< ಎಸ್ತೇರಳು 9 >
1 ಹನ್ನೆರಡನೆಯ ತಿಂಗಳಾದ ಆದಾರ್ ತಿಂಗಳೆಂಬ ಹದಿಮೂರನೆಯ ದಿನದಲ್ಲಿ ಅರಸನ ಆಜ್ಞೆಯು ನೆರವೇರುವುದಕ್ಕೆ ನಿರ್ಣಯವಾಗಿತ್ತು. ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವುದಾಗಿ ಎದುರುನೋಡಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಲಾರಂಭಿಸಿದರು.
And, in the twelfth month, the same, is the month Adar, on the thirteenth day thereof, when the word of the king and his edict arrived to be put in execution, —on the day when the enemies of the Jews hoped to have power over them, though it, was changed, so that the Jews themselves should have power over them who hated them,
2 ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ಯೆಹೂದ್ಯರು ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ದಾಳಿಮಾಡಲು ಒಟ್ಟಾಗಿ ಸೇರಿದರು. ಆಗ ಯೆಹೂದ್ಯರ ಭಯವು ಸಮಸ್ತ ಜನರ ಮೇಲೆ ಇದ್ದುದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.
the Jews assembled themselves together in their cities, throughout all the provinces of King Ahasuerus, to thrust forth a hand against them who were seeking their hurt, and, no man, stood before them, for the dread of them had fallen upon all the peoples.
3 ಇದಲ್ಲದೆ ಪ್ರಾಂತಗಳ ಉಪರಾಜರೂ, ಪ್ರತಿನಿಧಿಗಳೂ, ಅಧಿಪತಿಗಳೂ, ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಏಕೆಂದರೆ ಮೊರ್ದೆಕೈಯ ಭಯ ಅವರಿಗಿತ್ತು.
And, all the rulers of the provinces, and the satraps and the pashas, and the doers of business that pertained to the king, were extolling the Jews, —for the dread of Mordecai, had fallen upon them;
4 ಏಕೆಂದರೆ ಮೊರ್ದೆಕೈ ಅರಮನೆಯಲ್ಲಿ ಪ್ರಮುಖನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತಗಳಿಗೂ ಹರಡಿತು. ಈ ಮೊರ್ದೆಕೈ ಅಧಿಕವಾಗಿ ಅಧಿಕಾರವಂತನಾದನು.
since great was Mordecai, in the house of the king, and, his fame, was going forth throughout all the provinces, —for, the man Mordecai, went on waxing great.
5 ಹೀಗೆ ಯೆಹೂದ್ಯರು ತಮ್ಮ ಶತ್ರುಗಳೆಲ್ಲರನ್ನು ಸೋಲಿಸಿ, ಖಡ್ಗದಿಂದ ಸಂಹರಿಸಿದರು. ತಮ್ಮನ್ನು ಹಗೆಮಾಡುತ್ತಿದ್ದವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.
So then the Jews smote all their enemies, with the smiting of the sword and slaughter, and destruction, —and they dealt with them who hated them according to their pleasure.
6 ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಐನೂರು ಮಂದಿಗೆ ಮರಣದಂಡನೆ ವಿಧಿಸಿದರು.
Yea, in Shusan the palace, did the Jews slay and destroy five hundred men.
7 ಇದಲ್ಲದೆ ಪರ್ಷಂದಾತನು ದಲ್ಫೋನನು, ಅಸ್ಪಾತನು,
And Parshandatha and Dalphon, and Aspatha;
8 ಪೊರಾತನು, ಅದಲ್ಯನು, ಅರಿದಾತನು,
and Poratha, and Adalia, and Aridatha;
9 ಪರ್ಮಷ್ಟನು, ಅರಿಸಾಯನು, ಅರಿದಾಯನು, ವೈಜಾತನು ಎಂಬವರನ್ನು ಕೊಂದರು.
and Parmashta, and Arisai, and Aridai, and Vaizatha; —
10 ಇವರು ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗ ಹಾಮಾನನ ಹತ್ತು ಮಂದಿ ಪುತ್ರರು. ಆದರೆ ಅವರು ಇವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.
the ten sons of Haman son of Hammedatha, the adversary of the Jews, slew they, —but, on the spoil, thrust they not forth their hand.
11 ಅದೇ ದಿವಸ ಶೂಷನಿನ ಅರಮನೆಯಲ್ಲಿ ಮರಣದಂಡನೆಯಾದವರ ಲೆಕ್ಕವು ಅರಸನ ಮುಂದೆ ಒಪ್ಪಿಸಲಾಯಿತು.
On that day, came in the number of the slain into Shusan the palace, before the king.
12 ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಸಂಹರಿಸಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತಗಳಲ್ಲಿ ಏನು ಮಾಡಿರಬಹುದೋ? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲಾಗುವುದು. ಇನ್ನೂ ನಿನ್ನ ಬೇಡಿಕೆ ಏನು? ಅದು ಮಾಡಲಾಗುವುದು,” ಎಂದು ಹೇಳಿದನು.
Then said the king unto Esther the queen, In Shusan the palace, have the Jews slain and caused to perish five hundred men, and the ten sons of Haman, —in the rest of the provinces of the king, what have they done? What, then, is thy petition, that it may be granted thee? and what is thy request further, that it may he performed?
13 ಅದಕ್ಕೆ ಎಸ್ತೇರಳು, “ಅರಸನಿಗೆ ಸಮ್ಮತಿಯಾದರೆ, ಇಂದಿನಂತೆಯೇ ರಾಜಾಜ್ಞೆಯು ನಾಳೆಯೂ ಶೂಷನ್ ಪಟ್ಟಣದಲ್ಲಿ ಜಾರಿಗೆ ಬರಲು ಯೆಹೂದ್ಯರಿಗೆ ಅಪ್ಪಣೆ ಆಗಲಿ. ಹಾಮಾನನ ಹತ್ತು ಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸುವಂತೆ ಅಪ್ಪಣೆಯಾಗಲಿ,” ಎಂದಳು.
Then said Esther, If, unto the king, it seem good, let it be granted, to-morrow also, unto the Jews who are in Shusan, to do according to the edict of to-day, —and that, the ten sons of Haman, be hanged upon the gallows.
14 ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಜಾರಿಗೆಬಂದಾಗ ಅವರು ಹಾಮಾನನ ಹತ್ತು ಮಂದಿ ಪುತ್ರರ ಶವವನ್ನು ಗಲ್ಲಿಗೆ ಹಾಕಿದರು.
And the king commanded it to be done so, and there was given an edict, in Shusan, —and, the ten sons of Haman, they hanged.
15 ಇದಲ್ಲದೆ ಶೂಷನಿನಲ್ಲಿರುವ ಯೆಹೂದ್ಯರು ಆದಾರ್ ಎಂಬ ಫಾಲ್ಗುನಮಾಸದ ಹದಿನಾಲ್ಕನೆಯ ದಿವಸದಲ್ಲಿ ಶೂಷನಿನಲ್ಲಿ ಒಟ್ಟಾಗಿ ಸೇರಿ ಮುನ್ನೂರು ಮಂದಿಗೆ ಮರಣದಂಡನೆಯನ್ನು ವಿಧಿಸಿದರು. ಆದರೆ ಅವರು ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.
So the Jews who were in Shusan assembled themselves together, on the fourteenth day also, of the month Adar, and slew in Shusan three hundred men, —but, on the spoil, thrust they not forth their hand.
16 ಅರಸನ ಪ್ರಾಂತಗಳಲ್ಲಿರುವ ಮಿಕ್ಕ ಯೆಹೂದ್ಯರು ತಮ್ಮ ಪ್ರಾಣ ರಕ್ಷಣೆಗಾಗಿ ಎದ್ದು ನಿಂತು, ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆಯುವಂತೆ ಒಟ್ಟಾಗಿ ಸೇರಿದರು. ಅವರು ತಮ್ಮ ವೈರಿಗಳಲ್ಲಿ 75,000 ಮಂದಿಗೆ ಮರಣದಂಡನೆ ವಿಧಿಸಿದರು. ಆದರೆ ಅವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.
And, the remainder of the Jews who were in the provinces of the king, assembled themselves together and stood for their life, and then had rest from their enemies, having slain of them that hated them seventy-five thousand, —but, on the spoil, thrust they not forth their hand:
17 ಆದಾರ್ ಮಾಸದ ಹದಿಮೂರನೆಯ ದಿನ ಈ ಘಟನೆ ನಡೆಯಿತು. ಹದಿನಾಲ್ಕನೆಯ ದಿನದಂದು ಅವರು ವಿಶ್ರಮಿಸಿಕೊಂಡು, ಅದನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.
on the thirteenth day of the month Adar, —and then had rest on the fourteenth day thereof, and made it a day of banqueting and rejoicing.
18 ಆದರೆ ಶೂಷನಿನಲ್ಲಿದ್ದ ಯೆಹೂದ್ಯರು ಹದಿಮೂರನೆಯ ಹಾಗೂ ಹದಿನಾಲ್ಕನೆಯ ದಿನಗಳಲ್ಲಿ ಒಟ್ಟಾಗಿ ಸೇರಿಬಂದದ್ದರಿಂದ, ಹದಿನೈದನೆಯ ದಿನದಲ್ಲಿ ಅವರು ವಿಶ್ರಮಿಸಿಕೊಂಡು, ಅದೇ ದಿನವನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.
But, the Jews who were in Shusan, assembled themselves together on the thirteenth day thereof, and on the fourteenth day thereof, —and then had rest on the fifteenth day thereof, and made it a day of banqueting and rejoicing.
19 ಆದಕಾರಣ ಗ್ರಾಮಗಳಲ್ಲಿಯೂ ಬಯಲು ಪ್ರಾಂತಗಳ ಪಟ್ಟಣಗಳಲ್ಲಿಯೂ ವಾಸವಾಗಿರುವ ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆಯ ದಿನವನ್ನು ಶುಭದಿನವಾಗಿಯೂ, ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ ಆಚರಿಸಿದರು.
For this cause, the country Jews, who dwelt in the country towns, were making the fourteenth day of the month Adar one of rejoicing and banqueting, and a day of happiness, —and of sending portions every one to his neighbour.
20 ಮೊರ್ದೆಕೈಯು ಈ ಘಟನೆಗಳನ್ನು ಬರೆದು ಅರಸನಾದ ಅಹಷ್ವೇರೋಷನ ಸಕಲ ಪ್ರಾಂತಗಳಲ್ಲಿ ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಯೆಹೂದ್ಯರು ಎಲ್ಲರಿಗೂ ಪತ್ರಗಳ ಮುಖಾಂತರ ಕಳುಹಿಸಿದನು.
And Mordecai wrote these things, —and sent letters unto all the Jews who were in all the provinces of King Ahasuerus, near, and far off;
21 ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆ ಮತ್ತು ಹದಿನೈದನೆ ದಿನಗಳನ್ನೂ ಪ್ರತಿವರ್ಷ ಹಬ್ಬದ ದಿನಗಳಾಗಿ ಆಚರಿಸುವುದು ಶಾಶ್ವತ ನಿಯಮವೆಂದು ಭಾವಿಸುವಂತೆ ಆ ಪತ್ರದಲ್ಲಿ ಬರೆಯಲಾಗಿತ್ತು.
to establish for them, that they should continue to observe the fourteenth day of the month Adar, and the fifteenth day thereof, —always year by year;
22 ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು.
according to the days wherein the Jews found rest from their enemies, and the month which was turned for them, from sorrow to joy, and from mourning to a happy day, —that they should make them days of banqueting and rejoicing, and of sending portions, every one to his neighbour, and gifts, unto the needy.
23 ಆದ್ದರಿಂದ ಯೆಹೂದ್ಯರು ಮೊರ್ದೆಕೈಯು ತಮಗೆ ಬರೆದ ಪ್ರಕಾರವಾಗಿ, ತಾವು ಆರಂಭಮಾಡಿದ್ದ ಸಂಭ್ರಮವನ್ನು ಮುಂದುವರಿಸಲು ಒಪ್ಪಿಕೊಂಡರು.
And the Jews took upon them that which they had begun to do, —and that which Mordecai had written unto them;
24 ಏಕೆಂದರೆ ಸಮಸ್ತ ಯೆಹೂದ್ಯರಿಗೂ ಕಡು ವೈರಿಯಾದ, ಅಗಾಗನ ವಂಶದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ತೀರ್ಮಾನಿಸಿಕೊಂಡು ಅವರನ್ನು ಹಾಳುಮಾಡಲು, ನಿರ್ನಾಮಗೊಳಿಸಲು ಪೂರ್ ಅಂದರೆ, ಚೀಟನ್ನು ಹಾಕಿದ್ದನು.
because, Haman, son of Hammedatha, the Agagite, the adversary of all the Jews, had plotted against the Jews, to cause them to perish, —and had cast Pur, the same, is the Lot, to terrify them, and to destroy them;
25 ಆದರೆ ಈ ಒಳಸಂಚು ಅರಸನಿಗೆ ತಿಳಿದುಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವಂತೆ ಅರಸನು ಆಜ್ಞೆಯನ್ನು ಹೊರಡಿಸಿದನು. ಅದರೊಂದಿಗೆ ಅವನ ಮಕ್ಕಳನ್ನೂ ಗಲ್ಲಿಗೇರಿಸಲು ಅರಸನು ಆಜ್ಞಾಪಿಸಿದ್ದನು;
but, by [Esther’s] going in before the king, he commanded by letter, that his wicked plot which he had plotted against the Jews, should return, upon his own head, —and that he and his sons should be hanged upon the gallows.
26 ಆದ್ದರಿಂದ ಪೂರ್ ಎಂಬ ಪದದ ಆಧಾರದ ಮೇಲೆ ಆ ದಿನಗಳಿಗೆ ಪೂರಿಮ್ ಎಂಬ ಹೆಸರಾಯಿತು. ಅರಸನು ಪತ್ರದಲ್ಲಿ ಬರೆದ ಎಲ್ಲಾ ಮಾತುಗಳನ್ನೂ, ಅವುಗಳ ಸಂಬಂಧವಾಗಿ ತಾವು ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ
For this cause, called they these days Purim, after the name Pur, for this cause, —for all the words of this epistle, —and what they had seen concerning such a matter, and what had reached unto them.
27 ಯೆಹೂದ್ಯರು ಸ್ಮರಿಸಿಕೊಂಡು ಪ್ರತಿವರ್ಷವೂ ಆ ಎರಡು ದಿನಗಳನ್ನು, ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವಂತೆ ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಯಾವ ವಿಧದಲ್ಲಿಯೂ ಮೀರಕೂಡದ ಪದ್ಧತಿಯನ್ನಾಗಿ ಪಾಲಿಸಲು ತೀರ್ಮಾನಿಸಿದರು.
The Jews established and took upon themselves—and upon their seed, and upon all who should join themselves unto them, that it might not pass away, that they would continue to keep these two days, according to the writing concerning them and at their set time, —always year by year.
28 ಇದಲ್ಲದೆ ಈ ಎರಡು ದಿನಗಳನ್ನು ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ, ಪ್ರತಿ ತಲೆಮಾರಿನಲ್ಲಿಯೂ, ಪ್ರತಿ ಕುಟುಂಬದಲ್ಲಿಯೂ ಸ್ಮರಿಸಿ ಆಚರಿಸಬೇಕು. ಈ ಪೂರಿಮ್ ದಿನಗಳು ಯೆಹೂದ್ಯರಲ್ಲಿ ಎಂದಿಗೂ ನಿಂತುಹೋಗಬಾರದು. ಅವರ ಸಂತಾನದವರಲ್ಲಿ ಅವುಗಳ ಜ್ಞಾಪಕವು ಅಳಿದು ಹೋಗಬಾರದು ಎಂದೂ ತೀರ್ಮಾನಿಸಿಕೊಂಡರು.
And, these days, were to be remembered and to be kept, always from generation to generation, by every family, every province, and every city, —that, these days of Purim, should not pass away, out of the midst of the Jews, and, the memorial of them, not cease from their seed.
29 ಆಗ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯೂ, ಈ ಪೂರಿಮ್ ದಿನವನ್ನು ಸ್ಥಿರಪಡಿಸುವುದಕ್ಕಾಗಿ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಎರಡನೆಯ ಪತ್ರವನ್ನು ಪೂರ್ಣ ಅಧಿಕಾರದಿಂದ ಬರೆದಳು.
Then wrote Esther the queen daughter of Abihail and Mordecai the Jew, with all authority, —to confirm this second epistle concerning the Purim;
30 ಮೊರ್ದೆಕೈಯೂ ದಯೆ ಹಾಗೂ ಭರವಸೆಯ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತಗಳಲ್ಲಿರುವ ಸಮಸ್ತ ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದನು.
and he sent letters unto all the Jews, throughout the hundred and twenty-seven provinces of the kingdom of Ahasuerus, —words of peace and stability:
31 ಇದಲ್ಲದೆ ಈ ಪೂರಿಮ್ ದಿನಗಳನ್ನು ಯೆಹೂದ್ಯನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಎಲ್ಲಾ ಯೆಹೂದ್ಯರಿಗೂ, ಅವರ ಸಂತಾನದವರಿಗೂ ಉಪವಾಸ ಮಾಡಿ, ದುಃಖಿಸುವ ಕಾಲವನ್ನು ಸ್ಥಿರಪಡಿಸಿದ ಪ್ರಕಾರವೇ ಈ ಪೂರಿಮ್ ದಿನವನ್ನು ಸ್ಥಿರಪಡಿಸುವುವಂತೆ ಆಜ್ಞಾಪಿಸಿದ್ದರು.
to establish these days of the Purim, in their set times, according as Mordecai the Jew and Esther the queen had enjoined upon them, and according as they had enjoined upon their own soul, and upon their seed, —the story of the fastings and of their outcry.
32 ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರಿಮ್ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದ್ದರಿಂದ ಅದು ಗ್ರಂಥದಲ್ಲಿ ಬರೆಯಲಾಯಿತು.
And, the command of Esther, confirmed the story of these Purim, —and it was written in a book.