< ವಿಮೋಚನಕಾಂಡ 40 >
1 ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
फिर याहवेह ने मोशेह से कहा:
2 “ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು.
“पहले महीने के पहले दिन मिलनवाले तंबू के पवित्र स्थान को खड़ा कर देना.
3 ಒಡಂಬಡಿಕೆಯ ಮಂಜೂಷವನ್ನು ಅದರಲ್ಲಿ ಇಟ್ಟು, ಅದನ್ನು ನೀನು ಪರದೆಯಿಂದ ಮುಚ್ಚಬೇಕು.
उसमें साक्षी पत्र के संदूक को रखकर बीचवाले पर्दे के पीछे रख देना.
4 ಮೇಜನ್ನು ಒಳಗೆ ತಂದು, ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪಸ್ತಂಭವನ್ನು ಒಳಗೆ ತಂದು, ನೀನು ಅದರ ದೀಪಗಳನ್ನು ಅಂಟಿಸಬೇಕು.
मेज़ का सारा सामान लेकर उसे अंदर ले आना, फिर दीप स्तंभों को ले आना और दीयों को जला देना.
5 ನೀನು ಮಾಡಿದ ಚಿನ್ನದ ಧೂಪಪೀಠವನ್ನು ಒಡಂಬಡಿಕೆಯ ಮಂಜೂಷದ ಎದುರಾಗಿ ಇಟ್ಟು, ದೇವದರ್ಶನದ ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಬೇಕು.
साक्षी पत्र के संदूक के सामने सोने की वेदी को, जो धूप के लिए है, उसे रखना और पवित्र स्थान के पर्दे को लगा देना.
6 “ನೀನು ದಹನಬಲಿಯ ಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡಬೇಕು.
“और पवित्र स्थान के प्रवेश द्वार पर, अर्थात् मिलनवाले तंबू के सामने, होमबलि की वेदी को रखना.
7 ನೀನು ದೇವದರ್ಶನದ ಗುಡಾರಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಗಂಗಾಳವನ್ನಿಟ್ಟು, ಅದರಲ್ಲಿ ನೀರನ್ನು ತುಂಬಿಸಬೇಕು.
मिलनवाले तंबू और वेदी के बीच हौद में पानी भरकर रखना.
8 ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ಪರದೆಯನ್ನು ತೂಗು ಹಾಕಬೇಕು.
तुम इसके चारों तरफ आंगन बनाना और आंगन के द्वार पर पर्दा लगाना.
9 “ನೀನು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ, ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ, ಅದರಲ್ಲಿರುವ ಎಲ್ಲಾ ಸಾಮಗ್ರಿಗಳನ್ನೂ ಪರಿಶುದ್ಧ ಮಾಡು. ಆಗ ಅದು ಪರಿಶುದ್ಧವಾಗುವುದು.
“फिर अभिषेक का तेल लेकर पवित्र स्थान और जो कुछ उसमें हैं, सबका अभिषेक करना और पवित्र करना.
10 ದಹನಬಲಿಯ ಪೀಠವನ್ನೂ, ಅದರ ಎಲ್ಲಾ ಸಲಕರಣೆಗಳನ್ನೂ ನೀನು ಅಭಿಷೇಕಿಸಿ, ಬಲಿಪೀಠವನ್ನು ಪವಿತ್ರಮಾಡು. ಆಗ ಅದು ಅತಿಪರಿಶುದ್ಧವಾದ ಬಲಿಪೀಠವಾಗುವುದು.
तुम होमबलि की वेदी और उसके सब सामान को अभिषेक करना, तब वेदी महा पवित्र हो जायेगी.
11 ಗಂಗಾಳವನ್ನೂ, ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ, ಅದನ್ನು ಪ್ರತಿಷ್ಠಾಪನೆ ಮಾಡಬೇಕು.
और पाए समेत हौदी का भी अभिषेक करके पवित्र करना.
12 “ಆರೋನನನ್ನೂ, ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ, ಅವರನ್ನು ನೀರಿನಿಂದ ಸ್ನಾನ ಮಾಡಿಸಬೇಕು.
“फिर अहरोन एवं उनके पुत्रों को मिलनवाले तंबू के द्वार पर नहलाना.
13 ಆರೋನನು ನನಗೆ ಯಾಜಕ ಸೇವೆ ಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ, ಅವನನ್ನು ಶುದ್ಧಮಾಡಬೇಕು.
और अहरोन को पवित्र वस्त्र पहनाना, और उनका अभिषेक करके उनको पवित्र करना, ताकि वह मेरे लिए पुरोहित होकर मेरी सेवा करे.
14 ಅವನ ಪುತ್ರರನ್ನು ನೀನು ಬರಮಾಡಿಕೊಂಡು, ಅವರಿಗೆ ಅಂಗಿಗಳನ್ನು ತೊಡಿಸಿ,
फिर उनके पुत्रों को उनके वस्त्र पहनाना.
15 ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ, ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವರನ್ನೂ ನೀನು ಅಭಿಷೇಕಿಸು. ಅವರ ಈ ಅಭಿಷೇಕದಿಂದ ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವುದು,” ಎಂದು ಹೇಳಿದರು.
और उनका भी अभिषेक उसी प्रकार करना, जिस प्रकार उनके पिता का किया था, ताकि वे भी मेरी सेवा कर सकें. उनका यह अभिषेक उनकी पीढ़ी से पीढ़ी तक पुरोहित होकर मेरी सेवा का चिन्ह रहेगा.”
16 ಮೋಶೆಯು ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.
मोशेह ने सब काम वैसे ही किया, जैसा याहवेह ने उनको आज्ञा दी थी.
17 ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಗುಡಾರವು ಎದ್ದುನಿಂತಿತು.
दूसरे साल के पहले महीने के पहले दिन में पवित्र स्थान को खड़ा किया गया.
18 ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ, ಅದರ ಕಾಲುಗಳನ್ನು ಬಿಗಿದು, ಅದರ ಚೌಕಟ್ಟುಗಳನ್ನು ಇರಿಸಿ, ಅಗುಳಿಗಳನ್ನು ಹಾಕಿ, ಅದರ ಸ್ತಂಭಗಳನ್ನು ನಿಲ್ಲಿಸಿದನು.
मोशेह ने जब पवित्र स्थान को खड़ा किया, तब कुर्सियों पर तख्ते रखकर उनमें कड़े डाले और मीनारों को खड़ा किया.
19 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ, ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
मोशेह ने पवित्र स्थान के ऊपर तंबू बिछाया और तंबू के ऊपर ओढ़नी लगाई जैसे याहवेह ने मोशेह को आज्ञा दी थी.
20 ಅವನು ಆಜ್ಞಾಶಾಸನಗಳನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿಟ್ಟು, ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ, ಮಂಜೂಷದ ಮೇಲೆ ಕರುಣಾಸನವನ್ನು ಇಟ್ಟನು.
मोशेह ने साक्षी पट्टियों को संदूक में रखा और संदूक में डंडों को लगाकर उसके ऊपर करुणासन से ढंका.
21 ಅವನು ಮಂಜೂಷವನ್ನು ಗುಡಾರಕ್ಕೆ ತಂದು, ಮರೆಮಾಡುವ ಪರದೆಯನ್ನಿರಿಸಿ, ಒಡಂಬಡಿಕೆಯ ಮಂಜೂಷವನ್ನು ಮರೆಮಾಡಿದನು. ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಮೋಶೆಯು ಮಾಡಿದನು.
मोशेह ने संदूक को पवित्र स्थान में रखवाया और बीचवाले पर्दे को टांग दिया और साक्षी पत्र के संदूक को अंदर पर्दे की आड़ में किया, जैसे याहवेह ने मोशेह को आज्ञा दी थी.
22 ಅನಂತರ ಮೋಶೆ ದೇವದರ್ಶನದ ಗುಡಾರದ ಉತ್ತರ ಭಾಗದಲ್ಲಿ, ಪರದೆಯ ಹೊರಗೆ ಮೇಜನ್ನು ಇಟ್ಟನು.
फिर मिलनवाले तंबू में पवित्र स्थान के उत्तर दिशा पर बीच के पर्दे के बाहर मेज़ लगवाया.
23 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.
मेज़ पर मोशेह ने रोटियों को याहवेह के सम्मुख जमाया, जैसा याहवेह ने मोशेह को आज्ञा दी थी.
24 ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.
मोशेह ने मिलनवाले तंबू में मेज़ के सामने दक्षिण दिशा में दीपस्तंभ को रख दिया.
25 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಯೆಹೋವ ದೇವರ ಸನ್ನಿಧಿಯಲ್ಲಿ ದೀಪಗಳನ್ನು ಇರಿಸಿದನು.
और दीयों को याहवेह के सामने जला दिया, जैसा याहवेह ने मोशेह को आज्ञा दी थी.
26 ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ಪರದೆಯ ಮುಂದೆ ಇಟ್ಟನು.
फिर मोशेह ने मिलनवाले तंबू के भीतर, बीच के पर्दे के सामने, सोने की वेदी को रखा.
27 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.
और उस पर सुगंधित धूप जलाया, जैसा याहवेह ने मोशेह को आज्ञा दी थी.
28 ಗುಡಾರದ ಬಾಗಿಲಿನ ಪರದೆಯನ್ನು ತೂಗುಹಾಕಿದನು.
मोशेह ने फिर पवित्र स्थान के द्वार पर पर्दा लगाया,
29 ದೇವದರ್ಶನದ ಗುಡಾರದ ಬಳಿಯಲ್ಲಿ ದಹನಬಲಿಯ ಪೀಠವನ್ನು ಇಟ್ಟನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠ ಇಟ್ಟು ಅದರ ಮೇಲೆ ದಹನಬಲಿ ಮತ್ತು ಧಾನ್ಯ ಸಮರ್ಪಣೆಯನ್ನೂ ಅರ್ಪಿಸಿದನು.
और मिलनवाले तंबू के पवित्र स्थान के द्वार पर होमबलि की वेदी रखकर उस पर होमबलि और अन्नबलि चढ़ाई, जैसी याहवेह ने उन्हें आज्ञा दी थी.
30 ದೇವದರ್ಶನದ ಗುಡಾರಕ್ಕೂ, ಬಲಿಪೀಠಕ್ಕೂ ಮಧ್ಯ ಗಂಗಾಳವನ್ನು ಇಟ್ಟು, ಅದರಲ್ಲಿ ತೊಳೆಯುವುದಕ್ಕೆ ನೀರನ್ನು ತುಂಬಿಸಿದನು.
मिलनवाले तंबू और वेदी के बीच हौदी रखी, और उसमें पानी भर दिया.
31 ಮೋಶೆಯೂ, ಆರೋನನೂ, ಅವನ ಪುತ್ರರೂ ಅದರಲ್ಲಿ ಕೈಕಾಲುಗಳನ್ನು ತೊಳೆದುಕೊಂಡರು.
इसमें से पानी लेकर मोशेह, अहरोन तथा उनके पुत्र अपने हाथ एवं पांव धोते थे.
32 ಅವರು ದೇವದರ್ಶನದ ಗುಡಾರದ ಒಳಗೆ ಸೇರುವ ಸಮಯದಲ್ಲಿಯೂ, ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ಸ್ನಾನ ಮಾಡಿದರು.
जब भी वे मिलनवाले तंबू तथा वेदी के पास जाते थे, वे अपना हाथ-पांव धोकर ही जाते थे, जैसी याहवेह ने मोशेह को आज्ञा दी थी.
33 ಮೋಶೆಯು ಗುಡಾರಕ್ಕೂ, ಬಲಿಪೀಠಕ್ಕೂ ಸುತ್ತಲೂ ಅಂಗಳವನ್ನು ನಿಲ್ಲಿಸಿ, ಅಂಗಳದ ಬಾಗಿಲಿನ ಪರದೆಯನ್ನು ತೂಗುಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.
पवित्र स्थान और वेदी के चारों ओर आंगन बनाया और आंगन के द्वार पर पर्दा लगाया. इस प्रकार मोशेह ने काम पूरा किया.
34 ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿಕೊಂಡಿತು.
तब बादल मिलनवाले तंबू पर फैल गया और याहवेह का तेज पवित्र स्थान में भर गया.
35 ದೇವದರ್ಶನದ ಗುಡಾರದ ಮೇಲೆ ಮೇಘವು ನೆಲೆಯಾಗಿದ್ದದರಿಂದಲೂ, ಯೆಹೋವ ದೇವರು ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿದ್ದರಿಂದಲೂ, ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
मोशेह तंबू में न जा सके, क्योंकि मिलनवाले तंबू के ऊपर बादल था और याहवेह का तेज पवित्र स्थान में भरा हुआ था.
36 ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ, ಇಸ್ರಾಯೇಲರು ತಮ್ಮ ಪ್ರಯಾಣಕ್ಕಾಗಿ ಮುಂದೆ ಹೊರಡುತ್ತಿದ್ದರು.
इस्राएलियों की पूरी यात्रा में, जब-जब बादल पवित्र स्थान के ऊपर से उठता, तब-तब वे वहां से निकलते.
37 ಆದರೆ ಮೇಘವು ಮೇಲಕ್ಕೆ ಎತ್ತದೇ ಇರುವಾಗ ಅದು ಎತ್ತುವ ದಿವಸದವರೆಗೆ ಅವರು ಪ್ರಯಾಣ ಮಾಡಲಿಲ್ಲ.
अगर बादल पवित्र स्थान से नहीं हटता, तब तक इस्राएली लोग कुछ नहीं करते; जब तक बादल उठ नहीं जाता.
38 ಏಕೆಂದರೆ ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿ ಅವರ ಕಣ್ಣುಗಳ ಮುಂದೆ ಹಗಲಿನಲ್ಲಿ ಯೆಹೋವ ದೇವರ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು.
इस्राएलियों की सारी यात्राओं में याहवेह उनके लिए दिन में पवित्र स्थान के ऊपर बादल से उनको छाया देते, और रात में बादल में आग से उन्हें रोशनी दिखाई देती थी.