< ವಿಮೋಚನಕಾಂಡ 9 >

1 ಅನಂತರ ಯೆಹೋವ ದೇವರು ಮೋಶೆಗೆ ಹೇಳಿದ್ದೇನಂದರೆ, “ಫರೋಹನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಕಳುಹಿಸು.”
Then the Lord said to Moses, Go in to Pharaoh and say to him, This is what the Lord, the God of the Hebrews, says: Let my people go so that they may give me worship.
2 ಅವರನ್ನು ಕಳುಹಿಸುವುದಕ್ಕೆ ನಿರಾಕರಿಸಿ ಇನ್ನೂ ತಡೆದರೆ,
For if you will not let them go, but still keep them in your power,
3 ಯೆಹೋವ ದೇವರ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವುದು. ಕುದುರೆ, ಕತ್ತೆ, ಒಂಟೆ, ಎತ್ತು, ಕುರಿ, ಆಡು ಇವುಗಳ ಮೇಲೆ ಕಠಿಣವಾದ ಉಪದ್ರವ ಬರುವುದು.
Then the hand of the Lord will put on your cattle in the field, on the horses and the asses and the camels, on the herds and the flocks, a very evil disease.
4 ಯೆಹೋವ ದೇವರು ಇಸ್ರಾಯೇಲರ ಪಶುಗಳನ್ನೂ ಈಜಿಪ್ಟಿನವರ ಪಶುಗಳನ್ನೂ ವಿಂಗಡಿಸುವರು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯುವುದಿಲ್ಲ,’” ಎಂದರು.
And the Lord will make a division between the cattle of Israel and the cattle of Egypt; there will be no loss of any of the cattle of Israel.
5 ಇದಲ್ಲದೆ ಯೆಹೋವ ದೇವರು, “ನಿರ್ದಿಷ್ಟವಾದ ಒಂದು ಸಮಯವನ್ನು ನೇಮಿಸಿ, ನಾಳೆ ಯೆಹೋವ ದೇವರು ಈ ಕಾರ್ಯವನ್ನು ಈ ದೇಶದಲ್ಲಿ ಮಾಡುವರು, ಎಂದು ಹೇಳು,” ಎಂದರು.
And the time was fixed by the Lord, and he said, Tomorrow the Lord will do this thing in the land.
6 ಮಾರನೆಯ ದಿನವೇ ಯೆಹೋವ ದೇವರು ಆ ಕಾರ್ಯವನ್ನು ಮಾಡಲಾರಂಭಿಸಿದರು. ಈಜಿಪ್ಟಿನ ಪಶುಗಳೆಲ್ಲಾ ಸತ್ತು ಹೋದವು. ಆದರೆ ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.
And on the day after, the Lord did as he had said, causing the death of all the cattle of Egypt, but there was no loss of any of the cattle of Israel.
7 ಫರೋಹನು ಆಳುಗಳನ್ನು ಕಳುಹಿಸಿ ನೋಡಿದಾಗ, ಇಸ್ರಾಯೇಲರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದುದರಿಂದ ಅವನು ಜನರನ್ನು ಹೋಗಗೊಡಿಸಲಿಲ್ಲ.
And Pharaoh sent and got word that there was no loss of any of the cattle of Israel. But the heart of Pharaoh was hard and he did not let the people go.
8 ಆಗ ಯೆಹೋವ ದೇವರು ಮೋಶೆ ಆರೋನರಿಗೆ, “ಕೈತುಂಬಾ ಒಲೆಯ ಬೂದಿಯನ್ನು ತೆಗೆದುಕೊಳ್ಳಿರಿ. ಅದನ್ನು ಮೋಶೆಯು ಫರೋಹನ ಮುಂದೆ ಆಕಾಶದ ಕಡೆಗೆ ತೂರಲಿ.
And the Lord said to Moses and to Aaron, Take in your hand a little dust from the fire and let Moses send it in a shower up to heaven before the eyes of Pharaoh.
9 ಆಗ ಅದು ಈಜಿಪ್ಟ್ ದೇಶದಲ್ಲೆಲ್ಲಾ ಪುಡಿಯಾಗುವುದು. ಅದು ಈಜಿಪ್ಟ್ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವುದು,” ಎಂದು ಹೇಳಿದರು.
And it will become small dust over all the land of Egypt, and will be a skin-disease bursting out in wounds on man and beast through all the land of Egypt.
10 ಆಗ ಅವರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗುವಂಥ ಬೊಕ್ಕೆಗಳಾದವು.
So they took some dust from the fire, and placing themselves before Pharaoh, Moses sent it out in a shower up to heaven; and it became a skin-disease bursting out on man and on beast.
11 ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ ಈಜಿಪ್ಟಿನವರ ಮೇಲೆಯೂ ಇದ್ದವು.
And the wonder-workers were not able to take their places before Moses, because of the disease; for the disease was on the wonder-workers and on all the Egyptians.
12 ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದರು. ಯೆಹೋವ ದೇವರು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
And the Lord made Pharaoh's heart hard, and he would not give ear to them, as the Lord had said.
13 ಯೆಹೋವ ದೇವರು ಮೋಶೆಗೆ, “ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನನ್ನು ಅವರು ಆರಾಧಿಸುವ ಹಾಗೆ ನನ್ನ ಜನರನ್ನು ಕಳುಹಿಸು.
And the Lord said to Moses, Get up early in the morning and take your place before Pharaoh, and say to him, This is what the Lord, the God of the Hebrews, says: Let my people go so that they may give me worship.
14 ಭೂಲೋಕದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ಈ ಸಾರಿ ನಾನು ಎಲ್ಲಾ ಉಪದ್ರವಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡುವೆನು.
For this time I will send all my punishments on yourself and on your servants and on your people; so that you may see that there is no other like me in all the earth.
15 ಈಗ ನನ್ನ ಕೈಚಾಚಿ ನಿನ್ನನ್ನೂ, ನಿನ್ನ ಜನರನ್ನೂ ಉಪದ್ರವದಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.
For if I had put the full weight of my hand on you and your people, you would have been cut off from the earth:
16 ಆದರೆ ನಿಶ್ಚಯವಾಗಿ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.
But, for this very reason, I have kept you from destruction, to make clear to you my power, and so that my name may be honoured through all the earth.
17 ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?
Are you still uplifted in pride against my people so that you will not let them go?
18 ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ಮಹಾ ಕಠಿಣವಾದ ಆಲಿಕಲ್ಲಿನ ಮಳೆಯನ್ನು ಬೀಳುವಂತೆ ಮಾಡುವೆನು. ಅಂಥದ್ದು ಈಜಿಪ್ಟಿನಲ್ಲಿ, ಅದರ ರಾಜ್ಯವು ಸ್ಥಾಪಿತವಾದಂದಿನಿಂದ ಇಲ್ಲಿಯವರೆಗೂ ಆಗಿಲ್ಲ.
Truly, tomorrow about this time I will send down an ice-storm, such as never was in Egypt from its earliest days till now.
19 ಹೀಗಿರುವುದರಿಂದ ಯಾರನ್ನಾದರೂ ಕಳುಹಿಸಿ ನಿನ್ನ ಪಶುಗಳನ್ನೂ, ಹೊಲದಲ್ಲಿ ನಿನಗಿರುವವುಗಳನ್ನೂ ಭದ್ರಪಡಿಸು. ಏಕೆಂದರೆ ಮನೆಗಳಿಗೆ ಬಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಆಲಿಕಲ್ಲಿನ ಮಳೆಯು ಸುರಿದು ಕೊಲ್ಲುವುದು,’ ಎಂದು ಹೇಳು,” ಎಂದರು.
Then send quickly and get in your cattle and all you have from the fields; for if any man or beast in the field has not been put under cover, the ice-storm will come down on them with destruction.
20 ಆಗ ಫರೋಹನ ಸೇವಕರಲ್ಲಿ ಯೆಹೋವ ದೇವರ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿ ಬರುವಂತೆ ಮಾಡಿದರು.
Then everyone among the servants of Pharaoh who had the fear of the Lord, made his servants and his cattle come quickly into the house:
21 ಆದರೆ ಯೆಹೋವ ದೇವರ ವಾಕ್ಯಕ್ಕೆ ಮನಸ್ಸು ಕೊಡದವರು, ತಮ್ಮ ದಾಸರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.
And he who gave no attention to the word of the Lord, kept his servants and his cattle in the field.
22 ಆಗ ಯೆಹೋವ ದೇವರು ಮೋಶೆಗೆ, “ಆಕಾಶದ ಕಡೆಗೆ ನಿನ್ನ ಕೈಚಾಚು. ಈಜಿಪ್ಟ್ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಈಜಿಪ್ಟ್ ದೇಶದಲ್ಲಿ ಇರುವ ಎಲ್ಲಾ ಹೊಲದ ಬೆಳೆಯ ಮೇಲೆಯೂ ಆಲಿಕಲ್ಲಿನ ಮಳೆ ಸುರಿಯುವುದು,” ಎಂದು ಪ್ರಕಟಪಡಿಸಿದರು.
And the Lord said to Moses, Now let your hand be stretched out to heaven so that there may be an ice-storm on all the land of Egypt, on man and on beast and on every plant of the field through all the land of Egypt.
23 ಮೋಶೆಯು ಆಕಾಶದ ಕಡೆಗೆ ತನ್ನ ಕೋಲನ್ನು ಚಾಚಿದನು. ಆಗ ಯೆಹೋವ ದೇವರು ಗುಡುಗುಗಳನ್ನೂ ಆಲಿಕಲ್ಲಿನ ಮಳೆಯನ್ನೂ ಸುರಿಸಿದರು. ಸಿಡಿಲು ನೆಲಕ್ಕೆ ಬಡಿಯಿತು. ಸಿಡಿಲಿನ ಆರ್ಭಟದೊಂದಿಗೆ ಯೆಹೋವ ದೇವರು ಈಜಿಪ್ಟ್ ದೇಶದ ಮೇಲೆ ಆಲಿಕಲ್ಲಿನ ಮಳೆಯನ್ನು ಸುರಿಸಿದರು.
And Moses put out his rod to heaven: and the Lord sent thunder, and an ice-storm, and fire running down on the earth; the Lord sent an ice-storm on the land of Egypt.
24 ಸಿಡಿಲಿನ ಆರ್ಭಟದೊಂದಿಗೆ ಕಠಿಣವಾದ ಆಲಿಕಲ್ಲಿನ ಮಳೆಯೂ ಸುರಿಯಿತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಅಂಥ ಘೋರವಾದ ಆಲಿಕಲ್ಲಿನ ಮಳೆಯೂ ಆ ದೇಶದಲ್ಲಿ ಆಗಿರಲಿಲ್ಲ.
So there was an ice-storm with fire running through it, coming down with great force, such as never was in all the land of Egypt from the time when it became a nation.
25 ಆ ಆಲಿಕಲ್ಲಿನ ಮಳೆಯು ಈಜಿಪ್ಟ್ ದೇಶದಲ್ಲೆಲ್ಲಾ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ ಹೊಲದಲ್ಲಿ ಇದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳು ಮಾಡಿ, ಎಲ್ಲಾ ಮರಗಳನ್ನು ಮುರಿದುಹಾಕಿತು.
And through all the land of Egypt the ice-storm came down on everything which was in the fields, on man and on beast; and every green plant was crushed and every tree of the field broken.
26 ಇಸ್ರಾಯೇಲರು ಇದ್ದ ಗೋಷೆನ್ ಪ್ರಾಂತದಲ್ಲಿ ಆಲಿಕಲ್ಲಿನ ಮಳೆಯು ಇರಲಿಲ್ಲ.
Only in the land of Goshen, where the children of Israel were, there was no ice-storm.
27 ಆಗ ಫರೋಹನು ಮೋಶೆ ಆರೋನರನ್ನು ಕರೆಕಳುಹಿಸಿ ಅವರಿಗೆ, “ಈ ಸಲ ನಾನು ಪಾಪಮಾಡಿದ್ದೇನೆ, ಯೆಹೋವ ದೇವರು ನೀತಿವಂತನು. ಆದರೆ ನಾನೂ, ನನ್ನ ಜನರೂ ತಪ್ಪಿತಸ್ಥರು.
Then Pharaoh sent for Moses and Aaron, and said to them, I have done evil this time: the Lord is upright, and I and my people are sinners.
28 ಆದ್ದರಿಂದ ಈ ಬಲವಾದ ಗುಡುಗುಗಳೂ ಆಲಿಕಲ್ಲಿನ ಮಳೆಯೂ ಇನ್ನು ಸಾಕು. ಇವುಗಳು ನಿಂತುಹೋಗುವಂತೆ ಯೆಹೋವ ದೇವರನ್ನು ಬೇಡಿಕೊಳ್ಳಿರಿ, ನೀವು ಇನ್ನು ಇಲ್ಲಿ ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು,” ಎಂದನು.
Make prayer to the Lord; for there has been enough of these thunderings of God and this ice-storm; and I will let you go and will keep you no longer.
29 ಮೋಶೆಯು ಅವನಿಗೆ, “ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೇ, ಯೆಹೋವ ದೇವರ ಕಡೆಗೆ ನನ್ನ ಕೈಗಳನ್ನು ಚಾಚಿ ಪ್ರಾರ್ಥಿಸುವೆನು. ಭೂಮಿಯು ಯೆಹೋವ ದೇವರದೇ ಎಂದು ನೀನು ತಿಳಿದುಕೊಳ್ಳುವಂತೆ ಗುಡುಗುಗಳು ನಿಂತುಹೋಗುವುವು. ಆಲಿಕಲ್ಲಿನ ಮಳೆಯು ಇನ್ನು ಇರದು.
And Moses said, When I am gone outside the town, my hands will be stretched out to the Lord; the thunders and the ice-storm will come to an end, so that you may see that the earth is the Lord's.
30 ಆದರೂ ನೀನು ಮತ್ತು ನಿನ್ನ ಅಧಿಕಾರಿಗಳು ದೇವರಾದ ಯೆಹೋವ ದೇವರಿಗೆ ಭಯಪಡುವುದಿಲ್ಲವೆಂದು ನಾನು ಬಲ್ಲೆನು,” ಎಂದನು.
But as for you and your servants, I am certain that even now the fear of the Lord God will not be in your hearts.
31 ಜವೆಗೋಧಿಗೆ ತೆನೆಯೂ ಅಗಸೆಯ ಮೊಗ್ಗುಗಳೂ ಇದ್ದುದರಿಂದ ಅಗಸೆಯೂ ಜವೆಗೋಧಿಯೂ ಹಾಳಾದವು.
And the flax and the barley were damaged, for the barley was almost ready to be cut and the flax was in flower.
32 ಆದರೆ ಗೋಧಿ ಮತ್ತು ಕಡಲೆ ಬೆಳೆದಿಲ್ಲವಾದ್ದರಿಂದ ಹಾಳಾಗಲಿಲ್ಲ.
But the rest of the grain-plants were undamaged, for they had not come up.
33 ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದಾಗ, ತನ್ನ ಕೈಗಳನ್ನು ಯೆಹೋವ ದೇವರ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆಲಿಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.
So Moses went out of the town, and stretching out his hands made prayer to God: and the thunders and the ice-storm came to an end; and the fall of rain was stopped.
34 ಮಳೆ, ಆಲಿಕಲ್ಲಿನ ಮಳೆ, ಗುಡುಗುಗಳು ನಿಂತುಹೋದದ್ದನ್ನು ಫರೋಹನು ನೋಡಿದಾಗ, ಅವನು ಪುನಃ ಪಾಪಮಾಡಿದನು. ತನ್ನ ಅಧಿಕಾರಿಗಳ ಸಹಿತವಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
But when Pharaoh saw that the rain and the ice-storm and the thunders were ended, he went on sinning, and made his heart hard, he and his servants.
35 ಫರೋಹನ ಹೃದಯವು ಕಠಿಣವಾಯಿತು. ಯೆಹೋವ ದೇವರು ಮೋಶೆಗೆ ಹೇಳಿದಂತೆ, ಅವನು ಇಸ್ರಾಯೇಲರನ್ನು ಕಳುಹಿಸಲೇ ಇಲ್ಲ.
And the heart of Pharaoh was hard, and he did not let the people go, as the Lord had said by the mouth of Moses.

< ವಿಮೋಚನಕಾಂಡ 9 >