< ಯೆಹೆಜ್ಕೇಲನು 15 >
1 ಯೆಹೋವ ದೇವರ ವಾಕ್ಯವು ನನಗೆ ಬಂದಿತು,
Konsa, pawòl SENYÈ a te vin kote mwen. Li te di:
2 “ಮನುಷ್ಯಪುತ್ರನೇ, ದ್ರಾಕ್ಷಿ ಗಿಡವು ಅಡವಿಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?
Fis a lòm, kisa bwa chan rezen fè pou l pi bon pase nenpòt bwa branch lyann yo ki pami pyebwa forè yo?
3 ಇದರಿಂದ ಕಟ್ಟಿಗೆಯನ್ನು ತೆಗೆದುಕೊಂಡು ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವನನ್ನಾದರೂ ನೇತುಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
Èske ou ka retire bwa sou li pou fè yon bagay, oswa èske moun ka fè yon kwòk ak li pou pann veso?
4 ಇದನ್ನು ಬೆಂಕಿಗೆ ಸೌದೆಯಾಗಿ ಹಾಕುತ್ತಾರೆ. ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡುತ್ತದೆ. ಅದರ ಮಧ್ಯ ಭಾಗವು ಸುಟ್ಟು ಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವುದೋ?
Si yo te mete li nan dife la pou brile, dife a fin manje de pwent li e mitan an fin boukannen tounwa. Konsa, èske li ka itil pou yon bagay?
5 ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ, ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟುಹೋದ ಮೇಲೆ ಯಾವ ಕೆಲಸಕ್ಕೆ ಬಂದೀತು?”
Gade byen, pandan li an bòn fòm nan, li pa itil anyen. Konbyen anmwens lè dife fin manje li e vin boukannen l tounwa a, pou l ka itil pou fè yon bagay!
6 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ವನವೃಕ್ಷಗಳಲ್ಲಿ ದ್ರಾಕ್ಷಿಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಮಾಡಿರುವೆನೋ ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ವಿನಾಶಕ್ಕೆ ಗುರಿಮಾಡಿದ್ದೇನೆ.
Pou sa, konsa pale Senyè BONDYE a: “Jan lyann yo pami tout pyebwa forè yo, ke m te bay nan dife pou brile a, se konsa mwen te bay moun ki rete Jérusalem yo.
7 ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಬೆಂಕಿಯೊಳಗಿಂದ ಹೊರಗೆ ಬಂದು ತಪ್ಪಿಸಿಕೊಂಡರೂ, ಮತ್ತೊಂದು ಬೆಂಕಿಯು ಅವರನ್ನು ದಹಿಸಿಬಿಡುವುದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ, ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.
Mwen mete figi M kont yo. Byenke yo te sòti nan dife a, malgre sa, dife a va manje yo. Ou va konnen ke Mwen se SENYÈ a, lè Mwen mete figi M kont yo.
8 ಅವರು ದ್ರೋಹ ಮಾಡಿದ್ದರಿಂದ ನಾನು ಆ ದೇಶವನ್ನು ಹಾಳುಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
Konsa, Mwen va fè tè a vin dezole, akoz yo te aji ak enfidelite,” deklare Senyè BONDYE a.