< ವಿಮೋಚನಕಾಂಡ 39 >

1 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಮೇರೆಗೆ ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಪವಿತ್ರ ಆಲಯದ ಸೇವೆ ಮಾಡುವುದಕ್ಕೆ ಕಲಾತ್ಮಕವಾಗಿ ನೇಯ್ದ ಸೇವಾ ವಸ್ತ್ರಗಳನ್ನು ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.
Daga zare mai ruwan shuɗi, da shuɗayya da kuma jan zare suka yi tsarkaken rigunan domin hidima a wuri mai tsarki. Suka kuma yi tsarkaken riguna don Haruna, yadda Ubangiji ya umarci Musa.
2 ಬೆಚಲೇಲನು ಏಫೋದನ್ನು ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರುಬಟ್ಟೆಯನ್ನು ಹೊಸೆದು ಉಪಯೋಗಿಸಿದ್ದರು.
Suka yi efod na zinariya, da shuɗi, da shunayya, da jan zare, da kuma lallausan lilin.
3 ಅವರು ಬಂಗಾರವನ್ನು ಹೊಡೆದು, ತೆಳುವಾದ ತಗಡುಗಳನ್ನಾಗಿ ಮಾಡಿ, ಅದನ್ನು ಕತ್ತರಿಸಿ ಎಳೆಗಳನ್ನಾಗಿ ಮಾಡಿ, ಆ ಎಳೆಗಳನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸ ಮಾಡುವುದಕ್ಕೆ ಉಪಯೋಗಿಸಿದ್ದರು.
Suka bubbuga zinariya ta zama falle, suka yayyanka ta zare-zare don su yi saƙa da ita, tare da zane na shuɗi, da na shunayya, da na jan zare, da na lallausan lilin, aikin gwani mai fasaha.
4 ಆ ಕವಚಕ್ಕೆ ಅದರ ಎರಡೂ ಕೊನೆಗಳನ್ನು ಜೋಡಿಸುವುದಕ್ಕೆ ಎರಡು ಹೆಗಲು ಪಟ್ಟಿಗಳನ್ನು ತಯಾರಿಸಿದ್ದರು.
Suka yi wa efod kafaɗu, sa’an nan suka haɗa su a gefenta biyu na sama, don a iya ɗaurawa.
5 ಅದರ ಮೇಲಿರುವ ಅದರ ಮೇಲಿರುವ ಕಸೂತಿ ಕೆಲಸದ ಏಫೋದಿನ ನಡುಕಟ್ಟನ್ನು ಒಂದೇ ರೀತಿಯ ವಸ್ತುಗಳಿಂದ ತಯಾರಿಸಬೇಕು ಅಂದರೆ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಲಾಗಿತ್ತು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.
Gwanin mai saƙa ya saƙa abin ɗamarar efod. Da irin kayan da aka saƙa efod ne aka saƙa abin ɗamarar, wato, da zinariya, da shuɗi, da shunayya, da jan zare, da zaren lallausan lilin, yadda Ubangiji ya umarci Musa.
6 ಮುದ್ರೆ ಕೆತ್ತುವ ಪ್ರಕಾರ, ಗೋಮೇಧಿಕ ರತ್ನಗಳಲ್ಲಿ ಹನ್ನೆರಡು ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಕೆತ್ತಿ ಬಂಗಾರದ ಕುಂದಣದಲ್ಲಿ ಇಟ್ಟರು.
Suka shimfiɗa duwatsun onis, suka jera su cikin tsaiko na zinariya, suka kuma zāna sunayen’ya’yan Isra’ila a kan duwatsun kamar yadda akan yi hatimi.
7 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ಆ ಎರಡು ರತ್ನಗಳನ್ನು ಏಫೋದಿನ ಹೆಗಲಿನ ಭಾಗದ ಮೇಲೆ ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗುವಂತೆ ಇಟ್ಟರು.
Sa’an nan suka ɗaura su a ƙyallen kafaɗun efod a matsayin duwatsun tuni wa’ya’yan Isra’ila, yadda Ubangiji ya umarci Musa.
8 ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಂದರೆ ಏಫೋದಿನ ಕೆಲಸದ ಹಾಗೆಯೇ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿದರು.
Suka yi ƙyallen maƙalawa a ƙirji, aikin gwani. Suka yi shi kamar efod, na zinariya, da na shuɗi, da na shunayya, da na jan zare, da kuma na lallausan lilin.
9 ಅದು ಚಚ್ಚೌಕವಾಗಿತ್ತು, ಅದು ಗೇಣು ಉದ್ದ, ಒಂದು ಗೇಣು ಅಗಲ ಮತ್ತು ಇದು ಎರಡು ಪದರುಳ್ಳದ್ದಾಗಿತ್ತು.
Ƙyallen maƙalawa a ƙirjin murabba’i ne, aka ninka shi biyu, tsawonsa da fāɗinsa kamu ɗaya-ɗaya ne.
10 ನಂತರ ಅದರಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಜೋಡಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಪಟಿಕಗಳಿದ್ದವು.
Sa’an nan suka sa jeri huɗu na duwatsu masu daraja a bisansa. A jeri na farko akwai yakutu, da tofaz, da zumurrudu;
11 ಎರಡನೆಯ ಸಾಲಿನಲ್ಲಿ ಕೆಂಪರಲು, ನೀಲ ಮತ್ತು ಪಚ್ಚೆಗಳಿದ್ದವು.
a jeri na biyu akwai turkuwoyis, da saffaya, da daimon;
12 ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಗೋಮೇಧಿಕ ಮತ್ತು ಧೂಮ್ರಮಣಿಗಳಿದ್ದವು.
a jeri na uku akwai yakinta, da idon mage, da ametis;
13 ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಗೋಮೇಧಿಕ, ಸೂರ್ಯಕಾಂತ ಶಿಲೆ ಇವುಗಳನ್ನು ಬಂಗಾರದ ಜವೆಯ ಕಲ್ಲುಗಳಲ್ಲಿ ಸೇರಿಸಲಾಗಿದ್ದವು.
a jeri na huɗu akwai beril, da onis, da yasfa. Aka sa su cikin tsaiko na zinariya.
14 ಆ ರತ್ನಗಳು ಇಸ್ರಾಯೇಲರ ಗೋತ್ರದ ಹೆಸರುಗಳ ಪ್ರಕಾರ ಅವು ಹನ್ನೆರಡಾಗಿದ್ದವು. ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಗೋತ್ರಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿದವುಗಳಾಗಿದ್ದವು.
Aka zāna duwatsu goma sha biyu, ɗaya don kowane sunan’ya’yan Isra’ila goma sha biyu, kamar yadda akan yi hatimi.
15 ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ಹೆಣೆದ ಕೆಲಸವಾಗಿರುವ ಹುರಿಗಳಂತಿರುವ ಸರಪಣಿಯನ್ನು ಮಾಡಿದರು.
Sai suka yi tuƙaƙƙun sarƙoƙi na zinariya zalla a kan ƙyallen maƙalawa a ƙirji.
16 ಬಂಗಾರದ ಆ ಎರಡು ಜವೆಗಳನ್ನು ಮಾಡಿ, ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದರು.
Suka yi tsaiko biyu na zinariya da zoban zinariya biyu, suka kuma ɗaura zoban a kusurwoyi biyu na ƙyallen maƙalawa a ƙirji.
17 ಬಂಗಾರದಿಂದ ಹೆಣೆದ ಆ ಎರಡು ಸರಪಣಿಗಳನ್ನು ಎದೆಪದಕದ ಕೊನೆಗಳಲ್ಲಿರುವ ಎರಡು ಬಳೆಗಳಲ್ಲಿ ಸೇರಿಸಿದರು.
Suka ɗaura sarƙoƙi biyu na zinariya da kusurwoyi na ƙyallen maƙalawa a ƙirji.
18 ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸೇರಿಸಿ, ಏಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿದರು.
Suka maƙala waɗancan bakin sarƙoƙin zinariya a tsaikon nan biyu, sa’an nan suka rataya su a kafaɗun efod daga gaba.
19 ಬಂಗಾರದ ಎರಡು ಉಂಗುರಗಳನ್ನು ಮಾಡಿ, ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿ ಏಫೋದಿನ ಬದಿಗೆ ಒಳಗಡೆಯಲ್ಲಿ ಹಾಕಿದರು.
Suka yi zobai biyu na zinariya suka haɗa, suka sa su a gefe biyu na ƙyallen maƙalawa a ƙirji daga ciki kusa da efod.
20 ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ, ಏಫೋದಿನ ಮುಂಬದಿಯ ಕೆಳಗಿನ ಎರಡು ಹೆಗಲಿನ ಪಟ್ಟಿಗಳಲ್ಲಿ, ಏಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು.
Sa’an nan suka yi waɗansu ƙarin zobai biyu na zinariya, suka maƙale su daga ƙasa a gaban kafaɗu biyu na efod kusa da mahaɗin a bisa abin ɗamarar efod.
21 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಆ ಎದೆಪದಕವನ್ನು ಏಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ ಎದೆಪದಕವು ಏಫೋದನ್ನು ಬಿಟ್ಟು ಅಲ್ಲಾಡದಂತೆಯೂ ಅದರ ಉಂಗುರಗಳ ಮೂಲಕವಾಗಿ ಏಫೋದಿನ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಿದರು.
Suka ɗaura zoban ƙyallen maƙalawa a ƙirjin a zoban efod da shuɗiyar igiya don ƙyallen maƙalawa a ƙirji, ya kwanta lif a bisa kan abin ɗamarar efod don kada yă kunce daga efod, sun yi yadda Ubangiji ya umarci Musa.
22 ಏಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ಬಟ್ಟೆಯಿಂದ ಮಾಡಿದರು. ಅದು ನೇಕಾರನ ಕೆಲಸವಾಗಿತ್ತು.
Suka kuma saƙa taguwa ta efod da shuɗi duka, aikin gwani mai saƙa,
23 ನಿಲುವಂಗಿಯ ರಂದ್ರ, ಕವಚದ ರಂದ್ರದ ಹಾಗೆ ಅದರ ಮಧ್ಯದಲ್ಲಿ ಇತ್ತು. ಅದು ಹರಿಯದ ಹಾಗೆ ಯುದ್ಧದ ಕವಚದೋಪಾದಿಯಲ್ಲಿ ಆ ರಂದ್ರದ ಸುತ್ತಲೂ ನೇಯ್ಗೆ ಪಟ್ಟಿ ಇತ್ತು.
an yi wa taguwar wuyan wundi a tsakiya kamar sulke, aka daje wuyan don kada yă kece.
24 ನಿಲುವಂಗಿಯ ಅಂಚಿನ ಮೇಲೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ದಾಳಿಂಬೆ ಹಣ್ಣಿನಂತೆ ಮಾಡಿದರು.
Suka yi fasalin’ya’yan rumman da shuɗi, da shunayya, da jan zare, da lallausan lilin kewaye da gefe-gefen taguwar.
25 ಶುದ್ಧ ಬಂಗಾರದ ಗಂಟೆಗಳನ್ನು ಮಾಡಿ, ಆ ಗಂಟೆಗಳನ್ನು ದಾಳಿಂಬೆಗಳ ನಡುವೆಯೇ ಇರಿಸಿದರು.
Suka yi ƙararrawa da zinariya zalla, suka sa su a tsakanin fasalin’ya’yan rumman kewaye da gefe-gefen taguwa.
26 ಒಂದು ಗೆಜ್ಜೆ, ಒಂದು ದಾಳಿಂಬೆಯಂತಿರುವ ಚೆಂಡನ್ನು ಒಂದಾದ ಮೇಲೆ ಒಂದು ಸೇವೆಗೋಸ್ಕರ ಮಾಡಿದ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.
Aka jera ƙararrawan da’ya’yan rumman bi da bi. Haka aka jera su kewaye da gefe-gefen taguwar aiki, yadda Ubangiji ya umarci Musa.
27 ಆರೋನನಿಗೆ ಹಾಗೂ ಅವನ ಮಕ್ಕಳಿಗೆ ನಯವಾದ ನಾರಿನಿಂದ ಹೊಸೆದ ಕೆಲಸದಿಂದ ಮಾಡಿದ ಮೇಲಂಗಿಗಳನ್ನೂ
Suka saƙa doguwar riga da lallausan lilin don Haruna da’ya’yansa, aikin gwani mai saƙa,
28 ನಯವಾದ ನಾರಿನಿಂದ ಮಾಡಿದ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ಹೊಸೆದ ನಯವಾದ ನಾರುಗಳಿಂದ ಮಾಡಿದ ಒಳಉಡುಪುಗಳನ್ನೂ
suka yi rawanin da lallausan lilin, da hulan lilin da rigunan ciki na lallausan lilin.
29 ನಯವಾದ ನಾರಿನಿಂದ ಹೊಸೆದ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಹೆಣಿಗೆಯ ಕೆಲಸದಿಂದ ನಡುಕಟ್ಟನ್ನೂ ಮಾಡಿದರು. ಇವುಗಳನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
Suka yi abin ɗamara da lallausan lilin da shuɗi, shunayya da jan zare, aikin gwanin mai ɗinki, yadda Ubangiji ya umarci Musa.
30 ಶುದ್ಧ ಬಂಗಾರದಿಂದ ಪರಿಶುದ್ಧ ಕಿರೀಟದ ತಗಡನ್ನು ಮಾಡಿ, ಮುದ್ರೆ ಕೆತ್ತುವ ಪ್ರಕಾರ ಅದರಲ್ಲಿ, “ಯೆಹೋವ ದೇವರಿಗೆ ಪರಿಶುದ್ಧ,” ಎಂದು ಕೆತ್ತಿಸಿದರು,
Suka yi allo tsattsarka da zinariya tsantsa, suka zāna rubutu irin na hatimi a kansa haka, Mai tsarki ga Ubangiji.
31 ಅದು ಮುಂಡಾಸದ ಮುಂಭಾಗದಲ್ಲಿರುವಂತೆ ಅದನ್ನು ನೀಲಿ ದಾರಿನಿಂದ ಕಟ್ಟಿಸಿದರು. ಇದನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು.
Sa’an nan suka ɗaura shi da shuɗiyar igiya a gaban rawanin, yadda Ubangiji ya umarci Musa.
32 ಈ ಪ್ರಕಾರ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರು ಅದರಂತೆಯೇ ಮಾಡಿದರು.
Ta haka aka gama dukan aikin tabanakul da Tentin Sujada. Isra’ilawa suka yi kome yadda Ubangiji ya umarci Musa.
33 ಆಗ ಅವರು ದೇವದರ್ಶನದ ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಮೇಲ್ಹೊದಿಕೆಯನ್ನು, ಅದರ ಎಲ್ಲಾ ಸಲಕರಣೆಗಳನ್ನು ಅದರ ಕೊಂಡಿಗಳನ್ನು, ಅದರ ಚೌಕಟ್ಟುಗಳನ್ನು, ಅದರ ಅಗುಳಿಗಳನ್ನು, ಅದರ ಸ್ತಂಭಗಳನ್ನು, ಅದರ ಕುಣಿಕೆಗಳನ್ನು,
Sa’an nan suka kawo wa Musa tabanakul, tentin da dukan kayayyakinsa, ƙugiyoyinsa, katakansa, da sandunansa, da dogayen sandunansa da rammukansa;
34 ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲುಹಂದಿಗಳ ಚರ್ಮಗಳ ಹೊದಿಕೆಗಳನ್ನು, ಮರೆಮಾಡುವ ಪರದೆಯನ್ನು,
murfi na fatun rago wanda aka rina ja, da murfi na fatun shanun teku; da kuma laɓulen
35 ಒಡಂಬಡಿಕೆಯ ಮಂಜೂಷನ್ನು, ಅದರ ಕೋಲುಗಳನ್ನು, ಕರುಣಾಸನವನ್ನು,
akwatin Alkawari da sandunansa da murfin kafara;
36 ಮೇಜನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು,
tebur da dukan kayayyakinsa, da burodin Kasancewa;
37 ಶುದ್ಧವಾದ ದೀಪಸ್ತಂಭವನ್ನು, ಅದರ ದೀಪಗಳನ್ನು, ಕ್ರಮವಾಗಿಡುವ ದೀಪಗಳನ್ನು, ಅದರ ಉಪಕರಣಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು,
wurin ajiye fitilu na zinariya zalla, da jerin fitilunsa da dukan kayayyakinsa, da man fitila,
38 ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು,
bagade na zinariya, da man shafewa, da turare mai ƙanshi, da labulen ƙofar shiga tenti,
39 ಬಲಿಪೀಠವನ್ನು, ಅದರೊಂದಿಗೆ ಕಂಚಿನ ಜಾಳಿಗೆಯನ್ನು, ಅದರ ಕೋಲುಗಳನ್ನು, ಅದರ ಎಲ್ಲಾ ಉಪಕರಣಗಳನ್ನು, ಕಂಚಿನ ಗಂಗಾಳವನ್ನು, ಅದರ ಕಾಲನ್ನು,
bagade na tagulla na raga, da sandunansa da kayan aikinsa; da daro da wurin ajiyarsa,
40 ದೇವದರ್ಶನದ ಗುಡಾರ ಅಂಗಳದ ಪರದೆಗಳನ್ನು, ಅದರ ಸ್ತಂಭಗಳನ್ನು, ಅದರ ಗದ್ದಿಗೇ ಕಲ್ಲುಗಳನ್ನು, ಅಂಗಳದ ಬಾಗಿಲಿನ ಪರದೆಗಳನ್ನು, ಅದರ ಹಗ್ಗಗಳನ್ನು, ಗುಡಾರದ ಗೂಟಗಳನ್ನು, ಸಭೆಯ ದೇವದರ್ಶನದ ಗುಡಾರಕ್ಕೆ ಬೇಕಾದ ಎಲ್ಲಾ ವಸ್ತುಗಳನ್ನು,
labulen filin, sandunansa da rammukansa, labulen ƙofar shiga filin; igiyoyi da ƙarafan kafa filin; dukan kayan aikin tabanakul da Tentin Sujada;
41 ಪರಿಶುದ್ಧಸ್ಥಳದ ಸೇವೆಗೋಸ್ಕರ ನೇಯ್ದ ಪರಿಶುದ್ಧ ವಸ್ತ್ರಗಳನ್ನು ಅಂದರೆ ಸೇವೆಮಾಡುವದಕ್ಕೆ ಯಾಜಕನಾದ ಆರೋನನಿಗೆ ಮತ್ತು ಅವನ ಪುತ್ರರಿಗೆ ಯಾಜಕವಸ್ತ್ರಗಳನ್ನು ತಂದರು.
da kuma saƙaƙƙun rigunan da ake sawa don hidima a wuri mai tsarki, duk da tsarkakan riguna na Haruna firist da rigunan’ya’yansa maza, sa’ad da suke hidima a matsayin firistoci.
42 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಇಸ್ರಾಯೇಲರು ಈ ಕೆಲಸಗಳನ್ನೆಲ್ಲಾ ಮಾಡಿದರು.
Isra’ilawa suka yi dukan aikin nan yadda Ubangiji ya umarci Musa.
43 ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ, ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.
Musa ya duba aikin, sai ya ga cewa sun yi shi daidai yadda Ubangiji ya umarta. Sai Musa ya sa musu albarka.

< ವಿಮೋಚನಕಾಂಡ 39 >