< ವಿಮೋಚನಕಾಂಡ 20 >
1 ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದರು:
Tada reèe Bog sve ove rijeèi govoreæi:
2 “ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.
Ja sam Gospod Bog tvoj, koji sam te izveo iz zemlje Misirske, iz doma ropskoga.
3 “ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.
Nemoj imati drugih bogova uza me.
4 ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.
Ne gradi sebi lika rezana niti kakve slike od onoga što je gore na nebu, ili dolje na zemlji, ili u vodi ispod zemlje.
5 ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.
Nemoj im se klanjati niti im služiti, jer sam ja Gospod Bog tvoj, Bog revnitelj, koji pohodim grijehe otaèke na sinovima do treæega i do èetvrtoga koljena, onijeh koji mrze na mene;
6 ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.
A èinim milost na tisuæama onijeh koji me ljube i èuvaju zapovijesti moje.
7 ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು. ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ.
Ne uzimaj uzalud imena Gospoda Boga svojega; jer neæe pred Gospodom biti prav ko uzme ime njegovo uzalud.
8 ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಆಚರಿಸಿರಿ.
Sjeæaj se dana od odmora da ga svetkuješ.
9 ಆರು ದಿನಗಳಲ್ಲಿ ನೀನು ದುಡಿದು, ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.
Šest dana radi, i svršuj sve poslove svoje.
10 ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಪಶುಗಳಾಗಲೀ ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು.
A sedmi je dan odmor Gospodu Bogu tvojemu; tada nemoj raditi nijednoga posla, ni ti, ni sin tvoj, ni kæi tvoja, ni sluga tvoj, ni sluškinja tvoja, ni živinèe tvoje, ni stranac koji je meðu vratima tvojim.
11 ಏಕೆಂದರೆ ಆರು ದಿನಗಳಲ್ಲಿ ಯೆಹೋವ ದೇವರು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದ್ದರಿಂದ ಯೆಹೋವ ದೇವರು ಸಬ್ಬತ್ ದಿನವನ್ನು ಆಶೀರ್ವದಿಸಿ, ಅದನ್ನು ಪರಿಶುದ್ಧ ಮಾಡಿದರು.
Jer je za šest dana stvorio Gospod nebo i zemlju, more i što je god u njima; a u sedmi dan poèinu; zato je blagoslovio Gospod dan od odmora i posvetio ga.
12 ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.
Poštuj oca svojega i mater svoju, da ti se produlje dani na zemlji, koju ti da Gospod Bog tvoj.
16 ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.
Ne svjedoèi lažno na bližnjega svojega.
17 ನಿನ್ನ ನೆರೆಯವನ ಮನೆಯನ್ನು ಆಶಿಸಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”
Ne poželi kuæe bližnjega svojega, ne poželi žene bližnjega svojega, ni sluge njegova, ni sluškinje njegove, ni vola njegova, ni magarca njegova, niti išta što je bližnjega tvojega.
18 ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟದಲ್ಲಿ ಹೊಗೆ ಹಾಯುವುದನ್ನೂ ನೋಡಿದರು. ಜನರು ಅದನ್ನು ನೋಡಿ ನಡುಗುತ್ತಾ ದೂರಹೋಗಿ ನಿಂತುಕೊಂಡರು.
I sav narod vidje grom i munju i trubu gdje trubi i goru gdje se dimi; i narod vidjevši to uzmaèe se i stade izdaleka,
19 ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮೊಂದಿಗೆ ನೇರವಾಗಿ ಮಾತನಾಡಲು ಬಿಡಬೇಡಿ,” ಎಂದು ವಿನಂತಿಸಿಕೊಂಡರು.
I rekoše Mojsiju: govori nam ti, i slušaæemo; a neka nam ne govori Bog, da ne pomremo.
20 ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ. ಏಕೆಂದರೆ ನಿಮ್ಮನ್ನು ಪರೀಕ್ಷಿಸುವುದಕ್ಕೋಸ್ಕರವೂ ನೀವು ಪಾಪಮಾಡದಂತೆ ಅವರ ಭಯವು ನಿಮಗಿರಲೆಂದೂ ದೇವರು ಬಂದಿದ್ದಾರೆ,” ಎಂದನು.
A Mojsije reèe narodu: ne bojte se, jer Bog doðe da vas iskuša i da vam pred oèima bude strah njegov da ne biste griješili.
21 ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.
I narod stajaše izdaleka, a Mojsije pristupi k mraku u kojem bješe Bog.
22 ಯೆಹೋವ ದೇವರು ಮೋಶೆಗೆ, “ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
I Gospod reèe Mojsiju: ovako kaži sinovima Izrailjevim: vidjeli ste gdje vam s neba govorih.
23 ನನ್ನ ಹೊರತಾಗಿ ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.
Ne gradite uza me bogova srebrnijeh, ni bogova zlatnijeh ne gradite sebi.
24 “‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
Oltar od zemlje naèini mi, na kojem æeš mi prinositi žrtve svoje paljenice i žrtve svoje zahvalne, sitnu i krupnu stoku svoju. Na kojem god mjestu zapovjedim da se spominje ime moje, doæi æu k tebi i blagosloviæu te.
25 ಬಲಿಪೀಠವನ್ನು ಕಲ್ಲಿನಿಂದ ಮಾಡಿದರೆ, ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಏಕೆಂದರೆ ಉಳಿಯನ್ನು ಅದರ ಮೇಲೆ ಉಪಯೋಗಿಸಿದರೆ, ಅದನ್ನು ಅಪವಿತ್ರಮಾಡಿದ ಹಾಗಾಗುತ್ತದೆ.
Ako li mi naèiniš oltar od kamena, nemoj naèiniti od tesanoga kamena; jer ako povuèeš po njemu gvožðem, oskvrniæeš ga.
26 ನನಗಾಗಿ ಬಲಿಪೀಠದ ಮೇಲೆ ಹೋಗಲು ಹತ್ತುವಾಗ ನಿನ್ನ ಬೆತ್ತಲೆತನ ಕಾಣಬಾರದು. ಅದರ ಮೆಟ್ಟಲುಗಳನ್ನು ಹತ್ತಬಾರದು,’ ಎಂದು ಹೇಳಿದರು.
Nemoj uz basamake iæi k oltaru mojemu, da se ne bi otkrila golotinja tvoja kod njega.