< ವಿಮೋಚನಕಾಂಡ 7 >

1 ಆಗ ಯೆಹೋವ ದೇವರು ಮೋಶೆಗೆ, “ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ. ನಿನ್ನ ಸಹೋದರನಾದ ಆರೋನನು ನಿನ್ನ ಪ್ರವಾದಿಯಾಗಿರುವನು.
וַיֹּ֤אמֶר יְהוָה֙ אֶל־מֹשֶׁ֔ה רְאֵ֛ה נְתַתִּ֥יךָ אֱלֹהִ֖ים לְפַרְעֹ֑ה וְאַהֲרֹ֥ן אָחִ֖יךָ יִהְיֶ֥ה נְבִיאֶֽךָ׃
2 ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ನೀನು ಮಾತನಾಡಬೇಕು. ಇಸ್ರಾಯೇಲರನ್ನು ತನ್ನ ದೇಶದೊಳಗಿಂದ ಕಳುಹಿಸಿಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.
אַתָּ֣ה תְדַבֵּ֔ר אֵ֖ת כָּל־אֲשֶׁ֣ר אֲצַוֶּ֑ךָּ וְאַהֲרֹ֤ן אָחִ֙יךָ֙ יְדַבֵּ֣ר אֶל־פַּרְעֹ֔ה וְשִׁלַּ֥ח אֶת־בְּנֵֽי־יִשְׂרָאֵ֖ל מֵאַרְצֽוֹ׃
3 ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ, ನನ್ನ ಸೂಚಕಕಾರ್ಯಗಳನ್ನೂ, ನನ್ನ ಅದ್ಭುತಕಾರ್ಯಗಳನ್ನೂ ಈಜಿಪ್ಟ್ ದೇಶದಲ್ಲಿ ಹೆಚ್ಚಿಸುವೆನು.
וַאֲנִ֥י אַקְשֶׁ֖ה אֶת־לֵ֣ב פַּרְעֹ֑ה וְהִרְבֵּיתִ֧י אֶת־אֹתֹתַ֛י וְאֶת־מוֹפְתַ֖י בְּאֶ֥רֶץ מִצְרָֽיִם׃
4 ಆದರೆ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆದರೆ ನನ್ನ ಕೈಯನ್ನು ಈಜಿಪ್ಟಿನ ಮೇಲೆ ಇಟ್ಟು, ದೊಡ್ಡ ನ್ಯಾಯ ತೀರ್ಪುಗಳಿಂದ ನನ್ನ ಜನರಾದ ಇಸ್ರಾಯೇಲರನ್ನೂ, ಅವರ ಸೈನ್ಯಗಳನ್ನೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡುವೆನು.
וְלֹֽא־יִשְׁמַ֤ע אֲלֵכֶם֙ פַּרְעֹ֔ה וְנָתַתִּ֥י אֶת־יָדִ֖י בְּמִצְרָ֑יִם וְהוֹצֵאתִ֨י אֶת־צִבְאֹתַ֜י אֶת־עַמִּ֤י בְנֵֽי־יִשְׂרָאֵל֙ מֵאֶ֣רֶץ מִצְרַ֔יִם בִּשְׁפָטִ֖ים גְּדֹלִֽים׃
5 ನಾನು ಈಜಿಪ್ಟಿನ ಮೇಲೆ ನನ್ನ ಕೈಯನ್ನಿಟ್ಟು, ಅವರೊಳಗಿಂದ ಇಸ್ರಾಯೇಲರನ್ನು ಹೊರಗೆ ಬರಮಾಡಿದಾಗ, ನಾನು ಯೆಹೋವ ದೇವರೆಂದು ಈಜಿಪ್ಟಿನವರಿಗೆ ತಿಳಿದುಬರುವುದು,” ಎಂದು ಹೇಳಿದರು.
וְיָדְע֤וּ מִצְרַ֙יִם֙ כִּֽי־אֲנִ֣י יְהוָ֔ה בִּנְטֹתִ֥י אֶת־יָדִ֖י עַל־מִצְרָ֑יִם וְהוֹצֵאתִ֥י אֶת־בְּנֵֽי־יִשְׂרָאֵ֖ל מִתּוֹכָֽם׃
6 ಮೋಶೆಯೂ ಆರೋನನೂ ಯೆಹೋವ ದೇವರು ತಮಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು.
וַיַּ֥עַשׂ מֹשֶׁ֖ה וְאַהֲרֹ֑ן כַּאֲשֶׁ֨ר צִוָּ֧ה יְהוָ֛ה אֹתָ֖ם כֵּ֥ן עָשֽׂוּ׃
7 ಅವರು ಫರೋಹನ ಮುಂದೆ ಮಾತನಾಡುವಾಗ ಮೋಶೆಯು ಎಂಬತ್ತು ವರ್ಷದವನೂ ಆರೋನನು ಎಂಬತ್ತಮೂರು ವರ್ಷದವನೂ ಆಗಿದ್ದನು.
וּמֹשֶׁה֙ בֶּן־שְׁמֹנִ֣ים שָׁנָ֔ה וְאַֽהֲרֹ֔ן בֶּן־שָׁלֹ֥שׁ וּשְׁמֹנִ֖ים שָׁנָ֑ה בְּדַבְּרָ֖ם אֶל־פַּרְעֹֽה׃ פ
8 ಆಗ ಯೆಹೋವ ದೇವರು ಮಾತನಾಡಿ ಮೋಶೆಗೂ ಆರೋನನಿಗೂ,
וַיֹּ֣אמֶר יְהוָ֔ה אֶל־מֹשֶׁ֥ה וְאֶֽל־אַהֲרֹ֖ן לֵאמֹֽר׃
9 “ಫರೋಹನು ನಿಮಗೆ, ‘ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರಿ,’ ಎಂದಾಗ ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಫರೋಹನ ಮುಂದೆ ಬಿಸಾಡು,’ ಎಂದು ಹೇಳು, ಆಗ ಅದು ಸರ್ಪವಾಗುವುದು,” ಎಂದು ಹೇಳಿದರು.
כִּי֩ יְדַבֵּ֨ר אֲלֵכֶ֤ם פַּרְעֹה֙ לֵאמֹ֔ר תְּנ֥וּ לָכֶ֖ם מוֹפֵ֑ת וְאָמַרְתָּ֣ אֶֽל־אַהֲרֹ֗ן קַ֧ח אֶֽת־מַטְּךָ֛ וְהַשְׁלֵ֥ךְ לִפְנֵֽי־פַרְעֹ֖ה יְהִ֥י לְתַנִּֽין׃
10 ಆಗ ಮೋಶೆಯೂ ಆರೋನನೂ ಫರೋಹನ ಬಳಿಗೆ ಹೋಗಿ ಯೆಹೋವ ದೇವರು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹ ಮತ್ತು ಅವನ ಸೇವಕರ ಮುಂದೆಯೂ ಬಿಸಾಡಿದಾಗ, ಅದು ಸರ್ಪವಾಯಿತು.
וַיָּבֹ֨א מֹשֶׁ֤ה וְאַהֲרֹן֙ אֶל־פַּרְעֹ֔ה וַיַּ֣עַשׂוּ כֵ֔ן כַּאֲשֶׁ֖ר צִוָּ֣ה יְהוָ֑ה וַיַּשְׁלֵ֨ךְ אַהֲרֹ֜ן אֶת־מַטֵּ֗הוּ לִפְנֵ֥י פַרְעֹ֛ה וְלִפְנֵ֥י עֲבָדָ֖יו וַיְהִ֥י לְתַנִּֽין׃
11 ಫರೋಹನು ಜ್ಞಾನಿಗಳನ್ನೂ, ಮಂತ್ರವಾದಿಗಳನ್ನೂ ಕರೆಸಿದನು. ಆಗ ಈಜಿಪ್ಟಿನ ಮಂತ್ರಗಾರರೂ ಸಹ ತಮ್ಮ ಮಾಟಗಳಿಂದ ಹಾಗೆಯೇ ಮಾಡಿದರು.
וַיִּקְרָא֙ גַּם־פַּרְעֹ֔ה לַֽחֲכָמִ֖ים וְלַֽמְכַשְּׁפִ֑ים וַיַּֽעֲשׂ֨וּ גַם־הֵ֜ם חַרְטֻמֵּ֥י מִצְרַ֛יִם בְּלַהֲטֵיהֶ֖ם כֵּֽן׃
12 ಅವರು ತಮ್ಮ ತಮ್ಮ ಕೋಲುಗಳನ್ನು ಬಿಸಾಡಿದಾಗ, ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
וַיַּשְׁלִ֙יכוּ֙ אִ֣ישׁ מַטֵּ֔הוּ וַיִּהְי֖וּ לְתַנִּינִ֑ם וַיִּבְלַ֥ע מַטֵּֽה־אַהֲרֹ֖ן אֶת־מַטֹּתָֽם׃
13 ಯೆಹೋವ ದೇವರು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತನ್ನು ಕೇಳಲಿಲ್ಲ.
וַיֶּחֱזַק֙ לֵ֣ב פַּרְעֹ֔ה וְלֹ֥א שָׁמַ֖ע אֲלֵהֶ֑ם כַּאֲשֶׁ֖ר דִּבֶּ֥ר יְהוָֽה׃ פ
14 ಆಗ ಯೆಹೋವ ದೇವರು ಮೋಶೆಗೆ, “ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವುದಕ್ಕೆ ನಿರಾಕರಿಸುತ್ತಿದ್ದಾನೆ.
וַיֹּ֤אמֶר יְהוָה֙ אֶל־מֹשֶׁ֔ה כָּבֵ֖ד לֵ֣ב פַּרְעֹ֑ה מֵאֵ֖ן לְשַׁלַּ֥ח הָעָֽם׃
15 ಬೆಳಿಗ್ಗೆ ಫರೋಹನ ಬಳಿಗೆ ಹೋಗು. ಅವನು ಹೊರಗೆ ನದಿಯ ಬಳಿಗೆ ಹೋಗುವನು. ಆಗ ನೈಲ್ ನದಿ ತೀರದಲ್ಲಿ ಅವನೆದುರಿಗೆ ನಿಂತುಕೊಂಡು, ಸರ್ಪವಾಗಿ ಮಾಡಿದ ಕೋಲನ್ನು ನಿನ್ನ ಕೈಯಲ್ಲಿ ಹಿಡಿದುಕೊಂಡಿರು.
לֵ֣ךְ אֶל־פַּרְעֹ֞ה בַּבֹּ֗קֶר הִנֵּה֙ יֹצֵ֣א הַמַּ֔יְמָה וְנִצַּבְתָּ֥ לִקְרָאת֖וֹ עַל־שְׂפַ֣ת הַיְאֹ֑ר וְהַמַּטֶּ֛ה אֲשֶׁר־נֶהְפַּ֥ךְ לְנָחָ֖שׁ תִּקַּ֥ח בְּיָדֶֽךָ׃
16 ಅವನಿಗೆ ನೀನು, ‘ಹಿಬ್ರಿಯರ ದೇವರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ಮರುಭೂಮಿಯಲ್ಲಿ ನನಗೆ ಆರಾಧನೆ ಮಾಡುವ ಹಾಗೆ ನನ್ನ ಜನರನ್ನು ಕಳುಹಿಸು, ಎಂದು ಅವರು ಹೇಳಿದ್ದಾರೆ. ಆದರೆ ಇಗೋ, ಇಂದಿನವರೆಗೂ ನೀನು ಕೇಳಲಿಲ್ಲ.
וְאָמַרְתָּ֣ אֵלָ֗יו יְהוָ֞ה אֱלֹהֵ֤י הָעִבְרִים֙ שְׁלָחַ֤נִי אֵלֶ֙יךָ֙ לֵאמֹ֔ר שַׁלַּח֙ אֶת־עַמִּ֔י וְיַֽעַבְדֻ֖נִי בַּמִּדְבָּ֑ר וְהִנֵּ֥ה לֹא־שָׁמַ֖עְתָּ עַד־כֹּֽה׃
17 ಆದುದರಿಂದ ಯೆಹೋವ ದೇವರು ಮತ್ತೆ ನಿನಗೆ ಹೇಳುವುದೇನೆಂದರೆ: ನಾನೇ ಯೆಹೋವ ದೇವರೆಂದು ನೀನು ಇದರಿಂದ ತಿಳಿದುಕೊಳ್ಳುವೆ. ನನ್ನ ಕೈಯಲ್ಲಿರುವ ಕೋಲಿನಿಂದ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯುವೆನು, ಆಗ ಅದು ರಕ್ತವಾಗುವುದು.
כֹּ֚ה אָמַ֣ר יְהוָ֔ה בְּזֹ֣את תֵּדַ֔ע כִּ֖י אֲנִ֣י יְהוָ֑ה הִנֵּ֨ה אָנֹכִ֜י מַכֶּ֣ה ׀ בַּמַּטֶּ֣ה אֲשֶׁר־בְּיָדִ֗י עַל־הַמַּ֛יִם אֲשֶׁ֥ר בַּיְאֹ֖ר וְנֶהֶפְכ֥וּ לְדָֽם׃
18 ನದಿಯಲ್ಲಿರುವ ಮೀನುಗಳು ಸಾಯುವುವು. ನೈಲ್ ನದಿಯು ಹೊಲಸಾಗಿ ನಾರುವುದು. ಈಜಿಪ್ಟಿನವರು ನದಿಯ ನೀರನ್ನು ಕುಡಿಯುವುದಕ್ಕೆ ಅಸಹ್ಯಪಡುವರು,’ ಎಂದು ಹೇಳು,” ಎಂದರು.
וְהַדָּגָ֧ה אֲשֶׁר־בַּיְאֹ֛ר תָּמ֖וּת וּבָאַ֣שׁ הַיְאֹ֑ר וְנִלְא֣וּ מִצְרַ֔יִם לִשְׁתּ֥וֹת מַ֖יִם מִן־הַיְאֹֽר׃ ס
19 ಅನಂತರ ಯೆಹೋವ ದೇವರು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಈಜಿಪ್ಟಿನ ನೀರಿನ ಮೇಲೆಯೂ ಅದರ ನದಿಗಳ ಮೇಲೆಯೂ ಕೊಳಗಳ ಮೇಲೆಯೂ ಅದರ ಕಾಲುವೆ ಮೇಲೆಯೂ ಅದರ ಕೆರೆಗಳ ಮೇಲೆಯೂ ಕೈಚಾಚು,’ ಎಂದು ಹೇಳು. ಆಗ ಅವು ರಕ್ತವಾಗುವುವು. ಈಜಿಪ್ಟ್ ದೇಶದಲ್ಲಿ ನೀರಿರುವ ಮರದ ತೊಟ್ಟಿಗಳಲ್ಲಾಗಲೀ, ಕಲ್ಲಿನ ಪಾತ್ರೆಗಳಲ್ಲಾಗಲೀ ರಕ್ತವಿರುವುದು,” ಎಂದು ಹೇಳಿದರು.
וַיֹּ֨אמֶר יְהוָ֜ה אֶל־מֹשֶׁ֗ה אֱמֹ֣ר אֶֽל־אַהֲרֹ֡ן קַ֣ח מַטְּךָ֣ וּנְטֵֽה־יָדְךָ֩ עַל־מֵימֵ֨י מִצְרַ֜יִם עַֽל־נַהֲרֹתָ֣ם ׀ עַל־יְאֹרֵיהֶ֣ם וְעַל־אַגְמֵיהֶ֗ם וְעַ֛ל כָּל־מִקְוֵ֥ה מֵימֵיהֶ֖ם וְיִֽהְיוּ־דָ֑ם וְהָ֤יָה דָם֙ בְּכָל־אֶ֣רֶץ מִצְרַ֔יִם וּבָעֵצִ֖ים וּבָאֲבָנִֽים׃
20 ಮೋಶೆಯೂ ಆರೋನನೂ ಯೆಹೋವ ದೇವರು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಫರೋಹನ ಮುಂದೆಯೂ, ಅವನ ಸೇವಕರ ಮುಂದೆಯೂ ಹೊಡೆದನು. ಆಗ ನದಿಯಲ್ಲಿದ್ದ ನೀರೆಲ್ಲಾ ರಕ್ತವಾಯಿತು.
וַיַּֽעֲשׂוּ־כֵן֩ מֹשֶׁ֨ה וְאַהֲרֹ֜ן כַּאֲשֶׁ֣ר ׀ צִוָּ֣ה יְהוָ֗ה וַיָּ֤רֶם בַּמַּטֶּה֙ וַיַּ֤ךְ אֶת־הַמַּ֙יִם֙ אֲשֶׁ֣ר בַּיְאֹ֔ר לְעֵינֵ֣י פַרְעֹ֔ה וּלְעֵינֵ֖י עֲבָדָ֑יו וַיֵּהָֽפְכ֛וּ כָּל־הַמַּ֥יִם אֲשֶׁר־בַּיְאֹ֖ר לְדָֽם׃
21 ನದಿಯಲ್ಲಿದ್ದ ಮೀನುಗಳು ಸತ್ತವು, ನದಿಯು ದುರ್ವಾಸನೆಗೊಂಡಿತು. ಈಜಿಪ್ಟಿನವರು ನೈಲ್ ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಈಜಿಪ್ಟ್ ದೇಶದಲ್ಲೆಲ್ಲಾ ರಕ್ತವಿತ್ತು.
וְהַדָּגָ֨ה אֲשֶׁר־בַּיְאֹ֥ר מֵ֙תָה֙ וַיִּבְאַ֣שׁ הַיְאֹ֔ר וְלֹא־יָכְל֣וּ מִצְרַ֔יִם לִשְׁתּ֥וֹת מַ֖יִם מִן־הַיְאֹ֑ר וַיְהִ֥י הַדָּ֖ם בְּכָל־אֶ֥רֶץ מִצְרָֽיִם׃
22 ಆದರೆ ಈಜಿಪ್ಟಿನ ಮಂತ್ರಗಾರರು ತಮ್ಮ ಮಾಟಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಯೆಹೋವ ದೇವರು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
וַיַּֽעֲשׂוּ־כֵ֛ן חַרְטֻמֵּ֥י מִצְרַ֖יִם בְּלָטֵיהֶ֑ם וַיֶּחֱזַ֤ק לֵב־פַּרְעֹה֙ וְלֹא־שָׁמַ֣ע אֲלֵהֶ֔ם כַּאֲשֶׁ֖ר דִּבֶּ֥ר יְהוָֽה׃
23 ಫರೋಹನು ತಿರುಗಿಕೊಂಡು ತನ್ನ ಅರಮನೆಗೆ ಹಿಂದಿರುಗಿದನು. ಅವನು ಈ ಅದ್ಭುತಕ್ಕೂ ಗಮನಕೊಡಲಿಲ್ಲ.
וַיִּ֣פֶן פַּרְעֹ֔ה וַיָּבֹ֖א אֶל־בֵּית֑וֹ וְלֹא־שָׁ֥ת לִבּ֖וֹ גַּם־לָזֹֽאת׃
24 ಆದರೆ ಈಜಿಪ್ಟಿನವರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ, ಕುಡಿಯುವ ನೀರಿಗಾಗಿ ನೈಲ್ ನದಿಯ ಸುತ್ತಲೂ ಅಗೆದರು.
וַיַּחְפְּר֧וּ כָל־מִצְרַ֛יִם סְבִיבֹ֥ת הַיְאֹ֖ר מַ֣יִם לִשְׁתּ֑וֹת כִּ֣י לֹ֤א יָֽכְלוּ֙ לִשְׁתֹּ֔ת מִמֵּימֵ֖י הַיְאֹֽר׃
25 ಯೆಹೋವ ದೇವರು ನೈಲ್ ನದಿಯನ್ನು ರಕ್ತವನ್ನಾಗಿ ಮಾಡಿ ಏಳು ದಿನಗಳು ಕಳೆದವು.
וַיִּמָּלֵ֖א שִׁבְעַ֣ת יָמִ֑ים אַחֲרֵ֥י הַכּוֹת־יְהוָ֖ה אֶת־הַיְאֹֽר׃ פ

< ವಿಮೋಚನಕಾಂಡ 7 >