< ಯೆಹೆಜ್ಕೇಲನು 19 >
1 “ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನರ ವಿಷಯವಾಗಿ ಈ ಪ್ರಲಾಪವನ್ನೆತ್ತಿ,
১“আর তুমি ইস্রায়েলের নেতাদের বিষয়ে বিলাপ কর।
2 ಹೀಗೆ ಹೇಳು: “‘ಇಗೋ, ನಿನ್ನ ತಾಯಿ, ಸಿಂಹಗಳ ಮಧ್ಯೆ ಸಿಂಹಿಣಿ, ತನ್ನ ಮರಿಗಳನ್ನು ಸಾಕಿ, ಯುವ ಸಿಂಹಗಳ ನಡುವೆ ವಾಸಿಸಿತು.
২বল, তোমার মা কি ছিল? সে তো সিংহী ছিল; সিংহদের মধ্যে শুত, যুবসিংহদের মধ্যে নিজের বাচ্চাদেরকে প্রতিপালন করত।
3 ಅವಳೂ ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು, ಇದು ಪ್ರಾಯದ ಸಿಂಹವಾಯಿತು. ಇದು ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಿಬಿಟ್ಟಿತು.
৩তার প্রতিপালিত এক বাচ্চা যুবসিংহ হয়ে উঠল, সে শিকার বিচ্ছিন্ন করতে শিখল, মানুষদেরকে গ্রাস করতে লাগল।
4 ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು, ಅವರ ಗುಂಡಿಯಲ್ಲಿ ಇದನ್ನು ಹಿಡಿದುಕೊಂಡರು. ಸಂಕೋಲೆಗಳಿಂದ ಬಂಧಿಸಿ, ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.
৪জাতিরাও তার বিষয় শুনতে পেল; সে তাদের গর্তে ধরা পড়ল; তারা তাকে হুকে ঝুলিয়ে মিশর দেশে নিয়ে গেল।
5 “‘ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕಳೆದುಕೊಂಡೆನೆಂದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು, ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು.
৫সেই সিংহী যখন দেখল, সে প্রতীক্ষা করেছিল, কিন্তু তার প্রত্যাশা বিনষ্ট হল, তখন নিজের আর একটা শাবককে নিয়ে যুবসিংহ করে তুলল।
6 ಅದೂ ಸಿಂಹಗಳ ನಡುವೆ ತಿರುಗಾಡಿ, ಪ್ರಾಯದ ಸಿಂಹವಾಗಿ ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಿಬಿಟ್ಟಿತು.
৬পরে সে সিংহদের সঙ্গে ঘোরাঘুরি যুবসিংহ হয়ে উঠল; সে শিকার বিচ্ছিন্ন করতে শিখল, মানুষদেরকে গ্রাস করতে লাগল।
7 ಅವರ ಅರಮನೆಗಳನ್ನು ಹಾಳುಮಾಡಿತು, ಅವರ ನಗರಗಳನ್ನೂ ನಾಶಮಾಡಿತು, ಅದರ ಘರ್ಜನೆಯ ಶಬ್ದದಿಂದಾಗಿ ದೇಶವೂ, ಅದರಲ್ಲಿದ್ದ ಎಲ್ಲರೂ ದಂಗಾದವು.
৭তারপর সে তাদের বিধবাদেরকে ধর্ষণ এবং তাদের শহরগুলি ধ্বংস করেছে। তার গর্জনের শব্দে দেশ ও তার সমস্তই পরিত্যক্ত হল।
8 ಆಗ ಜನಾಂಗಗಳು ಸುತ್ತಲಿನ ಪ್ರಾಂತಗಳೊಳಗಿಂದ ಕೂಡಿಬಂದು, ಅದಕ್ಕೆ ವಿರೋಧವಾಗಿ ನಿಂತು, ಅದರ ಮೇಲೆ ಬಲೆಯನ್ನೊಡ್ಡಿದರು, ಆಗ ಅದು ಅವರ ಗುಂಡಿಯಲ್ಲಿ ಸಿಕ್ಕಿಬಿದ್ದಿತು.
৮কিন্তু সমস্ত দিকের জাতিরা নানা প্রদেশ থেকে তার বিপক্ষে দাঁড়াল, তারা তাদের জাল তার ওপরে বিস্তার করল। সে তাদের ফাঁদে ধরা পড়ল।
9 ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಪಂಜರದಲ್ಲಿ ಹಾಕಿ, ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾಯೇಲಿನ ಪರ್ವತಗಳ ಮೇಲೆ ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿದರು.
৯তারা তাকে হুকে ঝুলিয়ে খাঁচায় রাখল এবং তাকে বাবিলের রাজার কাছে নিয়ে গেল। তারা ইস্রায়েলের পর্বতে যেন তার হুঙ্কার আর শুনতে পাওয়া না যায়, তাই তাকে পার্বত্য দুর্গের মধ্যে রাখল।
10 “‘ನಿನ್ನ ತಾಯಿ ನೀರಿನ ಬಳಿಯಲ್ಲಿ ನೆಟ್ಟ ದ್ರಾಕ್ಷಿ ಗಿಡದ ಹಾಗೆ ಇದ್ದಾಳೆ. ಅದು ಸಮೃದ್ಧಿಯಾದ ನೀರಾವರಿಯಿಂದ ಫಲವುಳ್ಳದ್ದಾಗಿಯೂ ಇದೆ.
১০তোমার রক্তে তোমার মা জলের পাশে রোপিত আঙ্গুরলতার মতো ছিল। সে প্রচুর জলের কারণে ফলবান ও ডালে পূর্ণ হল।
11 ಆಳುವವರ ರಾಜದಂಡಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ. ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ. ಹಾಗೆಯೇ ಅದು ಬಹು ಕೊಂಬೆಗಳ ಮಧ್ಯದಲ್ಲಿ ಎತ್ತರವಾಗಿ ಕಾಣಬರುತ್ತಿದೆ.
১১সে শাসকদের রাজদন্ডের জন্য শক্ত ডাল হয়েছিল এবং তার উচ্চতা ঘন ঝোপঝাড়ের মধ্যে উচ্চ হয়েছিল।
12 ಆದರೆ ಆ ಲತೆಯನ್ನು ರೋಷದಲ್ಲಿ ಕಿತ್ತು ನೆಲಕ್ಕೆ ಬಿಸಾಡಿದರು. ಪೂರ್ವದಿಕ್ಕಿನ ಗಾಳಿಯು ಅದರ ಫಲವನ್ನು ಒಣಗಿಸಿತು. ಅದರ ಬಲವಾದ ಬಳ್ಳಿಗಳು ಮುರಿದು ಒಣಗಿಹೋದವು. ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.
১২কিন্তু সে কোপে নির্মূল এবং ভূমিতে নিক্ষিপ্ত হয়েছিল এবং পূর্বের বায়ুতে তার ফল শুকনো হয়ে গিয়েছিল। তার শক্ত ডাল সব ভেঙে গেল ও শুকনো হল এবং আগুন তাদের গ্রাস করল।
13 ಈಗ ಅದು ಮರುಭೂಮಿಯಲ್ಲಿ ಒಣಗಿ, ನೀರಿಲ್ಲದಂಥ ಪ್ರದೇಶದಲ್ಲಿ ನೆಡಲಾಗಿದೆ.
১৩অতএব এখন সে মরুপ্রান্তের মধ্যে তৃষ্ণার্ত ও শুকনো জমিতে রোপিত হয়েছে।
14 ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು, ಅದರಲ್ಲಿ ಫಲವನ್ನು ತಿಂದುಬಿಟ್ಟಿದೆ. ಅದರಲ್ಲಿ ಆಳುವುದಕ್ಕೆ ರಾಜದಂಡಕ್ಕಾಗಿ ತಕ್ಕ ಬಲವುಳ್ಳ ಬಳ್ಳಿಯು ಈಗ ಇಲ್ಲ.’ ಇದು ಪ್ರಲಾಪವಾಗಿದೆ. ಪ್ರಲಾಪಕ್ಕಾಗಿಯೇ ಇದೆ.”
১৪কারণ তার বড় ডাল থেকে আগুন বেরিয়েছে এবং তার ফল গ্রাস করেছে। শাসনের রাজদণ্ডের জন্য একটি শক্ত ডালও তাতে নেই। এই হল বিলাপ এবং বিলাপ হিসাবে গান গাওয়া হবে।”