< ಯೆಹೆಜ್ಕೇಲನು 20 >

1 ಏಳನೆಯ ವರ್ಷದ, ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವ ದೇವರ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತುಕೊಂಡರು.
וַיְהִי ׀ בַּשָּׁנָה הַשְּׁבִיעִית בַּחֲמִשִׁי בֶּעָשׂוֹר לַחֹדֶשׁ בָּאוּ אֲנָשִׁים מִזִּקְנֵי יִשְׂרָאֵל לִדְרֹשׁ אֶת־יְהֹוָה וַיֵּשְׁבוּ לְפָנָֽי׃
2 ಆಗ ಯೆಹೋವ ದೇವರ ವಾಕ್ಯವು ನನಗೆ ಬಂದಿತು,
וַיְהִי דְבַר־יְהֹוָה אֵלַי לֵאמֹֽר׃
3 “ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’
בֶּן־אָדָם דַּבֵּר אֶת־זִקְנֵי יִשְׂרָאֵל וְאָמַרְתָּ אֲלֵהֶם כֹּה אָמַר אֲדֹנָי יֱהֹוִה הֲלִדְרֹשׁ אֹתִי אַתֶּם בָּאִים חַי־אָנִי אִם־אִדָּרֵשׁ לָכֶם נְאֻם אֲדֹנָי יֱהֹוִֽה׃
4 “ನೀನು ಅವರಿಗೆ ನ್ಯಾಯತೀರಿಸುವೆಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸುವೆಯೋ? ಹಾಗಾದರೆ ಅವರ ಪಿತೃಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.
הֲתִשְׁפֹּט אֹתָם הֲתִשְׁפּוֹט בֶּן־אָדָם אֶת־תּוֹעֲבֹת אֲבוֹתָם הוֹדִיעֵֽם׃
5 ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇಸ್ರಾಯೇಲನ್ನು ಆಯ್ದುಕೊಂಡ ದಿವಸದಲ್ಲಿ ಯಾಕೋಬನ ವಂಶದವರಿಗೆ ನನ್ನ ಕೈಯೆತ್ತಿ, “ನಿಮ್ಮ ಸಾರ್ವಭೌಮ ಯೆಹೋವ ದೇವರು ನಾನೇ” ಎಂದು ಈಜಿಪ್ಟ್ ದೇಶದಲ್ಲಿ ಅವರಿಗೆ ಹೇಳಿದೆನು.
וְאָמַרְתָּ אֲלֵיהֶם כֹּה־אָמַר אֲדֹנָי יֱהֹוִה בְּיוֹם בׇּחֳרִי בְיִשְׂרָאֵל וָאֶשָּׂא יָדִי לְזֶרַע בֵּית יַעֲקֹב וָאִוָּדַע לָהֶם בְּאֶרֶץ מִצְרָיִם וָאֶשָּׂא יָדִי לָהֶם לֵאמֹר אֲנִי יְהֹוָה אֱלֹֽהֵיכֶֽם׃
6 ನಾನು ಅವರಿಗೆ ಪ್ರಮಾಣಮಾಡಿ ಈಜಿಪ್ಟ್ ದೇಶದಿಂದ ಹೊರಗೆ ತಂದು, ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ದೇಶಕ್ಕೆ ಅವರನ್ನು ಆ ದಿವಸದಲ್ಲಿ ಕರೆತಂದೆನು.
בַּיּוֹם הַהוּא נָשָׂאתִי יָדִי לָהֶם לְהוֹצִיאָם מֵאֶרֶץ מִצְרָיִם אֶל־אֶרֶץ אֲשֶׁר־תַּרְתִּי לָהֶם זָבַת חָלָב וּדְבַשׁ צְבִי הִיא לְכׇל־הָאֲרָצֽוֹת׃
7 ಆಮೇಲೆ ನಾನು ಅವರಿಗೆ, “ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳ ಮುಂದೆ ಅಸಹ್ಯವಾದವುಗಳನ್ನು ಬಿಸಾಡಿ ಬಿಡಿರಿ. ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನಾಗಿರುವೆನು.”
וָאֹמַר אֲלֵהֶם אִישׁ שִׁקּוּצֵי עֵינָיו הַשְׁלִיכוּ וּבְגִלּוּלֵי מִצְרַיִם אַל־תִּטַּמָּאוּ אֲנִי יְהֹוָה אֱלֹהֵיכֶֽם׃
8 “‘ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ಕಣ್ಣಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ. ಅವರು ಈಜಿಪ್ಟಿನ ವಿಗ್ರಹಗಳನ್ನು ಬಿಡಲಿಲ್ಲ. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಈಜಿಪ್ಟ್ ದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.
וַיַּמְרוּ־בִי וְלֹא אָבוּ לִשְׁמֹעַ אֵלַי אִישׁ אֶת־שִׁקּוּצֵי עֵֽינֵיהֶם לֹא הִשְׁלִיכוּ וְאֶת־גִּלּוּלֵי מִצְרַיִם לֹא עָזָבוּ וָאֹמַר לִשְׁפֹּךְ חֲמָתִי עֲלֵיהֶם לְכַלּוֹת אַפִּי בָּהֶם בְּתוֹךְ אֶרֶץ מִצְרָֽיִם׃
9 ಆದರೆ ಅವರು ಯಾರ ಮಧ್ಯದಲ್ಲಿದ್ದರೋ, ನಾನು ಯಾರ ಮುಂದೆ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯಪಡಿಸಿದೆನೋ ಆ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸವನ್ನು ಮಾಡಿದೆನು.
וָאַעַשׂ לְמַעַן שְׁמִי לְבִלְתִּי הֵחֵל לְעֵינֵי הַגּוֹיִם אֲשֶׁר־הֵמָּה בְתוֹכָם אֲשֶׁר נוֹדַעְתִּי אֲלֵיהֶם לְעֵינֵיהֶם לְהוֹצִיאָם מֵאֶרֶץ מִצְרָֽיִם׃
10 ಆದ್ದರಿಂದ ನಾನು ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆತಂದು, ಮರುಭೂಮಿಯೊಳಗೆ ಅವರನ್ನು ಬರಮಾಡಿದೆನು.
וָאוֹצִיאֵם מֵאֶרֶץ מִצְרָיִם וָאֲבִאֵם אֶל־הַמִּדְבָּֽר׃
11 ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು, ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
וָאֶתֵּן לָהֶם אֶת־חֻקּוֹתַי וְאֶת־מִשְׁפָּטַי הוֹדַעְתִּי אוֹתָם אֲשֶׁר יַעֲשֶׂה אוֹתָם הָאָדָם וָחַי בָּהֶֽם׃
12 ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಯೆಹೋವ ದೇವರು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ, ಅವರಿಗೂ ಗುರುತಾಗಿರುವುದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
וְגַם אֶת־שַׁבְּתוֹתַי נָתַתִּי לָהֶם לִהְיוֹת לְאוֹת בֵּינִי וּבֵינֵיהֶם לָדַעַת כִּי אֲנִי יְהֹוָה מְקַדְּשָֽׁם׃
13 “‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.
וַיַּמְרוּ־בִי בֵֽית־יִשְׂרָאֵל בַּמִּדְבָּר בְּחֻקּוֹתַי לֹא־הָלָכוּ וְאֶת־מִשְׁפָּטַי מָאָסוּ אֲשֶׁר יַעֲשֶׂה אֹתָם הָֽאָדָם וָחַי בָּהֶם וְאֶת־שַׁבְּתֹתַי חִלְּלוּ מְאֹד וָאֹמַר לִשְׁפֹּךְ חֲמָתִי עֲלֵיהֶם בַּמִּדְבָּר לְכַלּוֹתָֽם׃
14 ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ, ಆ ಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.
וָאֶעֱשֶׂה לְמַעַן שְׁמִי לְבִלְתִּי הֵחֵל לְעֵינֵי הַגּוֹיִם אֲשֶׁר הוֹצֵאתִים לְעֵינֵיהֶֽם׃
15 ಆದರೂ ಹಾಲೂ ಜೇನೂ ಹರಿಯುವಂಥ ದೇಶಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಮರುಭೂಮಿಯಲ್ಲಿ ಅವರಿಗೆ ನನ್ನ ಕೈಯೆತ್ತಿ ಪ್ರಮಾಣಮಾಡಿದೆನು.
וְגַם־אֲנִי נָשָׂאתִי יָדִי לָהֶם בַּמִּדְבָּר לְבִלְתִּי הָבִיא אוֹתָם אֶל־הָאָרֶץ אֲשֶׁר־נָתַתִּי זָבַת חָלָב וּדְבַשׁ צְבִי הִיא לְכׇל־הָאֲרָצֽוֹת׃
16 ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ವಿಶ್ರಾಂತಿಯ ದಿನಗಳನ್ನು ಅಪವಿತ್ರ ಮಾಡಿದ್ದರು.
יַעַן בְּמִשְׁפָּטַי מָאָסוּ וְאֶת־חֻקּוֹתַי לֹא־הָלְכוּ בָהֶם וְאֶת־שַׁבְּתוֹתַי חִלֵּלוּ כִּי אַחֲרֵי גִלּוּלֵיהֶם לִבָּם הֹלֵֽךְ׃
17 ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು. ನಾನು ಅವರನ್ನು ಮರುಭೂಮಿಯಲ್ಲಿ ಅಂತ್ಯಗೊಳಿಸಲಿಲ್ಲ.
וַתָּחׇס עֵינִי עֲלֵיהֶם מִֽשַּׁחֲתָם וְלֹא־עָשִׂיתִי אוֹתָם כָּלָה בַּמִּדְבָּֽר׃
18 ಮರುಭೂಮಿಯಲ್ಲಿ ನಾನು ಅವರ ಮಕ್ಕಳಿಗೆ ಹೇಳಿದ್ದೇನೆಂದರೆ, “ನೀವು ನಿಮ್ಮ ತಂದೆಗಳ ನಿಯಮಗಳನ್ನು ಅನುಸರಿಸಬೇಡಿರಿ, ಅವರ ನ್ಯಾಯಗಳನ್ನು ಕೈಕೊಳ್ಳಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಮಾಡಿಕೊಳ್ಳಬೇಡಿರಿ.
וָאֹמַר אֶל־בְּנֵיהֶם בַּמִּדְבָּר בְּחוּקֵּי אֲבֽוֹתֵיכֶם אַל־תֵּלֵכוּ וְאֶת־מִשְׁפְּטֵיהֶם אַל־תִּשְׁמֹרוּ וּבְגִלּוּלֵיהֶם אַל־תִּטַּמָּֽאוּ׃
19 ನಾನೇ ಯೆಹೋವ ದೇವರೂ ನಿಮ್ಮ ದೇವರೂ ಆಗಿದ್ದೇನೆ. ನನ್ನ ನಿಯಮಗಳಲ್ಲೇ ನಡೆಯಿರಿ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಕೈಗೊಂಡು ಅವುಗಳನ್ನೇ ಮಾಡಿರಿ.
אֲנִי יְהֹוָה אֱלֹהֵיכֶם בְּחֻקּוֹתַי לֵכוּ וְאֶת־מִשְׁפָּטַי שִׁמְרוּ וַעֲשׂוּ אוֹתָֽם׃
20 ನನ್ನ ಸಬ್ಬತ್ ದಿನಗಳನ್ನು ಪರಿಶುದ್ಧ ಮಾಡಿರಿ, ನಾನೇ ನಿಮ್ಮ ದೇವರಾದ ಯೆಹೋವ ದೇವರು ಎಂದು ಅವು ನಿಮಗೂ ನನಗೂ, ನೀವು ತಿಳಿಯುವ ಹಾಗೆ ಗುರುತುಗಳಾಗಿರುವುವು.”
וְאֶת־שַׁבְּתוֹתַי קַדֵּשׁוּ וְהָיוּ לְאוֹת בֵּינִי וּבֵינֵיכֶם לָדַעַת כִּי אֲנִי יְהֹוָה אֱלֹהֵיכֶֽם׃
21 “‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.
וַיַּמְרוּ־בִי הַבָּנִים בְּחֻקּוֹתַי לֹֽא־הָלָכוּ וְאֶת־מִשְׁפָּטַי לֹֽא־שָׁמְרוּ לַעֲשׂוֹת אוֹתָם אֲשֶׁר יַעֲשֶׂה אוֹתָם הָאָדָם וָחַי בָּהֶם אֶת־שַׁבְּתוֹתַי חִלֵּלוּ וָֽאֹמַר לִשְׁפֹּךְ חֲמָתִי עֲלֵיהֶם לְכַלּוֹת אַפִּי בָּם בַּמִּדְבָּֽר׃
22 ಆದರೂ ನಾನು ನನ್ನ ಕೈಯನ್ನು ಹಿಂತೆಗೆದು, ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ, ಆ ಜನಾಂಗಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ, ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು.
וַהֲשִׁבֹתִי אֶת־יָדִי וָאַעַשׂ לְמַעַן שְׁמִי לְבִלְתִּי הֵחֵל לְעֵינֵי הַגּוֹיִם אֲשֶׁר־הוֹצֵאתִי אוֹתָם לְעֵינֵיהֶֽם׃
23 ನಾನು ಅವರನ್ನು ಇತರ ಜನಾಂಗಗಳಲ್ಲಿ ಚದರಿಸುತ್ತೇನೆಂದೂ, ದೇಶಗಳಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಅವರ ಮೇಲೆ ಕೈಯೆತ್ತಿ ಪ್ರಮಾಣಮಾಡಿದೆನು.
גַּם־אֲנִי נָשָׂאתִי אֶת־יָדִי לָהֶם בַּמִּדְבָּר לְהָפִיץ אֹתָם בַּגּוֹיִם וּלְזָרוֹת אוֹתָם בָּאֲרָצֽוֹת׃
24 ಏಕೆಂದರೆ ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ, ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದರು. ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.
יַעַן מִשְׁפָּטַי לֹֽא־עָשׂוּ וְחֻקּוֹתַי מָאָסוּ וְאֶת־שַׁבְּתוֹתַי חִלֵּלוּ וְאַֽחֲרֵי גִּלּוּלֵי אֲבוֹתָם הָיוּ עֵינֵיהֶֽם׃
25 ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ, ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.
וְגַם־אֲנִי נָתַתִּי לָהֶם חֻקִּים לֹא טוֹבִים וּמִשְׁפָּטִים לֹא יִֽחְיוּ בָּהֶֽם׃
26 ಅವರು ತಮ್ಮ ಚೊಚ್ಚಲು ಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರವಸ್ಥೆಗೆ ತಂದೆನು. ಆಗ ನಾನೇ ಯೆಹೋವ ದೇವರೆಂದು ಅವರು ತಿಳಿದುಕೊಳ್ಳುವರು.’
וָאֲטַמֵּא אוֹתָם בְּמַתְּנוֹתָם בְּהַעֲבִיר כׇּל־פֶּטֶר רָחַם לְמַעַן אֲשִׁמֵּם לְמַעַן אֲשֶׁר יֵדְעוּ אֲשֶׁר אֲנִי יְהֹוָֽה׃
27 “ಆದ್ದರಿಂದ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರ ಸಂಗಡ ಮಾತನಾಡಿ ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನಗೆ ವಿರುದ್ಧವಾಗಿ ಬಹಳ ಅಪರಾಧಮಾಡಿದ್ದರಲ್ಲಿಯೂ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು.
לָכֵן דַּבֵּר אֶל־בֵּית יִשְׂרָאֵל בֶּן־אָדָם וְאָמַרְתָּ אֲלֵיהֶם כֹּה אָמַר אֲדֹנָי יֱהֹוִה עוֹד זֹאת גִּדְּפוּ אוֹתִי אֲבוֹתֵיכֶם בְּמַעֲלָם בִּי מָֽעַל׃
28 ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.
וָאֲבִיאֵם אֶל־הָאָרֶץ אֲשֶׁר נָשָׂאתִי אֶת־יָדִי לָתֵת אוֹתָהּ לָהֶם וַיִּרְאוּ כׇל־גִּבְעָה רָמָה וְכׇל־עֵץ עָבֹת וַיִּזְבְּחוּ־שָׁם אֶת־זִבְחֵיהֶם וַיִּתְּנוּ־שָׁם כַּעַס קׇרְבָּנָם וַיָּשִׂימוּ שָׁם רֵיחַ נִיחוֹחֵיהֶם וַיַּסִּיכוּ שָׁם אֶת־נִסְכֵּיהֶֽם׃
29 ಆಗ ನಾನು ಅವರಿಗೆ ಹೇಳಿದ್ದೇನೆಂದರೆ: ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದವರೆಗೂ ಬಾಮಾ ಎಂದು ಕರೆಯುವರು.’”
וָאֹמַר אֲלֵהֶם מָה הַבָּמָה אֲשֶׁר־אַתֶּם הַבָּאִים שָׁם וַיִּקָּרֵא שְׁמָהּ בָּמָה עַד הַיּוֹם הַזֶּֽה׃
30 “ಆದ್ದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದ ವಿಗ್ರಹಗಳ ಹಿಂದೆ ಹೋಗುತ್ತೀರೋ?
לָכֵן אֱמֹר ׀ אֶל־בֵּית יִשְׂרָאֵל כֹּה אָמַר אֲדֹנָי יֱהֹוִה הַבְּדֶרֶךְ אֲבוֹתֵיכֶם אַתֶּם נִטְמְאִים וְאַחֲרֵי שִׁקּֽוּצֵיהֶם אַתֶּם זֹנִֽים׃
31 ನಿಮ್ಮ ದಾನಗಳನ್ನು ತರುವಾಗಲೂ, ಬೆಂಕಿಯಲ್ಲಿ ನಿಮ್ಮ ಮಕ್ಕಳನ್ನು ಯಜ್ಞವಾಗಿ ಅರ್ಪಿಸುವಾಗಲೂ, ನೀವು ಇಂದಿನವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತಿದ್ದೀರಿ. ಹೀಗಿರುವಾಗ ಇಸ್ರಾಯೇಲ್ ವಂಶದವರೇ, ನೀವು ನನ್ನನ್ನು ವಿಚಾರಿಸಲು ಅನುಮತಿಸಬೇಕೆ? ನನ್ನ ಜೀವದಾಣೆ ನಾನು ನಿಮ್ಮನ್ನು ವಿಚಾರಿಸಲು ಅನುಮತಿಸುವುದಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
וּבִשְׂאֵת מַתְּנֹתֵיכֶם בְּֽהַעֲבִיר בְּנֵיכֶם בָּאֵשׁ אַתֶּם נִטְמְאִים לְכׇל־גִּלּֽוּלֵיכֶם עַד־הַיּוֹם וַאֲנִי אִדָּרֵשׁ לָכֶם בֵּית יִשְׂרָאֵל חַי־אָנִי נְאֻם אֲדֹנָי יֱהֹוִה אִם־אִדָּרֵשׁ לָכֶֽם׃
32 “‘“ನಾವು ಇತರ ಜನಾಂಗಗಳ ಹಾಗೆ ಮತ್ತು ಇತರ ದೇಶಗಳವರ ಹಾಗೆ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ನೆರವೇರದು.”
וְהָֽעֹלָה עַל־רוּחֲכֶם הָיוֹ לֹא תִֽהְיֶה אֲשֶׁר ׀ אַתֶּם אֹמְרִים נִֽהְיֶה כַגּוֹיִם כְּמִשְׁפְּחוֹת הָאֲרָצוֹת לְשָׁרֵת עֵץ וָאָֽבֶן׃
33 ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಸುರಿಸಿದ ರೋಷದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡೆಸುತ್ತೇನೆ.
חַי־אָנִי נְאֻם אֲדֹנָי יֱהֹוִה אִם־לֹא בְּיָד חֲזָקָה וּבִזְרוֹעַ נְטוּיָה וּבְחֵמָה שְׁפוּכָה אֶמְלוֹךְ עֲלֵיכֶֽם׃
34 ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಸುರಿಸಿದ ರೋಷದಿಂದಲೂ, ನಿಮ್ಮನ್ನು ಜನರೊಳಗಿಂದ ಹೊರತಂದು ನೀವು ಚದರಿಹೋಗಿರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸುವೆನು.
וְהוֹצֵאתִי אֶתְכֶם מִן־הָעַמִּים וְקִבַּצְתִּי אֶתְכֶם מִן־הָאֲרָצוֹת אֲשֶׁר נְפוֹצֹתֶם בָּם בְּיָד חֲזָקָה וּבִזְרוֹעַ נְטוּיָה וּבְחֵמָה שְׁפוּכָֽה׃
35 ನಿಮ್ಮನ್ನು ಜನರಿರುವ ಮರುಭೂಮಿಯೊಳಗೆ ತಂದು, ನಿಮ್ಮೊಂದಿಗೆ ಅಲ್ಲಿ ಮುಖಾಮುಖಿಯಾಗಿ ನ್ಯಾಯತೀರ್ಪು ಮಾಡುವೆನು.
וְהֵבֵאתִי אֶתְכֶם אֶל־מִדְבַּר הָעַמִּים וְנִשְׁפַּטְתִּי אִתְּכֶם שָׁם פָּנִים אֶל־פָּנִֽים׃
36 ಅದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಈಜಿಪ್ಟ್ ದೇಶದ ಮರುಭೂಮಿಯಲ್ಲಿ ನ್ಯಾಯತೀರ್ಪು ಮಾಡಿದೆನು. ಈಗಲೂ ನಿಮ್ಮ ಸಂಗಡ ನ್ಯಾಯತೀರ್ಪು ಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
כַּאֲשֶׁר נִשְׁפַּטְתִּי אֶת־אֲבוֹתֵיכֶם בְּמִדְבַּר אֶרֶץ מִצְרָיִם כֵּן אִשָּׁפֵט אִתְּכֶם נְאֻם אֲדֹנָי יֱהֹוִֽה׃
37 ನೀವು ನನ್ನ ಕೋಲಿನ ಕೆಳಗೆ ನಡೆಯುವಾಗ, ನನ್ನ ಗಮನವು ನಿಮ್ಮ ಮೇಲೆ ಇರುತ್ತದೆ ಮತ್ತು ನಾನು ನಿಮ್ಮನ್ನು ಒಡಂಬಡಿಕೆಗೆ ತರುತ್ತೇನೆ.
וְהַעֲבַרְתִּי אֶתְכֶם תַּחַת הַשָּׁבֶט וְהֵבֵאתִי אֶתְכֶם בְּמָסֹרֶת הַבְּרִֽית׃
38 ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧ ಮಾಡಿದವರನ್ನೂ ನಿಮ್ಮೊಂದಿಗೆ ಶುದ್ಧಮಾಡುತ್ತೇನೆ. ಅವರು ಪ್ರವಾಸಿಗಳಾಗಿದ್ದ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಆದರೆ ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ, ನಾನೇ ಯೆಹೋವ ದೇವರೆಂಬುದನ್ನು ಅವರಿಗೆ ತಿಳಿಸುತ್ತೇನೆ.
וּבָרוֹתִי מִכֶּם הַמֹּרְדִים וְהַפּֽוֹשְׁעִים בִּי מֵאֶרֶץ מְגֽוּרֵיהֶם אוֹצִיא אוֹתָם וְאֶל־אַדְמַת יִשְׂרָאֵל לֹא יָבוֹא וִידַעְתֶּם כִּי־אֲנִי יְהֹוָֽה׃
39 “‘ನಿಮ್ಮ ವಿಷಯವಾಗಿ, ಓ ಇಸ್ರಾಯೇಲಿನ ಮನೆತನದವರೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೋಗಿರಿ, ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ. ಆದರೆ ನಂತರ ನೀವು ಖಂಡಿತವಾಗಿಯೂ ನನ್ನ ಮಾತನ್ನು ಕೇಳುತ್ತೀರಿ ಮತ್ತು ನಿಮ್ಮ ದಾನಗಳಿಂದಲೂ, ನಿಮ್ಮ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.
וְאַתֶּם בֵּֽית־יִשְׂרָאֵל כֹּה־אָמַר ׀ אֲדֹנָי יֱהֹוִה אִישׁ גִּלּוּלָיו לְכוּ עֲבֹדוּ וְאַחַר אִם־אֵינְכֶם שֹׁמְעִים אֵלָי וְאֶת־שֵׁם קׇדְשִׁי לֹא תְחַלְּלוּ־עוֹד בְּמַתְּנוֹתֵיכֶם וּבְגִלּוּלֵיכֶֽם׃
40 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಪರಿಶುದ್ಧ ಪರ್ವತದಲ್ಲಿಯೇ, ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನದವರೆಲ್ಲರೂ, ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ, ನಿಮ್ಮ ಉತ್ತಮ ಅರ್ಪಣೆಗಳನ್ನೂ, ನಿಮ್ಮ ಕಾಣಿಕೆಗಳ ಪ್ರಥಮ ಫಲವನ್ನೂ, ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.
כִּי בְהַר־קׇדְשִׁי בְּהַר ׀ מְרוֹם יִשְׂרָאֵל נְאֻם אֲדֹנָי יֱהֹוִה שָׁם יַעַבְדֻנִי כׇּל־בֵּית יִשְׂרָאֵל כֻּלֹּה בָּאָרֶץ שָׁם אֶרְצֵם וְשָׁם אֶדְרוֹשׁ אֶת־תְּרוּמֹֽתֵיכֶם וְאֶת־רֵאשִׁית מַשְׂאוֹתֵיכֶם בְּכׇל־קׇדְשֵׁיכֶֽם׃
41 ನಾನು ನಿಮ್ಮನ್ನು ಇತರ ಜನಾಂಗಗಳೊಳಗಿಂದ ಹೊರತಂದು, ನೀವು ಚದರಿಸುವ ದೇಶದೊಳಗಿಂದ ಕೂಡಿಸುವಾಗ, ನಿಮ್ಮನ್ನು ಸುವಾಸನೆಯಂತೆ ಅಂಗೀಕರಿಸುವೆನು. ಇತರ ಜನಾಂಗಗಳ ಮುಂದೆ ನನ್ನನ್ನು ಪರಿಶುದ್ಧನೆಂದು ತೋರಿಸುವೆನು.
בְּרֵיחַ נִיחֹחַ אֶרְצֶה אֶתְכֶם בְּהוֹצִיאִי אֶתְכֶם מִן־הָעַמִּים וְקִבַּצְתִּי אֶתְכֶם מִן־הָאֲרָצוֹת אֲשֶׁר נְפֹצֹתֶם בָּם וְנִקְדַּשְׁתִּי בָכֶם לְעֵינֵי הַגּוֹיִֽם׃
42 ನಾನು ನಿಮ್ಮ ಮೇಲೆ ಇಸ್ರಾಯೇಲ್ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ, ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ.
וִֽידַעְתֶּם כִּֽי־אֲנִי יְהֹוָה בַּהֲבִיאִי אֶתְכֶם אֶל־אַדְמַת יִשְׂרָאֵל אֶל־הָאָרֶץ אֲשֶׁר נָשָׂאתִי אֶת־יָדִי לָתֵת אוֹתָהּ לַאֲבוֹתֵיכֶֽם׃
43 ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು, ನೀವು ಯಾವ ಸಂಗತಿಗಳಿಂದ ಅಶುದ್ಧವಾಗಿದ್ದೀರೋ, ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕ ಮಾಡಿಕೊಳ್ಳುವಿರಿ. ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿಯಲ್ಲಿಯೇ ನೀವು ಅಸಹ್ಯರಾಗುವಿರಿ.
וּזְכַרְתֶּם־שָׁם אֶת־דַּרְכֵיכֶם וְאֵת כׇּל־עֲלִילוֹתֵיכֶם אֲשֶׁר נִטְמֵאתֶם בָּם וּנְקֹֽטֹתֶם בִּפְנֵיכֶם בְּכׇל־רָעוֹתֵיכֶם אֲשֶׁר עֲשִׂיתֶֽם׃
44 ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳ ಪ್ರಕಾರವಲ್ಲ, ನಿಮ್ಮ ದುಷ್ಕೃತ್ಯಗಳ ಪ್ರಕಾರವಲ್ಲ, ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಸಹಿಸಿಕೊಂಡಿರುವಾಗ, ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’”
וִֽידַעְתֶּם כִּֽי־אֲנִי יְהֹוָה בַּעֲשׂוֹתִי אִתְּכֶם לְמַעַן שְׁמִי לֹא כְדַרְכֵיכֶם הָרָעִים וְכַעֲלִילוֹתֵיכֶם הַנִּשְׁחָתוֹת בֵּית יִשְׂרָאֵל נְאֻם אֲדֹנָי יֱהֹוִֽה׃
45 ಯೆಹೋವ ದೇವರ ವಾಕ್ಯವು ನನಗೆ ಬಂದಿತು:
וַיְהִי דְבַר־יְהֹוָה אֵלַי לֵאמֹֽר׃
46 “ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ, ದಕ್ಷಿಣದ ಕಡೆಗೆ ಮಾತನಾಡು. ದಕ್ಷಿಣ ಬಯಲು ಮರುಭೂಮಿಗೆ ವಿರೋಧವಾಗಿ ಪ್ರವಾದಿಸು.
בֶּן־אָדָם שִׂים פָּנֶיךָ דֶּרֶךְ תֵּימָנָה וְהַטֵּף אֶל־דָּרוֹם וְהִנָּבֵא אֶל־יַעַר הַשָּׂדֶה נֶֽגֶב׃
47 ದಕ್ಷಿಣದ ಮರುಭೂಮಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರ ವಾಕ್ಯವನ್ನು ಕೇಳು. ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ. ಅದು ನಿನ್ನಲ್ಲಿರುವ ಎಲ್ಲಾ ಹಸಿಮರಗಳನ್ನು ಮತ್ತು ಎಲ್ಲಾ ಒಣ ಮರಗಳನ್ನು ತಿಂದುಬಿಡುವುದು. ಉರಿಯುವ ಜ್ವಾಲೆ ಆರಿಹೋಗುವುದಿಲ್ಲ. ದಕ್ಷಿಣ ಮೊದಲುಗೊಂಡು ಉತ್ತರದವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟುಹೋಗುವುವು.
וְאָֽמַרְתָּ לְיַעַר הַנֶּגֶב שְׁמַע דְּבַר־יְהֹוָה כֹּה־אָמַר אֲדֹנָי יֱהֹוִה הִנְנִי מַֽצִּית־בְּךָ ׀ אֵשׁ וְאָכְלָה בְךָ כׇל־עֵֽץ־לַח וְכׇל־עֵץ יָבֵשׁ לֹֽא־תִכְבֶּה לַהֶבֶת שַׁלְהֶבֶת וְנִצְרְבוּ־בָהּ כׇּל־פָּנִים מִנֶּגֶב צָפֽוֹנָה׃
48 ಯೆಹೋವ ದೇವರಾದ ನಾನೇ ಅದನ್ನು ಹಚ್ಚಿದೆನೆಂದು ಪ್ರತಿಯೊಬ್ಬರೂ ತಿಳಿದುಕೊಳ್ಳುವರು, ಅದು ಆರಿಹೋಗುವುದಿಲ್ಲ.’”
וְרָאוּ כׇּל־בָּשָׂר כִּי אֲנִי יְהֹוָה בִּֽעַרְתִּיהָ לֹא תִּכְבֶּֽה׃
49 ಆಗ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ‘ಅವನು ಸಾಮ್ಯಗಳನ್ನು ಹೇಳುವುದಿಲ್ಲವೇ?’ ಎಂದು ನನ್ನ ವಿಷಯದಲ್ಲಿ ಅವರು ಹೇಳುತ್ತಾರೆ,” ಎಂದೆನು.
וָאֹמַר אֲהָהּ אֲדֹנָי יֱהֹוִה הֵמָּה אֹמְרִים לִי הֲלֹא מְמַשֵּׁל מְשָׁלִים הֽוּא׃

< ಯೆಹೆಜ್ಕೇಲನು 20 >