< ಯೆಹೆಜ್ಕೇಲನು 2 >

1 ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಎದ್ದು ನಿಲ್ಲು, ನಿನ್ನ ಸಂಗಡ ಮಾತನಾಡಬೇಕು.”
他向我說:「人子,站起來! 我要同你講話。」
2 ಹೀಗೆ ಅವರು ನನ್ನ ಸಂಗಡ ಮಾತನಾಡುವಾಗ, ದೇವರಾತ್ಮರು ನನ್ನೊಳಗೆ ಪ್ರವೇಶಿಸಿ, ನನ್ನನ್ನು ನಿಂತುಕೊಳ್ಳುವಂತೆ ಮಾಡಿದರು. ಆಗ ಅವರು ನನ್ನೊಂದಿಗೆ ಮಾತನಾಡುವುದನ್ನು ಚೆನ್ನಾಗಿ ಕೇಳಿದೆನು.
他向我講話時,有一種神力進入我內,使我站起來,也聽見他同我講話。
3 ಅವರು, “ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿ ಬಿದ್ದಿರುವ ಮತ್ತು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ. ಅವರೂ, ಅವರ ಪಿತೃಗಳೂ ಇಂದಿನವರೆಗೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.
他向我說:「人子,我派遣你到以色列子民,到反抗我的那個叛逆的人民那裏去,他們和他們的祖先,直到今天還違背我。
4 ಅವರು ಕಠಿಣ ಹೃದಯದವರು ಮತ್ತು ಹಠಮಾರಿ ಆಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ. ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಹೇಳಬೇಕು.
那些子民雖厚顏無恥,心腸頑硬,我仍派遣你到他們那裏,向他們說:吾主上主這樣說:
5 ಅವರು ಕೇಳಲಿ ಅಥವಾ ಕೇಳದೇ ಇರಲಿ, ಏಕೆಂದರೆ ಅವರು ತಿರುಗಿಬೀಳುವ ಜನರು, ಆದರೆ ತಮ್ಮೊಳಗೆ ಪ್ರವಾದಿ ಇರುವನೆಂದು ತಿಳಿದುಕೊಂಡರೆ ಸಾಕು.
他們或是聽,或是不聽──他們原是叛逆的家族──終究要承認在他們中有一位先知。
6 ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ.
人子,你不必怕他們,也不要怕他們說什麼,也不要怕他們反抗你,輕慢你,好像叫你坐在毒蠍之上;不要怕他們說什麼,在他們面前,也不要膽怯,因為他們是叛逆的家族。
7 ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು. ಅವರು ಕೇಳಿದರೂ ಸರಿ, ಕೇಳದಿದ್ದರೂ ಸರಿ, ಏಕೆಂದರೆ ಅವರು ತಿರುಗಿಬೀಳುವ ಜನರು.
無論他們聽,或是不聽,你應向他們宣講我的話,他們原是叛逆的家族。」「
8 ಆದರೆ ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವುದನ್ನು ಕೇಳು: ಆ ತಿರುಗಿಬೀಳುವ ಜನರ ಹಾಗೆ ನೀನೂ ತಿರುಗಿಬೀಳಬೇಡ. ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವುದನ್ನು ತಿನ್ನು,” ಎಂದರು.
人子,你要聽我向你講的話,你不要叛逆,像叛逆的家族。你要張口,把我給你的吞下。」
9 ಇಗೋ, ನಾನು ನೋಡುತ್ತಿದ್ದಂತೆ ಒಂದು ಕೈ ನನ್ನ ಕಡೆಗೆ ಚಾಚಿತ್ತು. ಅದರಲ್ಲಿ ಗ್ರಂಥದ ಸುರುಳಿಯೊಂದು ಕಾಣಿಸಿತು.
我觀望時,看,有一隻手向我伸來,手上有一卷書。
10 ಆ ಸುರುಳಿಯನ್ನು ನನ್ನೆದುರಿನಲ್ಲೇ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಪ್ರಲಾಪ, ಶೋಕ ಮತ್ತು ಶಾಪದ ಪದಗಳನ್ನು ಬರೆಯಲಾಗಿತ್ತು.
他把那卷書在我面前展開,內外都寫著字,寫的是:「哀傷、悲歎和災禍。」

< ಯೆಹೆಜ್ಕೇಲನು 2 >