< ಯೆಹೆಜ್ಕೇಲನು 1 >
1 ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ, ಐದನೆಯ ದಿನದಲ್ಲಿ ಆಕಾಶ ತೆರೆಯಿತು. ನಾನು ದೇವರ ದರ್ಶನಗಳನ್ನು ಕಂಡೆನು.
И было в тридцатый год, в четвертый месяц, в пятый день месяца, когда я находился среди переселенцев при реке Ховаре, отверзлись небеса, и я видел видения Божии.
2 ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಕೀನನ ಸೆರೆಯ ಐದನೆಯ ವರ್ಷದಲ್ಲಿ,
В пятый день месяца это был пятый год от пленения царя Иоакима,
3 ಯೆಹೋವ ದೇವರ ವಾಕ್ಯವು ಬಾಬಿಲೋನಿಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ, ಬೂಜಿಯ ಮಗ ಹಾಗೂ ಯಾಜಕ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು ಮತ್ತು ಅಲ್ಲಿ ಯೆಹೋವ ದೇವರ ಕೈ ಅವನ ಮೇಲಿತ್ತು.
Было слово Господне к Иезекиилю, сыну Вузия, священнику, в земле Халдейской, при реке Ховаре; и была на нем там рука Господня.
4 ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ ಜ್ವಾಲೆಯ ಮಧ್ಯೆ ಹೊಳೆಯುವ ಲೋಹ ಬೆಳಗಿತು.
И я видел, и вот, бурный ветер шел от севера, великое облако и клубящийся огонь, и сияние вокруг него,
5 ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರಟಿತು. ಅವುಗಳಿಗೆ ಮನುಷ್ಯನ ರೂಪವಿತ್ತು.
а из средины его как бы свет пламени из средины огня; и из средины его видно было подобие четырех животных, - и таков был вид их: облик их был, как у человека;
6 ಪ್ರತಿಯೊಂದಕ್ಕೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು.
И у каждого четыре лица, и у каждого из них четыре крыла;
7 ಅವುಗಳ ಕಾಲುಗಳು ನೆಟ್ಟಗಿದ್ದು, ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು, ಕಂಚಿಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.
а ноги их - ноги прямые, и ступни ног их - как ступня ноги у тельца, и сверкали, как блестящая медь, и крылья их легкие.
8 ಅವುಗಳ ರೆಕ್ಕೆಗಳ ಕೆಳಗೆ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು. ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು.
И руки человеческие были под крыльями их, на четырех сторонах их;
9 ಅವುಗಳ ರೆಕ್ಕೆಗಳು ಪರಸ್ಪರರ ರೆಕ್ಕೆಗಳನ್ನು ಸ್ಪರ್ಶಿಸುತ್ತಿದ್ದವು. ಪ್ರತಿಯೊಂದೂ ನೇರವಾಗಿ ಮುಂದೆ ಹೋಗುತ್ತಿದ್ದವು ಮತ್ತು ಅವರು ತಿರುಗದೆ ಮುಂದೆ ಸಾಗುತ್ತಿದ್ದರು.
и лица у них и крылья у них - у всех четырех; крылья их соприкасались одно к другому; во время шествия своего они не оборачивались, а шли каждое по направлению лица своего.
10 ಅವುಗಳ ಮುಖಗಳು ಹೀಗಿದ್ದವು: ಪ್ರತಿಯೊಂದರ ಮುಂದಿನ ನಾಲ್ಕು ಮುಖಗಳು ಮನುಷ್ಯನ ಮುಖದಂತಿತ್ತು; ಬಲಗಡೆಯ ನಾಲ್ಕು ಮುಖಗಳು ಸಿಂಹದ ಮುಖದಂತಿತ್ತು; ಎಡಗಡೆಯ ನಾಲ್ಕು ಮುಖಗಳು ಹೋರಿಯ ಮುಖದಂತಿತ್ತು; ಹಿಂದಿನ ನಾಲ್ಕು ಮುಖಗಳು ಗರುಡಪಕ್ಷಿಯ ಮುಖದಂತಿತ್ತು.
Подобие лиц их - лице человека и лице льва с правой стороны у всех их четырех; а с левой стороны лице тельца у всех четырех и лице орла у всех четырех.
11 ಅವುಗಳ ಮುಖಗಳು ಹೀಗಿದ್ದವು. ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಿಕೊಂಡಿದ್ದವು. ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು, ಒಂದಕ್ಕೊಂದು ಅಂಟಿಕೊಂಡಿದ್ದವು. ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.
И лица их и крылья их сверху были разделены, но у каждого два крыла соприкасались одно к другому, а два покрывали тела их.
12 ಅವೆಲ್ಲವೂ ನೆಟ್ಟಗೆ ಮುಂದಕ್ಕೆ ಹೋದವು. ಅವುಗಳ ಆತ್ಮವು ಎಲ್ಲಿಗೆ ಹೋಗಬೇಕಿತ್ತೋ, ಅಲ್ಲಿಗೇ ಹೋದವು, ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ.
И шли они, каждое в ту сторону, которая пред лицoм его; куда дух хотел идти, туда и шли; во время шествия своего не оборачивались.
13 ಆ ಜೀವಿಗಳ ಮಧ್ಯೆ ಅದ್ಭುತ ಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು. ಅದು ಆ ಜೀವಿಗಳ ನಡುವೆ ಓಲಾಡುತ್ತಿತ್ತು. ಆ ಉರಿ ತೇಜೋಮಯವಾಗಿತ್ತು. ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
И вид этих животных был как вид горящих углей, как вид лампад; огонь ходил между животными, и сияние от огня и молния исходила из огня.
14 ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾಡುತ್ತಾ ಇದ್ದವು.
И животные быстро двигались туда и сюда, как сверкает молния.
15 ಆಗ ನಾನು ಆ ಜೀವಿಗಳನ್ನು ನೋಡಲಾಗಿ, ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖವುಳ್ಳದ್ದಾಗಿರುವುದನ್ನು ನಾನು ನೋಡಿದೆನು.
И смотрел я на животных, и вот, на земле подле этих животных по одному колесу перед четырьмя лицами их.
16 ಆ ಚಕ್ರಗಳ ಆಕಾರವೂ, ಅವುಗಳ ಕೆಲಸವೂ ಪೀತರತ್ನದ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ಮಾದರಿಯಾಗಿದ್ದವು. ಅವುಗಳ ಆಕಾರವೂ, ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು.
Вид колес и устроение их - как вид топаза, и подобие у всех четырех одно; и по виду их и по устроению их казалось, будто колесо находилось в колесе.
17 ಅವು ಚಲಿಸುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು ಮತ್ತು ಅವು ಹೋಗುವಾಗ ತಿರುಗಲಿಲ್ಲ.
Когда они шли, шли на четыре свои стороны; во время шествия не оборачивались.
18 ಅವುಗಳ ಚಕ್ರಗಳು ಎತ್ತರವಾಗಿಯೂ, ಭಯಂಕರವಾಗಿಯೂ ಇದ್ದವು. ಆ ನಾಲ್ಕು ಚಕ್ರಗಳ ಸುತ್ತಲೂ ಅನೇಕ ಕಣ್ಣುಗಳಿದ್ದವು.
А ободья их - высоки и страшны были они; ободья их у всех четырех вокруг полны были глаз.
19 ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು. ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಏಳುವಾಗ, ಚಕ್ರಗಳು ಮೇಲಕ್ಕೆ ಏಳುತ್ತಿದ್ದವು.
И когда шли животные, шли и колеса подле них; а когда животные поднимались от земли, тогда поднимались и колеса.
20 ಆತ್ಮವು ಎಲ್ಲಿಗೆ ಹೋಗಬೇಕಿತ್ತೋ, ಅಲ್ಲಿಗೇ ಅವುಗಳು ಹೋದವು. ಚಕ್ರಗಳು ಸಹ ಅವುಗಳಿಗೆದುರಾಗಿ ಮೇಲಕ್ಕೆ ಏಳುತ್ತಿದ್ದವು. ಏಕೆಂದರೆ ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು.
Куда дух хотел идти, туда шли и они; куда бы ни пошел дух, и колеса поднимались наравне с ними, ибо дух животных был в колесах.
21 ಆ ಜೀವಿಗಳು ಮುಂದುವರಿಯುವಾಗ, ಚಕ್ರಗಳೂ ಮುಂದುವರಿಯುತ್ತಿದ್ದವು. ಅವು ನಿಂತು ಹೋಗುವಾಗ, ಇವೂ ನಿಂತು ಹೋಗುತ್ತಿದ್ದವು. ಅವು ನೆಲದಿಂದ ಮೇಲಕ್ಕೆ ಏಳುವಾಗ, ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು. ಏಕೆಂದರೆ ಆ ಜೀವಿಗಳ ಆತ್ಮ ಚಕ್ರಗಳಲ್ಲಿಯೂ ಇತ್ತು.
Когда шли те, шли и они; и когда те стояли, стояли и они; и когда те поднимались от земли, тогда наравне с ними поднимались и колеса, ибо дух животных был в колесах.
22 ಜೀವಿಯ ತಲೆಗಳ ಮೇಲೆ ಗಗನ ಮಂಡಲ ವಿಶಾಲ ರೂಪವು ವಜ್ರದಂತಿತ್ತು. ಮತ್ತು ಅದು ಅದ್ಭುತವಾಗಿತ್ತು.
Над головами животных было подобие свода, как вид изумительного кристалла, простертого сверху над головами их.
23 ಆ ಗಗನ ಮಂಡಲದ ಕೆಳಗೆ ಆ ಜೀವಿಗಳ ರೆಕ್ಕೆಗಳು ಒಂದರ ಕಡೆಗೆ ಒಂದರಂತೆ ಚಾಚಿದವು. ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು.
А под сводом простирались крылья их прямо одно к другому, и у каждого были два крыла, которые покрывали их, у каждого два крыла покрывали тела их.
24 ಅವು ಚಲಿಸುವಾಗ, ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು. ಅದು ಜಲಪ್ರವಾಹದ ಶಬ್ದದಂತೆಯೂ, ಸರ್ವಶಕ್ತರ ಧ್ವನಿಯ ಹಾಗೆಯೂ, ಸೈನ್ಯದ ಶಬ್ದದ ಹಾಗೆಯೂ ಇತ್ತು. ಅವು ನಿಲ್ಲುವಾಗ ಅವುಗಳ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.
И когда они шли, я слышал шум крыльев их, как бы шум многих вод, как бы глас Всемогущего, сильный шум, как бы шум в воинском стане; а когда они останавливались, опускали крылья свои.
25 ಅವುಗಳು ನಿಂತು, ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ, ಅವುಗಳ ತಲೆಗಳ ಮೇಲಿರುವ ಗಗನ ಮಂಡಲದೊಳಗಿಂದ ಒಂದು ಶಬ್ದವಾಯಿತು.
И голос был со свода, который над головами их; когда они останавливались, тогда опускали крылья свои.
26 ಅವುಗಳ ತಲೆಗಳ ಮೇಲಿರುವ ಗಗನ ಮಂಡಲದ ಮೇಲ್ಭಾಗದಲ್ಲಿ ನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
А над сводом, который над головами их, было подобие престола по виду как бы из камня сапфира; а над подобием престола было как бы подобие человека вверху на нем.
27 ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಲೋಹವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತ ಕಾಂತಿಯನ್ನು ನಾನು ಕಂಡೆನು.
И видел я как бы пылающий металл, как бы вид огня внутри него вокруг; от вида чресл его и выше и от вида чресл его и ниже я видел как бы некий огонь, и сияние было вокруг него.
28 ಮಳೆ ಬೀಳುವ ದಿನದಲ್ಲಿ ಮೇಘದಲ್ಲಿ ಮಳೆಬಿಲ್ಲು ಹೇಗೆ ಕಾಣಿಸುವುದೋ ಹಾಗೆ ಅದರ ಸುತ್ತಲೂ ಆ ಪ್ರಕಾಶವು ಕಾಣಿಸಿತು. ಇದೇ ಯೆಹೋವ ದೇವರ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ಕಂಡಾಗ ನಾನು ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು ಮತ್ತು ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
В каком виде бывает радуга на облаках во время дождя, такой вид имело это сияние кругом.