< ವಿಮೋಚನಕಾಂಡ 18 >

1 ದೇವರು ಮೋಶೆಗೂ, ತಮ್ಮ ಜನರಾದ ಇಸ್ರಾಯೇಲರಿಗೂ ಮಾಡಿದವುಗಳೆಲ್ಲವನ್ನೂ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದದ್ದನ್ನೂ, ಮಿದ್ಯಾನಿನ ಯಾಜಕನೂ, ಮೋಶೆಯ ಮಾವನೂ ಆಗಿದ್ದ ಇತ್ರೋವನಿಗೆ ಮುಟ್ಟಿತು.
וַיִּשְׁמַ֞ע יִתְר֨וֹ כֹהֵ֤ן מִדְיָן֙ חֹתֵ֣ן מֹשֶׁ֔ה אֵת֩ כָּל־אֲשֶׁ֨ר עָשָׂ֤ה אֱלֹהִים֙ לְמֹשֶׁ֔ה וּלְיִשְׂרָאֵ֖ל עַמּ֑וֹ כִּֽי־הוֹצִ֧יא יְהוָ֛ה אֶת־יִשְׂרָאֵ֖ל מִמִּצְרָֽיִם׃
2 ಅವನು ತನ್ನ ಬಳಿಗೆ ಕಳುಹಿಸಲಾಗಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನು ಮತ್ತು ಆಕೆಯ ಇಬ್ಬರು ಪುತ್ರರನ್ನು ಕರೆದುಕೊಂಡು ಬಂದನು.
וַיִּקַּ֗ח יִתְרוֹ֙ חֹתֵ֣ן מֹשֶׁ֔ה אֶת־צִפֹּרָ֖ה אֵ֣שֶׁת מֹשֶׁ֑ה אַחַ֖ר שִׁלּוּחֶֽיהָ׃
3 ಮೋಶೆಯು, “ನಾನು ಪರದೇಶದಲ್ಲಿ ಅನ್ಯನಾಗಿದ್ದೆನು,” ಎಂದು ಹೇಳಿ ಆ ಪುತ್ರರಲ್ಲಿ ಒಬ್ಬನಿಗೆ ಗೇರ್ಷೋಮ್ ಎಂದು ಹೆಸರಿಟ್ಟಿದ್ದನು.
וְאֵ֖ת שְׁנֵ֣י בָנֶ֑יהָ אֲשֶׁ֨ר שֵׁ֤ם הָֽאֶחָד֙ גֵּֽרְשֹׁ֔ם כִּ֣י אָמַ֔ר גֵּ֣ר הָיִ֔יתִי בְּאֶ֖רֶץ נָכְרִיָּֽה׃
4 “ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು, ಫರೋಹನ ಖಡ್ಗದಿಂದ ಬಿಡುಗಡೆ ಮಾಡಿದನು,” ಎಂದು ಹೇಳಿ ಇನ್ನೊಬ್ಬ ಮಗನಿಗೆ ಎಲೀಯೆಜೆರ್ ಎಂದು ಹೆಸರಿಟ್ಟಿದ್ದನು.
וְשֵׁ֥ם הָאֶחָ֖ד אֱלִיעֶ֑זֶר כִּֽי־אֱלֹהֵ֤י אָבִי֙ בְּעֶזְרִ֔י וַיַּצִּלֵ֖נִי מֵחֶ֥רֶב פַּרְעֹֽה׃
5 ಮೋಶೆಯ ಮಾವನಾದ ಇತ್ರೋವನ ಸಂಗಡ ಮೋಶೆಯ ಹೆಂಡತಿಯನ್ನೂ, ಅವನ ಪುತ್ರರನ್ನೂ ಮೋಶೆಯ ಬಳಿಗೆ ಅವನು ತಂಗಿದ್ದ ಮರುಭೂಮಿಯಲ್ಲಿ ದೇವರ ಬೆಟ್ಟದ ಬಳಿಗೆ ಬಂದರು.
וַיָּבֹ֞א יִתְר֨וֹ חֹתֵ֥ן מֹשֶׁ֛ה וּבָנָ֥יו וְאִשְׁתּ֖וֹ אֶל־מֹשֶׁ֑ה אֶל־הַמִּדְבָּ֗ר אֲשֶׁר־ה֛וּא חֹנֶ֥ה שָׁ֖ם הַ֥ר הָאֱלֹהִֽים׃
6 ಆಗ ಅವನು ಮೋಶೆಗೆ, “ನಿನ್ನ ಮಾವ ಇತ್ರೋವನೆಂಬ ನಾನು ನಿನ್ನ ಹೆಂಡತಿ, ಇಬ್ಬರು ಮಕ್ಕಳನ್ನೂ ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆ,” ಎಂದು ಹೇಳಿ ಕಳುಹಿಸಿದನು.
וַיֹּ֙אמֶר֙ אֶל־מֹשֶׁ֔ה אֲנִ֛י חֹתֶנְךָ֥ יִתְר֖וֹ בָּ֣א אֵלֶ֑יךָ וְאִ֨שְׁתְּךָ֔ וּשְׁנֵ֥י בָנֶ֖יהָ עִמָּֽהּ׃
7 ಮೋಶೆಗೆ ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ, ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.
וַיֵּצֵ֨א מֹשֶׁ֜ה לִקְרַ֣את חֹֽתְנ֗וֹ וַיִּשְׁתַּ֙חוּ֙ וַיִּשַּׁק־ל֔וֹ וַיִּשְׁאֲל֥וּ אִישׁ־לְרֵעֵ֖הוּ לְשָׁל֑וֹם וַיָּבֹ֖אוּ הָאֹֽהֱלָה׃
8 ಇಸ್ರಾಯೇಲರಿಗೋಸ್ಕರ ಯೆಹೋವ ದೇವರು ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ, ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಯೆಹೋವ ದೇವರು ತಮ್ಮನ್ನು ಹೇಗೆ ತಪ್ಪಿಸಿದನೆಂಬುದನ್ನೂ ಮೋಶೆಯು ತನ್ನ ಮಾವನಿಗೆ ತಿಳಿಯಪಡಿಸಿದನು.
וַיְסַפֵּ֤ר מֹשֶׁה֙ לְחֹ֣תְנ֔וֹ אֵת֩ כָּל־אֲשֶׁ֨ר עָשָׂ֤ה יְהוָה֙ לְפַרְעֹ֣ה וּלְמִצְרַ֔יִם עַ֖ל אוֹדֹ֣ת יִשְׂרָאֵ֑ל אֵ֤ת כָּל־הַתְּלָאָה֙ אֲשֶׁ֣ר מְצָאָ֣תַם בַּדֶּ֔רֶךְ וַיַּצִּלֵ֖ם יְהוָֽה׃
9 ಇದಲ್ಲದೆ ಯೆಹೋವ ದೇವರು ಇಸ್ರಾಯೇಲರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ, ಯೆಹೋವ ದೇವರು ಅವರನ್ನು ಈಜಿಪ್ಟಿನವರ ಕೈಗಳಿಂದ ತಪ್ಪಿಸಿದ್ದಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು.
וַיִּ֣חַדְּ יִתְר֔וֹ עַ֚ל כָּל־הַטּוֹבָ֔ה אֲשֶׁר־עָשָׂ֥ה יְהוָ֖ה לְיִשְׂרָאֵ֑ל אֲשֶׁ֥ר הִצִּיל֖וֹ מִיַּ֥ד מִצְרָֽיִם׃
10 ಇತ್ರೋವನು, “ಈಜಿಪ್ಟಿನವರ ಕೈಗೂ ಫರೋಹನ ಕೈಗೂ ಈಜಿಪ್ಟಿನವರ ಅಧಿಕಾರದೊಳಗಿಂದಲೂ ಜನರನ್ನು ತಪ್ಪಿಸಿದ ಯೆಹೋವ ದೇವರಿಗೆ ಸ್ತೋತ್ರವಾಗಲಿ.
וַיֹּאמֶר֮ יִתְרוֹ֒ בָּר֣וּךְ יְהוָ֔ה אֲשֶׁ֨ר הִצִּ֥יל אֶתְכֶ֛ם מִיַּ֥ד מִצְרַ֖יִם וּמִיַּ֣ד פַּרְעֹ֑ה אֲשֶׁ֤ר הִצִּיל֙ אֶת־הָעָ֔ם מִתַּ֖חַת יַד־מִצְרָֽיִם׃
11 ಎಲ್ಲಾ ದೇವರುಗಳಿಗಿಂತ ಯೆಹೋವ ದೇವರೇ ದೊಡ್ಡವರೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಏಕೆಂದರೆ ಈಜಿಪ್ಟಿನವರು ಗರ್ವಪಟ್ಟಿದ್ದರಿಂದ ಯೆಹೋವ ದೇವರು ಅವರನ್ನು ತಗ್ಗಿಸಿದರು,” ಎಂದನು.
עַתָּ֣ה יָדַ֔עְתִּי כִּֽי־גָד֥וֹל יְהוָ֖ה מִכָּל־הָאֱלֹהִ֑ים כִּ֣י בַדָּבָ֔ר אֲשֶׁ֥ר זָד֖וּ עֲלֵיהֶֽם׃
12 ಮೋಶೆಯ ಮಾವ ಇತ್ರೋವನು ದಹನಬಲಿಯನ್ನೂ, ಯಜ್ಞಗಳನ್ನೂ ದೇವರಿಗಾಗಿ ತೆಗೆದುಕೊಂಡು ಬಂದನು. ಆರೋನನೂ, ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನವನ್ನು ಮಾಡುವುದಕ್ಕೆ ಬಂದರು.
וַיִּקַּ֞ח יִתְר֨וֹ חֹתֵ֥ן מֹשֶׁ֛ה עֹלָ֥ה וּזְבָחִ֖ים לֵֽאלֹהִ֑ים וַיָּבֹ֨א אַהֲרֹ֜ן וְכֹ֣ל ׀ זִקְנֵ֣י יִשְׂרָאֵ֗ל לֶאֱכָל־לֶ֛חֶם עִם־חֹתֵ֥ן מֹשֶׁ֖ה לִפְנֵ֥י הָאֱלֹהִֽים׃
13 ಮರುದಿನ ಮೋಶೆಯು ಜನರಿಗೆ ನ್ಯಾಯತೀರಿಸುವುದಕ್ಕೆ ಕೂತುಕೊಂಡಾಗ, ಜನರು ಬೆಳಗಿನಿಂದ ಸಂಜೆಯವರೆಗೆ ಮೋಶೆಯ ಬಳಿಯಲ್ಲಿ ನಿಂತಿದ್ದರು.
וַיְהִי֙ מִֽמָּחֳרָ֔ת וַיֵּ֥שֶׁב מֹשֶׁ֖ה לִשְׁפֹּ֣ט אֶת־הָעָ֑ם וַיַּעֲמֹ֤ד הָעָם֙ עַל־מֹשֶׁ֔ה מִן־הַבֹּ֖קֶר עַד־הָעָֽרֶב׃
14 ಇತ್ರೋವನು ಮೋಶೆಯು ಜನರಿಗಾಗಿ ಮಾಡುವುದನ್ನೆಲ್ಲಾ ನೋಡಿದಾಗ, ಅವನು ಮೋಶೆಗೆ, “ಇದೇನು ಜನರಿಗೆ ನೀನು ಮಾಡುವುದು? ಏಕೆ ನೀನೊಬ್ಬನೇ ನ್ಯಾಯಾಧೀಶನಾಗಿ ಕೂತಿರಲಾಗಿ, ಜನರು ಬೆಳಗಿನಿಂದ ಸಂಜೆಯವರೆಗೆ ನಿನ್ನ ಬಳಿಯಲ್ಲಿ ನಿಂತಿರಬೇಕು?” ಎಂದನು.
וַיַּרְא֙ חֹתֵ֣ן מֹשֶׁ֔ה אֵ֛ת כָּל־אֲשֶׁר־ה֥וּא עֹשֶׂ֖ה לָעָ֑ם וַיֹּ֗אמֶר מָֽה־הַדָּבָ֤ר הַזֶּה֙ אֲשֶׁ֨ר אַתָּ֤ה עֹשֶׂה֙ לָעָ֔ם מַדּ֗וּעַ אַתָּ֤ה יוֹשֵׁב֙ לְבַדֶּ֔ךָ וְכָל־הָעָ֛ם נִצָּ֥ב עָלֶ֖יךָ מִן־בֹּ֥קֶר עַד־עָֽרֶב׃
15 ಅದಕ್ಕೆ ಮೋಶೆಯು ತನ್ನ ಮಾವನಿಗೆ, “ದೇವರ ವಿಷಯವಾಗಿ ಕೇಳುವುದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.
וַיֹּ֥אמֶר מֹשֶׁ֖ה לְחֹתְנ֑וֹ כִּֽי־יָבֹ֥א אֵלַ֛י הָעָ֖ם לִדְרֹ֥שׁ אֱלֹהִֽים׃
16 ಅವರಿಗೆ ಏನಾದರೂ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ,” ಎಂದನು.
כִּֽי־יִהְיֶ֨ה לָהֶ֤ם דָּבָר֙ בָּ֣א אֵלַ֔י וְשָׁ֣פַטְתִּ֔י בֵּ֥ין אִ֖ישׁ וּבֵ֣ין רֵעֵ֑הוּ וְהוֹדַעְתִּ֛י אֶת־חֻקֵּ֥י הָאֱלֹהִ֖ים וְאֶת־תּוֹרֹתָֽיו׃
17 ಮೋಶೆಯ ಮಾವನು ಅವನಿಗೆ, “ನೀನು ಮಾಡುವ ಕಾರ್ಯವಿಧಾನ ಸರಿಯಲ್ಲ,
וַיֹּ֛אמֶר חֹתֵ֥ן מֹשֶׁ֖ה אֵלָ֑יו לֹא־טוֹב֙ הַדָּבָ֔ר אֲשֶׁ֥ר אַתָּ֖ה עֹשֶֽׂה׃
18 ನೀನೂ, ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ. ಏಕೆಂದರೆ ಇದು ನಿನಗೆ ಬಹು ಭಾರ. ನೀನೊಬ್ಬನೇ ಇದನ್ನು ಮಾಡಲಾರೆ.
נָבֹ֣ל תִּבֹּ֔ל גַּם־אַתָּ֕ה גַּם־הָעָ֥ם הַזֶּ֖ה אֲשֶׁ֣ר עִמָּ֑ךְ כִּֽי־כָבֵ֤ד מִמְּךָ֙ הַדָּבָ֔ר לֹא־תוּכַ֥ל עֲשֹׂ֖הוּ לְבַדֶּֽךָ׃
19 ಆದ್ದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ. ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು, ಅವರ ವ್ಯಾಜ್ಯಗಳನ್ನು ದೇವರ ಮುಂದೆ ತರಬೇಕು.
עַתָּ֞ה שְׁמַ֤ע בְּקֹלִי֙ אִיעָ֣צְךָ֔ וִיהִ֥י אֱלֹהִ֖ים עִמָּ֑ךְ הֱיֵ֧ה אַתָּ֣ה לָעָ֗ם מ֚וּל הָֽאֱלֹהִ֔ים וְהֵבֵאתָ֥ אַתָּ֛ה אֶת־הַדְּבָרִ֖ים אֶל־הָאֱלֹהִֽים׃
20 ನಿಯಮಗಳನ್ನೂ, ಆಜ್ಞೆಗಳನ್ನೂ ಅವರಿಗೆ ಕಲಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಅವರು ಮಾಡಬೇಕಾದ ಕೆಲಸವನ್ನೂ ಅವರಿಗೆ ತೋರಿಸಬೇಕು.
וְהִזְהַרְתָּ֣ה אֶתְהֶ֔ם אֶת־הַחֻקִּ֖ים וְאֶת־הַתּוֹרֹ֑ת וְהוֹדַעְתָּ֣ לָהֶ֗ם אֶת־הַדֶּ֙רֶךְ֙ יֵ֣לְכוּ בָ֔הּ וְאֶת־הַֽמַּעֲשֶׂ֖ה אֲשֶׁ֥ר יַעֲשֽׂוּן׃
21 ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.
וְאַתָּ֣ה תֶחֱזֶ֣ה מִכָּל־הָ֠עָם אַנְשֵׁי־חַ֜יִל יִרְאֵ֧י אֱלֹהִ֛ים אַנְשֵׁ֥י אֱמֶ֖ת שֹׂ֣נְאֵי בָ֑צַע וְשַׂמְתָּ֣ עֲלֵהֶ֗ם שָׂרֵ֤י אֲלָפִים֙ שָׂרֵ֣י מֵא֔וֹת שָׂרֵ֥י חֲמִשִּׁ֖ים וְשָׂרֵ֥י עֲשָׂרֹֽת׃
22 ಇವರು ಎಲ್ಲಾ ಕಾಲಗಳಲ್ಲಿಯೂ ಜನರಿಗೆ ನ್ಯಾಯತೀರಿಸಲಿ. ಆದರೆ ದೊಡ್ಡ ವ್ಯಾಜ್ಯಗಳನ್ನೆಲ್ಲಾ ನಿನ್ನ ಮುಂದೆ ತಂದು, ಸಣ್ಣ ವ್ಯಾಜ್ಯಗಳನ್ನೆಲ್ಲಾ ತಾವೇ ತೀರಿಸಲಿ. ಆಗ ನಿನಗೆ ಸುಲಭವಾಗುವುದು. ಅವರೂ ನಿನ್ನ ಸಂಗಡ ಭಾರವನ್ನು ಹೊರುವರು.
וְשָׁפְט֣וּ אֶת־הָעָם֮ בְּכָל־עֵת֒ וְהָיָ֞ה כָּל־הַדָּבָ֤ר הַגָּדֹל֙ יָבִ֣יאוּ אֵלֶ֔יךָ וְכָל־הַדָּבָ֥ר הַקָּטֹ֖ן יִשְׁפְּטוּ־הֵ֑ם וְהָקֵל֙ מֵֽעָלֶ֔יךָ וְנָשְׂא֖וּ אִתָּֽךְ׃
23 ಈ ಕಾರ್ಯವನ್ನು ಮಾಡುವುದಕ್ಕೆ ದೇವರು ನಿನಗೆ ಅಪ್ಪಣೆ ಕೊಟ್ಟರೆ, ಆಗ ನೀನು ಇದನ್ನು ನಿರ್ವಹಿಸಲು ಶಕ್ತನಾಗುವೆ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು,” ಎಂದನು.
אִ֣ם אֶת־הַדָּבָ֤ר הַזֶּה֙ תַּעֲשֶׂ֔ה וְצִוְּךָ֣ אֱלֹהִ֔ים וְיָֽכָלְתָּ֖ עֲמֹ֑ד וְגַם֙ כָּל־הָעָ֣ם הַזֶּ֔ה עַל־מְקֹמ֖וֹ יָבֹ֥א בְשָׁלֽוֹם׃
24 ಮೋಶೆಯು ತನ್ನ ಮಾವನ ಮಾತನ್ನು ಕೇಳಿ, ಅವನು ಹೇಳಿದ್ದನ್ನೆಲ್ಲಾ ಮಾಡಿದನು.
וַיִּשְׁמַ֥ע מֹשֶׁ֖ה לְק֣וֹל חֹתְנ֑וֹ וַיַּ֕עַשׂ כֹּ֖ל אֲשֶׁ֥ר אָמָֽר׃
25 ಮೋಶೆಯು ಇಸ್ರಾಯೇಲರಲ್ಲಿ ಇರುವ ಸಮರ್ಥರನ್ನು ಆರಿಸಿಕೊಂಡು, ಅವರನ್ನು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ, ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ, ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ನೇಮಿಸಿದನು.
וַיִּבְחַ֨ר מֹשֶׁ֤ה אַנְשֵׁי־חַ֙יִל֙ מִכָּל־יִשְׂרָאֵ֔ל וַיִּתֵּ֥ן אֹתָ֛ם רָאשִׁ֖ים עַל־הָעָ֑ם שָׂרֵ֤י אֲלָפִים֙ שָׂרֵ֣י מֵא֔וֹת שָׂרֵ֥י חֲמִשִּׁ֖ים וְשָׂרֵ֥י עֲשָׂרֹֽת׃
26 ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ, ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಿದ್ದರು. ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.
וְשָׁפְט֥וּ אֶת־הָעָ֖ם בְּכָל־עֵ֑ת אֶת־הַדָּבָ֤ר הַקָּשֶׁה֙ יְבִיא֣וּן אֶל־מֹשֶׁ֔ה וְכָל־הַדָּבָ֥ר הַקָּטֹ֖ן יִשְׁפּוּט֥וּ הֵֽם׃
27 ತರುವಾಯ ಮೋಶೆಯು ತನ್ನ ಮಾವ ಇತ್ರೋವನಿಗೆ ಸಾಗಕಳುಹಿಸಿದಾಗ, ಅವನು ಸ್ವದೇಶಕ್ಕೆ ಹೊರಟುಹೋದನು.
וַיְשַׁלַּ֥ח מֹשֶׁ֖ה אֶת־חֹתְנ֑וֹ וַיֵּ֥לֶךְ ל֖וֹ אֶל־אַרְצֽוֹ ׃ פ

< ವಿಮೋಚನಕಾಂಡ 18 >