< ಯೆಹೆಜ್ಕೇಲನು 16 >

1 ಯೆಹೋವ ದೇವರ ವಾಕ್ಯವು ನನಗೆ ಬಂದಿತು:
وَكَانَتْ إِلَيَّ كَلِمَةُ ٱلرَّبِّ قَائِلَةً:١
2 “ನರಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡಿ,
«يَا ٱبْنَ آدَمَ، عَرِّفْ أُورُشَلِيمَ بِرَجَاسَاتِهَا،٢
3 ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾರೆ: ನಿಮ್ಮ ಪೂರ್ವಜರು ಮತ್ತು ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ; ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.
وَقُلْ: هَكَذَا قَالَ ٱلسَّيِّدُ ٱلرَّبُّ لِأُورُشَلِيمَ: مَخْرَجُكِ وَمَوْلِدُكِ مِنْ أَرْضِ كَنْعَانَ. أَبُوكِ أَمُورِيٌّ وَأُمُّكِ حِثِّيَّةٌ.٣
4 ನಿನ್ನ ಹುಟ್ಟಿದ ಸ್ಥಳದ ವಿಷಯವು: ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸಲಾಗಲಿಲ್ಲ; ಶುದ್ಧವಾಗುವ ಹಾಗೆ ನೀರಿನಲ್ಲಿ ತೊಳೆಯಲಾಗಲಿಲ್ಲ; ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ;
أَمَّا مِيلَادُكِ يَوْمَ وُلِدْتِ فَلَمْ تُقْطَعْ سُرَّتُكِ، وَلَمْ تُغْسَلِي بِٱلْمَاءِ لِلتَّنَظُّفِ، وَلَمْ تُمَلَّحِي تَمْلِيحًا، وَلَمْ تُقَمَّطِي تَقْمِيطًا.٤
5 ನಿನ್ನನ್ನು ಕರುಣಿಸಿ, ಕಟಾಕ್ಷಿಸಿ ಯಾರೂ ನಿನಗೆ ಒಂದು ಸಹಾಯವನ್ನೂ ಮಾಡಲಿಲ್ಲ. ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಕಿದರು.
لَمْ تَشْفُقْ عَلَيْكِ عَيْنٌ لِتَصْنَعَ لَكِ وَاحِدَةً مِنْ هَذِهِ لِتَرِقَّ لَكِ، بَلْ طُرِحْتِ عَلَى وَجْهِ ٱلْحَقْلِ بِكَرَاهَةِ نَفْسِكِ يَوْمَ وُلِدْتِ.٥
6 “‘ನಾನು ನಿನ್ನ ಬಳಿಯಲ್ಲಿ ಹಾದುಹೋಗುವಾಗ, ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದುದನ್ನು ನೋಡಿದಾಗ, “ಬದುಕು” ಎಂದೆನು.
فَمَرَرْتُ بِكِ وَرَأَيْتُكِ مَدُوسَةً بِدَمِكِ، فَقُلْتُ لَكِ: بِدَمِكِ عِيشِي، قُلْتُ لَكِ: بِدَمِكِ عِيشِي.٦
7 ಹೊಲದಲ್ಲಿಯ ಮೊಳಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು, ನೀನು ಬಲಿತು, ಪ್ರಾಯವು ತುಂಬಿ, ನೀನು ಅತಿ ಸುಂದರಿಯಾದೆ, ನಿನ್ನ ಸ್ತನಗಳು ರೂಪಗೊಂಡವು, ನಿನ್ನ ಕೂದಲು ಬೆಳೆಯಿತು, ಮೊದಲು ನೀನು ಬರೀ ಬೆತ್ತಲೆಯಾಗಿದ್ದೆ.
جَعَلْتُكِ رَبْوَةً كَنَبَاتِ ٱلْحَقْلِ، فَرَبَوْتِ وَكَبُرْتِ، وَبَلَغْتِ زِينَةَ ٱلْأَزْيَانِ. نَهَدَ ثَدْيَاكِ، وَنَبَتَ شَعْرُكِ وَقَدْ كُنْتِ عُرْيَانَةً وَعَارِيَةً.٧
8 “‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
فَمَرَرْتُ بِكِ وَرَأَيْتُكِ، وَإِذَا زَمَنُكِ زَمَنُ ٱلْحُبِّ. فَبَسَطْتُ ذَيْلِي عَلَيْكِ وَسَتَرْتُ عَوْرَتَكِ، وَحَلَفْتُ لَكِ، وَدَخَلْتُ مَعَكِ فِي عَهْدٍ، يَقُولُ ٱلسَّيِّدُ ٱلرَّبُّ، فَصِرْتِ لِي.٨
9 “‘ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ನಿನ್ನ ರಕ್ತವನ್ನು ನಿನ್ನಿಂದ ತೊಳೆದೆನು, ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು.
فَحَمَّمْتُكِ بِٱلْمَاءِ، وَغَسَلْتُ عَنْكِ دِمَاءَكِ، وَمَسَحْتُكِ بِٱلزَّيْتِ،٩
10 ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲುಹಂದಿಯ ತೊಗಲಿನ ಪಾದರಕ್ಷೆಗಳನ್ನು ಕೊಟ್ಟೆನು. ನಯವಾದ ನಾರುಮಡಿಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು;
وَأَلْبَسْتُكِ مُطَرَّزَةً، وَنَعَلْتُكِ بِٱلتُّخَسِ، وَأَزَّرْتُكِ بِٱلْكَتَّانِ، وَكَسَوْتُكِ بَزًّا،١٠
11 ಆಭರಣಗಳಿಂದ ನಿನ್ನನ್ನು ಅಲಂಕರಿಸಿದೆನು: ನಾನು ನಿನ್ನ ಕೈಗಳಿಗೆ ಕಡಗಗಳನ್ನು ನಿನ್ನ ಕೊರಳಿಗೆ ಸರವನ್ನು ಹಾಕಿದೆನು.
وَحَلَّيْتُكِ بِٱلْحُلِيِّ، فَوَضَعْتُ أَسْوِرَةً فِي يَدَيْكِ وَطَوْقًا فِي عُنُقِكِ.١١
12 ನಿನ್ನ ಮೂಗಿಗೆ ಮೂಗುತಿಯನ್ನೂ, ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ, ನಿನ್ನ ತಲೆಯ ಮೇಲೆ ಸುಂದರ ಕಿರೀಟವನ್ನೂ ಇಟ್ಟೆನು.
وَوَضَعْتُ خِزَامَةً فِي أَنْفِكِ وَأَقْرَاطًا فِي أُذُنَيْكِ وَتَاجَ جَمَالٍ عَلَى رَأْسِكِ.١٢
13 ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ, ನಿನ್ನ ಆಹಾರವು ನಯವಾದ ಹಿಟ್ಟು, ಜೇನು, ಎಣ್ಣೆ ತಿನ್ನುತ್ತಿದ್ದೆ. ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.
فَتَحَلَّيْتِ بِٱلذَّهَبِ وَٱلْفِضَّةِ، وَلِبَاسُكِ ٱلْكَتَّانُ وَٱلْبَزُّ وَٱلْمُطَرَّزُ. وَأَكَلْتِ ٱلسَّمِيذَ وَٱلْعَسَلَ وَٱلزَّيْتَ، وَجَمُلْتِ جِدًّا جِدًّا، فَصَلُحْتِ لِمَمْلَكَةٍ.١٣
14 ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯ ಪರಿಪೂರ್ಣವಾಯಿತು; ನಿನ್ನ ಚೆಲುವು ಜನಾಂಗಗಳಲ್ಲಿ ಪ್ರಸಿದ್ಧವಾಯಿತು, ಇದು ಸಾರ್ವಭೌಮ ಯೆಹೋವ ದೇವರ ನುಡಿ.
وَخَرَجَ لَكِ ٱسْمٌ فِي ٱلْأُمَمِ لِجَمَالِكِ، لِأَنَّهُ كَانَ كَامِلًا بِبَهَائِي ٱلَّذِي جَعَلْتُهُ عَلَيْكِ، يَقُولُ ٱلسَّيِّدُ ٱلرَّبُّ.١٤
15 “‘ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸೆಯಿಟ್ಟು, ನಿನ್ನ ಕೀರ್ತಿಯ ನಿಮಿತ್ತವಾಗಿ ವೇಶ್ಯೆಯಾದೆ. ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರ ಮಾಡಿದೆ ಮತ್ತು ನಿನ್ನ ಸೌಂದರ್ಯ ಅವನದಾಯಿತು.
«فَٱتَّكَلْتِ عَلَى جَمَالِكِ، وَزَنَيْتِ عَلَى ٱسْمِكِ، وَسَكَبْتِ زِنَاكِ عَلَى كُلِّ عَابِرٍ فَكَانَ لَهُ.١٥
16 ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾ ಸ್ಥಳದಲ್ಲಿ ವ್ಯಭಿಚಾರ ಮಾಡಿದೆ; ನೀನು ಅವನ ಬಳಿಗೆ ಹೋದೆ ಮತ್ತು ಅವನು ನಿನ್ನ ಸೌಂದರ್ಯವನ್ನು ತೆಗೆದುಕೊಂಡಿದ್ದಾನೆ.
وَأَخَذْتِ مِنْ ثِيَابِكِ وَصَنَعْتِ لِنَفْسِكِ مُرْتَفَعَاتٍ مُوَشَّاةٍ، وَزَنَيْتِ عَلَيْهَا. أَمْرٌ لَمْ يَأْتِ وَلَمْ يَكُنْ.١٦
17 ಇದಲ್ಲದೆ ನಾನು ನಿನಗೆ ಬೆಳ್ಳಿಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು, ಅವುಗಳಿಂದ ಪುರುಷಮೂರ್ತಿಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದೆ.
وَأَخَذْتِ أَمْتِعَةَ زِينَتِكِ مِنْ ذَهَبِي وَمِنْ فِضَّتِي ٱلَّتِي أَعْطَيْتُكِ، وَصَنَعْتِ لِنَفْسِكِ صُوَرَ ذُكُورٍ وَزَنَيْتِ بِهَا.١٧
18 ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು, ಅವರಿಗೆ ಹೊದಿಸಿ, ನನ್ನ ಎಣ್ಣೆಯನ್ನೂ, ಧೂಪವನ್ನೂ ಅವರ ಮುಂದೆ ಇಟ್ಟೆ.
وَأَخَذْتِ ثِيَابَكِ ٱلْمُطَرَّزَةَ وَغَطَّيْتِهَا بِهَا، وَوَضَعْتِ أَمَامَهَا زَيْتِي وَبَخُورِي.١٨
19 ನಾನು ನಿಮಗೆ ಒದಗಿಸಿದ ಆಹಾರ, ಹಿಟ್ಟು, ಎಣ್ಣೆ ಮತ್ತು ಜೇನುತುಪ್ಪವನ್ನು ನಾನು ನಿಮಗೆ ತಿನ್ನಲು ಕೊಟ್ಟಿದ್ದೇನೆ. ನೀವು ಅವರ ಮುಂದೆ ಪರಿಮಳಯುಕ್ತ ಧೂಪವನ್ನು ಅರ್ಪಿಸಿದ್ದೀರಿ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
وَخُبْزِي ٱلَّذِي أَعْطَيْتُكِ، ٱلسَّمِيذَ وَٱلزَّيْتَ وَٱلْعَسَلَ ٱلَّذِي أَطْعَمْتُكِ، وَضَعْتِهَا أَمَامَهَا رَائِحَةَ سُرُورٍ. وَهَكَذَا كَانَ، يَقُولُ ٱلسَّيِّدُ ٱلرَّبُّ.١٩
20 “‘ಇದಾದ ಮೇಲೆ ನನಗೆ ಹುಟ್ಟಿದ ನನ್ನ ಪುತ್ರರನ್ನೂ, ಪುತ್ರಿಯರನ್ನೂ ವಿಗ್ರಹಗಳ ಆಹಾರಕ್ಕಾಗಿ ಯಜ್ಞವಾಗಿ ಅರ್ಪಿಸಿದೆ. ಈ ನಿನ್ನ ವ್ಯಭಿಚಾರ ಸಾಕಾಗಲಿಲ್ಲವೋ?
«أَخَذْتِ بَنِيكِ وَبَنَاتِكِ ٱلَّذِينَ وَلَدْتِهِمْ لِي، وَذَبَحْتِهِمْ لَهَا طَعَامًا. أَهُوَ قَلِيلٌ مِنْ زِنَاكِ٢٠
21 ನೀನು ನನ್ನ ಮಕ್ಕಳನ್ನು ಕೊಂದು, ವಿಗ್ರಹಗಳಿಗೆ ಬಲಿಯಾಗಿ ಅರ್ಪಿಸಿದೆ.
أَنَّكِ ذَبَحْتِ بَنِيَّ وَجَعَلْتِهِمْ يَجُوزُونَ فِي ٱلنَّارِ لَهَا؟٢١
22 ಎಲ್ಲಾ ಅಸಹ್ಯ ಕಾರ್ಯಗಳನ್ನೂ, ವ್ಯಭಿಚಾರಗಳನ್ನೂ ಮಾಡುತ್ತಿದ್ದಾಗ, ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ, ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದುದನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.
وَفِي كُلِّ رَجَاسَاتِكِ وَزِنَاكِ لَمْ تَذْكُرِي أَيَّامَ صِبَاكِ، إِذْ كُنْتِ عُرْيَانَةً وَعَارِيَةً وَكُنْتِ مَدُوسَةً بِدَمِكِ.٢٢
23 “‘ನಿನಗೆ ಕಷ್ಟ! ಕಷ್ಟ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅವನ ಎಲ್ಲಾ ದುಷ್ಟತನದ ಹೊರತಾಗಿ,
وَكَانَ بَعْدَ كُلِّ شَرِّكِ. وَيْلٌ، وَيْلٌ لَكِ! يَقُولُ ٱلسَّيِّدُ ٱلرَّبُّ،٢٣
24 ನೀವು ನಿಮಗಾಗಿ ಒಂದು ದಿಬ್ಬವನ್ನು ನಿರ್ಮಿಸಿದ್ದೀರಿ ಮತ್ತು ಪ್ರತಿ ಸಾರ್ವಜನಿಕ ಚೌಕದಲ್ಲಿ ಎತ್ತರದ ದೇವಾಲಯವನ್ನು ನಿರ್ಮಿಸಿದ್ದೀರಿ.
أَنَّكِ بَنَيْتِ لِنَفْسِكِ قُبَّةً وَصَنَعْتِ لِنَفْسِكِ مُرْتَفَعَةً فِي كُلِّ شَارِعٍ.٢٤
25 ಪ್ರತಿಯೊಂದು ದಾರಿಯ ಕೊನೆಯಲ್ಲಿಯೂ ಎತ್ತರದ ದೇವಾಲಯವನ್ನು ನಿರ್ಮಿಸಿ, ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು, ಹಾದುಹೋಗುವ ಪ್ರತಿಯೊಬ್ಬನಿಗೂ ನಿನ್ನ ಕಾಲುಗಳನ್ನು ಅಗಲಿಸಿದೆ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದೆ.
فِي رَأْسِ كُلِّ طَرِيقٍ بَنَيْتِ مُرْتَفَعَتَكِ وَرَجَّسْتِ جَمَالَكِ، وَفَرَّجْتِ رِجْلَيْكِ لِكُلِّ عَابِرٍ وَأَكْثَرْتِ زِنَاكِ.٢٥
26 ಇದಲ್ಲದೆ ಅತಿಕಾಮಿಗಳಾದ ನಿನ್ನ ನೆರೆಯವರಾದ ಈಜಿಪ್ಟಿನವರ ಸಂಗಡ ವ್ಯಭಿಚಾರ ಮಾಡಿದೆ; ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದೆ;
وَزَنَيْتِ مَعَ جِيرَانِكِ بَنِي مِصْرَ ٱلْغِلَاظِ ٱللَّحْمِ، وَزِدْتِ فِي زِنَاكِ لِإِغَاظَتِي.٢٦
27 ಆದ್ದರಿಂದ ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಭೂಪ್ರದೇಶವನ್ನು ಕಡಿಮೆ ಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು, ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಪುತ್ರಿಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.
«فَهَأَنَذَا قَدْ مَدَدْتُ يَدِي عَلَيْكِ، وَمَنَعْتُ عَنْكِ فَرِيضَتَكِ، وَأَسْلَمْتُكِ لِمَرَامِ مُبْغِضَاتِكِ، بَنَاتِ ٱلْفِلِسْطِينِيِّينَ، ٱللَّوَاتِي يَخْجَلْنَ مِنْ طَرِيقِكِ ٱلرَّذِيلَةِ.٢٧
28 ಇದಲ್ಲದೆ ಅಸ್ಸೀರಿಯರೊಂದಿಗೂ ವ್ಯಭಿಚಾರ ಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀಯೆ; ಆದರೂ ತೃಪ್ತಿಯಾಗಲಿಲ್ಲ.
وَزَنَيْتِ مَعَ بَنِي أَشُّورَ، إِذْ كُنْتِ لَمْ تَشْبَعِي فَزَنَيْتِ بِهِمْ، وَلَمْ تَشْبَعِي أَيْضًا.٢٨
29 ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ವ್ಯಾಪಾರಸ್ಥರಾದ ಬಾಬಿಲೋನಿಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.
وَكَثَّرْتِ زِنَاكِ فِي أَرْضِ كَنْعَانَ إِلَى أَرْضِ ٱلْكَلْدَانِيِّينَ، وَبِهَذَا أَيْضًا لَمْ تَشْبَعِي.٢٩
30 “‘ನೀನು ನಾಚಿಕೆಯಿಲ್ಲದ ವೇಶ್ಯೆಯಂತೆ ವರ್ತಿಸಿದಾಗ ನಾನು ಕೋಪದಿಂದ ತುಂಬಿದೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
مَا أَمْرَضَ قَلْبَكِ، يَقُولُ ٱلسَّيِّدُ ٱلرَّبُّ، إِذْ فَعَلْتِ كُلَّ هَذَا فِعْلَ ٱمْرَأَةٍ زَانِيَةٍ سَلِيطَةٍ،٣٠
31 ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ, ದಿಬ್ಬವನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು, ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿ ನೀನಲ್ಲ.
بِبِنَائِكِ قُبَّتَكِ فِي رَأْسِ كُلِّ طَرِيقٍ، وَصُنْعِكِ مُرْتَفَعَتَكِ فِي كُلِّ شَارِعٍ. وَلَمْ تَكُونِي كَزَانِيَةٍ، بَلْ مُحْتَقَرةً ٱلْأُجْرَةَ.٣١
32 “‘ಆದರೆ ಗಂಡನಿಗೆ ಬದಲಾಗಿ ಪರರನ್ನು ಬಯಸುವ ವ್ಯಭಿಚಾರಿಯಾದ ಹೆಂಡತಿಯಾಗಿರುವೆ!
أَيَّتُهَا ٱلزَّوْجَةُ ٱلْفَاسِقَةُ، تَأْخُذُ أَجْنَبِيِّينَ مَكَانَ زَوْجِهَا.٣٢
33 ಸಾಮಾನ್ಯವಾಗಿ ವ್ಯಭಿಚಾರಿಗಳಿಗೆ ಬಹುಮಾನ ಕೊಡುತ್ತಾರೆ. ಆದರೆ ನೀನೇ ನಿನ್ನ ಪ್ರಿಯರಿಗೆಲ್ಲ ಬಹುಮಾನಗಳನ್ನು ಕೊಟ್ಟು, ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಲಂಚ ಕೊಡುತ್ತಿರುವೆ.
لِكُلِّ ٱلزَّوَانِي يُعْطُونَ هَدِيَّةً، أَمَّا أَنْتِ فَقَدْ أَعْطَيْتِ كُلَّ مُحِبِّيكِ هَدَايَاكِ، وَرَشَيْتِهِمْ لِيَأْتُوكِ مِنْ كُلِّ جَانِبٍ لِلزِّنَا بِكِ.٣٣
34 ಹೀಗಿರುವುದರಿಂದ ನಿನ್ನ ವ್ಯಭಿಚಾರವು ಇತರ ವೇಶ್ಯೆಯರ ವ್ಯಭಿಚಾರಕ್ಕಿಂತ ಭಿನ್ನ. ವ್ಯಭಿಚಾರ ಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ. ನೀನು ಬಹುಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವುದಿಲ್ಲ. ಆದ್ದರಿಂದ ನೀನು ಭಿನ್ನಳಾಗಿದ್ದು.
وَصَارَ فِيكِ عَكْسُ عَادَةِ ٱلنِّسَاءِ فِي زِنَاكِ، إِذْ لَمْ يُزْنَ وَرَاءَكِ، بَلْ أَنْتِ تُعْطِينَ أُجْرَةً وَلَا أُجْرَةَ تُعْطَى لَكِ، فَصِرْتِ بِٱلْعَكْسِ.٣٤
35 “‘ಆದಕಾರಣ ವ್ಯಭಿಚಾರಿಣಿಯೇ, ನೀನು ಯೆಹೋವ ದೇವರ ವಾಕ್ಯವನ್ನು ಕೇಳು.
«فَلِذَلِكَ يَا زَانِيَةُ ٱسْمَعِي كَلَامَ ٱلرَّبِّ:٣٥
36 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನಿನ್ನ ಮೋಹವನ್ನು ಸುರಿಸಿದ ಕಾರಣದಿಂದಲೂ, ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ, ನಿನ್ನ ಅಸಹ್ಯ ವಿಗ್ರಹಗಳಿಂದಲೂ, ನೀನು ಆಹುತಿ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ,
هَكَذَا قَالَ ٱلسَّيِّدُ ٱلرَّبُّ: مِنْ أَجْلِ أَنَّهُ قَدْ أُنْفِقَ نُحَاسُكِ وَٱنْكَشَفَتْ عَوْرَتُكِ بِزِنَاكِ بِمُحِبِّيكِ وَبِكُلِّ أَصْنَامِ رَجَاسَاتِكِ، وَلِدِمَاءِ بَنِيكِ ٱلَّذِينَ بَذَلْتِهِمْ لَهَا،٣٦
37 ನೀನು ಆನಂದಪಟ್ಟ ನಿನ್ನ ಪ್ರಿಯರೆಲ್ಲರನ್ನು ಮತ್ತು ಹಗೆಮಾಡಿದವರೆಲ್ಲರನ್ನು ಸಹ ಕೂಡಿಸುವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ, ಅವರೆದುರಿಗೆ ನಿನ್ನನ್ನು ಬೆತ್ತಲೆ ಮಾಡಿ, ನಿನ್ನ ಮಾನವನ್ನು ಬಯಲು ಮಾಡುವೆ. ಆಗ ಅವರು ನಿನ್ನನ್ನು ಬೆತ್ತಲೆಯಾಗಿ ನೋಡುವರು.
لِذَلِكَ هَأَنَذَا أَجْمَعُ جَمِيعَ مُحِبِّيكِ ٱلَّذِينَ لَذَذْتِ لَهُمْ، وَكُلَّ ٱلَّذِينَ أَحْبَبْتِهِمْ مَعَ كُلِّ ٱلَّذِينَ أَبْغَضْتِهِمْ، فَأَجْمَعُهُمْ عَلَيْكِ مِنْ حَوْلِكِ، وَأَكْشِفُ عَوْرَتَكِ لَهُمْ لِيَنْظُرُوا كُلَّ عَوْرَتِكِ.٣٧
38 ವ್ಯಭಿಚಾರ ಮಾಡಿದ ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ಮೇಲೆ ರಕ್ತ ಸುರಿಸುವೆನು.
وَأَحْكُمُ عَلَيْكِ أَحْكَامَ ٱلْفَاسِقَاتِ ٱلسَّافِكَاتِ ٱلدَّمِ، وَأَجْعَلُكِ دَمَ ٱلسَّخْطِ وَٱلْغَيْرَةِ.٣٨
39 ಅನಂತರ ನಿನ್ನನ್ನು ಅವರ ಕೈಗಳಿಗೆ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ, ನಿನ್ನ ಉನ್ನತ ಸ್ಥಾನಗಳನ್ನು ಒಡೆದು ಬಿಡುವರು. ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಆಭರಣಗಳನ್ನು ಕಸಿದುಕೊಂಡು, ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿಹೋಗುವರು.
وَأُسَلِّمُكِ لِيَدِهِمْ فَيَهْدِمُونَ قُبَّتَكِ وَيُهَدِّمُونَ مُرْتَفَعَاتِكِ، وَيَنْزِعُونَ عَنْكِ ثِيَابَكِ، وَيَأْخُذُونَ أَدَوَاتِ زِينَتِكِ، وَيَتْرُكُونَكِ عُرْيَانَةً وَعَارِيَةً.٣٩
40 ಅವರು ನಿನಗೆ ವಿರುದ್ಧವಾಗಿ ಒಂದು ಗುಂಪನ್ನು ಕರೆದುಕೊಂಡು ಬಂದು, ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಖಡ್ಗಗಳಿಂದ ನಿನ್ನನ್ನು ತಿವಿಯುವರು.
وَيُصْعِدُونَ عَلَيْكِ جَمَاعَةً، وَيَرْجُمُونَكِ بِٱلْحِجَارَةِ وَيَقْطَعُونَكِ بِسُيُوفِهِمْ،٤٠
41 ಅವರು ನಿನ್ನ ಮನೆಗಳನ್ನು ಸುಟ್ಟು, ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯತೀರಿಸುವರು. ನೀನು ವ್ಯಭಿಚಾರ ಮಾಡುವುದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯರಿಗೆ ಕೂಲಿ ಸಹ ಕೊಡುವುದನ್ನು ನಿಲ್ಲಿಸುವೆನು.
وَيُحْرِقُونَ بُيُوتَكِ بِٱلنَّارِ، وَيُجْرُونَ عَلَيْكِ أَحْكَامًا قُدَّامَ عُيُونِ نِسَاءٍ كَثِيرَةٍ. وَأَكُفُّكِ عَنِ ٱلزِّنَا، وَأَيْضًا لَا تُعْطِينَ أُجْرَةً بَعْدُ.٤١
42 ಈ ರೀತಿ ನಿನ್ನ ಮೇಲಿನ ನನ್ನ ಸಿಟ್ಟನ್ನು ತೀರಿಸುವೆನು. ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ, ಶಾಂತನಾಗಿ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲ.
وَأُحِلُّ غَضَبِي بِكِ فَتَنْصَرِفُ غَيْرَتِي عَنْكِ، فَأَسْكُنُ وَلَا أَغْضَبُ بَعْدُ.٤٢
43 “‘ನೀನು ನಿನ್ನ ಯೌವನದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ, ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿನ್ನ ಇತರ ಎಲ್ಲಾ ಅಸಹ್ಯವಾದವುಗಳ ಜೊತೆಗೆ, ಈ ಅಪವಿತ್ರತೆಯನ್ನು ನೀನು ಮಾಡಲಿಲ್ಲವೇ?
مِنْ أَجْلِ أَنَّكِ لَمْ تَذْكُرِي أَيَّامَ صِبَاكِ، بَلْ أَسْخَطْتِنِي فِي كُلِّ هَذِهِ، فَهَأَنَذَا أَيْضًا أَجْلِبُ طَرِيقَكِ عَلَى رَأْسِكِ، يَقُولُ ٱلسَّيِّدُ ٱلرَّبُّ، فَلَا تَفْعَلِينَ هَذِهِ ٱلرَّذِيلَةَ فَوْقَ رَجَاسَاتِكِ كُلِّهَا.٤٣
44 “‘“ತಾಯಿಯಂತೆ ಮಗಳು,” ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಪ್ರತಿಯೊಬ್ಬರು ಹೇಳುವರು.
«هُوَذَا كُلُّ ضَارِبِ مَثَلٍ يَضْرِبُ مَثَلًا عَلَيْكِ قَائِلًا: مِثْلُ ٱلْأُمِّ بِنْتُهَا.٤٤
45 ಗಂಡನಿಗೂ, ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು. ಗಂಡನಿಗೂ, ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ. ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
اِبْنَةُ أُمِّكِ أَنْتِ، ٱلْكَارِهَةُ زَوْجَهَا وَبَنِيهَا. وَأَنْتِ أُخْتُ أَخَوَاتِكِ ٱللَّوَاتِي كَرِهْنَ أَزْوَاجَهُنَّ وَأَبْنَاءَهُنَّ. أُمُّكُنَّ حِثِّيَّةٌ وَأَبُوكُنَّ أَمُورِيٌّ.٤٥
46 ನಿನ್ನ ಉತ್ತರ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ. ದಕ್ಷಿಣ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
وَأُخْتُكِ ٱلْكُبْرَى ٱلسَّامِرَةُ هِيَ وَبَنَاتُهَا ٱلسَّاكِنَةُ عَنْ شِمَالِكِ، وَأُخْتُكِ ٱلصُّغْرَى ٱلسَّاكِنَةُ عَنْ يَمِينِكِ هِيَ سَدُومُ وَبَنَاتُهَا.٤٦
47 ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ. ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ. ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.
وَلَا فِي طَرِيقِهِنَّ سَلَكْتِ، وَلَا مِثْلَ رَجَاسَاتِهِنَّ فَعَلْتِ، كَأَنَّ ذَلِكَ قَلِيلٌ فَقَطْ، فَفَسَدْتِ أَكْثَرَ مِنْهُنَّ فِي كُلِّ طُرُقِكِ.٤٧
48 ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು ಮತ್ತು ಅವಳ ಪುತ್ರಿಯರು; ನೀನು ನಿನ್ನ ಪುತ್ರಿಯರು ಮಾಡಿದೆ ಹಾಗೆ ಮಾಡಿಲಿಲ್ಲ.
حَيٌّ أَنَا، يَقُولُ ٱلسَّيِّدُ ٱلرَّبُّ، إِنَّ سَدُومَ أُخْتَكِ لَمْ تَفْعَلْ هِيَ وَلَا بَنَاتُهَا كَمَا فَعَلْتِ أَنْتِ وَبَنَاتُكِ.٤٨
49 “‘ಸೊದೋಮ್ ಎಂಬ ನಿನ್ನ ತಂಗಿಯ ಪಾಪವನ್ನು ನೋಡು; ಗರ್ವವ, ಅತಿ ಭೋಜನ, ಸ್ವಾರ್ಥತೆ; ಇವು ಆಕೆಯಲ್ಲಿಯೂ ಆಕೆಯ ಪುತ್ರಿಯರಲ್ಲಿಯೂ ಇದ್ದವು. ಆಕೆಯು ದೀನ ದರಿದ್ರರಿಗೆ ಸಹಾಯ ಮಾಡಲಿಲ್ಲ.
هَذَا كَانَ إِثْمَ أُخْتِكِ سَدُومَ: ٱلْكِبْرِيَاءُ وَٱلشَّبَعُ مِنَ ٱلْخُبْزِ وَسَلَامُ ٱلِٱطْمِئْنَانِ كَانَ لَهَا وَلِبَنَاتِهَا، وَلَمْ تُشَدِّدْ يَدَ ٱلْفَقِيرِ وَٱلْمِسْكِينِ،٤٩
50 ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯವಾದವುಗಳನ್ನು ನಡೆಸಿದರು. ಆದ್ದರಿಂದ ನಾನು ಅದನ್ನು ನೋಡಿ, ಅವರನ್ನು ನಿರ್ಮೂಲ ಮಾಡಿದೆನು.
وَتَكَبَّرْنَ وَعَمِلْنَ ٱلرِّجْسَ أَمَامِي فَنَزَعْتُهُنَّ كَمَا رَأَيْتُ.٥٠
51 ಸಮಾರ್ಯವೆಂಬಾಕೆಯು ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದೆ. ನೀನು ಮಾಡಿದ ಲೆಕ್ಕವಿಲ್ಲದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
وَلَمْ تُخْطِئِ ٱلسَّامِرَةُ نِصْفَ خَطَايَاكِ. بَلْ زِدْتِ رَجَاسَاتِكِ أَكْثَرَ مِنْهُنَّ، وَبَرَّرْتِ أَخَوَاتِكِ بِكُلِّ رَجَاسَاتِكِ ٱلَّتِي فَعَلْتِ.٥١
52 ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು. ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ. ಅವರು ನಿನಗಿಂತ ನೀತಿವಂತರು. ಹೌದು, ನೀನು ನಿನ್ನ ಸಹೋದರಿಯರನ್ನು ನೀತಿವಂತರೆಂದು ತೋರ್ಪಡಿಸಿದ್ದರಿಂದ ನೀನೇ ನಾಚಿಕೆಪಟ್ಟು, ನಿನ್ನ ನಿಂದೆಯನ್ನು ಹೊತ್ತುಕೋ.
فَٱحْمِلِي أَيْضًا خِزْيَكِ، أَنْتِ ٱلْقَاضِيَةُ عَلَى أَخَوَاتِكِ، بِخَطَايَاكِ ٱلَّتِي بِهَا رَجَسْتِ أَكْثَرَ مِنْهُنَّ. هُنَّ أَبَرُّ مِنْكِ، فَٱخْجَلِي أَنْتِ أَيْضًا، وَٱحْمِلِي عَارَكِ بِتَبْرِيرِكِ أَخَوَاتِكِ.٥٢
53 “‘ಸೊದೋಮ್ ಮತ್ತು ಆಕೆಯ ಕುಮಾರಿಯರ ಹಾಗೂ ಸಮಾರ್ಯ ಮತ್ತು ಆಕೆಯ ಕುಮಾರಿಯ ಸೌಭಾಗ್ಯವನ್ನು ಪುನಃ ನೀಡುವೆನು. ಅದರೊಂದಿಗೆ ನಿನ್ನ ಸೌಭಾಗ್ಯವನ್ನೂ ಮರಳಿಸುವೆನು.
وَأُرَجِّعُ سَبْيَهُنَّ، سَبْيَ سَدُومَ وَبَنَاتِهَا، وَسَبْيَ ٱلسَّامِرَةِ وَبَنَاتِهَا، وَسَبْيَ مَسْبِيِّيكِ فِي وَسْطِهَا،٥٣
54 ಏಕೆಂದರೆ ನೀನು ನಿನ್ನ ನಿಂದೆಯನ್ನು ಹೊತ್ತುಕೊಂಡು, ಅವರನ್ನು ಆಧರಿಸುವಾಗ ಲಜ್ಜೆಪಡುವೆ, ನಾಚಿಕೆಗೊಳ್ಳುವೆ.
لِكَيْ تَحْمِلِي عَارَكِ وَتَخْزَيْ مِنْ كُلِّ مَا فَعَلْتِ بِتَعْزِيَتِكِ إِيَّاهُنَّ.٥٤
55 ಆಗ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ, ಅವರ ಪುತ್ರಿಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ, ನಿನ್ನ ಪುತ್ರಿಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ.
وَأَخَوَاتُكِ سَدُومُ وَبَنَاتُهَا يَرْجِعْنَ إِلَى حَالَتِهِنَّ ٱلْقَدِيمَةِ، وَٱلسَّامِرَةُ وَبَنَاتُهَا يَرْجِعْنَ إِلَى حَالَتِهِنَّ ٱلْقَدِيمَةِ، وَأَنْتِ وَبَنَاتُكِ تَرْجِعْنَ إِلَى حَالَتِكُنَّ ٱلْقَدِيمَةِ.٥٥
56 ನಿನ್ನ ಸಹೋದರಿಯರಾದ ಸೊದೋಮನ್ನು ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲಿಲ್ಲ.
وَأُخْتُكِ سَدُومُ لَمْ تَكُنْ تُذْكَرْ فِي فَمِكِ يَوْمَ كِبْرِيَائِكِ،٥٦
57 ಅರಾಮಿನ ಪುತ್ರಿಯರಿಂದಲೂ ಮತ್ತು ಅದರ ಸುತ್ತಲಿರುವಂತ ಎಲ್ಲವುಗಳಿಂದಲೂ ಮತ್ತು ನಿನ್ನನ್ನು ಉದಾಸೀನ ಮಾಡಿದಂಥ ಎಲ್ಲಾ ಫಿಲಿಷ್ಟಿಯರ ಪುತ್ರಿಯರಿಂದಲೂ, ನಿನಗೆ ನಿಂದೆಯು ಬಂದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವುದಕ್ಕೆ ಪೂರ್ವದಲ್ಲಿಯೇ
قَبْلَ مَا ٱنْكَشَفَ شَرُّكِ، كَمَا فِي زَمَانِ تَعْيِيرِ بَنَاتِ أَرَامَ وَكُلِّ مَنْ حَوْلَهَا، بَنَاتِ ٱلْفِلِسْطِينِيِّينَ ٱللَّوَاتِي يَحْتَقِرْنَكِ مِنْ كُلِّ جِهَةٍ.٥٧
58 ನೀನು ನಿನ್ನ ದುಷ್ಕರ್ಮಗಳ ಮತ್ತು ನಿನ್ನ ಅಸಹ್ಯಗಳ ಫಲವನ್ನು ಅನುಭವಿಸಬೇಕಾಗಿ ಬಂತು, ಎಂದು ಯೆಹೋವ ದೇವರು ಹೇಳುತ್ತಾರೆ.
رَذِيلَتُكِ وَرَجَاسَاتُكِ أَنْتِ تَحْمِلِينَهَا، يَقُولُ ٱلرَّبُّ.٥٨
59 “‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ. ನೀನು ಒಡಂಬಡಿಕೆಯನ್ನು ಮೀರಿ, ನನ್ನ ಆಣೆಯನ್ನು ತಿರಸ್ಕರಿಸಿರುವೆ.
«لِأَنَّهُ هَكَذَا قَالَ ٱلسَّيِّدُ ٱلرَّبُّ: إِنِّي أَفْعَلُ بِكِ كَمَا فَعَلْتِ، إِذِ ٱزْدَرَيْتِ بِٱلْقَسَمِ لِنَكْثِ ٱلْعَهْدِ.٥٩
60 ಆದರೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ನಿನಗಾಗಿ ನಿತ್ಯವಾದ ಒಡಂಬಡಿಕೆಯೊಂದನ್ನು ಸ್ಥಾಪಿಸುವೆನು.
وَلَكِنِّي أَذْكُرُ عَهْدِي مَعَكِ فِي أَيَّامِ صِبَاكِ، وَأُقِيمُ لَكِ عَهْدًا أَبَدِيًّا.٦٠
61 ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು, ನಿನ್ನ ಸಹೋದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವೆ. ಅವರನ್ನು ನಿನ್ನ ಪುತ್ರಿಯರಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆಯಿಂದಲ್ಲ.
فَتَتَذَكَّرِينَ طُرُقَكِ وَتَخْجَلِينَ إِذْ تَقْبَلِينَ أَخَوَاتِكِ ٱلْكِبَرَ وَٱلصِّغَرَ، وَأَجْعَلُهُنَّ لَكِ بَنَاتٍ، وَلَكِنْ لَا بِعَهْدِكِ.٦١
62 ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು. ಆದ್ದರಿಂದ ನಾನೇ ಯೆಹೋವ ದೇವರೆಂದು ನಿಮಗೆ ಗೊತ್ತಾಗುವುದು.
وَأَنَا أُقِيمُ عَهْدِي مَعَكِ، فَتَعْلَمِينَ أَنِّي أَنَا ٱلرَّبُّ،٦٢
63 ಆಗ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದು ಎಂದು ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’”
لِكَيْ تَتَذَكَّرِي فَتَخْزَيْ وَلَا تَفْتَحِي فَاكِ بَعْدُ بِسَبَبِ خِزْيِكِ، حِينَ أَغْفِرُ لَكِ كُلَّ مَا فَعَلْتِ، يَقُولُ ٱلسَّيِّدُ ٱلرَّبُّ».٦٣

< ಯೆಹೆಜ್ಕೇಲನು 16 >