< ಯೆಹೆಜ್ಕೇಲನು 14 >

1 ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.
וַיָּבוֹא אֵלַי אֲנָשִׁים מִזִּקְנֵי יִשְׂרָאֵל וַיֵּשְׁבוּ לְפָנָֽי׃
2 ಆಗ ಯೆಹೋವ ದೇವರ ವಾಕ್ಯವು ನನಗೆ ಬಂದಿತು:
וַיְהִי דְבַר־יְהוָה אֵלַי לֵאמֹֽר׃
3 “ಮನುಷ್ಯಪುತ್ರನೇ, ಈ ಮನುಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ, ತಮ್ಮ ಅಕ್ರಮವಾದ ವಿಘ್ನಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವೆಲ್ಲವುಗಳಿಗಾಗಿ ನಾನು ಅವರನ್ನು ವಿಚಾರಿಸಬೇಕೇ?
בֶּן־אָדָם הָאֲנָשִׁים הָאֵלֶּה הֶעֱלוּ גִלּֽוּלֵיהֶם עַל־לִבָּם וּמִכְשׁוֹל עֲוֺנָם נָתְנוּ נֹכַח פְּנֵיהֶם הַאִדָּרֹשׁ אִדָּרֵשׁ לָהֶֽם׃
4 ಆದ್ದರಿಂದ ನೀನು ಅವರ ಸಂಗಡ ಮಾತನಾಡಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲಿ ನೆಲೆಗೊಳಿಸಿ, ತಮ್ಮ ಅಕ್ರಮದ ವಿಘ್ನಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬರುವ ಅವನಿಗೆ ಯೆಹೋವ ದೇವರಾದ ನಾನು ಅವರ ವಿಗ್ರಹಗಳ ಸಮೂಹಕ್ಕೆ ತಕ್ಕ ಹಾಗೆ ಉತ್ತರಕೊಡುವೆನು.
לָכֵן דַּבֵּר־אוֹתָם וְאָמַרְתָּ אֲלֵיהֶם כֹּה־אָמַר ׀ אֲדֹנָי יְהוִה אִישׁ אִישׁ מִבֵּית יִשְׂרָאֵל אֲשֶׁר יַעֲלֶה אֶת־גִּלּוּלָיו אֶל־לִבּוֹ וּמִכְשׁוֹל עֲוֺנוֹ יָשִׂים נֹכַח פָּנָיו וּבָא אֶל־הַנָּבִיא אֲנִי יְהוָה נַעֲנֵיתִי לוֹ בה בָא בְּרֹב גִּלּוּלָֽיו׃
5 ತಮ್ಮ ವಿಗ್ರಹಗಳಿಗಾಗಿ ನನ್ನನ್ನು ತೊರೆದ ಇಸ್ರಾಯೇಲ್ ಜನರ ಹೃದಯಗಳನ್ನು ಪುನಃ ವಶಪಡಿಸಿಕೊಳ್ಳಲು ನಾನು ಇದನ್ನು ಮಾಡುತ್ತೇನೆ.’
לְמַעַן תְּפֹשׂ אֶת־בֵּֽית־יִשְׂרָאֵל בְּלִבָּם אֲשֶׁר נָזֹרוּ מֵֽעָלַי בְּגִלּֽוּלֵיהֶם כֻּלָּֽם׃
6 “ಆದ್ದರಿಂದ ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮಾನಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾಗಿಯೇ ತಿರುಗಿಕೊಳ್ಳಿರಿ. ನಿಮ್ಮ ಅಸಹ್ಯವಾದವುಗಳನ್ನೆಲ್ಲಾ ಬಿಟ್ಟು, ನಿಮ್ಮ ಮುಖಗಳನ್ನು ತಿರುಗಿಸಿರಿ.
לָכֵן אֱמֹר ׀ אֶל־בֵּית יִשְׂרָאֵל כֹּה אָמַר אֲדֹנָי יְהוִה שׁוּבוּ וְהָשִׁיבוּ מֵעַל גִּלּֽוּלֵיכֶם וּמֵעַל כָּל־תּוֹעֲבֹתֵיכֶם הָשִׁיבוּ פְנֵיכֶֽם׃
7 “‘ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ, ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ, ಯೆಹೋವ ದೇವರಾದ ನಾನೇ ಉತ್ತರಕೊಡುವೆನು.
כִּי אִישׁ אִישׁ מִבֵּית יִשְׂרָאֵל וּמֵהַגֵּר אֲשֶׁר־יָגוּר בְּיִשְׂרָאֵל וְיִנָּזֵר מֵֽאַחֲרַי וְיַעַל גִּלּוּלָיו אֶל־לִבּוֹ וּמִכְשׁוֹל עֲוֺנוֹ יָשִׂים נֹכַח פָּנָיו וּבָא אֶל־הַנָּבִיא לִדְרָשׁ־לוֹ בִי אֲנִי יְהוָה נַֽעֲנֶה־לּוֹ בִּֽי׃
8 ನಾನು ಅಂಥವನ ಮೇಲೆ ಬಹುಕೋಪಗೊಂಡು, ಅವನನ್ನು ಗುರುತನ್ನಾಗಿಯೂ, ಗಾದೆಯನ್ನಾಗಿಯೂ ಮಾಡಿ, ನನ್ನ ಜನರ ಮಧ್ಯದೊಳಗಿಂದ ತೆಗೆದುಬಿಡುವೆನು. ಹೀಗೆ ನಾನೇ ಯೆಹೋವ ದೇವರು ಎಂದು ನಿಮಗೆ ಗೊತ್ತಾಗುವುದು.
וְנָתַתִּי פָנַי בָּאִישׁ הַהוּא וַהֲשִֽׂמֹתִיהוּ לְאוֹת וְלִמְשָׁלִים וְהִכְרַתִּיו מִתּוֹךְ עַמִּי וִֽידַעְתֶּם כִּֽי־אֲנִי יְהוָֽה׃
9 “‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು.
וְהַנָּבִיא כִֽי־יְפֻתֶּה וְדִבֶּר דָּבָר אֲנִי יְהוָה פִּתֵּיתִי אֵת הַנָּבִיא הַהוּא וְנָטִיתִי אֶת־יָדִי עָלָיו וְהִשְׁמַדְתִּיו מִתּוֹךְ עַמִּי יִשְׂרָאֵֽל׃
10 ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು. ವಿಚಾರಿಸುವವನ ದಂಡನೆಯು ಹೇಗೆಯೋ ಹಾಗೆಯೇ, ಪ್ರವಾದಿಗೆ ದಂಡನೆಯೂ ಇರುವುದು.
וְנָשְׂאוּ עֲוֺנָם כַּֽעֲוֺן הַדֹּרֵשׁ כַּעֲוֺן הַנָּבִיא יִֽהְיֶֽה׃
11 ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ, ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವುದರಿಂದ ಅವರು ನನ್ನ ಜನರಾಗಿರುವರು, ಅವರಿಗೆ ನಾನು ದೇವರಾಗಿರುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’”
לְמַעַן לֹֽא־יִתְעוּ עוֹד בֵּֽית־יִשְׂרָאֵל מֵאַֽחֲרַי וְלֹֽא־יִטַּמְּאוּ עוֹד בְּכָל־פִּשְׁעֵיהֶם וְהָיוּ לִי לְעָם וַֽאֲנִי אֶהְיֶה לָהֶם לֵֽאלֹהִים נְאֻם אֲדֹנָי יְהוִֽה׃
12 ಯೆಹೋವ ದೇವರ ವಾಕ್ಯವು ನನಗೆ ಬಂದಿತು:
וַיְהִי דְבַר־יְהוָה אֵלַי לֵאמֹֽר׃
13 “ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ, ಅದರ ಜೀವನಾಧಾರವನ್ನು ತೆಗೆದುಹಾಕಿ, ಕ್ಷಾಮವು ಬರುವ ಹಾಗೆ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಡುವೆನು.
בֶּן־אָדָם אֶרֶץ כִּי תֶחֱטָא־לִי לִמְעָל־מַעַל וְנָטִיתִי יָדִי עָלֶיהָ וְשָׁבַרְתִּי לָהּ מַטֵּה־לָחֶם וְהִשְׁלַחְתִּי־בָהּ רָעָב וְהִכְרַתִּי מִמֶּנָּה אָדָם וּבְהֵמָֽה׃
14 ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
וְהָיוּ שְׁלֹשֶׁת הָאֲנָשִׁים הָאֵלֶּה בְּתוֹכָהּ נֹחַ דנאל דָּנִיֵּאל וְאִיּוֹב הֵמָּה בְצִדְקָתָם יְנַצְּלוּ נַפְשָׁם נְאֻם אֲדֹנָי יְהוִֽה׃
15 “ನಾನು ದುಷ್ಟಮೃಗಗಳನ್ನು ದೇಶದಲ್ಲಿ ಹಾದುಹೋಗುವಂತೆ ಮಾಡಿ, ಅದನ್ನು ನಿರ್ಜನಪಡಿಸಿ, ಹಾಳು ಮಾಡಿ, ಯಾರೂ ಮೃಗಗಳ ನಿಮಿತ್ತ ಹಾದುಹೋಗದಂತೆ ಮಾಡಿದರೆ,
לֽוּ־חַיָּה רָעָה אַעֲבִיר בָּאָרֶץ וְשִׁכְּלָתָּה וְהָיְתָה שְׁמָמָה מִבְּלִי עוֹבֵר מִפְּנֵי הַחַיָּֽה׃
16 ಈ ಮೂರು ಮನುಷ್ಯರಲ್ಲಿ ಅದರಲ್ಲಿ ಇದ್ದರೂ, ನನ್ನ ಜೀವದಾಣೆ ಅವರು ಪುತ್ರರನ್ನಾಗಲಿ, ಪುತ್ರಿಯರನ್ನಾಗಲಿ ಬಿಡಿಸಲು ಆಗುತ್ತಿರಲಿಲ್ಲ, ತಾವು ಮಾತ್ರ ತಪ್ಪಿಸಿಕೊಳ್ಳುವರು. ಆದರೆ ದೇಶವು ಹಾಳಾಗುವುದು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
שְׁלֹשֶׁת הָאֲנָשִׁים הָאֵלֶּה בְּתוֹכָהּ חַי־אָנִי נְאֻם אֲדֹנָי יְהוִה אִם־בָּנִים וְאִם־בָּנוֹת יַצִּילוּ הֵמָּה לְבַדָּם יִנָּצֵלוּ וְהָאָרֶץ תִּהְיֶה שְׁמָמָֽה׃
17 “ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ,
אוֹ חֶרֶב אָבִיא עַל־הָאָרֶץ הַהִיא וְאָמַרְתִּי חֶרֶב תַּעֲבֹר בָּאָרֶץ וְהִכְרַתִּי מִמֶּנָּה אָדָם וּבְהֵמָֽה׃
18 ಈ ಮೂವರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
וּשְׁלֹשֶׁת הָאֲנָשִׁים הָאֵלֶּה בְּתוֹכָהּ חַי־אָנִי נְאֻם אֲדֹנָי יְהוִה לֹא יַצִּילוּ בָּנִים וּבָנוֹת כִּי הֵם לְבַדָּם יִנָּצֵֽלוּ׃
19 “ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಮರಣದಂಡನೆಯಾಗಿ ಅದರ ಮೇಲೆ ನನ್ನ ರೋಷವನ್ನು ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ತೆಗೆದುಹಾಕುವಾಗ,
אוֹ דֶּבֶר אֲשַׁלַּח אֶל־הָאָרֶץ הַהִיא וְשָׁפַכְתִּי חֲמָתִי עָלֶיהָ בְּדָם לְהַכְרִית מִמֶּנָּה אָדָם וּבְהֵמָֽה׃
20 ನೋಹನೂ, ದಾನಿಯೇಲನೂ, ಯೋಬನೂ ಅದರಲ್ಲಿದ್ದರೂ ನನ್ನ ಜೀವದಾಣೆ, ಅವರು ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
וְנֹחַ דנאל דָּנִיֵּאל וְאִיּוֹב בְּתוֹכָהּ חַי־אָנִי נְאֻם אֲדֹנָי יְהוִה אִם־בֵּן אִם־בַּת יַצִּילוּ הֵמָּה בְצִדְקָתָם יַצִּילוּ נַפְשָֽׁם׃
21 “ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು?
כִּי כֹה אָמַר אֲדֹנָי יְהֹוִה אַף כִּֽי־אַרְבַּעַת שְׁפָטַי ׀ הָרָעִים חֶרֶב וְרָעָב וְחַיָּה רָעָה וָדֶבֶר שִׁלַּחְתִּי אֶל־יְרוּשָׁלָ͏ִם לְהַכְרִית מִמֶּנָּה אָדָם וּבְהֵמָֽה׃
22 ಆದರೂ ಅದರಲ್ಲಿ ಪುತ್ರಪುತ್ರಿಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲಾಗುವರು. ಅವರು ನಿಮ್ಮ ಬಳಿಗೆ ಬಂದಾಗ, ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ಸಮಾಧಾನ ಹೊಂದುವಿರಿ.
וְהִנֵּה נֽוֹתְרָה־בָּהּ פְּלֵטָה הַֽמּוּצָאִים בָּנִים וּבָנוֹת הִנָּם יוֹצְאִים אֲלֵיכֶם וּרְאִיתֶם אֶת־דַּרְכָּם וְאֶת־עֲלִֽילוֹתָם וְנִחַמְתֶּם עַל־הָֽרָעָה אֲשֶׁר הֵבֵאתִי עַל־יְרוּשָׁלִַם אֵת כָּל־אֲשֶׁר הֵבֵאתִי עָלֶֽיהָ׃
23 ನೀವು ಅವರ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಅದರೊಳಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
וְנִחֲמוּ אֶתְכֶם כִּֽי־תִרְאוּ אֶת־דַּרְכָּם וְאֶת־עֲלִֽילוֹתָם וִֽידַעְתֶּם כִּי לֹא חִנָּם עָשִׂיתִי אֵת כָּל־אֲשֶׁר־עָשִׂיתִי בָהּ נְאֻם אֲדֹנָי יְהֹוִֽה׃

< ಯೆಹೆಜ್ಕೇಲನು 14 >