಂದರು. ಈ ಸಲಹೆ ಹಾಮಾನನಿಗೆ ಮೆಚ್ಚಿಕೆಯಾದದ್ದರಿಂದ ಗಲ್ಲುಮರವನ್ನು ಸಿದ್ಧಮಾಡಿಸಿದನು.
১৪তখন তার স্ত্রী সেরশ ও তার সব বন্ধু তাকে বলল, “তুমি পঞ্চাশ হাত উঁচু একটা ফাঁসিকাঠ তৈরী করাও; আর মর্দখয়কে তার উপরে ফাঁসি দেবার জন্য কাল সকালে রাজার কাছে জানাও; পরে খুশি হয়ে রাজার সঙ্গে ভোজে যাও।” তখন হামন এই কথায় আনন্দিত হয়ে সেই ফাঁসিকাঠ তৈরী করাল।