< ಯೆಹೆಜ್ಕೇಲನು 13 >

1 ಯೆಹೋವ ದೇವರ ವಾಕ್ಯವು ನನಗೆ ಬಂದಿತು:
ئینجا فەرمایشتی یەزدانم بۆ هات فەرمووی:
2 “ನರಪುತ್ರನೇ, ಪ್ರವಾದಿಸುತ್ತಿರುವ ಇಸ್ರಾಯೇಲಿನ ಮನೆತನದ ಪ್ರವಾದಿಗಳಿಗೆ ವಿರುದ್ಧವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಕಲ್ಪನೆಗಳಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು: ‘ಯೆಹೋವ ದೇವರ ವಾಕ್ಯವನ್ನು ಕೇಳಿರಿ;
«ئەی کوڕی مرۆڤ، پێشبینی بکە لەسەر پێغەمبەرەکانی ئیسرائیل، ئەوانەی لەخۆیانەوە پێشبینی دەکەن:”گوێ لە فەرمایشتی یەزدان بگرن!
3 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಮೂರ್ಖ ಪ್ರವಾದಿಗಳೇ ನಿಮಗೆ ಕಷ್ಟ!
یەزدانی باڵادەست ئەمە دەفەرموێت: قوڕبەسەر ئەو پێغەمبەرە گێلانەی بەدوای ڕۆحی خۆیان کەوتوون و هیچیان نەبینیوە.
4 ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳಂತಿದ್ದಾರೆ.
ئەی ئیسرائیل، پێغەمبەرەکانتان وەک چەقەڵی ناو کەلاوەیان لێ هاتووە.
5 ಯೆಹೋವ ದೇವರ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ಇಸ್ರಾಯೇಲ್ ಮನೆತನದವರ ಸುತ್ತಲೂ ಗೋಡೆಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರಲಿಲ್ಲ.
سەرنەکەوتن کەلێنی دیوارێک بگرن، شوورایەکیشتان بۆ بنەماڵەی ئیسرائیل بنیاد نەنایەوە بۆ ئەوەی لە جەنگ بەرگریتان لێ بکات لە ڕۆژی یەزدان.
6 “ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು, ಯೆಹೋವ ದೇವರು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.
ئەوانەی بینینیان بەتاڵ و فاڵگرتنەوەیان درۆ بوو، دەڵێن:’سروشی یەزدانە‘و هەرچەندەش یەزدان ئەوانی نەناردووە، کەچی چاوەڕێی هاتنەدی پێشبینییەکەیان بوون.
7 ನಾನು ಮಾತಾಡದೇ ಇದ್ದರೂ, “ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನ ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು.
ئایا بینینی بەتاڵتان بۆ ئاشکرا نەکرا و بە فاڵگرتنەوەی درۆ قسەتان نەکرد، کە دەڵێن:’سروشی یەزدانە،‘من قسەم نەکردووە؟
8 “‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಸುಳ್ಳಾಗಿ ಮಾತನಾಡಿದ್ದರಿಂದಲೂ, ಸುಳ್ಳನ್ನು ದರ್ಶಿಸಿದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನು. ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
«”لەبەر ئەوە یەزدانی باڵادەست ئەمە دەفەرموێت: چونکە بە بەتاڵی قسەتان کرد و بینینەکانتان درۆ بوون، لەبەر ئەوە من لە دژی ئێوەم. ئەوە فەرمایشتی یەزدانی باڵادەستە.
9 ಸುಳ್ಳಾದದ್ದನ್ನು ದರ್ಶಿಸಿ, ಸುಳ್ಳು ಕಣಿ ಹೇಳುವ ಪ್ರವಾದಿಗಳಿಗೆ ವಿರುದ್ಧವಾಗಿ ನನ್ನ ಹಸ್ತವಿರುವುದು. ಅವರು ನನ್ನ ಜನರ ಸಭೆಯಲ್ಲಿ ಇರುವುದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲಾಗುವುದೂ ಇಲ್ಲ. ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವುದೂ ಇಲ್ಲ. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.
دەستیشم لە دژی ئەو پێغەمبەرانە دەبێت کە بینینەکانیان درۆ بوون، بینینیان بەتاڵە و فاڵگرتنەوەیان درۆیە. لەناو ئەنجومەنی گەلەکەم نابن و لەناو کتێبی بنەماڵەی ئیسرائیل ناویان نانووسرێت و ناچنە ناو خاکی ئیسرائیلەوە. ئیتر ئێوە دەزانن کە من یەزدانی باڵادەستم.
10 “‘ಏಕೆಂದರೆ ಸಮಾಧಾನವಿಲ್ಲದಿರುವಾಗ ಅವರು, “ಸಮಾಧಾನವಿದೆ,” ಎಂದು ಹೇಳಿ, ನನ್ನ ಜನರನ್ನು ತಪ್ಪು ದಾರಿಗೆ ನಡೆಸಿದ್ದಾರೆ. ಒಬ್ಬನು ದುರ್ಬಲ ಗೋಡೆಯನ್ನು ಕಟ್ಟಿದರೆ, ಈ ಪ್ರವಾದಿಗಳ ಗುಂಪು ಅದಕ್ಕೆ ಸುಣ್ಣ ಹಚ್ಚಿದ್ದಾರೆ.
«”لەبەر ئەوەی گەلەکەی منیان گومڕا کرد، دەڵێن:’ئاشتی!‘ئاشتیش نییە، ئەو دیوارە لاوازەی خەڵکی بنیادی دەنێن، ئەوان بە گەچ سواخی دەدەن.
11 ಆದ್ದರಿಂದ ಸುಣ್ಣ ಹಚ್ಚುತ್ತಿರುವವನಿಗೆ ಅದು ಬೀಳುವುದೆಂದು ಹೇಳು. ಅಲ್ಲಿ ವಿಪರೀತ ಮಳೆ ಬರುವುದು ಮತ್ತು ದೊಡ್ಡ ಕಲ್ಮಳೆಯು ಬೀಳುವುದು. ಬಿರುಗಾಳಿಯು ಅದನ್ನು ಸೀಳಿಬಿಡುವುದು.
بەوانە بڵێ کە بە گەچ سواخی دەدەن:’دەکەوێت.‘بارانێکی بەخوڕ دەبارێت، ئەی تەرزە بەردینەکان ئێوەش دەبارن و بایەکی بەهێزیش کەلێنی تێدەکات.
12 “ಗೋಡೆ ಬಿದ್ದುಹೋದ ಮೇಲೆ, ನೀವು ಹಚ್ಚಿದ ಸುಣ್ಣ ಎಲ್ಲಿ?” ಎಂದು ನಿಮಗೆ ಕೇಳುವರಲ್ಲವೆ?
ئەوەتا کە دیوارەکە دەڕووخێت، ئایا پێتان ناڵێن:’کوا ئەو گەچەی پێتان سواخ دابوو؟‘
13 “‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದನ್ನು ನನ್ನ ರೋಷದಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ, ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳು ಸುರಿಯುವುವು.
«”لەبەر ئەوە یەزدانی باڵادەست ئەمە دەفەرموێت: من لە تووڕەییمدا بە بایەکی بەهێز کەلێنی تێدەکەم، لە هەڵچوونم بارانی بەخوڕ و تەرزەی بەردین دەنێرم بۆ لەناوبردنی.
14 ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ, ನೆಲಸಮಮಾಡಿ, ಅದರ ಅಸ್ತಿವಾರವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವಾಗ, ನೀವು ಅದರಲ್ಲಿ ನಾಶವಾಗುವಿರಿ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿದುಬರುವುದು.
ئەو دیوارە دەڕووخێنم کە بە گەچ سواختان داوە، لەگەڵ زەوی تەختی دەکەم، بناغەکانی دەردەکەون. کاتێک دیوارەکە دەکەوێت، ئێوەش لەناویدا دەفەوتێن، ئیتر ئێوە دەزانن کە من یەزدانم.
15 ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿಕೊಂಡು, “ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇರುವುದಿಲ್ಲವೆಂದೂ,
جا تووڕەیی خۆم دەڕێژم بەسەر دیوارەکە و ئەوانەی بە گەچ سواخیان داوە، پێتان دەڵێم:’دیوارەکە و ئەوانەش کە بە گەچ سواخیان داوە نەماون،
16 ಯೆರೂಸಲೇಮಿನ ವಿಷಯ ಪ್ರವಾದಿಸಿ, ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ಇರುವುದಿಲ್ಲವೆಂದೂ, ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”’
ئەو پێغەمبەرانەی ئیسرائیل کە پێشبینییان بۆ ئۆرشەلیم کرد و بینینی ئاشتییان ڕاگەیاند، هیچ ئاشتیش نەبوو. ئەوە فەرمایشتی یەزدانی باڵادەستە.‘“
17 “ಈಗ ಮನುಷ್ಯಪುತ್ರನೇ, ನೀನು ತಮ್ಮ ಸ್ವಂತ ಕಲ್ಪನೆಯಿಂದ ಪ್ರವಾದಿಸುವ ನಿನ್ನ ಜನರ ಪುತ್ರಿಯರಿಗೆ ವಿರೋಧವಾಗಿ ನಿನ್ನ ಮುಖವನ್ನಿಟ್ಟು, ಅವರಿಗೆ ವಿರೋಧವಾಗಿ ಪ್ರವಾದಿಸಿ,
«ئێستاش، ئەی کوڕی مرۆڤ، ڕووت لە کچانی گەلەکەت بکە، ئەوانەی لە خۆیانەوە پێشبینی دەکەن، پێشبینی لەسەر ئەوان بکە و
18 ಹೀಗೆ ಹೇಳು ಎಂದು, ‘ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡುಗಳನ್ನು ಹೊಲೆದು ಮತ್ತು ಪ್ರತಿಯೊಬ್ಬನ ಎತ್ತರದ ತಲೆಗಳಿಗೆ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಪುತ್ರಿಯರಿಗೆ ಕಷ್ಟ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?
بڵێ:”یەزدانی باڵادەست ئەمە دەفەرموێت: قوڕبەسەر ئەو ژنانەی نوشتە لە شێوەی بازووبەند دەدورن بۆ مەچەکیان، نوشتە لە شێوەی سەرپۆش بۆ هەموو سەرێک دروستدەکەن، بۆ ڕاوکردنی گیانەکان. ئایا ئێوە دڵ و دەروونی گەلەکەم ڕاو دەکەن و خۆتان بە زیندووی دەهێڵنەوە؟
19 ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ?
ئێوە لەلای گەلەکەم لەبەر مشتێک جۆ و هەندێک لەتە نان گڵاوم دەکەن. بە درۆکردنتان بۆ گەلەکەم کە گوێ لە درۆ دەگرن، ئێوە ئەو کەسانەی کە شایستەی مردن نەبوون کوشتووتانن و ئەوانەی شایستەی ژیان نەبوون بە زیندوویی هێشتووتتانەوە.
20 “‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಬೇಟೆಯಾಡುವಂತೆ ಬೇಟೆಯಾಡಿದ ಪ್ರಾಣಗಳನ್ನು ಬಿಡಿಸುತ್ತೇನೆ.
«”لەبەر ئەوە یەزدانی باڵادەست ئەمە دەفەرموێت: من لە دژی نوشتەکانی ئێوەم کە لەسەر شێوەی بازووبەندە، کە وەک باڵندە مرۆڤی پێ ڕاو دەکەن، لەسەر بازووتان دەیدڕێنم و ئەو مرۆڤانەی وەک باڵندە ڕاویان دەکەن بەڕەڵایان دەکەم.
21 ನಿಮ್ಮ ವಸ್ತ್ರಗಳನ್ನು ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ. ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.
سەرپۆشەکانتان دەدڕێنم و فریای گەلەکەم دەکەوم لە دەستتان، لەمەودوا لەناو دەستتان نابن بۆ ڕاوکردنیان، ئیتر ئێوە دەزانن کە من یەزدانم.
22 ಏಕೆಂದರೆ ನಾನು ಯಾವನನ್ನು ದುಃಖಪಡಿಸಲಿಲ್ಲವೋ, ಆ ನೀತಿವಂತರ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು, ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವರನ್ನು ಪ್ರೋತ್ಸಾಹಿಸಿದ್ದೀರಿ.
لەبەر ئەوەی بە درۆ دڵی ڕاستودروستتان خەمبار کرد کە من خەمبارم نەکردبوو، هەروەها خراپەکارتان هاندا هەتا لە ڕێگا خراپەکانی نەگەڕێتەوە بۆ ئەوەی بژیێت،
23 ಆದ್ದರಿಂದ ನೀವು ಇನ್ನು ಮೇಲೆ ಸುಳ್ಳು ದರ್ಶನಗಳನ್ನು ಕಾಣುವುದಿಲ್ಲ ಮತ್ತು ಸುಳ್ಳು ದೈವೋಕ್ತಿಗಳನ್ನು ಅಭ್ಯಾಸಿಸುವುದಿಲ್ಲ. ಏಕೆಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ಬಿಡಿಸುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.’”
هەر بۆیە لەمەودوا بینینی بەتاڵیان بۆ ئاشکرا ناکرێت و چیتر فاڵ ناگرنەوە، فریای گەلەکەی خۆم دەکەوم لە دەستتان، ئیتر ئێوە دەزانن کە من یەزدانم.“»

< ಯೆಹೆಜ್ಕೇಲನು 13 >