< ಯೆಹೆಜ್ಕೇಲನು 11 >

1 ಆಮೇಲೆ ದೇವರಾತ್ಮರು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವ ದೇವರ ಆಲಯದ ಪೂರ್ವದಿಕ್ಕಿನ ಬಾಗಿಲಿಗೆ, ನನ್ನನ್ನು ಎತ್ತಿಕೊಂಡು ಹೋದರು. ಪ್ರವೇಶದ್ವಾರದಲ್ಲಿ ಇಪ್ಪತ್ತೈದು ಮಂದಿ ಮನುಷ್ಯರು ಇದ್ದರು. ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗ ಯಾಜನ್ಯನನ್ನೂ, ಬೆನಾಯನ ಮಗ ಪೆಲಟೀಯನನ್ನೂ ನೋಡಿದೆನು.
וַתִּשָּׂא אֹתִי רוּחַ וַתָּבֵא אֹתִי אֶל־שַׁעַר בֵּית־יְהֹוָה הַקַּדְמוֹנִי הַפּוֹנֶה קָדִימָה וְהִנֵּה בְּפֶתַח הַשַּׁעַר עֶשְׂרִים וַֽחֲמִשָּׁה אִישׁ וָאֶרְאֶה בְתוֹכָם אֶת־יַאֲזַנְיָה בֶן־עַזֻּר וְאֶת־פְּלַטְיָהוּ בֶן־בְּנָיָהוּ שָׂרֵי הָעָֽם׃
2 ಆಮೇಲೆ ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ, ದುರಾಲೋಚನೆಗಳನ್ನು ಹೇಳಿಕೊಡುವವರು ಈ ಜನರೇ.
וַיֹּאמֶר אֵלָי בֶּן־אָדָם אֵלֶּה הָאֲנָשִׁים הַחֹשְׁבִים אָוֶן וְהַיֹּעֲצִים עֲצַת־רָע בָּעִיר הַזֹּֽאת׃
3 ಅವರು, ‘ಇತ್ತೀಚಿಗೆ ನಮ್ಮ ಮನೆಗಳು ನಿರ್ಮಾಣವಾಗಿಲ್ಲವೇ? ಈ ಪಟ್ಟಣವು ಪಾತ್ರೆ, ಮತ್ತು ನಾವು ಅದರಲ್ಲಿರುವ ಮಾಂಸ,’ ಎನ್ನುತ್ತಾರೆ.
הָאֹמְרִים לֹא בְקָרוֹב בְּנוֹת בָּתִּים הִיא הַסִּיר וַאֲנַחְנוּ הַבָּשָֽׂר׃
4 ಆದ್ದರಿಂದ ಮನುಷ್ಯಪುತ್ರನೇ, ಅವರಿಗೆ ವಿರೋಧವಾಗಿ ಪ್ರವಾದಿಸು.”
לָכֵן הִנָּבֵא עֲלֵיהֶם הִנָּבֵא בֶּן־אָדָֽם׃
5 ಯೆಹೋವ ದೇವರ ಆತ್ಮವು ನನ್ನ ಮೇಲೆ ಬಂದು ತಿಳಿಸಲು ಹೇಳಿದ್ದೇನೆಂದರೆ: “ಇಸ್ರಾಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಏಕೆಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನು ನಾನು ಬಲ್ಲೆನು.
וַתִּפֹּל עָלַי רוּחַ יְהֹוָה וַיֹּאמֶר אֵלַי אֱמֹר כֹּֽה־אָמַר יְהֹוָה כֵּן אֲמַרְתֶּם בֵּית יִשְׂרָאֵל וּמַעֲלוֹת רוּחֲכֶם אֲנִי יְדַעְתִּֽיהָ׃
6 ನೀವು ಈ ಪಟ್ಟಣದಲ್ಲಿ ನರಹತ್ಯೆಯನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.
הִרְבֵּיתֶם חַלְלֵיכֶם בָּעִיר הַזֹּאת וּמִלֵּאתֶם חוּצֹתֶיהָ חָלָֽל׃
7 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಕೊಂದು ಹಾಕಿದವರ ದೇಹಗಳೇ ಮಾಂಸ, ಈ ಪಟ್ಟಣವು ಬೇಯಿಸುವ ಪಾತ್ರೆ. ಆದರೆ ನಾನು ನಿಮ್ಮನ್ನು ಅದರಿಂದ ಹೊರಗೆ ತರುತ್ತೇನೆ.
לָכֵן כֹּֽה־אָמַר אֲדֹנָי יֱהֹוִה חַלְלֵיכֶם אֲשֶׁר שַׂמְתֶּם בְּתוֹכָהּ הֵמָּה הַבָּשָׂר וְהִיא הַסִּיר וְאֶתְכֶם הוֹצִיא מִתּוֹכָֽהּ׃
8 ನೀವು ಖಡ್ಗಕ್ಕೆ ಭಯಪಟ್ಟಿರಿ. ನಾನು ನಿಮ್ಮ ಮೇಲೆ ಒಂದು ಖಡ್ಗವನ್ನು ತರುತ್ತೇನೆ. ಇದು ಸಾರ್ವಭೌಮ ಯೆಹೋವ ದೇವರ ನುಡಿ.
חֶרֶב יְרֵאתֶם וְחֶרֶב אָבִיא עֲלֵיכֶם נְאֻם אֲדֹנָי יֱהֹוִֽה׃
9 ನಾನು ನಿಮ್ಮನ್ನು ಪಟ್ಟಣದ ಮಧ್ಯದಿಂದ ಹೊರಗೆ ತಂದು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನ್ಯಾಯತೀರ್ಪುಗಳನ್ನು ನಡೆಸುವೆನು.
וְהוֹצֵאתִי אֶתְכֶם מִתּוֹכָהּ וְנָתַתִּי אֶתְכֶם בְּיַד־זָרִים וְעָשִׂיתִי בָכֶם שְׁפָטִֽים׃
10 ನೀವು ಖಡ್ಗದಿಂದ ನಾಶವಾಗುವಿರಿ. ನಾನು ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.
בַּחֶרֶב תִּפֹּלוּ עַל־גְּבוּל יִשְׂרָאֵל אֶשְׁפּוֹט אֶתְכֶם וִידַעְתֶּם כִּֽי־אֲנִי יְהֹוָֽה׃
11 ಈ ಪಟ್ಟಣವು ಪಾತ್ರೆಯಾಗುವುದಿಲ್ಲ. ನೀವು ಅದರಲ್ಲಿ ಮಾಂಸವೂ ಆಗುವುದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಾನು ನ್ಯಾಯತೀರಿಸುವೆನು.
הִיא לֹֽא־תִהְיֶה לָכֶם לְסִיר וְאַתֶּם תִּהְיוּ בְתוֹכָהּ לְבָשָׂר אֶל־גְּבוּל יִשְׂרָאֵל אֶשְׁפֹּט אֶתְכֶֽם׃
12 ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. ಏಕೆಂದರೆ ನೀವು ನನ್ನ ನಿಯಮಗಳಂತೆ ನಡೆಯಲಿಲ್ಲ. ನನ್ನ ನ್ಯಾಯವಿಧಿಗಳನ್ನು ಪಾಲಿಸಲಿಲ್ಲ. ಆದರೆ ನಿಮ್ಮ ಸುತ್ತಲಿರುವ ಇತರ ಜನಾಂಗಗಳ ಆಚಾರಗಳ ಪ್ರಕಾರ ಮಾಡಿದ್ದೀರಿ.”
וִֽידַעְתֶּם כִּֽי־אֲנִי יְהֹוָה אֲשֶׁר בְּחֻקַּי לֹא הֲלַכְתֶּם וּמִשְׁפָּטַי לֹא עֲשִׂיתֶם וּֽכְמִשְׁפְּטֵי הַגּוֹיִם אֲשֶׁר סְבִיבוֹתֵיכֶם עֲשִׂיתֶֽם׃
13 ನಾನು ಪ್ರವಾದಿಸುತ್ತಿರುವಾಗ, ಬೆನಾಯನ ಮಗನಾದ ಪೆಲಟೀಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು, ಗಟ್ಟಿಯಾಗಿ ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನೀವು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀರೋ?” ಎಂದು ಹೇಳಿದನು.
וַֽיְהִי כְּהִנָּבְאִי וּפְלַטְיָהוּ בֶן־בְּנָיָה מֵת וָאֶפֹּל עַל־פָּנַי וָאֶזְעַק קוֹל־גָּדוֹל וָֽאֹמַר אֲהָהּ אֲדֹנָי יֱהֹוִה כָּלָה אַתָּה עֹשֶׂה אֵת שְׁאֵרִית יִשְׂרָאֵֽל׃
14 ಯೆಹೋವ ದೇವರ ವಾಕ್ಯವು ನನಗೆ ಬಂದಿತು:
וַיְהִי דְבַר־יְהֹוָה אֵלַי לֵאמֹֽר׃
15 “ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ನಿನ್ನ ಅಣ್ಣಂದಿರಿಗೆ, ನಿನ್ನ ನೆಂಟರಿಷ್ಟರಿಗೆ, ಅಂತು ಇಸ್ರಾಯೇಲ್ ವಂಶದ ಎಲ್ಲರಿಗೆ, ಯೆರೂಸಲೇಮಿನಲ್ಲೇ ಉಳಿದಿರುವವರು, ‘ಯೆಹೋವ ದೇವರ ಬಳಿಯಿಂದ ದೂರವಾಗಿ ತೊಲಗಿರಿ, ಈ ನಾಡು ನಮಗೇ ಸೊತ್ತಾಗಿ ಸಿಕ್ಕಿದೆ,’ ಎಂದು ಹೇಳಿ ಹೀನೈಸುತ್ತಿದ್ದಾರಲ್ಲವೇ?
בֶּן־אָדָם אַחֶיךָ אַחֶיךָ אַנְשֵׁי גְאֻלָּתֶךָ וְכׇל־בֵּית יִשְׂרָאֵל כֻּלֹּה אֲשֶׁר אָמְרוּ לָהֶם יֹשְׁבֵי יְרוּשָׁלַ͏ִם רַֽחֲקוּ מֵעַל יְהֹוָה לָנוּ הִיא נִתְּנָה הָאָרֶץ לְמוֹרָשָֽׁה׃
16 “ಆದ್ದರಿಂದ ನಾನು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರನ್ನು ಇತರ ಜನಾಂಗಗಳಿಂದ ದೂರ ಹಾಕಿದರೂ, ದೇಶಗಳಲ್ಲಿ ಚದರಿಸಿದರೂ, ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದವರೆಗೆ ಪರಿಶುದ್ಧ ಸ್ಥಳವಾಗಿರುವೆನು.’
לָכֵן אֱמֹר כֹּֽה־אָמַר אֲדֹנָי יֱהֹוִה כִּי הִרְחַקְתִּים בַּגּוֹיִם וְכִי הֲפִיצוֹתִים בָּאֲרָצוֹת וָאֱהִי לָהֶם לְמִקְדָּשׁ מְעַט בָּאֲרָצוֹת אֲשֶׁר־בָּאוּ שָֽׁם׃
17 “ಆದ್ದರಿಂದ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಶ್ಚಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ, ನೀವು ಚದರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ. ಇಸ್ರಾಯೇಲ್ ದೇಶವನ್ನು ನಿಮಗೆ ತಿರುಗಿ ಕೊಡುವೆನು.’
לָכֵן אֱמֹר כֹּֽה־אָמַר אֲדֹנָי יֱהֹוִה וְקִבַּצְתִּי אֶתְכֶם מִן־הָעַמִּים וְאָסַפְתִּי אֶתְכֶם מִן־הָאֲרָצוֹת אֲשֶׁר נְפֹצוֹתֶם בָּהֶם וְנָתַתִּי לָכֶם אֶת־אַדְמַת יִשְׂרָאֵֽל׃
18 “ಅವರು ಅಲ್ಲಿಗೆ ಹಿಂತಿರುಗಿ ಮತ್ತು ಅದರಲ್ಲಿರುವ ಎಲ್ಲಾ ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ತೆಗೆದುಹಾಕುತ್ತಾರೆ.
וּבָאוּ־שָׁמָּה וְהֵסִירוּ אֶת־כׇּל־שִׁקּוּצֶיהָ וְאֶת־כׇּל־תּוֹעֲבוֹתֶיהָ מִמֶּֽנָּה׃
19 ಅವರಿಗೆ ಒಂದೇ ಮನಸ್ಸನ್ನು ಕೊಡುವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು. ಅವರೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆಯುವೆನು. ಅವರಿಗೆ ಮೃದು ಹೃದಯವನ್ನು ಕೊಡುವೆನು.
וְנָתַתִּי לָהֶם לֵב אֶחָד וְרוּחַ חֲדָשָׁה אֶתֵּן בְּקִרְבְּכֶם וַהֲסִרֹתִי לֵב הָאֶבֶן מִבְּשָׂרָם וְנָתַתִּי לָהֶם לֵב בָּשָֽׂר׃
20 ಆಗ ಅವರು ನನ್ನ ನಿಯಮಗಳನ್ನು ಕೈಗೊಂಡು ಜಾಗರೂಕತೆಯಿಂದ ಪಾಲಿಸುವರು. ನನ್ನ ನಿಯಮಗಳನ್ನು ಕೈಗೊಳ್ಳುವರು. ಅವರು ನನ್ನ ಜನರಾಗುವರು, ನಾನು ಅವರ ದೇವರಾಗುವೆನು.
לְמַעַן בְּחֻקֹּתַי יֵלֵכוּ וְאֶת־מִשְׁפָּטַי יִשְׁמְרוּ וְעָשׂוּ אֹתָם וְהָיוּ־לִי לְעָם וַאֲנִי אֶהְיֶה לָהֶם לֵאלֹהִֽים׃
21 ಆದರೆ ಯಾರ ಹೃದಯವು ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ಅನುಸರಿಸುತ್ತದೋ, ನಾನು ಅವರ ದುರ್ಮಾರ್ಗವನ್ನು ಅವರ ತಲೆಗೇ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
וְאֶל־לֵב שִׁקּוּצֵיהֶם וְתוֹעֲבוֹתֵיהֶם לִבָּם הֹלֵךְ דַּרְכָּם בְּרֹאשָׁם נָתַתִּי נְאֻם אֲדֹנָי יֱהֹוִֽה׃
22 ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು. ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು.
וַיִּשְׂאוּ הַכְּרוּבִים אֶת־כַּנְפֵיהֶם וְהָאוֹפַנִּים לְעֻמָּתָם וּכְבוֹד אֱלֹהֵֽי־יִשְׂרָאֵל עֲלֵיהֶם מִלְמָֽעְלָה׃
23 ಯೆಹೋವ ದೇವರ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ, ಪಟ್ಟಣದ ಪೂರ್ವದಿಕ್ಕಿನಲ್ಲಿರುವ ಪರ್ವತದ ಮೇಲೆ ನಿಂತಿತು.
וַיַּעַל כְּבוֹד יְהֹוָה מֵעַל תּוֹךְ הָעִיר וַֽיַּעֲמֹד עַל־הָהָר אֲשֶׁר מִקֶּדֶם לָעִֽיר׃
24 ಅನಂತರ ದೇವರಾತ್ಮರು, ದೇವರ ಆತ್ಮರಿಂದಾದ ದರ್ಶನದಲ್ಲಿ ನನ್ನನ್ನು ಬಾಬಿಲೋನಿಯರ ದೇಶಕ್ಕೆ ಸೆರೆಯವರ ಬಳಿಗೆ ಎತ್ತಿಕೊಂಡು ಹೋದರು. ಆಗ ನಾನು ನೋಡಿದ ದರ್ಶನವು ನನ್ನಿಂದ ಮೇಲೆ ಹೋಯಿತು.
וְרוּחַ נְשָׂאַתְנִי וַתְּבִאֵנִי כַשְׂדִּימָה אֶל־הַגּוֹלָה בַּמַּרְאֶה בְּרוּחַ אֱלֹהִים וַיַּעַל מֵֽעָלַי הַמַּרְאֶה אֲשֶׁר רָאִֽיתִי׃
25 ಆಮೇಲೆ ಯೆಹೋವ ದೇವರು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯಲ್ಲಿರುವವರಿಗೆ ಹೇಳಿದೆನು.
וָאֲדַבֵּר אֶל־הַגּוֹלָה אֵת כׇּל־דִּבְרֵי יְהֹוָה אֲשֶׁר הֶרְאָֽנִי׃

< ಯೆಹೆಜ್ಕೇಲನು 11 >