< ವಿಮೋಚನಕಾಂಡ 30 >

1 “ನೀನು ಜಾಲಿ ಮರದ ಕಟ್ಟಿಗೆಯಿಂದ ಧೂಪವೇದಿಯನ್ನು ಮಾಡಬೇಕು.
וְעָשִׂ֥יתָ מִזְבֵּ֖חַ מִקְטַ֣ר קְטֹ֑רֶת עֲצֵ֥י שִׁטִּ֖ים תַּעֲשֶׂ֥ה אֹתֽוֹ׃
2 ಅದರ ಉದ್ದ ಮತ್ತು ಅಗಲ ಸುಮಾರು ನಲವತ್ತೈದು ಸೆಂಟಿಮೀಟರ್, ಅದರ ಎತ್ತರ ಸುಮಾರು ತೊಂಬತ್ತು ಸೆಂಟಿಮೀಟರ್ ಇದ್ದು, ಅದು ಚಚ್ಚೌಕವಾಗಿರಬೇಕು. ಅದರ ಕೊಂಬುಗಳನ್ನು ಸಹ ಜಾಲಿ ಮರದಿಂದಲೇ ಮಾಡಬೇಕು.
אַמָּ֨ה אָרְכּ֜וֹ וְאַמָּ֤ה רָחְבּוֹ֙ רָב֣וּעַ יִהְיֶ֔ה וְאַמָּתַ֖יִם קֹמָת֑וֹ מִמֶּ֖נּוּ קַרְנֹתָֽיו׃
3 ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ, ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು.
וְצִפִּיתָ֨ אֹת֜וֹ זָהָ֣ב טָה֗וֹר אֶת־גַּגּ֧וֹ וְאֶת־קִירֹתָ֛יו סָבִ֖יב וְאֶת־קַרְנֹתָ֑יו וְעָשִׂ֥יתָ לּ֛וֹ זֵ֥ר זָהָ֖ב סָבִֽיב׃
4 ಅದರ ಗೋಟಿನ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡಬೇಕು. ಇವುಗಳನ್ನು ಹೊರುವುದಕ್ಕಾಗಿ ಅವುಗಳಲ್ಲಿ ಕೋಲುಗಳನ್ನು ಸಿಕ್ಕಿಸಬೇಕು.
וּשְׁתֵּי֩ טַבְּעֹ֨ת זָהָ֜ב תַּֽעֲשֶׂה־לּ֣וֹ ׀ מִתַּ֣חַת לְזֵר֗וֹ עַ֚ל שְׁתֵּ֣י צַלְעֹתָ֔יו תַּעֲשֶׂ֖ה עַל־שְׁנֵ֣י צִדָּ֑יו וְהָיָה֙ לְבָתִּ֣ים לְבַדִּ֔ים לָשֵׂ֥את אֹת֖וֹ בָּהֵֽמָּה׃
5 ಆ ಕೋಲುಗಳನ್ನು ಜಾಲಿ ಮರದಿಂದ ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಬೇಕು.
וְעָשִׂ֥יתָ אֶת־הַבַּדִּ֖ים עֲצֵ֣י שִׁטִּ֑ים וְצִפִּיתָ֥ אֹתָ֖ם זָהָֽב׃
6 ಅದನ್ನು ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾಸನದ ಮುಂದೆಯೂ ಇಡಬೇಕು.
וְנָתַתָּ֤ה אֹתוֹ֙ לִפְנֵ֣י הַפָּרֹ֔כֶת אֲשֶׁ֖ר עַל־אֲרֹ֣ן הָעֵדֻ֑ת לִפְנֵ֣י הַכַּפֹּ֗רֶת אֲשֶׁר֙ עַל־הָ֣עֵדֻ֔ת אֲשֶׁ֛ר אִוָּעֵ֥ד לְךָ֖ שָֽׁמָּה׃
7 “ಅದರ ಮೇಲೆ ಆರೋನನು ಪರಿಮಳ ಧೂಪವನ್ನು ಸುಡಬೇಕು. ಪ್ರತಿದಿನ ಬೆಳಿಗ್ಗೆ ಸುಡಬೇಕು. ಪ್ರತಿದಿನ ಬೆಳಿಗ್ಗೆ ದೀಪಗಳನ್ನು ಸಿದ್ಧಮಾಡುವಾಗ ಅದನ್ನು ಸುಡಬೇಕು.
וְהִקְטִ֥יר עָלָ֛יו אַהֲרֹ֖ן קְטֹ֣רֶת סַמִּ֑ים בַּבֹּ֣קֶר בַּבֹּ֗קֶר בְּהֵיטִיב֛וֹ אֶת־הַנֵּרֹ֖ת יַקְטִירֶֽנָּה׃
8 ಆರೋನನು ಸಂಜೆ ದೀಪಗಳನ್ನು ಹಚ್ಚುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಯೆಹೋವ ದೇವರ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪವು.
וּבְהַעֲלֹ֨ת אַהֲרֹ֧ן אֶת־הַנֵּרֹ֛ת בֵּ֥ין הָעֲרְבַּ֖יִם יַקְטִירֶ֑נָּה קְטֹ֧רֶת תָּמִ֛יד לִפְנֵ֥י יְהוָ֖ה לְדֹרֹתֵיכֶֽם׃
9 ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ, ದಹನಬಲಿಗಳನ್ನಾಗಲಿ, ಧಾನ್ಯಗಳ ಅರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.
לֹא־תַעֲל֥וּ עָלָ֛יו קְטֹ֥רֶת זָרָ֖ה וְעֹלָ֣ה וּמִנְחָ֑ה וְנֵ֕סֶךְ לֹ֥א תִסְּכ֖וּ עָלָֽיו׃
10 ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೆ ಒಂದು ಸಾರಿ ಪಾಪ ಪರಿಹಾರದ ಬಲಿಯ ರಕ್ತದಿಂದ ಅದರ ಕೊಂಬುಗಳಿಗೆ ಹಚ್ಚಿ ಪ್ರಾಯಶ್ಚಿತ್ತ ಮಾಡಬೇಕು. ಅದು ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.”
וְכִפֶּ֤ר אַהֲרֹן֙ עַל־קַרְנֹתָ֔יו אַחַ֖ת בַּשָּׁנָ֑ה מִדַּ֞ם חַטַּ֣את הַכִּפֻּרִ֗ים אַחַ֤ת בַּשָּׁנָה֙ יְכַפֵּ֤ר עָלָיו֙ לְדֹרֹ֣תֵיכֶ֔ם קֹֽדֶשׁ־קָֽדָשִׁ֥ים ה֖וּא לַיהוָֽה׃ פ
11 ಆಗ ಯೆಹೋವ ದೇವರು ಪ್ರಕಟಪಡಿಸಿ ಮೋಶೆಗೆ,
וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃
12 “ನೀನು ಇಸ್ರಾಯೇಲರನ್ನು ಎಣಿಸಲು ಜನಗಣತಿಯನ್ನು ತೆಗೆದುಕೊಂಡಾಗ ಪ್ರತಿಯೊಬ್ಬನು ತನ್ನ ಜೀವನದ ವಿಮೋಚನೆಯ ಕ್ರಯವನ್ನು ಯೆಹೋವ ದೇವರಿಗೆ ಕೊಡಬೇಕು. ಈ ರೀತಿ ಮಾಡಿದಲ್ಲಿ ಅವರನ್ನು ಎಣಿಸುವಾಗ ಅವರಲ್ಲಿ ವ್ಯಾಧಿ ಉಂಟಾಗುವುದಿಲ್ಲ.
כִּ֣י תִשָּׂ֞א אֶת־רֹ֥אשׁ בְּנֵֽי־יִשְׂרָאֵ֘ל לִפְקֻדֵיהֶם֒ וְנָ֨תְנ֜וּ אִ֣ישׁ כֹּ֧פֶר נַפְשׁ֛וֹ לַיהוָ֖ה בִּפְקֹ֣ד אֹתָ֑ם וְלֹא־יִהְיֶ֥ה בָהֶ֛ם נֶ֖גֶף בִּפְקֹ֥ד אֹתָֽם׃
13 ಲೆಕ್ಕಿತರಾದವರಲ್ಲಿ ಸೇರುವ ಪ್ರತಿಯೊಬ್ಬ ಮನುಷ್ಯನು ಕೊಡಬೇಕಾದದ್ದು ಏನೆಂದರೆ ಶೆಕೆಲಿಗೆ ಇಪ್ಪತ್ತು ಗೇರಾಗಳ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರ್ಧ ಶೆಕೆಲ್ ಕೊಡಬೇಕು. ಅರ್ಧ ಶೆಕೆಲ್ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
זֶ֣ה ׀ יִתְּנ֗וּ כָּל־הָעֹבֵר֙ עַל־הַפְּקֻדִ֔ים מַחֲצִ֥ית הַשֶּׁ֖קֶל בְּשֶׁ֣קֶל הַקֹּ֑דֶשׁ עֶשְׂרִ֤ים גֵּרָה֙ הַשֶּׁ֔קֶל מַחֲצִ֣ית הַשֶּׁ֔קֶל תְּרוּמָ֖ה לַֽיהוָֽה׃
14 ಲೆಕ್ಕಿತರಾದವರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕೂ ಹೆಚ್ಚು ಪ್ರಾಯವುಳ್ಳವರೂ ಯೆಹೋವ ದೇವರಿಗೆ ಕಾಣಿಕೆಯನ್ನು ಕೊಡಬೇಕು.
כֹּ֗ל הָעֹבֵר֙ עַל־הַפְּקֻדִ֔ים מִבֶּ֛ן עֶשְׂרִ֥ים שָׁנָ֖ה וָמָ֑עְלָה יִתֵּ֖ן תְּרוּמַ֥ת יְהוָֽה׃
15 ನಿಮ್ಮ ಜೀವನದ ಪ್ರಾಯಶ್ಚಿತ್ತಕ್ಕೆ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವುದರಲ್ಲಿ ಐಶ್ವರ್ಯವಂತರು ಅರ್ಧ ಶೇಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.
הֶֽעָשִׁ֣יר לֹֽא־יַרְבֶּ֗ה וְהַדַּל֙ לֹ֣א יַמְעִ֔יט מִֽמַּחֲצִ֖ית הַשָּׁ֑קֶל לָתֵת֙ אֶת־תְּרוּמַ֣ת יְהוָ֔ה לְכַפֵּ֖ר עַל־נַפְשֹׁתֵיכֶֽם׃
16 ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಕೆಲಸಕ್ಕಾಗಿ ಪ್ರತ್ಯೇಕಿಸಬೇಕು. ಇದೇ ಯೆಹೋವ ದೇವರ ಮುಂದೆ ಇಸ್ರಾಯೇಲರಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಯಶ್ಚಿತ್ತಕ್ಕಾಗಿಯೂ ಇರುವುದು,” ಎಂದರು.
וְלָקַחְתָּ֞ אֶת־כֶּ֣סֶף הַכִּפֻּרִ֗ים מֵאֵת֙ בְּנֵ֣י יִשְׂרָאֵ֔ל וְנָתַתָּ֣ אֹת֔וֹ עַל־עֲבֹדַ֖ת אֹ֣הֶל מוֹעֵ֑ד וְהָיָה֩ לִבְנֵ֨י יִשְׂרָאֵ֤ל לְזִכָּרוֹן֙ לִפְנֵ֣י יְהוָ֔ה לְכַפֵּ֖ר עַל־נַפְשֹׁתֵיכֶֽם׃ פ
17 ಯೆಹೋವ ದೇವರು ಮೋಶೆಗೆ,
וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃
18 “ತೊಳೆದುಕೊಳ್ಳುವದಕ್ಕಾಗಿ ಕಂಚಿನ ಬೋಗುಣಿಯನ್ನು ಮಾಡಿಸಿ ಅದಕ್ಕೆ ಕಂಚಿನ ಪೀಠವನ್ನೂ ಮಾಡಿಸಿ, ಅದನ್ನು ದೇವದರ್ಶನದ ಗುಡಾರ ಮತ್ತು ಬಲಿಪೀಠದ ಮಧ್ಯದಲ್ಲಿಟ್ಟು, ಅದರಲ್ಲಿ ನೀರನ್ನು ತುಂಬಿಸಿಡಬೇಕು.
וְעָשִׂ֜יתָ כִּיּ֥וֹר נְחֹ֛שֶׁת וְכַנּ֥וֹ נְחֹ֖שֶׁת לְרָחְצָ֑ה וְנָתַתָּ֣ אֹת֗וֹ בֵּֽין־אֹ֤הֶל מוֹעֵד֙ וּבֵ֣ין הַמִּזְבֵּ֔חַ וְנָתַתָּ֥ שָׁ֖מָּה מָֽיִם׃
19 ಏಕೆಂದರೆ ಆರೋನನೂ ಅವನ ಪುತ್ರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು.
וְרָחֲצ֛וּ אַהֲרֹ֥ן וּבָנָ֖יו מִמֶּ֑נּוּ אֶת־יְדֵיהֶ֖ם וְאֶת־רַגְלֵיהֶֽם׃
20 ಅವರು ದೇವದರ್ಶನದ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆ ಮಾಡುವುದಕ್ಕೂ, ಬೆಂಕಿಯಿಂದ ಯೆಹೋವ ದೇವರಿಗೆ ದಹನಬಲಿಯನ್ನು ಅರ್ಪಿಸುವುದಕ್ಕೂ ಬಲಿಪೀಠದ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದುಕೊಳ್ಳಬೇಕು.
בְּבֹאָ֞ם אֶל־אֹ֧הֶל מוֹעֵ֛ד יִרְחֲצוּ־מַ֖יִם וְלֹ֣א יָמֻ֑תוּ א֣וֹ בְגִשְׁתָּ֤ם אֶל־הַמִּזְבֵּ֙חַ֙ לְשָׁרֵ֔ת לְהַקְטִ֥יר אִשֶּׁ֖ה לַֽיהוָֽה׃
21 ಅವರು ಸಾಯದ ಹಾಗೆ ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು,” ಎಂದರು.
וְרָחֲצ֛וּ יְדֵיהֶ֥ם וְרַגְלֵיהֶ֖ם וְלֹ֣א יָמֻ֑תוּ וְהָיְתָ֨ה לָהֶ֧ם חָק־עוֹלָ֛ם ל֥וֹ וּלְזַרְע֖וֹ לְדֹרֹתָֽם׃ פ
22 ಯೆಹೋವ ದೇವರು ಮೋಶೆಗೆ,
וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃
23 “ಉತ್ತಮವಾದ ತೈಲಗಳನ್ನು ಆರು ಕಿಲೋಗ್ರಾಂ ಸ್ವಚ್ಛವಾದ ರಕ್ತಬೋಳವು, ಇದರ ಅರ್ಧದಷ್ಟು ಮೂರು ಕಿಲೋಗ್ರಾಂ ಸುಗಂಧವಾದ ಲವಂಗಚಕ್ಕೆಯನ್ನು ಮತ್ತು ಮೂರು ಕಿಲೋಗ್ರಾಂ ಸುಗಂಧವಾದ ಬಜೆಯನ್ನು,
וְאַתָּ֣ה קַח־לְךָ֮ בְּשָׂמִ֣ים רֹאשׁ֒ מָר־דְּרוֹר֙ חֲמֵ֣שׁ מֵא֔וֹת וְקִנְּמָן־בֶּ֥שֶׂם מַחֲצִית֖וֹ חֲמִשִּׁ֣ים וּמָאתָ֑יִם וּקְנֵה־בֹ֖שֶׂם חֲמִשִּׁ֥ים וּמָאתָֽיִם׃
24 ಆರು ಕಿಲೋಗ್ರಾಂ ದಾಲ್ಚಿನ್ನಿಯನ್ನು ಪರಿಶುದ್ಧಸ್ಥಳದ ಅಳತೆಯ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಸುಮಾರು ನಾಲ್ಕು ಲೀಟರಷ್ಟು ಓಲಿವ್ ಎಣ್ಣೆಯನ್ನು ಸಹ ತೆಗೆದುಕೊಂಡು,
וְקִדָּ֕ה חֲמֵ֥שׁ מֵא֖וֹת בְּשֶׁ֣קֶל הַקֹּ֑דֶשׁ וְשֶׁ֥מֶן זַ֖יִת הִֽין׃
25 ಅದರಿಂದ ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು. ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿರುವುದು.
וְעָשִׂ֣יתָ אֹת֗וֹ שֶׁ֚מֶן מִשְׁחַת־קֹ֔דֶשׁ רֹ֥קַח מִרְקַ֖חַת מַעֲשֵׂ֣ה רֹקֵ֑חַ שֶׁ֥מֶן מִשְׁחַת־קֹ֖דֶשׁ יִהְיֶֽה׃
26 ಅದರಿಂದ ಸಭೆಯ ಗುಡಾರವನ್ನೂ ಒಡಂಬಡಿಕೆಯ ಮಂಜೂಷವನ್ನೂ
וּמָשַׁחְתָּ֥ ב֖וֹ אֶת־אֹ֣הֶל מוֹעֵ֑ד וְאֵ֖ת אֲר֥וֹן הָעֵדֻֽת׃
27 ಮೇಜನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಧೂಪದ ವೇದಿಯನ್ನೂ
וְאֶת־הַשֻּׁלְחָן֙ וְאֶת־כָּל־כֵּלָ֔יו וְאֶת־הַמְּנֹרָ֖ה וְאֶת־כֵּלֶ֑יהָ וְאֵ֖ת מִזְבַּ֥ח הַקְּטֹֽרֶת׃
28 ದಹನಬಲಿಯ ಪೀಠವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಗಂಗಾಳವನ್ನೂ, ಅದರ ಕಾಲುಗಳನ್ನೂ ಅಭಿಷೇಕಿಸು.
וְאֶת־מִזְבַּ֥ח הָעֹלָ֖ה וְאֶת־כָּל־כֵּלָ֑יו וְאֶת־הַכִּיֹּ֖ר וְאֶת־כַּנּֽוֹ׃
29 ಅವು ಮಹಾಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವುದೆಲ್ಲವೂ ಪರಿಶುದ್ಧವಾಗಿರಬೇಕು.
וְקִדַּשְׁתָּ֣ אֹתָ֔ם וְהָי֖וּ קֹ֣דֶשׁ קָֽדָשִׁ֑ים כָּל־הַנֹּגֵ֥עַ בָּהֶ֖ם יִקְדָּֽשׁ׃
30 “ಆರೋನನನ್ನೂ, ಅವನ ಪುತ್ರರನ್ನೂ ಅಭಿಷೇಕಿಸಿ, ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆ ಮಾಡು, ಎಂದರು.
וְאֶת־אַהֲרֹ֥ן וְאֶת־בָּנָ֖יו תִּמְשָׁ֑ח וְקִדַּשְׁתָּ֥ אֹתָ֖ם לְכַהֵ֥ן לִֽי׃
31 ನೀನು ಇಸ್ರಾಯೇಲರಿಗೆ: ‘ತಲತಲಾಂತರಗಳಲ್ಲಿ ಇದು ನನಗೆ ಪರಿಶುದ್ಧವಾದ ಅಭಿಷೇಕ ಎಣ್ಣೆಯಾಗಿರಬೇಕು.
וְאֶל־בְּנֵ֥י יִשְׂרָאֵ֖ל תְּדַבֵּ֣ר לֵאמֹ֑ר שֶׁ֠מֶן מִשְׁחַת־קֹ֨דֶשׁ יִהְיֶ֥ה זֶ֛ה לִ֖י לְדֹרֹתֵיכֶֽם׃
32 ಇದನ್ನು ಮನುಷ್ಯರ ಮೇಲೆ ಹೊಯ್ಯಬಾರದು. ಇದರ ಮಾದರಿಯಂತೆ ಅಥವಾ ಇದಕ್ಕೆ ಸಮಾನವಾದದ್ದನ್ನು ಮಾಡಬಾರದು. ಇದು ಪರಿಶುದ್ಧವಾದದ್ದು. ನೀವು ಸಹ ಇದನ್ನು ಪರಿಶುದ್ಧವೆಂದು ತಿಳಿದುಕೊಳ್ಳಬೇಕು.
עַל־בְּשַׂ֤ר אָדָם֙ לֹ֣א יִיסָ֔ךְ וּבְמַ֨תְכֻּנְתּ֔וֹ לֹ֥א תַעֲשׂ֖וּ כָּמֹ֑הוּ קֹ֣דֶשׁ ה֔וּא קֹ֖דֶשׁ יִהְיֶ֥ה לָכֶֽם׃
33 ಇದರ ಹಾಗೆ ತೈಲ ಮಾಡುವವನೂ ಯಾಜಕನಲ್ಲದವನ ಮೇಲೆ ಇದನ್ನು ಹಚ್ಚುವವನನ್ನು ಸ್ವಜನರೊಳಗಿಂದ ತೆಗೆದುಹಾಕಬೇಕು,’ ಎಂದು ಹೇಳು,” ಎಂದರು.
אִ֚ישׁ אֲשֶׁ֣ר יִרְקַ֣ח כָּמֹ֔הוּ וַאֲשֶׁ֥ר יִתֵּ֛ן מִמֶּ֖נּוּ עַל־זָ֑ר וְנִכְרַ֖ת מֵעַמָּֽיו׃ ס
34 ಯೆಹೋವ ದೇವರು ಮೋಶೆಗೆ, “ನೀನು ಹಾಲು ಮಡ್ಡಿ, ಗುಗ್ಗಲ ಹಾಗೂ ಗಂಧದ ಚಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಮ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.
וַיֹּאמֶר֩ יְהוָ֨ה אֶל־מֹשֶׁ֜ה קַח־לְךָ֣ סַמִּ֗ים נָטָ֤ף ׀ וּשְׁחֵ֙לֶת֙ וְחֶלְבְּנָ֔ה סַמִּ֖ים וּלְבֹנָ֣ה זַכָּ֑ה בַּ֥ד בְּבַ֖ד יִהְיֶֽה׃
35 ಅದನ್ನು ಸುಗಂಧ ತೈಲ ಮಾಡುವವರ ವಿದ್ಯೆಯ ಪ್ರಕಾರ ಬೆರಸಿ, ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡಬೇಕು.
וְעָשִׂ֤יתָ אֹתָהּ֙ קְטֹ֔רֶת רֹ֖קַח מַעֲשֵׂ֣ה רוֹקֵ֑חַ מְמֻלָּ֖ח טָה֥וֹר קֹֽדֶשׁ׃
36 ಅದರಲ್ಲಿ ಸ್ವಲ್ಪ ಪುಡಿಮಾಡಿ, ದೇವದರ್ಶನದ ಗುಡಾರದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇಡು. ಅದು ನಿಮಗೆ ಮಹಾಪರಿಶುದ್ಧವಾಗಿರಲಿ.
וְשָֽׁחַקְתָּ֣ מִמֶּנָּה֮ הָדֵק֒ וְנָתַתָּ֨ה מִמֶּ֜נָּה לִפְנֵ֤י הָעֵדֻת֙ בְּאֹ֣הֶל מוֹעֵ֔ד אֲשֶׁ֛ר אִוָּעֵ֥ד לְךָ֖ שָׁ֑מָּה קֹ֥דֶשׁ קָֽדָשִׁ֖ים תִּהְיֶ֥ה לָכֶֽם׃
37 ನೀನು ಮಾಡುವ ಧೂಪದ ಮಾದರಿಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಅದನ್ನು ಯೆಹೋವ ದೇವರಿಗೆ ಪವಿತ್ರವೆಂದು ಪರಿಗಣಿಸಬೇಕು.
וְהַקְּטֹ֙רֶת֙ אֲשֶׁ֣ר תַּעֲשֶׂ֔ה בְּמַ֨תְכֻּנְתָּ֔הּ לֹ֥א תַעֲשׂ֖וּ לָכֶ֑ם קֹ֛דֶשׁ תִּהְיֶ֥ה לְךָ֖ לַיהוָֽה׃
38 ಸುವಾಸನೆಗಾಗಿ ಅದನ್ನು ಮಾಡಿಕೊಳ್ಳುವವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”
אִ֛ישׁ אֲשֶׁר־יַעֲשֶׂ֥ה כָמ֖וֹהָ לְהָרִ֣יחַ בָּ֑הּ וְנִכְרַ֖ת מֵעַמָּֽיו׃ ס

< ವಿಮೋಚನಕಾಂಡ 30 >