< ವಿಮೋಚನಕಾಂಡ 2 >

1 ಈ ಸಮಯದಲ್ಲಿ ಲೇವಿಯ ವಂಶದವನಾದ ಒಬ್ಬನು ಲೇವಿಯ ಸ್ತ್ರೀಯನ್ನು ಮದುವೆಯಾದನು.
וַיֵּלֶךְ אִישׁ מִבֵּית לֵוִי וַיִּקַּח אֶת־בַּת־לֵוִֽי׃
2 ಆ ಸ್ತ್ರೀಯು ಗರ್ಭಧರಿಸಿ, ಗಂಡು ಮಗುವನ್ನು ಹೆತ್ತಳು. ಅದು ಸುಂದರವಾಗಿದ್ದುದರಿಂದ ಮೂರು ತಿಂಗಳು ಬಚ್ಚಿಟ್ಟರು.
וַתַּהַר הָאִשָּׁה וַתֵּלֶד בֵּן וַתֵּרֶא אֹתוֹ כִּי־טוֹב הוּא וַֽתִּצְפְּנֵהוּ שְׁלֹשָׁה יְרָחִֽים׃
3 ಆದರೆ ಅದನ್ನು ಹೆಚ್ಚುಕಾಲ ಬಚ್ಚಿಡುವುದಕ್ಕಾಗದೆ ಇದ್ದಾಗ, ಅವನಿಗಾಗಿ ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿಮಣ್ಣನ್ನು ಮತ್ತು ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿಟ್ಟು, ನೈಲ್ ನದಿಯ ಅಂಚಿನಲ್ಲಿ ಇದ್ದ ಜಂಬು ಹುಲ್ಲಿನಲ್ಲಿ ಇಟ್ಟರು.
וְלֹא־יָכְלָה עוֹד הַצְּפִינוֹ וַתִּֽקַּֽח־לוֹ תֵּבַת גֹּמֶא וַתַּחְמְרָהֿ בַחֵמָר וּבַזָּפֶת וַתָּשֶׂם בָּהּ אֶת־הַיֶּלֶד וַתָּשֶׂם בַּסּוּף עַל־שְׂפַת הַיְאֹֽר׃
4 ಕೂಸಿಗೆ ಏನಾಗುವುದೋ ಎಂದು ತಿಳಿದುಕೊಳ್ಳುವುದಕ್ಕೆ ದೂರದಲ್ಲಿ ಅದರ ಅಕ್ಕ ನಿಂತುಕೊಂಡಳು.
וַתֵּתַצַּב אֲחֹתוֹ מֵרָחֹק לְדֵעָה מַה־יֵּעָשֶׂה לֽוֹ׃
5 ಆಗ ಫರೋಹನ ಮಗಳು ನೈಲ್ ನದಿಯಲ್ಲಿ ಸ್ನಾನ ಮಾಡುವದಕ್ಕೆ ಬಂದಳು. ಆಕೆಯ ದಾಸಿಯರು ನದಿಯ ಅಂಚಿನಲ್ಲಿ ತಿರುಗಾಡುತ್ತಿದ್ದರು. ಫರೋಹನ ಮಗಳು ಜಂಬು ಹುಲ್ಲಿನಲ್ಲಿದ್ದ ಪೆಟ್ಟಿಗೆಯನ್ನು ನೋಡಿ ತನ್ನ ದಾಸಿಯನ್ನು ಕಳುಹಿಸಿ, ಅದನ್ನು ತರಿಸಿದಳು.
וַתֵּרֶד בַּת־פַּרְעֹה לִרְחֹץ עַל־הַיְאֹר וְנַעֲרֹתֶיהָ הֹלְכֹת עַל־יַד הַיְאֹר וַתֵּרֶא אֶת־הַתֵּבָה בְּתוֹךְ הַסּוּף וַתִּשְׁלַח אֶת־אֲמָתָהּ וַתִּקָּחֶֽהָ׃
6 ಆ ಪೆಟ್ಟಿಗೆಯನ್ನು ತೆರೆದಾಗ, ಕೂಸನ್ನು ನೋಡಿದಳು. ಕೂಸು ಅಳುತ್ತಿತ್ತು. ಆಕೆಗೆ ಅದರ ಮೇಲೆ ಕನಿಕರ ಹುಟ್ಟಿತು. ಅವಳು, “ಇದು ಹಿಬ್ರಿಯರ ಮಕ್ಕಳಲ್ಲಿ ಒಂದಾಗಿರಬೇಕು,” ಎಂದು ಹೇಳಿದಳು.
וַתִּפְתַּח וַתִּרְאֵהוּ אֶת־הַיֶּלֶד וְהִנֵּה־נַעַר בֹּכֶה וַתַּחְמֹל עָלָיו וַתֹּאמֶר מִיַּלְדֵי הָֽעִבְרִים זֶֽה׃
7 ಆಗ ಮಗುವಿನ ಅಕ್ಕ ಫರೋಹನ ಮಗಳಿಗೆ, “ನಾನು ಹೋಗಿ ಈ ಕೂಸಿಗೆ ಹಾಲು ಕೊಟ್ಟು ಸಾಕುವುದಕ್ಕೆ ಹಿಬ್ರಿಯ ಸ್ತ್ರೀಯರಿಂದ ಒಬ್ಬ ದಾದಿಯನ್ನು ನಿನಗೋಸ್ಕರ ಕರೆದುಕೊಂಡು ಬರಲೋ?” ಎಂದಳು.
וַתֹּאמֶר אֲחֹתוֹ אֶל־בַּת־פַּרְעֹה הַאֵלֵךְ וְקָרָאתִי לָךְ אִשָּׁה מֵינֶקֶת מִן הָעִבְרִיֹּת וְתֵינִק לָךְ אֶת־הַיָּֽלֶד׃
8 ಫರೋಹನ ಮಗಳು ಆಕೆಗೆ, “ಹೌದು, ಹೋಗು,” ಎಂದಳು. ಆಗ ಆ ಹುಡುಗಿಯು ಹೋಗಿ ಕೂಸಿನ ತಾಯಿಯನ್ನೇ ಕರೆದುಕೊಂಡು ಬಂದಳು.
וַתֹּֽאמֶר־לָהּ בַּת־פַּרְעֹה לֵכִי וַתֵּלֶךְ הָֽעַלְמָה וַתִּקְרָא אֶת־אֵם הַיָּֽלֶד׃
9 ಫರೋಹನ ಮಗಳು ಆಕೆಗೆ, “ಈ ಮಗುವನ್ನು ತೆಗೆದುಕೊಂಡುಹೋಗಿ, ನನಗೋಸ್ಕರ ಸಾಕು. ನಾನು ನಿನಗೆ ಸಂಬಳವನ್ನು ಕೊಡುವೆನು,” ಎಂದಳು. ಆಗ ಆ ಸ್ತ್ರೀಯು ಕೂಸನ್ನು ತೆಗೆದುಕೊಂಡುಹೋಗಿ ಸಾಕಿದಳು.
וַתֹּאמֶר לָהּ בַּת־פַּרְעֹה הֵילִיכִי אֶת־הַיֶּלֶד הַזֶּה וְהֵינִקִהוּ לִי וַאֲנִי אֶתֵּן אֶת־שְׂכָרֵךְ וַתִּקַּח הָאִשָּׁה הַיֶּלֶד וַתְּנִיקֵֽהוּ׃
10 ಆ ಮಗುವು ಬೆಳೆದಾಗ, ಅವನನ್ನು ಫರೋಹನ ಮಗಳ ಬಳಿಗೆ ತೆಗೆದುಕೊಂಡು ಹೋದಳು. ಅವನು ಆಕೆಗೆ ಮಗನಾದನು. ಆಕೆಯು, “ನೀರಿನೊಳಗಿಂದ ಇವನನ್ನು ಎಳೆದೆ,” ಎಂದು ಹೇಳಿ ಅವನಿಗೆ “ಮೋಶೆ” ಎಂದು ಹೆಸರಿಟ್ಟಳು.
וַיִּגְדַּל הַיֶּלֶד וַתְּבִאֵהוּ לְבַת־פַּרְעֹה וַֽיְהִי־לָהּ לְבֵן וַתִּקְרָא שְׁמוֹ מֹשֶׁה וַתֹּאמֶר כִּי מִן־הַמַּיִם מְשִׁיתִֽהוּ׃
11 ಹಲವು ವರ್ಷಗಳ ನಂತರ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡಿದಾಗ, ಒಬ್ಬ ಈಜಿಪ್ಟಿನವನು ತನ್ನ ಸಹೋದರರಲ್ಲಿ ಒಬ್ಬ ಹಿಬ್ರಿಯನನ್ನು ಹೊಡೆಯುವುದನ್ನು ನೋಡಿದನು.
וַיְהִי ׀ בַּיָּמִים הָהֵם וַיִּגְדַּל מֹשֶׁה וַיֵּצֵא אֶל־אֶחָיו וַיַּרְא בְּסִבְלֹתָם וַיַּרְא אִישׁ מִצְרִי מַכֶּה אִישׁ־עִבְרִי מֵאֶחָֽיו׃
12 ಅವನು ಸುತ್ತಮುತ್ತ ನೋಡಿ, ಯಾರೂ ಇಲ್ಲವೆಂದು ತಿಳಿದು ಆ ಈಜಿಪ್ಟಿನವನನ್ನು ಕೊಂದುಹಾಕಿ, ಮರಳಿನಲ್ಲಿ ಮುಚ್ಚಿಹಾಕಿದನು.
וַיִּפֶן כֹּה וָכֹה וַיַּרְא כִּי אֵין אִישׁ וַיַּךְ אֶת־הַמִּצְרִי וַֽיִּטְמְנֵהוּ בַּחֽוֹל׃
13 ಮರುದಿನ ಅವನು ಮತ್ತೆ ಹೊರಗೆ ಹೋದಾಗ, ಹಿಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡುತ್ತಿದ್ದರು. ತಪ್ಪು ಮಾಡಿದವನಿಗೆ ಮೋಶೆ, “ಏಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ?” ಎಂದನು.
וַיֵּצֵא בַּיּוֹם הַשֵּׁנִי וְהִנֵּה שְׁנֵֽי־אֲנָשִׁים עִבְרִים נִצִּים וַיֹּאמֶר לָֽרָשָׁע לָמָּה תַכֶּה רֵעֶֽךָ׃
14 ಅದಕ್ಕವನು, “ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿದ್ದಾರೆ? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದು ಹಾಕಬೇಕೆಂದಿದ್ದೀಯೋ?” ಎಂದನು. ಆಗ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ತಿಳಿದಿರಬೇಕು,” ಎಂದುಕೊಂಡನು.
וַיֹּאמֶר מִי שָֽׂמְךָ לְאִישׁ שַׂר וְשֹׁפֵט עָלֵינוּ הַלְהׇרְגֵנִי אַתָּה אֹמֵר כַּאֲשֶׁר הָרַגְתָּ אֶת־הַמִּצְרִי וַיִּירָא מֹשֶׁה וַיֹּאמַר אָכֵן נוֹדַע הַדָּבָֽר׃
15 ಫರೋಹನು ಈ ವಿಷಯವನ್ನು ಕೇಳಿದಾಗ, ಮೋಶೆಯನ್ನು ಕೊಂದುಹಾಕುವುದಕ್ಕೆ ಪ್ರಯತ್ನಿಸಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶಕ್ಕೆ ವಾಸಿಸಲು ಹೋದನು. ಅಲ್ಲಿ ಒಂದು ಬಾವಿಯ ಬಳಿಯಲ್ಲಿ ಕೂತುಕೊಂಡನು.
וַיִּשְׁמַע פַּרְעֹה אֶת־הַדָּבָר הַזֶּה וַיְבַקֵּשׁ לַהֲרֹג אֶת־מֹשֶׁה וַיִּבְרַח מֹשֶׁה מִפְּנֵי פַרְעֹה וַיֵּשֶׁב בְּאֶֽרֶץ־מִדְיָן וַיֵּשֶׁב עַֽל־הַבְּאֵֽר׃
16 ಮಿದ್ಯಾನಿನ ಯಾಜಕನಿಗೆ ಏಳುಮಂದಿ ಪುತ್ರಿಯರಿದ್ದರು. ಇವರು ಬಂದು ತಮ್ಮ ತಂದೆಯ ಕುರಿಮಂದೆಗಳಿಗೆ ನೀರು ಕುಡಿಸುವದಕ್ಕಾಗಿ ನೀರು ಸೇದಿ, ದೋಣಿಗಳನ್ನು ತುಂಬಿಸುತ್ತಿದ್ದರು.
וּלְכֹהֵן מִדְיָן שֶׁבַע בָּנוֹת וַתָּבֹאנָה וַתִּדְלֶנָה וַתְּמַלֶּאנָה אֶת־הָרְהָטִים לְהַשְׁקוֹת צֹאן אֲבִיהֶֽן׃
17 ಕುರುಬರು ಬಂದು ಅವರನ್ನು ಅಲ್ಲಿಂದ ಓಡಿಸಲು, ಮೋಶೆಯು ಎದ್ದು ಬಂದು ಅವರಿಗೆ ಸಹಾಯಮಾಡಿ, ಅವರ ಕುರಿಗಳಿಗೆ ನೀರು ಕುಡಿಸಿದನು.
וַיָּבֹאוּ הָרֹעִים וַיְגָרְשׁוּם וַיָּקׇם מֹשֶׁה וַיּוֹשִׁעָן וַיַּשְׁקְ אֶת־צֹאנָֽם׃
18 ಹುಡುಗಿಯರು ತಮ್ಮ ತಂದೆ ರೆಯೂವೇಲನ ಬಳಿಗೆ ಬಂದಾಗ, ಅವನು ಅವರಿಗೆ, “ಏಕೆ ಈ ಹೊತ್ತು ಬೇಗ ಬಂದಿರಿ?” ಎಂದನು.
וַתָּבֹאנָה אֶל־רְעוּאֵל אֲבִיהֶן וַיֹּאמֶר מַדּוּעַ מִהַרְתֶּן בֹּא הַיּֽוֹם׃
19 ಅದಕ್ಕೆ ಅವರು, “ಈಜಿಪ್ಟಿನವನಾದ ಒಬ್ಬ ಮನುಷ್ಯನು ಕುರುಬರ ಕೈಯಿಂದ ನಮ್ಮನ್ನು ತಪ್ಪಿಸಿ, ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ, ಮಂದೆಗೆ ಕುಡಿಸಿದನು,” ಎಂದರು.
וַתֹּאמַרְןָ אִישׁ מִצְרִי הִצִּילָנוּ מִיַּד הָרֹעִים וְגַם־דָּלֹה דָלָה לָנוּ וַיַּשְׁקְ אֶת־הַצֹּֽאן׃
20 ಆಗ ರೆಯೂವೇಲನು ತನ್ನ ಪುತ್ರಿಯರಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟಮಾಡಲಿ,” ಎಂದನು.
וַיֹּאמֶר אֶל־בְּנֹתָיו וְאַיּוֹ לָמָּה זֶּה עֲזַבְתֶּן אֶת־הָאִישׁ קִרְאֶן לוֹ וְיֹאכַל לָֽחֶם׃
21 ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವುದಕ್ಕೆ ಸಮ್ಮತಿಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರಳನ್ನು ಮದುವೆ ಮಾಡಿಕೊಟ್ಟನು.
וַיּוֹאֶל מֹשֶׁה לָשֶׁבֶת אֶת־הָאִישׁ וַיִּתֵּן אֶת־צִפֹּרָה בִתּוֹ לְמֹשֶֽׁה׃
22 ಆಕೆಯು ಅವನಿಗೆ ಮಗನನ್ನು ಹೆತ್ತಾಗ, ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿಟ್ಟನು ಏಕೆಂದರೆ ಅವನು, “ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ,” ಎಂದನು.
וַתֵּלֶד בֵּן וַיִּקְרָא אֶת־שְׁמוֹ גֵּרְשֹׁם כִּי אָמַר גֵּר הָיִיתִי בְּאֶרֶץ נׇכְרִיָּֽה׃
23 ಹೀಗೆ ಬಹಳ ದಿನಗಳಾದ ಮೇಲೆ ಈಜಿಪ್ಟಿನ ಅರಸನು ಸತ್ತನು. ಇಸ್ರಾಯೇಲರು ದಾಸತ್ವದ ಕಾರಣದಿಂದ ನರಳಾಡುತ್ತಾ ಮೊರೆಯಿಡುತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಮುಟ್ಟಿತು.
וַיְהִי בַיָּמִים הָֽרַבִּים הָהֵם וַיָּמׇת מֶלֶךְ מִצְרַיִם וַיֵּאָנְחוּ בְנֵֽי־יִשְׂרָאֵל מִן־הָעֲבֹדָה וַיִּזְעָקוּ וַתַּעַל שַׁוְעָתָם אֶל־הָאֱלֹהִים מִן־הָעֲבֹדָֽה׃
24 ದೇವರು ಅವರ ನರಳಾಟವನ್ನು ಕೇಳಿದಾಗ, ಅವರು ಅಬ್ರಹಾಮ, ಇಸಾಕ ಮತ್ತು ಯಾಕೋಬನ ಸಂಗಡ ತಾವು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡರು.
וַיִּשְׁמַע אֱלֹהִים אֶת־נַאֲקָתָם וַיִּזְכֹּר אֱלֹהִים אֶת־בְּרִיתוֹ אֶת־אַבְרָהָם אֶת־יִצְחָק וְאֶֽת־יַעֲקֹֽב׃
25 ದೇವರು ಇಸ್ರಾಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.
וַיַּרְא אֱלֹהִים אֶת־בְּנֵי יִשְׂרָאֵל וַיֵּדַע אֱלֹהִֽים׃

< ವಿಮೋಚನಕಾಂಡ 2 >