< ಎಸ್ತೇರಳು 8 >

1 ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಸೊತ್ತನ್ನು ರಾಣಿಯಾದ ಎಸ್ತೇರಳಿಗೆ ಕೊಟ್ಟನು. ಇದಲ್ಲದೆ ಮೊರ್ದೆಕೈ ಅರಸನ ಬಳಿಗೆ ಬಂದನು. ಏಕೆಂದರೆ ಮೊರ್ದೆಕೈ ತನಗೆ ಸಂಬಂಧಿಕನು ಎಂದು ಎಸ್ತೇರಳು ತಿಳಿಸಿದ್ದಳು.
בַּיֹּ֣ום הַה֗וּא נָתַ֞ן הַמֶּ֤לֶךְ אֲחַשְׁוֵרֹושׁ֙ לְאֶסְתֵּ֣ר הַמַּלְכָּ֔ה אֶת־בֵּ֥ית הָמָ֖ן צֹרֵ֣ר הַיְּהוּדִיִּים (הַיְּהוּדִ֑ים) וּמָרְדֳּכַ֗י בָּ֚א לִפְנֵ֣י הַמֶּ֔לֶךְ כִּֽי־הִגִּ֥ידָה אֶסְתֵּ֖ר מַ֥ה הוּא־לָֽהּ׃
2 ಆಗ ಅರಸನು ತಾನು ಹಾಮಾನನಿಂದ ತೆಗೆದುಕೊಂಡ ತನ್ನ ಮುದ್ರೆಉಂಗುರವನ್ನು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆಕೈಯನ್ನು ಹಾಮಾನನ ಸೊತ್ತಿಗೆ ಅಧಿಕಾರಿಯಾಗಿ ನೇಮಿಸಿದಳು.
וַיָּ֨סַר הַמֶּ֜לֶךְ אֶת־טַבַּעְתֹּ֗ו אֲשֶׁ֤ר הֶֽעֱבִיר֙ מֵֽהָמָ֔ן וַֽיִּתְּנָ֖הּ לְמָרְדֳּכָ֑י וַתָּ֧שֶׂם אֶסְתֵּ֛ר אֶֽת־מָרְדֳּכַ֖י עַל־בֵּ֥ית הָמָֽן׃ פ
3 ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳ ಮುಂದೆ ಬಿದ್ದು, ಅತ್ತುಕೊಂಡು ಬೇಡಿದಳು. ಅಗಾಗನ ವಂಶದನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆದುಹಾಕಲು ಬೇಡಿಕೊಂಡಳು.
וַתֹּ֣וסֶף אֶסְתֵּ֗ר וַתְּדַבֵּר֙ לִפְנֵ֣י הַמֶּ֔לֶךְ וַתִּפֹּ֖ל לִפְנֵ֣י רַגְלָ֑יו וַתֵּ֣בְךְּ וַתִּתְחַנֶּן־לֹ֗ו לְהַֽעֲבִיר֙ אֶת־רָעַת֙ הָמָ֣ן הָֽאֲגָגִ֔י וְאֵת֙ מַֽחֲשַׁבְתֹּ֔ו אֲשֶׁ֥ר חָשַׁ֖ב עַל־הַיְּהוּדִֽים׃
4 ಆಗ ಅರಸನು ಎಸ್ತೇರಳ ಕಡೆಗೆ ಸ್ವರ್ಣದಂಡವನ್ನು ಚಾಚಿದ್ದರಿಂದ, ಎಸ್ತೇರಳು ಎದ್ದು ಅರಸನ ಮುಂದೆ ನಿಂತಳು.
וַיֹּ֤ושֶׁט הַמֶּ֙לֶךְ֙ לְאֶסְתֵּ֔ר אֵ֖ת שַׁרְבִ֣ט הַזָּהָ֑ב וַתָּ֣קָם אֶסְתֵּ֔ר וַֽתַּעֲמֹ֖ד לִפְנֵ֥י הַמֶּֽלֶךְ׃
5 ಅವಳು, “ಅರಸನಿಗೆ ನನ್ನ ಮೇಲೆ ದಯೆಯಿದ್ದರೆ, ಈ ಕಾರ್ಯವು ಅರಸನಿಗೆ ಸರಿ ಎಂದೆಣಿಸಿದರೆ, ಅರಸನು ನನ್ನನ್ನು ಮೆಚ್ಚಿದ್ದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಕೊಂದುಹಾಕುವುದಕ್ಕೆ, ಅಗಾಗನ ವಂಶದ ಹಮ್ಮೆದಾತನ ಮಗ ಹಾಮಾನನು ಬರೆದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.
וַ֠תֹּאמֶר אִם־עַל־הַמֶּ֨לֶךְ טֹ֜וב וְאִם־מָצָ֧אתִי חֵ֣ן לְפָנָ֗יו וְכָשֵׁ֤ר הַדָּבָר֙ לִפְנֵ֣י הַמֶּ֔לֶךְ וְטֹובָ֥ה אֲנִ֖י בְּעֵינָ֑יו יִכָּתֵ֞ב לְהָשִׁ֣יב אֶת־הַסְּפָרִ֗ים מַחֲשֶׁ֜בֶת הָמָ֤ן בֶּֽן־הַמְּדָ֙תָא֙ הָאֲגָגִ֔י אֲשֶׁ֣ר כָּתַ֗ב לְאַבֵּד֙ אֶת־הַיְּהוּדִ֔ים אֲשֶׁ֖ר בְּכָל־מְדִינֹ֥ות הַמֶּֽלֶךְ׃
6 ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಹೇಗೆ ಸಹಿಸಲಿ? ಇಲ್ಲವೆ ನನ್ನ ಕುಟುಂಬದ ನಾಶವನ್ನು ನಾನು ನೋಡಿ ಹೇಗೆ ಸಹಿಸಲಿ?” ಎಂದಳು.
כִּ֠י אֵיכָכָ֤ה אוּכַל֙ וְֽרָאִ֔יתִי בָּרָעָ֖ה אֲשֶׁר־יִמְצָ֣א אֶת־עַמִּ֑י וְאֵֽיכָכָ֤ה אוּכַל֙ וְֽרָאִ֔יתִי בְּאָבְדַ֖ן מֹולַדְתִּֽי׃ ס
7 ಆಗ ಅರಸನಾದ ಅಹಷ್ವೇರೋಷನು ಎಸ್ತೇರ್ ರಾಣಿಗೂ ಯೆಹೂದ್ಯನಾದ ಮೊರ್ದೆಕೈಗೂ ಹೇಳಿದ್ದೇನೆಂದರೆ, “ಇಗೋ, ಹಾಮಾನನು ಯೆಹೂದ್ಯರ ವಿರುದ್ಧ ಕೈಯೆತ್ತಿದ್ದರಿಂದ ಅವನ ಸೊತ್ತನ್ನು ಎಸ್ತೇರಳಿಗೆ ಕೊಟ್ಟೆನು. ಹಾಮಾನನನ್ನು ಗಲ್ಲಿಗೆ ಹಾಕಿದ್ದಾರೆ.
וַיֹּ֨אמֶר הַמֶּ֤לֶךְ אֲחַשְׁוֵרֹשׁ֙ לְאֶסְתֵּ֣ר הַמַּלְכָּ֔ה וּֽלְמָרְדֳּכַ֖י הַיְּהוּדִ֑י הִנֵּ֨ה בֵית־הָמָ֜ן נָתַ֣תִּי לְאֶסְתֵּ֗ר וְאֹתֹו֙ תָּל֣וּ עַל־הָעֵ֔ץ עַ֛ל אֲשֶׁר־שָׁלַ֥ח יָדֹ֖ו בַּיְּהוּדִיִּים (בַּיְּהוּדִֽים)׃
8 ಈಗ ನೀವು ಯೆಹೂದ್ಯರಿಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋರುವ ಹಾಗೆ ಬೇರೆ ಒಂದು ಪತ್ರವನ್ನು ಬರೆದು, ಅರಸನ ಉಂಗುರದಿಂದ ಮುದ್ರೆಹಾಕಿರಿ. ಏಕೆಂದರೆ ಅರಸನ ಹೆಸರಿನಿಂದ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ಈಗ ರದ್ದುಮಾಡಲಾಗದು,” ಎಂದು ಹೇಳಿದನು.
וְ֠אַתֶּם כִּתְב֨וּ עַל־הַיְּהוּדִ֜ים כַּטֹּ֤וב בְּעֵֽינֵיכֶם֙ בְּשֵׁ֣ם הַמֶּ֔לֶךְ וְחִתְמ֖וּ בְּטַבַּ֣עַת הַמֶּ֑לֶךְ כִּֽי־כְתָ֞ב אֲשֶׁר־נִכְתָּ֣ב בְּשֵׁם־הַמֶּ֗לֶךְ וְנַחְתֹּ֛ום בְּטַבַּ֥עַת הַמֶּ֖לֶךְ אֵ֥ין לְהָשִֽׁיב׃
9 ಆಗ ಮೂರನೆಯ ತಿಂಗಳಾದ ಸಿವಾನ್ ಎಂಬ ಮಾಸದ ಇಪ್ಪತ್ತಮೂರನೆಯ ದಿನದಲ್ಲಿ ಅರಸನ ಲೇಖಕರನ್ನು ಕರೆಯಲಾಯಿತು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ, ಸಕಲ ಯೆಹೂದ್ಯರಿಗೂ ಹಿಂದೂ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ, ಅಧಿಕಾರಿಗಳಿಗೂ, ಅವರವರ ಪ್ರಾಂತದ ಲಿಪಿಯಲ್ಲಿಯೂ, ಅವರವರ ಭಾಷೆಯಲ್ಲಿಯೂ ಪತ್ರಗಳನ್ನು ಬರೆಯಲಾಯಿತು.
וַיִּקָּרְא֣וּ סֹפְרֵֽי־הַמֶּ֣לֶךְ בָּֽעֵת־הַ֠הִיא בַּחֹ֨דֶשׁ הַשְּׁלִישִׁ֜י הוּא־חֹ֣דֶשׁ סִיוָ֗ן בִּשְׁלֹושָׁ֣ה וְעֶשְׂרִים֮ בֹּו֒ וַיִּכָּתֵ֣ב כְּֽכָל־אֲשֶׁר־צִוָּ֣ה מָרְדֳּכַ֣י אֶל־הַיְּהוּדִ֡ים וְאֶ֣ל הָאֲחַשְׁדַּרְפְּנִֽים־וְהַפַּחֹות֩ וְשָׂרֵ֨י הַמְּדִינֹ֜ות אֲשֶׁ֣ר ׀ מֵהֹ֣דּוּ וְעַד־כּ֗וּשׁ שֶׁ֣בַע וְעֶשְׂרִ֤ים וּמֵאָה֙ מְדִינָ֔ה מְדִינָ֤ה וּמְדִינָה֙ כִּכְתָבָ֔הּ וְעַ֥ם וָעָ֖ם כִּלְשֹׁנֹ֑ו וְאֶ֨ל־הַיְּהוּדִ֔ים כִּכְתָבָ֖ם וְכִלְשֹׁונָֽם׃
10 ಮೊರ್ದೆಕೈ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದ ಪತ್ರಗಳಿಗೆ ಅರಸನ ಉಂಗುರದಿಂದ ಮುದ್ರೆಹಾಕಿ, ಸವಾರಿ ಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮೂಲಕ ವೇಗವಾಗಿ ಕಳುಹಿಸಿದನು.
וַיִּכְתֹּ֗ב בְּשֵׁם֙ הַמֶּ֣לֶךְ אֲחַשְׁוֵרֹ֔שׁ וַיַּחְתֹּ֖ם בְּטַבַּ֣עַת הַמֶּ֑לֶךְ וַיִּשְׁלַ֣ח סְפָרִ֡ים בְּיַד֩ הָרָצִ֨ים בַּסּוּסִ֜ים רֹכְבֵ֤י הָרֶ֙כֶשׁ֙ הָֽאֲחַשְׁתְּרָנִ֔ים בְּנֵ֖י הָֽרַמָּכִֽים׃
11 ಅರಸನಾದ ಅಹಷ್ವೇರೋಷನ ಆಜ್ಞೆಯ ಪ್ರಕಾರ, ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಟ್ಟಾಗಿ ಸೇರಿ ಪ್ರಾಣರಕ್ಷಣೆ ಮಾಡಿಕೊಳ್ಳುವ ಹಕ್ಕನ್ನು ಕೊಡಲಾಗಿತ್ತು. ಯಾವುದೇ ದೇಶದವರು ಅಥವಾ ಪ್ರಾಂತದವರು ಆಯುಧಗಳೊಡನೆ ಅವರಿಗೆ ವಿರೋಧವಾಗಿ ಎದ್ದು ಅವರನ್ನಾಗಲಿ, ಅವರ ಮಹಿಳೆಯರನ್ನಾಗಲಿ, ಅವರ ಮಕ್ಕಳನ್ನಾಗಲಿ ದಾಳಿಮಾಡಲು ಬಂದರೆ, ಅಂಥವರನ್ನು ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ವೈರಿಯ ಆಸ್ತಿಯನ್ನು ಕೊಳ್ಳೆ ಹೊಡೆಯುವುದಕ್ಕೂ ಅಧಿಕಾರಕೊಡಲಾಗಿತ್ತು.
אֲשֶׁר֩ נָתַ֨ן הַמֶּ֜לֶךְ לַיְּהוּדִ֣ים ׀ אֲשֶׁ֣ר בְּכָל־עִיר־וָעִ֗יר לְהִקָּהֵל֮ וְלַעֲמֹ֣ד עַל־נַפְשָׁם֒ לְהַשְׁמִיד֩ וְלַהֲרֹ֨ג וּלְאַבֵּ֜ד אֶת־כָּל־חֵ֨יל עַ֧ם וּמְדִינָ֛ה הַצָּרִ֥ים אֹתָ֖ם טַ֣ף וְנָשִׁ֑ים וּשְׁלָלָ֖ם לָבֹֽוז׃
12 ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಇದನ್ನು ಮಾಡಲು ನೇಮಿಸಿದ ದಿನವು, ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನವಾಗಿತ್ತು.
בְּיֹ֣ום אֶחָ֔ד בְּכָל־מְדִינֹ֖ות הַמֶּ֣לֶךְ אֲחַשְׁוֵרֹ֑ושׁ בִּשְׁלֹושָׁ֥ה עָשָׂ֛ר לְחֹ֥דֶשׁ שְׁנֵים־עָשָׂ֖ר הוּא־חֹ֥דֶשׁ אֲדָֽר׃
13 ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳಲು, ಅವರು ಆ ದಿನ ಸಿದ್ಧವಾಗಿರಬೇಕೆಂದು ಈ ಆಜ್ಞಾಪತ್ರದ ಪ್ರತಿಯು ಪ್ರಾಂತ ಪ್ರಾಂತಗಳಲ್ಲಿ ಕಾನೂನಾಗಿ ಸಕಲ ದೇಶದವರಿಗೂ ಸಾರಿ ಹೇಳಲಾಗಿತ್ತು.
פַּתְשֶׁ֣גֶן הַכְּתָ֗ב לְהִנָּ֤תֵֽן דָּת֙ בְּכָל־מְדִינָ֣ה וּמְדִינָ֔ה גָּל֖וּי לְכָל־הָעַמִּ֑ים וְלִהְיֹ֨ות הַיְּהוּדִיִּים (הַיְּהוּדִ֤ים) עֲתוּדִים (עֲתִידִים֙) לַיֹּ֣ום הַזֶּ֔ה לְהִנָּקֵ֖ם מֵאֹיְבֵיהֶֽם׃
14 ಅಂಚೆಯವರು ಅರಸನ ಆಜ್ಞೆಯಿಂದ ಪ್ರೇರಿತರಾಗಿ ಅರಮನೆಯ ಕುದುರೆಗಳ ಮೇಲೆ ಅತಿ ಶೀಘ್ರವಾಗಿ ಹೊರಟರು. ಈ ಆಜ್ಞೆಯು ಶೂಷನ್ ನಗರದ ಅರಮನೆಯಲ್ಲಿ ಕೊಡಲಾಗಿತ್ತು.
הָרָצִ֞ים רֹכְבֵ֤י הָרֶ֙כֶשׁ֙ הָֽאֲחַשְׁתְּרָנִ֔ים יָֽצְא֛וּ מְבֹהָלִ֥ים וּדְחוּפִ֖ים בִּדְבַ֣ר הַמֶּ֑לֶךְ וְהַדָּ֥ת נִתְּנָ֖ה בְּשׁוּשַׁ֥ן הַבִּירָֽה׃ פ
15 ಮೊರ್ದೆಕೈ ಶುಭ್ರವಾದ ನೀಲ ರಾಜವಸ್ತ್ರವನ್ನು ಧರಿಸಿ, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣವುಳ್ಳ ನಯವಾದ ನಾರಿನ ಶಾಲನ್ನು ಹೊದ್ದುಕೊಂಡು ಅರಸನ ಸಮ್ಮುಖದಿಂದ ಹೊರಟುಹೋದನು. ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
וּמָרְדֳּכַ֞י יָצָ֣א ׀ מִלִּפְנֵ֣י הַמֶּ֗לֶךְ בִּלְב֤וּשׁ מַלְכוּת֙ תְּכֵ֣לֶת וָח֔וּר וַעֲטֶ֤רֶת זָהָב֙ גְּדֹולָ֔ה וְתַכְרִ֥יךְ בּ֖וּץ וְאַרְגָּמָ֑ן וְהָעִ֣יר שׁוּשָׁ֔ן צָהֲלָ֖ה וְשָׂמֵֽחָה׃
16 ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾಗಿದ್ದವು.
לַיְּהוּדִ֕ים הָֽיְתָ֥ה אֹורָ֖ה וְשִׂמְחָ֑ה וְשָׂשֹׂ֖ן וִיקָֽר׃
17 ಅರಸನ ಆಜ್ಞೆಯು ಪ್ರಕಟವಾದ ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಯೆಹೂದ್ಯರಿಗೆ ಸಂತೋಷವೂ ಆನಂದವೂ ಸಂಭ್ರಮವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಇತರ ದೇಶಗಳ ಅನೇಕ ಜನರು ಯೆಹೂದ್ಯರಾದರು. ಯೆಹೂದ್ಯರ ಭಯವು ಅವರ ಮೇಲೆ ಇತ್ತು.
וּבְכָל־מְדִינָ֨ה וּמְדִינָ֜ה וּבְכָל־עִ֣יר וָעִ֗יר מְקֹום֙ אֲשֶׁ֨ר דְּבַר־הַמֶּ֤לֶךְ וְדָתֹו֙ מַגִּ֔יעַ שִׂמְחָ֤ה וְשָׂשֹׂון֙ לַיְּהוּדִ֔ים מִשְׁתֶּ֖ה וְיֹ֣ום טֹ֑וב וְרַבִּ֞ים מֵֽעַמֵּ֤י הָאָ֙רֶץ֙ מִֽתְיַהֲדִ֔ים כִּֽי־נָפַ֥ל פַּֽחַד־הַיְּהוּדִ֖ים עֲלֵיהֶֽם׃

< ಎಸ್ತೇರಳು 8 >