< ವಿಮೋಚನಕಾಂಡ 29 >

1 “ಅವರು ನನಗೆ ಯಾಜಕ ಸೇವೆಮಾಡುವಂತೆ ನೀನು ಅವರನ್ನು ಶುದ್ಧ ಮಾಡಲು ಮಾಡಬೇಕಾದದ್ದೇನೆಂದರೆ: ದೋಷವಿಲ್ಲದ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ,
וְזֶה הַדָּבָר אֲשֶֽׁר־תַּעֲשֶׂה לָהֶם לְקַדֵּשׁ אֹתָם לְכַהֵן לִי לְקַח פַּר אֶחָד בֶּן־בָּקָר וְאֵילִם שְׁנַיִם תְּמִימִֽם׃
2 ಅತ್ಯುತ್ತಮ ಗೋಧಿಯ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆ ಹೊಯ್ದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಚ್ಚಿದ ಹುಳಿಯಿಲ್ಲದ ಪೂರಿಗಳನ್ನೂ ತೆಗೆದುಕೊಳ್ಳಬೇಕು.
וְלֶחֶם מַצּוֹת וְחַלֹּת מַצֹּת בְּלוּלֹת בַּשֶּׁמֶן וּרְקִיקֵי מַצּוֹת מְשֻׁחִים בַּשָּׁמֶן סֹלֶת חִטִּים תַּעֲשֶׂה אֹתָֽם׃
3 ಇವುಗಳನ್ನು ಒಂದೇ ಬುಟ್ಟಿಯಲ್ಲಿ ಇಟ್ಟುಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತೆಗೆದುಕೊಂಡು ಬರಬೇಕು.
וְנָתַתָּ אוֹתָם עַל־סַל אֶחָד וְהִקְרַבְתָּ אֹתָם בַּסָּל וְאֶת־הַפָּר וְאֵת שְׁנֵי הָאֵילִֽם׃
4 ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನದ ಗುಡಾರದ ಬಾಗಿಲಿನ ಬಳಿಗೆ ತಂದು, ನೀರಿನಲ್ಲಿ ಅವರನ್ನು ತೊಳೆಯಬೇಕು.
וְאֶת־אַהֲרֹן וְאֶת־בָּנָיו תַּקְרִיב אֶל־פֶּתַח אֹהֶל מוֹעֵד וְרָחַצְתָּ אֹתָם בַּמָּֽיִם׃
5 ತರುವಾಯ ಆ ವಸ್ತ್ರಗಳನ್ನು ತೆಗೆದುಕೊಂಡು ಆರೋನನಿಗೆ ಅಂಗಿಯನ್ನೂ ಏಫೋದಿನ ನಿಲುವಂಗಿಯನ್ನೂ ಏಫೋದನ್ನೂ ಎದೆಪದಕವನ್ನೂ ತೊಡಿಸಿ, ಏಫೋದಿನ ಕಲಾತ್ಮಕವಾದ ನಡುಕಟ್ಟಿನಿಂದ ಅವನ ನಡುವನ್ನೂ ಕಟ್ಟಿ,
וְלָקַחְתָּ אֶת־הַבְּגָדִים וְהִלְבַּשְׁתָּ אֶֽת־אַהֲרֹן אֶת־הַכֻּתֹּנֶת וְאֵת מְעִיל הָאֵפֹד וְאֶת־הָאֵפֹד וְאֶת־הַחֹשֶׁן וְאָפַדְתָּ לוֹ בְּחֵשֶׁב הָאֵפֹֽד׃
6 ಅವನ ತಲೆಗೆ ಮುಂಡಾಸವನ್ನು ಇಟ್ಟು, ಮುಂಡಾಸದ ಮೇಲೆ ಪರಿಶುದ್ಧ ಪಟ್ಟವನ್ನು ಇಟ್ಟು,
וְשַׂמְתָּ הַמִּצְנֶפֶת עַל־רֹאשׁוֹ וְנָתַתָּ אֶת־נֵזֶר הַקֹּדֶשׁ עַל־הַמִּצְנָֽפֶת׃
7 ಅಭಿಷೇಕಿಸುವ ಎಣ್ಣೆಯನ್ನು ತೆಗೆದುಕೊಂಡು, ಅವನ ತಲೆಯ ಮೇಲೆ ಹೊಯ್ದು, ಅವನನ್ನು ಅಭಿಷೇಕಿಸಬೇಕು.
וְלָֽקַחְתָּ אֶת־שֶׁמֶן הַמִּשְׁחָה וְיָצַקְתָּ עַל־רֹאשׁוֹ וּמָשַׁחְתָּ אֹתֽוֹ׃
8 ನೀನು ಅವನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ,
וְאֶת־בָּנָיו תַּקְרִיב וְהִלְבַּשְׁתָּם כֻּתֳּנֹֽת׃
9 ಆರೋನನಿಗೂ ಅವನ ಪುತ್ರರಿಗೂ ಮುಂಡಾಸುಗಳನ್ನು ಇಟ್ಟು ನಡುಕಟ್ಟುಗಳನ್ನು ಕಟ್ಟಬೇಕು, ಅವರಿಗೆ ಹೀಗೆ ಅವರಿಗೆ ಯಾಜಕತ್ವ ಸೇವೆಯು ಶಾಶ್ವತ ಕಟ್ಟಳೆಯಾಗಿರುವುದು. “ಈ ರೀತಿಯಾಗಿ ಆರೋನನನ್ನೂ ಅವನ ಪುತ್ರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
וְחָגַרְתָּ אֹתָם אַבְנֵט אַהֲרֹן וּבָנָיו וְחָבַשְׁתָּ לָהֶם מִגְבָּעֹת וְהָיְתָה לָהֶם כְּהֻנָּה לְחֻקַּת עוֹלָם וּמִלֵּאתָ יַֽד־אַהֲרֹן וְיַד־בָּנָֽיו׃
10 “ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಪುತ್ರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
וְהִקְרַבְתָּ אֶת־הַפָּר לִפְנֵי אֹהֶל מוֹעֵד וְסָמַךְ אַהֲרֹן וּבָנָיו אֶת־יְדֵיהֶם עַל־רֹאשׁ הַפָּֽר׃
11 ತರುವಾಯ ನೀನು ಆ ಹೋರಿಯನ್ನು ಯೆಹೋವ ದೇವರ ಮುಂದೆ ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು.
וְשָׁחַטְתָּ אֶת־הַפָּר לִפְנֵי יְהֹוָה פֶּתַח אֹהֶל מוֹעֵֽד׃
12 ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ, ರಕ್ತವನ್ನೆಲ್ಲಾ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.
וְלָֽקַחְתָּ מִדַּם הַפָּר וְנָתַתָּה עַל־קַרְנֹת הַמִּזְבֵּחַ בְּאֶצְבָּעֶךָ וְאֶת־כׇּל־הַדָּם תִּשְׁפֹּךְ אֶל־יְסוֹד הַמִּזְבֵּֽחַ׃
13 ನೀನು ಕರುಳುಗಳನ್ನೂ ಅವುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಸುಡಬೇಕು.
וְלָֽקַחְתָּ אֶֽת־כׇּל־הַחֵלֶב הַֽמְכַסֶּה אֶת־הַקֶּרֶב וְאֵת הַיֹּתֶרֶת עַל־הַכָּבֵד וְאֵת שְׁתֵּי הַכְּלָיֹת וְאֶת־הַחֵלֶב אֲשֶׁר עֲלֵיהֶן וְהִקְטַרְתָּ הַמִּזְבֵּֽחָה׃
14 ಇದಲ್ಲದೆ ಹೋರಿಯ ಮಾಂಸವನ್ನೂ ಅದರ ಚರ್ಮವನ್ನೂ, ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿದೆ.
וְאֶת־בְּשַׂר הַפָּר וְאֶת־עֹרוֹ וְאֶת־פִּרְשׁוֹ תִּשְׂרֹף בָּאֵשׁ מִחוּץ לַֽמַּחֲנֶה חַטָּאת הֽוּא׃
15 “ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳಬೇಕು. ಆರೋನನು ಮತ್ತು ಅವನ ಪುತ್ರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
וְאֶת־הָאַיִל הָאֶחָד תִּקָּח וְסָמְכוּ אַהֲרֹן וּבָנָיו אֶת־יְדֵיהֶם עַל־רֹאשׁ הָאָֽיִל׃
16 ತರುವಾಯ ಆ ಟಗರನ್ನು ನೀನು ವಧಿಸಿ, ಅದರ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಬೇಕು.
וְשָׁחַטְתָּ אֶת־הָאָיִל וְלָֽקַחְתָּ אֶת־דָּמוֹ וְזָרַקְתָּ עַל־הַמִּזְבֵּחַ סָבִֽיב׃
17 ಇದಲ್ಲದೆ ಆ ಟಗರನ್ನು ತುಂಡುತುಂಡಾಗಿ ಕಡಿದು, ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು, ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು.
וְאֶת־הָאַיִל תְּנַתֵּחַ לִנְתָחָיו וְרָחַצְתָּ קִרְבּוֹ וּכְרָעָיו וְנָתַתָּ עַל־נְתָחָיו וְעַל־רֹאשֽׁוֹ׃
18 ಅದನ್ನೆಲ್ಲಾ ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ದಹನಬಲಿಯಾಗಿದೆ. ಅದು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ.
וְהִקְטַרְתָּ אֶת־כׇּל־הָאַיִל הַמִּזְבֵּחָה עֹלָה הוּא לַֽיהֹוָה רֵיחַ נִיחוֹחַ אִשֶּׁה לַיהֹוָה הֽוּא׃
19 “ಆ ಇನ್ನೊಂದು ಟಗರನ್ನು ನೀನು ತಂದಾಗ, ಆರೋನನೂ ಅವನ ಪುತ್ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
וְלָקַחְתָּ אֵת הָאַיִל הַשֵּׁנִי וְסָמַךְ אַהֲרֹן וּבָנָיו אֶת־יְדֵיהֶם עַל־רֹאשׁ הָאָֽיִל׃
20 ತರುವಾಯ ನೀನು ಅದನ್ನು ವಧಿಸಿ, ಅದರ ರಕ್ತವನ್ನು ಆರೋನನ ಮತ್ತು ಅವನ ಪುತ್ರರ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಆ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
וְשָׁחַטְתָּ אֶת־הָאַיִל וְלָקַחְתָּ מִדָּמוֹ וְנָֽתַתָּה עַל־תְּנוּךְ אֹזֶן אַהֲרֹן וְעַל־תְּנוּךְ אֹזֶן בָּנָיו הַיְמָנִית וְעַל־בֹּהֶן יָדָם הַיְמָנִית וְעַל־בֹּהֶן רַגְלָם הַיְמָנִית וְזָרַקְתָּ אֶת־הַדָּם עַל־הַמִּזְבֵּחַ סָבִֽיב׃
21 ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಪುತ್ರರೂ ಅವರ ವಸ್ತ್ರಗಳೂ ಪರಿಶುದ್ಧವಾಗುವ ಹಾಗೆ ಬಲಿಪೀಠದ ಮೇಲಿರುವ ರಕ್ತವನ್ನೂ, ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಪುತ್ರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.
וְלָקַחְתָּ מִן־הַדָּם אֲשֶׁר עַֽל־הַמִּזְבֵּחַ וּמִשֶּׁמֶן הַמִּשְׁחָה וְהִזֵּיתָ עַֽל־אַהֲרֹן וְעַל־בְּגָדָיו וְעַל־בָּנָיו וְעַל־בִּגְדֵי בָנָיו אִתּוֹ וְקָדַשׁ הוּא וּבְגָדָיו וּבָנָיו וּבִגְדֵי בָנָיו אִתּֽוֹ׃
22 “ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲದೊಡೆಯನ್ನೂ ತೆಗೆದುಕೊಳ್ಳಬೇಕು. ಏಕೆಂದರೆ ಅದು ಪ್ರತಿಷ್ಠೆಯ ಟಗರು.
וְלָקַחְתָּ מִן־הָאַיִל הַחֵלֶב וְהָֽאַלְיָה וְאֶת־הַחֵלֶב ׀ הַֽמְכַסֶּה אֶת־הַקֶּרֶב וְאֵת יֹתֶרֶת הַכָּבֵד וְאֵת ׀ שְׁתֵּי הַכְּלָיֹת וְאֶת־הַחֵלֶב אֲשֶׁר עֲלֵיהֶן וְאֵת שׁוֹק הַיָּמִין כִּי אֵיל מִלֻּאִים הֽוּא׃
23 ಯೆಹೋವ ದೇವರ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿಯನ್ನೂ
וְכִכַּר לֶחֶם אַחַת וְֽחַלַּת לֶחֶם שֶׁמֶן אַחַת וְרָקִיק אֶחָד מִסַּל הַמַּצּוֹת אֲשֶׁר לִפְנֵי יְהֹוָֽה׃
24 ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಪುತ್ರರ ಕೈಗಳಿಗೆ ಕೊಟ್ಟು, ಅವರು ಯೆಹೋವ ದೇವರ ಮುಂದೆ ಅದನ್ನು ನೈವೇದ್ಯವಾಗಿ ನಿವಾಳಿಸಬೇಕು.
וְשַׂמְתָּ הַכֹּל עַל כַּפֵּי אַהֲרֹן וְעַל כַּפֵּי בָנָיו וְהֵנַפְתָּ אֹתָם תְּנוּפָה לִפְנֵי יְהֹוָֽה׃
25 ನೀನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರ ಮುಂದೆ ಸುವಾಸನೆಗೋಸ್ಕರ ದಹಿಸಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.
וְלָקַחְתָּ אֹתָם מִיָּדָם וְהִקְטַרְתָּ הַמִּזְבֵּחָה עַל־הָעֹלָה לְרֵיחַ נִיחוֹחַ לִפְנֵי יְהֹוָה אִשֶּׁה הוּא לַיהֹוָֽה׃
26 ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು, ನೈವೇದ್ಯವಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನ್ನ ಪಾಲಾಗಿರುವುದು.
וְלָקַחְתָּ אֶת־הֶֽחָזֶה מֵאֵיל הַמִּלֻּאִים אֲשֶׁר לְאַהֲרֹן וְהֵנַפְתָּ אֹתוֹ תְּנוּפָה לִפְנֵי יְהֹוָה וְהָיָה לְךָ לְמָנָֽה׃
27 “ನೀನು ನೈವೇದ್ಯ ಮಾಡಿದ ಎದೆಯ ಭಾಗವನ್ನೂ, ಅರ್ಪಣೆ ಮಾಡಿದ ಬಲದ ಮುಂದೊಡೆಯನ್ನೂ, ಆರೋನನ, ಅವನ ಪುತ್ರರಿಗೆ ಸಲ್ಲಬೇಕಾದ ಪ್ರತಿಷ್ಠಿತ ಟಗರಿನ ಭಾಗವನ್ನು ಪ್ರತಿಷ್ಠಿಸು.
וְקִדַּשְׁתָּ אֵת ׀ חֲזֵה הַתְּנוּפָה וְאֵת שׁוֹק הַתְּרוּמָה אֲשֶׁר הוּנַף וַאֲשֶׁר הוּרָם מֵאֵיל הַמִּלֻּאִים מֵאֲשֶׁר לְאַהֲרֹן וּמֵאֲשֶׁר לְבָנָֽיו׃
28 ಅದು ಆರೋನನಿಗೂ ಅವನ ಪುತ್ರರಿಗೂ ಇಸ್ರಾಯೇಲರ ಕಡೆಯಿಂದ ನಿತ್ಯವಾಗಿ ಕೊಡುವ ಭಾಗವಾಗಿರಬೇಕು. ಏಕೆಂದರೆ ಅದು ನೈವೇದ್ಯವಾಗಿದೆ. ಇಸ್ರಾಯೇಲರ ಸಮಾಧಾನದ ಬಲಿಗಳ ಅರ್ಪಣೆಗಳಿಂದ ಅವರು ಯೆಹೋವ ದೇವರಿಗೆ ನೈವೇದ್ಯ ಮಾಡುವಂಥದ್ದು ಆಗಿರಬೇಕು.
וְהָיָה לְאַהֲרֹן וּלְבָנָיו לְחׇק־עוֹלָם מֵאֵת בְּנֵי יִשְׂרָאֵל כִּי תְרוּמָה הוּא וּתְרוּמָה יִהְיֶה מֵאֵת בְּנֵֽי־יִשְׂרָאֵל מִזִּבְחֵי שַׁלְמֵיהֶם תְּרוּמָתָם לַיהֹוָֽה׃
29 “ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಪುತ್ರರಿಗೆ ಆಗಬೇಕು. ಅವರು ಅಭಿಷಿಕ್ತರಾಗಿ ಅವುಗಳನ್ನು ಧರಿಸಿಕೊಂಡು, ಪ್ರತಿಷ್ಠಿತರಾಗಬೇಕು.
וּבִגְדֵי הַקֹּדֶשׁ אֲשֶׁר לְאַהֲרֹן יִהְיוּ לְבָנָיו אַחֲרָיו לְמׇשְׁחָה בָהֶם וּלְמַלֵּא־בָם אֶת־יָדָֽם׃
30 ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡೆಸಿ, ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದ ದಿನದಿಂದ ಅವುಗಳನ್ನು ಏಳು ದಿನಗಳವರೆಗೆ ತೊಟ್ಟುಕೊಳ್ಳಬೇಕು.
שִׁבְעַת יָמִים יִלְבָּשָׁם הַכֹּהֵן תַּחְתָּיו מִבָּנָיו אֲשֶׁר יָבֹא אֶל־אֹהֶל מוֹעֵד לְשָׁרֵת בַּקֹּֽדֶשׁ׃
31 “ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸಬೇಕು.
וְאֵת אֵיל הַמִּלֻּאִים תִּקָּח וּבִשַּׁלְתָּ אֶת־בְּשָׂרוֹ בְּמָקֹם קָדֹֽשׁ׃
32 ಆರೋನನೂ ಅವನ ಪುತ್ರರೂ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಊಟಮಾಡಬೇಕು.
וְאָכַל אַהֲרֹן וּבָנָיו אֶת־בְּשַׂר הָאַיִל וְאֶת־הַלֶּחֶם אֲשֶׁר בַּסָּל פֶּתַח אֹהֶל מוֹעֵֽד׃
33 ಅವರನ್ನು ಪ್ರತಿಷ್ಠೆ ಮಾಡುವುದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವುದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿದವುಗಳನ್ನು ಅವರೇ ಊಟಮಾಡಬೇಕು. ಇತರರು ಅದನ್ನು ಉಣ್ಣಬಾರದು. ಏಕೆಂದರೆ ಅವು ಪರಿಶುದ್ಧವಾದವುಗಳು.
וְאָכְלוּ אֹתָם אֲשֶׁר כֻּפַּר בָּהֶם לְמַלֵּא אֶת־יָדָם לְקַדֵּשׁ אֹתָם וְזָר לֹא־יֹאכַל כִּי־קֹדֶשׁ הֵֽם׃
34 ಪ್ರತಿಷ್ಠೆ ಬಲಿ ಮಾಂಸದಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಡಬೇಕು. ಅದು ಪರಿಶುದ್ಧವಾಗಿರುವುದರಿಂದ ಅದನ್ನು ಮರುದಿನ ತಿನ್ನಬಾರದು.
וְֽאִם־יִוָּתֵר מִבְּשַׂר הַמִּלֻּאִים וּמִן־הַלֶּחֶם עַד־הַבֹּקֶר וְשָׂרַפְתָּ אֶת־הַנּוֹתָר בָּאֵשׁ לֹא יֵאָכֵל כִּי־קֹדֶשׁ הֽוּא׃
35 “ಹೀಗೆ ಆರೋನನಿಗೂ ಅವನ ಪುತ್ರಿರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರಮಾಡಿ, ಏಳು ದಿವಸ ಅವರನ್ನು ಪ್ರತಿಷ್ಠೆ ಕ್ರಮವನ್ನು ಮಾಡಬೇಕು.
וְעָשִׂיתָ לְאַהֲרֹן וּלְבָנָיו כָּכָה כְּכֹל אֲשֶׁר־צִוִּיתִי אֹתָכָה שִׁבְעַת יָמִים תְּמַלֵּא יָדָֽם׃
36 ಪ್ರತಿದಿನ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞ ಮಾಡಬೇಕು. ಬಲಿಪೀಠವನ್ನು ಶುದ್ಧಿಮಾಡುವುದಕ್ಕಾಗಿ ಅದರ ಮೇಲೆ ಪಾಪ ಪರಿಹಾರದ ಬಲಿಯನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.
וּפַר חַטָּאת תַּעֲשֶׂה לַיּוֹם עַל־הַכִּפֻּרִים וְחִטֵּאתָ עַל־הַמִּזְבֵּחַ בְּכַפֶּרְךָ עָלָיו וּמָֽשַׁחְתָּ אֹתוֹ לְקַדְּשֽׁוֹ׃
37 ಏಳು ದಿವಸ ಬಲಿಪೀಠಕ್ಕೊಸ್ಕರ ಪ್ರಾಯಶ್ಚಿತ್ತ ಮಾಡಿ, ಅದನ್ನು ಪವಿತ್ರ ಮಾಡಬೇಕು. ಆಗ ಬಲಿಪೀಠವು ಅತಿ ಪರಿಶುದ್ಧವಾಗಿರುವುದು. ಬಲಿಪೀಠವನ್ನು ಮುಟ್ಟುವುದೆಲ್ಲಾ ಪವಿತ್ರವಾಗಿರಬೇಕು.
שִׁבְעַת יָמִים תְּכַפֵּר עַל־הַמִּזְבֵּחַ וְקִדַּשְׁתָּ אֹתוֹ וְהָיָה הַמִּזְבֵּחַ קֹדֶשׁ קׇֽדָשִׁים כׇּל־הַנֹּגֵעַ בַּמִּזְבֵּחַ יִקְדָּֽשׁ׃
38 “ಬಲಿಪೀಠದ ಮೇಲೆ ನೀನು ಅರ್ಪಿಸಬೇಕಾದದ್ದು ಇದೇ: ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಟ್ಟುಬಿಡದೆ ದಹನಬಲಿಯಾಗಿ ಅರ್ಪಿಸಬೇಕು.
וְזֶה אֲשֶׁר תַּעֲשֶׂה עַל־הַמִּזְבֵּחַ כְּבָשִׂים בְּנֵֽי־שָׁנָה שְׁנַיִם לַיּוֹם תָּמִֽיד׃
39 ಒಂದು ಕುರಿಮರಿಯನ್ನು ಮುಂಜಾನೆಯಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಸಮರ್ಪಿಸಬೇಕು.
אֶת־הַכֶּבֶשׂ הָאֶחָד תַּעֲשֶׂה בַבֹּקֶר וְאֵת הַכֶּבֶשׂ הַשֵּׁנִי תַּעֲשֶׂה בֵּין הָעַרְבָּֽיִם׃
40 ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ, ಒಂದು ಲೀಟರ್ ದ್ರಾಕ್ಷಾರಸವನ್ನು ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮ ಮಾಡಬೇಕು.
וְעִשָּׂרֹן סֹלֶת בָּלוּל בְּשֶׁמֶן כָּתִית רֶבַע הַהִין וְנֵסֶךְ רְבִיעִת הַהִין יָיִן לַכֶּבֶשׂ הָאֶחָֽד׃
41 ಇನ್ನೊಂದು ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಬೆಳಿಗ್ಗೆ ಮಾಡಿದಂತೆಯೇ ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.
וְאֵת הַכֶּבֶשׂ הַשֵּׁנִי תַּעֲשֶׂה בֵּין הָעַרְבָּיִם כְּמִנְחַת הַבֹּקֶר וּכְנִסְכָּהּ תַּֽעֲשֶׂה־לָּהּ לְרֵיחַ נִיחֹחַ אִשֶּׁה לַיהֹוָֽה׃
42 “ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ದೇವದರ್ಶನದ ಗುಡಾರದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವುದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವುದು.
עֹלַת תָּמִיד לְדֹרֹתֵיכֶם פֶּתַח אֹֽהֶל־מוֹעֵד לִפְנֵי יְהֹוָה אֲשֶׁר אִוָּעֵד לָכֶם שָׁמָּה לְדַבֵּר אֵלֶיךָ שָֽׁם׃
43 ಅಲ್ಲಿ ನಾನು ಇಸ್ರಾಯೇಲರನ್ನು ಸಂಧಿಸುವೆನು. ಅದು ನನ್ನ ಮಹಿಮೆಯಿಂದ ಪವಿತ್ರವಾಗುವುದು.
וְנֹעַדְתִּי שָׁמָּה לִבְנֵי יִשְׂרָאֵל וְנִקְדַּשׁ בִּכְבֹדִֽי׃
44 “ನಾನು ದೇವದರ್ಶನದ ಗುಡಾರವನ್ನೂ ಬಲಿಪೀಠವನ್ನೂ ಪರಿಶುದ್ಧ ಮಾಡುವೆನು. ಆರೋನನನ್ನೂ ಅವನ ಪುತ್ರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರ ಮಾಡುವೆನು.
וְקִדַּשְׁתִּי אֶת־אֹהֶל מוֹעֵד וְאֶת־הַמִּזְבֵּחַ וְאֶת־אַהֲרֹן וְאֶת־בָּנָיו אֲקַדֵּשׁ לְכַהֵן לִֽי׃
45 ಇಸ್ರಾಯೇಲರ ಮಧ್ಯದಲ್ಲಿ ನಾನು ವಾಸಮಾಡಿ, ಅವರಿಗೆ ನಾನು ದೇವರಾಗಿರುವೆನು.
וְשָׁכַנְתִּי בְּתוֹךְ בְּנֵי יִשְׂרָאֵל וְהָיִיתִי לָהֶם לֵאלֹהִֽים׃
46 ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ಅವರ ದೇವರಾದ ಯೆಹೋವ ದೇವರು ನಾನೇ ಎಂದು ಅವರಿಗೆ ತಿಳಿಯುವುದು. ನಾನೇ ಅವರ ದೇವರಾದ ಯೆಹೋವ ದೇವರು.
וְיָדְעוּ כִּי אֲנִי יְהֹוָה אֱלֹהֵיהֶם אֲשֶׁר הוֹצֵאתִי אֹתָם מֵאֶרֶץ מִצְרַיִם לְשׇׁכְנִי בְתוֹכָם אֲנִי יְהֹוָה אֱלֹהֵיהֶֽם׃

< ವಿಮೋಚನಕಾಂಡ 29 >