< ವಿಮೋಚನಕಾಂಡ 38 >

1 ಬೆಚಲೇಲನು ಜಾಲಿ ಮರದಿಂದ ದಹನಬಲಿಯ ಪೀಠವನ್ನು ಮಾಡಿದರು. ಅದರ ಎತ್ತರವು ಸುಮಾರು ಒಂದು ಮೀಟರ್ ಇರಬೇಕು. ಅದರ ಉದ್ದ ಮತ್ತು ಅಗಲವು ಸುಮಾರು ಎರಡೂವರೆ ಮೀಟರ್ ಚಚ್ಚೌಕವಾಗಿರಬೇಕು.
וַיַּעַשׂ אֶת־מִזְבַּח הָעֹלָה עֲצֵי שִׁטִּים חָמֵשׁ אַמּוֹת אׇרְכּוֹ וְחָֽמֵשׁ־אַמּוֹת רׇחְבּוֹ רָבוּעַ וְשָׁלֹשׁ אַמּוֹת קֹמָתֽוֹ׃
2 ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದರು. ಆ ಕೊಂಬುಗಳು ಆ ಬಲಿಪೀಠಕ್ಕೆ ಏಕವಾಗಿರಬೇಕು. ಅವುಗಳನ್ನು ಕಂಚಿನಿಂದ ಹೊದಿಸಿದರು.
וַיַּעַשׂ קַרְנֹתָיו עַל אַרְבַּע פִּנֹּתָיו מִמֶּנּוּ הָיוּ קַרְנֹתָיו וַיְצַף אֹתוֹ נְחֹֽשֶׁת׃
3 ಅನಂತರ ಅವರು ಬಲಿಪೀಠದ ಉಪಕರಣಗಳನ್ನೆಲ್ಲಾ ಅಂದರೆ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಇವುಗಳೆನ್ನೆಲ್ಲಾ ಕಂಚಿನಿಂದ ಮಾಡಿದರು.
וַיַּעַשׂ אֶֽת־כׇּל־כְּלֵי הַמִּזְבֵּחַ אֶת־הַסִּירֹת וְאֶת־הַיָּעִים וְאֶת־הַמִּזְרָקֹת אֶת־הַמִּזְלָגֹת וְאֶת־הַמַּחְתֹּת כׇּל־כֵּלָיו עָשָׂה נְחֹֽשֶׁת׃
4 ಬಲಿಪೀಠಕ್ಕೆ ಹೆಣಿಗೆ ಕೆಲಸದಿಂದ ಕಂಚಿನ ಜಾಳಿಗೆಯನ್ನು ಮಾಡಿದರು. ಅದು ಬಲಿಪೀಠದ ಸುತ್ತಲಿರುವ ಕಟ್ಟಿಗೆಯ ಕಟ್ಟೆಯ ಕೆಳಗೆ ಇದ್ದು, ಅದನ್ನು ಬಲಿಪೀಠದ ಕೆಳಭಾಗದಿಂದ ಮಧ್ಯದವರೆಗೆ ಇರುವಂತೆ ಮಾಡಿದರು.
וַיַּעַשׂ לַמִּזְבֵּחַ מִכְבָּר מַעֲשֵׂה רֶשֶׁת נְחֹשֶׁת תַּחַת כַּרְכֻּבּוֹ מִלְּמַטָּה עַד־חֶצְיֽוֹ׃
5 ವೇದಿಯನ್ನು ಹೊರುವಾಗ ಕೋಲು ಸಿಕ್ಕಿಸುವುದಕ್ಕೋಸ್ಕರ ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಕಂಚಿನಿಂದ ಎರಕ ಹೊಯ್ದರು.
וַיִּצֹק אַרְבַּע טַבָּעֹת בְּאַרְבַּע הַקְּצָוֺת לְמִכְבַּר הַנְּחֹשֶׁת בָּתִּים לַבַּדִּֽים׃
6 ಅವರು ಜಾಲಿ ಮರದಿಂದ ಕೋಲುಗಳನ್ನು ಮಾಡಿ, ಅವುಗಳನ್ನು ಕಂಚಿನಿಂದ ಹೊದಿಸಿದರು.
וַיַּעַשׂ אֶת־הַבַּדִּים עֲצֵי שִׁטִּים וַיְצַף אֹתָם נְחֹֽשֶׁת׃
7 ಬಲಿಪೀಠವನ್ನು ಹೊರುವುದಕ್ಕೆ ಅದರ ಎರಡೂ ಬದಿಯಲ್ಲಿ ಮಾಡಿದ ಕೋಲುಗಳನ್ನು ಬಳೆಗಳಲ್ಲಿ ಸೇರಿಸಿದರು. ಅವರು ಆ ಬಲಿಪೀಠವನ್ನು ಚೌಕಟ್ಟುಗಳಿಂದ ಪೊಳ್ಳಾಗಿರುವಂತೆ ಮಾಡಿದರು.
וַיָּבֵא אֶת־הַבַּדִּים בַּטַּבָּעֹת עַל צַלְעֹת הַמִּזְבֵּחַ לָשֵׂאת אֹתוֹ בָּהֶם נְבוּב לֻחֹת עָשָׂה אֹתֽוֹ׃
8 ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಸೇವೆಮಾಡುತ್ತಿದ್ದ ಸ್ತ್ರೀಯರಿಂದ ಕೂಡಿಸಿದ ಕಂಚಿನ ದರ್ಪಣಗಳಿಂದ ಕಂಚಿನಿಂದ ಬೋಗುಣಿಯನ್ನು ಅದರ ಪೀಠವನ್ನೂ ಮಾಡಿದರು.
וַיַּעַשׂ אֵת הַכִּיּוֹר נְחֹשֶׁת וְאֵת כַּנּוֹ נְחֹשֶׁת בְּמַרְאֹת הַצֹּבְאֹת אֲשֶׁר צָֽבְאוּ פֶּתַח אֹהֶל מוֹעֵֽד׃
9 ಅವರು ಗುಡಾರದ ಅಂಗಳವನ್ನು ಮಾಡಿದರು. ಹೇಗೆಂದರೆ ದಕ್ಷಿಣ ದಿಕ್ಕಿನಲ್ಲಿರುವ ಅಂಗಳಕ್ಕೋಸ್ಕರ ನಯವಾಗಿ ಹೊಸೆದ ನಾರಿನ ಪರದೆಗಳನ್ನು ಮಾಡಲಾಗಿತ್ತು. ಅವು ಸುಮಾರು ನಲವತ್ತೈದು ಮೀಟರ್ ಉದ್ದವಾಗಿದ್ದವು.
וַיַּעַשׂ אֶת־הֶחָצֵר לִפְאַת ׀ נֶגֶב תֵּימָנָה קַלְעֵי הֶֽחָצֵר שֵׁשׁ מׇשְׁזָר מֵאָה בָּאַמָּֽה׃
10 ಆ ಕಡೆಯಲ್ಲಿ ಇಪ್ಪತ್ತು ಸ್ತಂಭಗಳಿದ್ದವು ಮತ್ತು ಅವುಗಳಿಗೆ ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿದ್ದವು. ಸ್ತಂಭಗಳ ಕೊಂಡಿಗಳನ್ನು ಮತ್ತು ಅವುಗಳ ಪಟ್ಟಿಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು.
עַמּוּדֵיהֶם עֶשְׂרִים וְאַדְנֵיהֶם עֶשְׂרִים נְחֹשֶׁת וָוֵי הָעַמּוּדִים וַחֲשֻׁקֵיהֶם כָּֽסֶף׃
11 ಉತ್ತರ ದಿಕ್ಕಿನ ಪರದೆಗಳು ಸುಮಾರು ನಲವತ್ತೈದು ಮೀಟರ್ ಉದ್ದವಾಗಿದ್ದವು. ಇಪ್ಪತ್ತು ಸ್ತಂಭಗಳು ಮತ್ತು ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿದ್ದವು. ಆ ಸ್ತಂಭಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯಿಂದ ಮಾಡಿದ್ದಾಗಿದ್ದವು.
וְלִפְאַת צָפוֹן מֵאָה בָֽאַמָּה עַמּוּדֵיהֶם עֶשְׂרִים וְאַדְנֵיהֶם עֶשְׂרִים נְחֹשֶׁת וָוֵי הָֽעַמּוּדִים וַחֲשֻׁקֵיהֶם כָּֽסֶף׃
12 ಅಂಗಳದ ಪಶ್ಚಿಮ ಭಾಗದಲ್ಲಿ ಸುಮಾರು ಇಪ್ಪತ್ತಮೂರು ಮೀಟರ್ ಉದ್ದವಾದ ಪರದೆಗಳಿದ್ದವು. ಹತ್ತು ಸ್ತಂಭಗಳು ಮತ್ತು ಆ ಸ್ತಂಭಗಳಿಗೆ ಹತ್ತು ಗದ್ದಿಗೇ ಕಲ್ಲುಗಳಿದ್ದವು. ಸ್ತಂಭಗಳ ಕೊಂಡಿ ಮತ್ತು ಅಲಂಕಾರದ ಮೇಲಿನ ಕಟ್ಟುಗಳು ಬೆಳ್ಳಿಯದ್ದಾಗಿದ್ದವು.
וְלִפְאַת־יָם קְלָעִים חֲמִשִּׁים בָּֽאַמָּה עַמּוּדֵיהֶם עֲשָׂרָה וְאַדְנֵיהֶם עֲשָׂרָה וָוֵי הָעַמֻּדִים וַחֲשׁוּקֵיהֶם כָּֽסֶף׃
13 ಪೂರ್ವದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಅಂಗಳದ ಅಗಲವು ಸುಮಾರು ಇಪ್ಪತ್ತಮೂರು ಮೀಟರವಾಗಿತ್ತು.
וְלִפְאַת קֵדְמָה מִזְרָחָה חֲמִשִּׁים אַמָּֽה׃
14 ದ್ವಾರದ ಒಂದು ಬದಿಯ ಪರದೆಗಳು ಸುಮಾರು ಆರುವರೆ ಮೀಟರ್ ಉದ್ದವಾಗಿದ್ದವು. ಅವುಗಳಿಗೆ ಮೂರು ಸ್ತಂಭಗಳು, ಆ ಸ್ತಂಭಗಳಿಗೆ ಮೂರು ಗದ್ದಿಗೇ ಕಲ್ಲುಗಳು ಇದ್ದವು.
קְלָעִים חֲמֵשׁ־עֶשְׂרֵה אַמָּה אֶל־הַכָּתֵף עַמּוּדֵיהֶם שְׁלֹשָׁה וְאַדְנֵיהֶם שְׁלֹשָֽׁה׃
15 ಅಂಗಳದ ದ್ವಾರದ ಎರಡೂ ಕಡೆಗಳಲ್ಲಿ ಸುಮಾರು ಆರುವರೆ ಮೀಟರ್ ಉದ್ದವಾದ ಪರದೆಗಳಿದ್ದವು, ಅವುಗಳಿಗೆ ಮೂರು ಸ್ತಂಭಗಳು ಮತ್ತು ಮೂರು ಗದ್ದಿಗೇ ಕಲ್ಲುಗಳಿದ್ದವು.
וְלַכָּתֵף הַשֵּׁנִית מִזֶּה וּמִזֶּה לְשַׁעַר הֶֽחָצֵר קְלָעִים חֲמֵשׁ עֶשְׂרֵה אַמָּה עַמֻּדֵיהֶם שְׁלֹשָׁה וְאַדְנֵיהֶם שְׁלֹשָֽׁה׃
16 ಅಂಗಳದ ಸುತ್ತಲಿದ್ದ ಎಲ್ಲ ಪರದೆಗಳು ನಯವಾಗಿ ಹೊಸೆದ ನಾರಿನ ಬಟ್ಟೆಯಿಂದ ಮಾಡಲಾಗಿದ್ದವು.
כׇּל־קַלְעֵי הֶחָצֵר סָבִיב שֵׁשׁ מׇשְׁזָֽר׃
17 ಸ್ತಂಭಗಳ ಗದ್ದಿಗೇ ಕಲ್ಲುಗಳು ಕಂಚಿನದ್ದಾಗಿದ್ದವು. ಸ್ತಂಭಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯದ್ದಾಗಿದ್ದವು. ಸ್ತಂಭದ ಬೋದಿಗೆಗಳು ಬೆಳ್ಳಿಯಿಂದ ಹೊದಿಸಲಾಗಿತ್ತು. ಅಂಗಳದ ಎಲ್ಲಾ ಸ್ತಂಭಗಳಿಗೆ ಬೆಳ್ಳಿಯ ಕಟ್ಟುಗಳಿದ್ದವು.
וְהָאֲדָנִים לָֽעַמֻּדִים נְחֹשֶׁת וָוֵי הָֽעַמּוּדִים וַחֲשׁוּקֵיהֶם כֶּסֶף וְצִפּוּי רָאשֵׁיהֶם כָּסֶף וְהֵם מְחֻשָּׁקִים כֶּסֶף כֹּל עַמֻּדֵי הֶחָצֵֽר׃
18 ಗುಡಾರದ ಅಂಗಳದ ದ್ವಾರಕ್ಕಾಗಿ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸಮಾಡಿದ ಇಪ್ಪತ್ತು ಮೊಳದ ಪರದೆ ಮಾಡಲಾಗಿತ್ತು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು. ಅಗಲ, ಎತ್ತರಗಳಲ್ಲಿ ಅಂಗಳದ ಉಳಿದ ಪರದೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು.
וּמָסַךְ שַׁעַר הֶחָצֵר מַעֲשֵׂה רֹקֵם תְּכֵלֶת וְאַרְגָּמָן וְתוֹלַעַת שָׁנִי וְשֵׁשׁ מׇשְׁזָר וְעֶשְׂרִים אַמָּה אֹרֶךְ וְקוֹמָה בְרֹחַב חָמֵשׁ אַמּוֹת לְעֻמַּת קַלְעֵי הֶחָצֵֽר׃
19 ಅವುಗಳಿಗೆ ನಾಲ್ಕು ಸ್ತಂಭಗಳು, ಆ ಕಂಬಗಳಿಗೆ ನಾಲ್ಕು ಕಂಚಿನ ಗದ್ದಿಗೇ ಕಲ್ಲುಗಳಿದ್ದವು. ಅವುಗಳ ಕೊಂಡಿಗಳು ಬೆಳ್ಳಿಯದ್ದಾಗಿದ್ದವು. ಅವುಗಳ ಬೋದಿಗಳ ಹೊದಿಕೆ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯದ್ದಾಗಿದ್ದವು.
וְעַמֻּֽדֵיהֶם אַרְבָּעָה וְאַדְנֵיהֶם אַרְבָּעָה נְחֹשֶׁת וָוֵיהֶם כֶּסֶף וְצִפּוּי רָאשֵׁיהֶם וַחֲשֻׁקֵיהֶם כָּֽסֶף׃
20 ಗುಡಾರದ ಮತ್ತು ಅಂಗಳದ ಸುತ್ತಲೂ ಇರುವ ಎಲ್ಲಾ ಗೂಟಗಳೂ ಕಂಚಿನಿಂದ ಮಾಡಿದ್ದಾಗಿದ್ದವು.
וְֽכׇל־הַיְתֵדֹת לַמִּשְׁכָּן וְלֶחָצֵר סָבִיב נְחֹֽשֶׁת׃
21 ದೇವದರ್ಶನದ ಗುಡಾರಕ್ಕೆ ಅಂದರೆ ಒಡಂಬಡಿಕೆಯ ನಿಯಮದ ಗುಡಾರ ನಿರ್ಮಾಣಕ್ಕೆ ಬಳಸಿದ ವಸ್ತುಗಳ ಲೆಕ್ಕ ಇವು: ಮೋಶೆಯ ಆಜ್ಞೆಯ ಮೇರೆಗೆ ಯಾಜಕನಾದ ಆರೋನನ ಮಗನಾದ ಈತಾಮಾರನ ನಿರ್ದೇಶನದಲ್ಲಿ ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು.
אֵלֶּה פְקוּדֵי הַמִּשְׁכָּן מִשְׁכַּן הָעֵדֻת אֲשֶׁר פֻּקַּד עַל־פִּי מֹשֶׁה עֲבֹדַת הַלְוִיִּם בְּיַד אִֽיתָמָר בֶּֽן־אַהֲרֹן הַכֹּהֵֽן׃
22 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದವನಾದ ಊರಿಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲಯೇಲನು ಮಾಡಿದನು.
וּבְצַלְאֵל בֶּן־אוּרִי בֶן־חוּר לְמַטֵּה יְהוּדָה עָשָׂה אֵת כׇּל־אֲשֶׁר־צִוָּה יְהֹוָה אֶת־מֹשֶֽׁה׃
23 ಅವನ ಜೊತೆಯಲ್ಲಿ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ, ಧೂಮ್ರ ಮತ್ತು ರಕ್ತವರ್ಣದ ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸ ಮಾಡುವವನೂ ಆಗಿದ್ದನು.
וְאִתּוֹ אׇהֳלִיאָב בֶּן־אֲחִיסָמָךְ לְמַטֵּה־דָן חָרָשׁ וְחֹשֵׁב וְרֹקֵם בַּתְּכֵלֶת וּבָֽאַרְגָּמָן וּבְתוֹלַעַת הַשָּׁנִי וּבַשֵּֽׁשׁ׃
24 ಪರಿಶುದ್ಧಾಲಯದ ಸೇವೆಗೆ ನೇಮಕವಾದ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ವಿಶೇಷವಾಗಿ ಅರ್ಪಿಸಿದ ಕಾಣಿಕೆಯಾಗಿತ್ತು, ಅದು ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್ ಇತ್ತು.
כׇּל־הַזָּהָב הֶֽעָשׂוּי לַמְּלָאכָה בְּכֹל מְלֶאכֶת הַקֹּדֶשׁ וַיְהִי ׀ זְהַב הַתְּנוּפָה תֵּשַׁע וְעֶשְׂרִים כִּכָּר וּשְׁבַע מֵאוֹת וּשְׁלֹשִׁים שֶׁקֶל בְּשֶׁקֶל הַקֹּֽדֶשׁ׃
25 ಪರಿಶುದ್ಧಾಲಯದ ನಿಯಮದ ಮೇರೆಗೆ ಸಮೂಹದ ಜನಗಣತಿಯಲ್ಲಿ ದಾಖಲಿಸಿದ ಜನರಿಂದ ಸಂಗ್ರಹಿದ ಬೆಳ್ಳಿಯ ತೂಕವು ಸುಮಾರು 3,400 ಕಿಲೋಗ್ರಾಂ ಇತ್ತು.
וְכֶסֶף פְּקוּדֵי הָעֵדָה מְאַת כִּכָּר וְאֶלֶף וּשְׁבַע מֵאוֹת וַחֲמִשָּׁה וְשִׁבְעִים שֶׁקֶל בְּשֶׁקֶל הַקֹּֽדֶשׁ׃
26 ಪರಿಶುದ್ಧಾಲಯದ ನಿಯಮದ ಮೇರೆಗೆ ಪ್ರತಿಯೊಬ್ಬ ಮನುಷ್ಯನಿಂದ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಕೊಟ್ಟವರ ಲೆಕ್ಕವನ್ನು ಇಪ್ಪತ್ತು ವರ್ಷದವರು ಮತ್ತು ಅದಕ್ಕೆ ಮೇಲಿನ ಪ್ರಾಯದವರನ್ನು ಲೆಕ್ಕ ಮಾಡಲಾಗಿ ಅದು 6,03,550 ಗಂಡಸರ ಸಂಖ್ಯೆ ಇತ್ತು.
בֶּקַע לַגֻּלְגֹּלֶת מַחֲצִית הַשֶּׁקֶל בְּשֶׁקֶל הַקֹּדֶשׁ לְכֹל הָעֹבֵר עַל־הַפְּקֻדִים מִבֶּן עֶשְׂרִים שָׁנָה וָמַעְלָה לְשֵׁשׁ־מֵאוֹת אֶלֶף וּשְׁלֹשֶׁת אֲלָפִים וַחֲמֵשׁ מֵאוֹת וַחֲמִשִּֽׁים׃
27 ಪರಿಶುದ್ಧಾಲಯದ ಗದ್ದಿಗೇ ಕಲ್ಲುಗಳಿಗೆ ಮತ್ತು ಪರದೆಗಳ ಗದ್ದಿಗೇ ಕಲ್ಲುಗಳಿಗೆ ಎರಕ ಹೊಯ್ಯಲು 3,400 ಕಿಲೋಗ್ರಾಂ ಬೆಳ್ಳಿ ಹಿಡಿಯಿತು. ಒಂದು ಗದ್ದಿಗೇ ಕಲ್ಲಿಗೆ ಮೂವತ್ನಾಲ್ಕು ಕಿಲೋಗ್ರಾಂನಂತೆ ನೂರು ಗದ್ದಿಗೇ ಕಲ್ಲುಗಳಿಗೆ 3,400 ಕಿಲೋಗ್ರಾಂ ಬೆಳ್ಳಿ ಆಯಿತು.
וַיְהִי מְאַת כִּכַּר הַכֶּסֶף לָצֶקֶת אֵת אַדְנֵי הַקֹּדֶשׁ וְאֵת אַדְנֵי הַפָּרֹכֶת מְאַת אֲדָנִים לִמְאַת הַכִּכָּר כִּכָּר לָאָֽדֶן׃
28 ಒಂದರ ತೂಕ ಸುಮಾರು 34 ಕಿಲೋಗ್ರಾಂ ಇತ್ತು. ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದರು.
וְאֶת־הָאֶלֶף וּשְׁבַע הַמֵּאוֹת וַחֲמִשָּׁה וְשִׁבְעִים עָשָׂה וָוִים לָעַמּוּדִים וְצִפָּה רָאשֵׁיהֶם וְחִשַּׁק אֹתָֽם׃
29 ವಿಶೇಷ ಕಾಣಿಕೆಯಾಗಿ ಬಂದ ಕಂಚು 2,425 ಕಿಲೋಗ್ರಾಂ ತೂಕವಿತ್ತು.
וּנְחֹשֶׁת הַתְּנוּפָה שִׁבְעִים כִּכָּר וְאַלְפַּיִם וְאַרְבַּע־מֵאוֹת שָֽׁקֶל׃
30 ಆ ಕಂಚಿನಿಂದ ಅವರು ದೇವದರ್ಶನದ ಗುಡಾರದ ದ್ವಾರಗಳಿಗೆ ಗದ್ದಿಗೇ ಕಲ್ಲುಗಳನ್ನೂ ಬಲಿಪೀಠವನ್ನೂ ಅದಕ್ಕೆ ಕಂಚಿನ ಜಾಳಿಗೆಯನ್ನೂ ಬಲಿಪೀಠದ ಸಮಸ್ತ ಪಾತ್ರೆಗಳನ್ನೂ ಮಾಡಿದರು.
וַיַּעַשׂ בָּהּ אֶת־אַדְנֵי פֶּתַח אֹהֶל מוֹעֵד וְאֵת מִזְבַּח הַנְּחֹשֶׁת וְאֶת־מִכְבַּר הַנְּחֹשֶׁת אֲשֶׁר־לוֹ וְאֵת כׇּל־כְּלֵי הַמִּזְבֵּֽחַ׃
31 ಅಂಗಳದ ಸುತ್ತಲಿನ ಗದ್ದಿಗೇ ಕಲ್ಲುಗಳನ್ನೂ, ಗುಡಾರದ ಮತ್ತು ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದರು.
וְאֶת־אַדְנֵי הֶֽחָצֵר סָבִיב וְאֶת־אַדְנֵי שַׁעַר הֶחָצֵר וְאֵת כׇּל־יִתְדֹת הַמִּשְׁכָּן וְאֶת־כׇּל־יִתְדֹת הֶחָצֵר סָבִֽיב׃

< ವಿಮೋಚನಕಾಂಡ 38 >