< ಯೆಹೆಜ್ಕೇಲನು 10 >

1 ಆಗ ನಾನು ನೋಡಲಾಗಿ, ಕೆರೂಬಿಗಳ ತಲೆಯ ಮೇಲಿದ್ದ ಆಕಾಶಮಂಡಲದಲ್ಲಿ ನೀಲಮಣಿಯಂತೆ ಸಿಂಹಾಸನದ ಆಕಾರದಂತಿರುವ ರೂಪವನ್ನು ಕಂಡೆನು. ಅದು ಅವುಗಳ ಮೇಲೆ ಕಾಣಿಸಿತು.
我观看,见基路伯头上的穹苍之中,显出蓝宝石的形状,仿佛宝座的形象。
2 ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡಿದ್ದ ಮನುಷ್ಯನಿಗೆ, “ನೀನು ಕೆರೂಬಿಗಳ ಕೆಳಗೆ ಇರುವ ಸುಡುವ ಕಲ್ಲಿದ್ದಲನ್ನು ನಿನ್ನ ಕೈತುಂಬ ತೆಗೆದುಕೊಂಡು ಅದನ್ನು ಪಟ್ಟಣದ ಮೇಲೆ ಎರಚು,” ಎಂದರು. ಹಾಗೆಯೇ ನಾನು ನೋಡುತ್ತಿದ್ದಂತೆಯೇ ಅವನು ಒಳಗೆ ಪ್ರವೇಶಿಸಿದನು.
主对那穿细麻衣的人说:“你进去,在旋转的轮内基路伯以下,从基路伯中间将火炭取满两手,撒在城上。” 我就见他进去。
3 ಆ ಮನುಷ್ಯನು ಒಳಗೆ ಹೋದಾಗ ಕೆರೂಬಿಗಳು ಆಲಯದ ದಕ್ಷಿಣ ಭಾಗದ ಬಳಿಯಲ್ಲಿ ನಿಂತಿದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿಕೊಂಡಿತ್ತು.
那人进去的时候,基路伯站在殿的右边,云彩充满了内院。
4 ಆಗ ಯೆಹೋವ ದೇವರ ಮಹಿಮೆಯು ಕೆರೂಬಿಗಳ ಮೇಲಿನಿಂದ ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಿಗೆ ಹೋಯಿತು. ಆಲಯವು ಮೇಘದಿಂದ ತುಂಬಿತ್ತು. ಆಗ ಯೆಹೋವ ದೇವರ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.
耶和华的荣耀从基路伯那里上升,停在门槛以上;殿内满了云彩,院宇也被耶和华荣耀的光辉充满。
5 ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತ ದೇವರು ಮಾತನಾಡುವ ಹಾಗೆ ಹೊರಗಣ ಅಂಗಳದವರೆಗೂ ಕೇಳಿಬಂತು.
基路伯翅膀的响声听到外院,好像全能 神说话的声音。
6 ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ, “ಚಕ್ರಗಳ ಮಧ್ಯದಿಂದಲೂ, ಕೆರೂಬಿಯರ ಮಧ್ಯದಿಂದಲೂ ಬೆಂಕಿಯನ್ನು ತೆಗೆದುಕೊಳ್ಳಲು,” ಆಜ್ಞಾಪಿಸಿದನು. ಮನುಷ್ಯನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು.
他吩咐那穿细麻衣的人说:“要从旋转的轮内基路伯中间取火。”那人就进去站在一个轮子旁边。
7 ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಬೆಂಕಿಗೆ ಚಾಚಿ, ಸ್ವಲ್ಪ ತೆಗೆದುಕೊಂಡು ನಾರುಮಡಿಯನ್ನು ಧರಿಸಿಕೊಂಡಿದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು.
有一个基路伯从基路伯中伸手到基路伯中间的火那里,取些放在那穿细麻衣的人两手中,那人就拿出去了。
8 ಕೆರೂಬಿಯರಲ್ಲಿ ಅವರ ರೆಕ್ಕೆಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು.
在基路伯翅膀之下,显出有人手的样式。
9 ನಾನು ನೋಡಿದಾಗ, ಇಗೋ ಒಬ್ಬೊಬ್ಬ ಕೆರೂಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು. ಆ ಚಕ್ರಗಳ ವರ್ಣವು ಹೊಳೆಯುವ ಪೀತರತ್ನದ ಹಾಗಿತ್ತು.
我又观看,见基路伯旁边有四个轮子。这基路伯旁有一个轮子,那基路伯旁有一个轮子,每基路伯都是如此;轮子的颜色仿佛水苍玉。
10 ಆ ನಾಲ್ಕಕ್ಕೂ ಒಂದೇ ರೂಪವಿತ್ತು. ಚಕ್ರದೊಳಗೆ ಇನ್ನೊಂದು ಚಕ್ರವು ರಚಿಸಿದ್ದ ಹಾಗೆ ಇದ್ದವು.
至于四轮的形状,都是一个样式,仿佛轮中套轮。
11 ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು. ಕೆರೂಬಿಗಳು ಹೋದಂತೆ ಚಕ್ರಗಳು ತಿರುಗಲಿಲ್ಲ. ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.
轮行走的时候,向四方都能直行,并不掉转。头向何方,他们也随向何方,行走的时候并不掉转。
12 ಅವುಗಳ ದೇಹ, ಬೆನ್ನು, ಕೈ, ರೆಕ್ಕೆ ಮತ್ತು ಚಕ್ರಗಳು ಇವೆಲ್ಲವುಗಳ ಸುತ್ತಲೂ ಕಣ್ಣುಗಳಿಂದ ತುಂಬಿದ್ದವು, ಮತ್ತು ಅವನ ಎಲ್ಲಾ ನಾಲ್ಕು ಚಕ್ರಗಳು ಕಣ್ಣುಗಳಿಂದ ತುಂಬಿದ್ದವು.
他们全身,连背带手和翅膀,并轮周围都满了眼睛。这四个基路伯的轮子都是如此。
13 ಆ ಚಕ್ರಗಳನ್ನು, “ತಿರುಗುವ ಚಕ್ರಗಳು” ಎಂದು ಕರೆಯುತ್ತಾರೆ ಎಂದು ನಾನು ಕೇಳಿದೆ.
至于这些轮子,我耳中听见说是旋转的。
14 ಒಬ್ಬೊಬ್ಬ ಕೆರೂಬಿಗೆ ನಾಲ್ಕು ಮುಖಗಳಿದ್ದವು. ಮೊದಲನೆಯ ಮುಖವು ಕೆರೂಬಿಯ ಮುಖ, ಎರಡನೆಯ ಮುಖವು ಮನುಷ್ಯನ ಮುಖ, ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು.
基路伯各有四脸:第一是基路伯的脸,第二是人的脸,第三是狮子的脸,第四是鹰的脸。
15 ಆಗ ಕೆರೂಬಿಯರು ಮೇಲಕ್ಕೆತ್ತಲಾದರು. ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಜೀವಗಳು ಇವೇ.
基路伯升上去了;这是我在迦巴鲁河边所见的活物。
16 ಕೆರೂಬಿಯರು ಚಲಿಸಿದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ.
基路伯行走,轮也在旁边行走。基路伯展开翅膀,离地上升,轮也不转离他们旁边。
17 ಜೀವಿಗಳ ಆತ್ಮ ಆ ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತು ಹೋದಾಗ ಇವೂ ನಿಂತುಹೋದವು. ಅವು ಏರಿದಾಗ, ಇವೂ ಅವುಗಳ ಜೊತೆಯಲ್ಲೇ ಏರಿದವು.
那些站住,这些也站住;那些上升,这些也一同上升,因为活物的灵在轮中。
18 ಆಗ ಯೆಹೋವ ದೇವರ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.
耶和华的荣耀从殿的门槛那里出去,停在基路伯以上。
19 ನಾನು ನೋಡುವಾಗಲೇ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿಕೊಂಡು, ಭೂಮಿಯನ್ನು ಬಿಟ್ಟು ಮೇಲಕ್ಕೇರಿ ಹೋದರು. ಅವು ಹೊರಟಾಗ, ಚಕ್ರಗಳೂ ಅದರ ಸಂಗಡ ಇದ್ದವು. ಅವರು ಯೆಹೋವ ದೇವರ ಆಲಯದ ಪೂರ್ವದಿಕ್ಕಿನ ಬಾಗಿಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಇಸ್ರಾಯೇಲಿನ ದೇವರ ಮಹಿಮೆಯು ಅವರ ಮೇಲೆ ಇತ್ತು.
基路伯出去的时候,就展开翅膀,在我眼前离地上升。轮也在他们的旁边,都停在耶和华殿的东门口。在他们以上有以色列 神的荣耀。
20 ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ. ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.
这是我在迦巴鲁河边所见、以色列 神荣耀以下的活物,我就知道他们是基路伯。
21 ಪ್ರತಿಯೊಬ್ಬನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು. ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು.
各有四个脸面,四个翅膀,翅膀以下有人手的样式。
22 ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
至于他们脸的模样,并身体的形象,是我从前在迦巴鲁河边所看见的。他们俱各直往前行。

< ಯೆಹೆಜ್ಕೇಲನು 10 >