< ಯೆಹೆಜ್ಕೇಲನು 21 >

1 ಯೆಹೋವ ದೇವರ ವಾಕ್ಯವು ನನಗೆ ಬಂದಿತು,
וַיְהִ֥י דְבַר־יְהוָ֖ה אֵלַ֥י לֵאמֹֽר׃
2 “ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖವಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸಿ,
בֶּן־אָדָ֗ם שִׂ֤ים פָּנֶ֙יךָ֙ אֶל־יְר֣וּשָׁלַ֔͏ִם וְהַטֵּ֖ף אֶל־מִקְדָּשִׁ֑ים וְהִנָּבֵ֖א אֶל־אַדְמַ֥ת יִשְׂרָאֵֽל׃
3 ‘ಇಸ್ರಾಯೇಲ್ ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರಗೆ ತೆಗೆದು, ನಿನ್ನೊಳಗಿರುವ ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವೆನು.
וְאָמַרְתָּ֞ לְאַדְמַ֣ת יִשְׂרָאֵ֗ל כֹּ֚ה אָמַ֣ר יְהוָ֔ה הִנְנִ֣י אֵלַ֔יִךְ וְהֹוצֵאתִ֥י חַרְבִּ֖י מִתַּעְרָ֑הּ וְהִכְרַתִּ֥י מִמֵּ֖ךְ צַדִּ֥יק וְרָשָֽׁע׃
4 ಆಮೇಲೆ ನಾನು ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವುದರಿಂದ ನನ್ನ ಖಡ್ಗವು ದಕ್ಷಿಣದಿಂದ ಮೊದಲುಗೊಂಡು ಉತ್ತರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆಯನ್ನು ಬಿಟ್ಟು ಹೋಗುವುದು.
יַ֛עַן אֲשֶׁר־הִכְרַ֥תִּי מִמֵּ֖ךְ צַדִּ֣יק וְרָשָׁ֑ע לָ֠כֵן תֵּצֵ֨א חַרְבִּ֧י מִתַּעְרָ֛הּ אֶל־כָּל־בָּשָׂ֖ר מִנֶּ֥גֶב צָפֹֽון׃
5 ಆಗ ಯೆಹೋವ ದೇವರಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹೊರಗೆ ತೆಗೆದೆನೆಂದು ಜನರೆಲ್ಲರಿಗೂ ತಿಳಿಯುವುದು, ಅದು ಮತ್ತೆ ತಿರುಗಿ ಬರುವುದೇ ಇಲ್ಲ.’
וְיָֽדְעוּ֙ כָּל־בָּשָׂ֔ר כִּ֚י אֲנִ֣י יְהוָ֔ה הֹוצֵ֥אתִי חַרְבִּ֖י מִתַּעְרָ֑הּ לֹ֥א תָשׁ֖וּב עֹֽוד׃ ס
6 “ಆದ್ದರಿಂದ ಮನುಷ್ಯಪುತ್ರನೇ, ನರಳಾಡು! ಮುರಿದ ಹೃದಯ ಮತ್ತು ಕಹಿ ದುಃಖದಿಂದ ಅವರ ಮುಂದೆ ನರಳಾಡು.
וְאַתָּ֥ה בֶן־אָדָ֖ם הֵֽאָנַ֑ח בְּשִׁבְרֹ֤ון מָתְנַ֙יִם֙ וּבִמְרִיר֔וּת תֵּֽאָנַ֖ח לְעֵינֵיהֶֽם׃
7 ‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
וְהָיָה֙ כִּֽי־יֹאמְר֣וּ אֵלֶ֔יךָ עַל־מָ֖ה אַתָּ֣ה נֶאֱנָ֑ח וְאָמַרְתָּ֡ אֶל־שְׁמוּעָ֣ה כִֽי־בָאָ֡ה וְנָמֵ֣ס כָּל־לֵב֩ וְרָפ֨וּ כָל־יָדַ֜יִם וְכִהֲתָ֣ה כָל־ר֗וּחַ וְכָל־בִּרְכַּ֙יִם֙ תֵּלַ֣כְנָה מַּ֔יִם הִנֵּ֤ה בָאָה֙ וְנִֽהְיָ֔תָה נְאֻ֖ם אֲדֹנָ֥י יְהוִֽה׃ פ
8 ಯೆಹೋವ ದೇವರ ವಾಕ್ಯವು ನನಗೆ ಬಂದಿತು,
וַיְהִ֥י דְבַר־יְהוָ֖ה אֵלַ֥י לֵאמֹֽר׃
9 “ಮನುಷ್ಯಪುತ್ರನೇ, ಪ್ರವಾದಿಸಿ, ‘ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು: “‘ಆ ಒಂದು ಖಡ್ಗವು ಹದಮಾಡಲಾಗಿದೆ; ಮೆರುಗೂ ಸಹ ಮಾಡಲಾಗಿದೆ.
בֶּן־אָדָ֕ם הִנָּבֵא֙ וְאָ֣מַרְתָּ֔ כֹּ֖ה אָמַ֣ר אֲדֹנָ֑י אֱמֹ֕ר חֶ֥רֶב חֶ֛רֶב הוּחַ֖דָּה וְגַם־מְרוּטָֽה׃
10 ಸಂಹರಿಸಲು ಸಾಣೆಹಿಡಿದಿದೆ; ಮಿಂಚುವಂತೆ ಮಸೆಯಲಾಗಿದೆ. “‘ಹಾಗಾದರೆ ನನ್ನ ಮಗ ಯೆಹೂದದ ರಾಜದಂಡದಲ್ಲಿ ನಾವು ಸಂತೋಷ ಪಡಬಹುದೋ? ಅಂಥ ಪ್ರತಿಯೊಂದು ಬೆತ್ತವನ್ನೂ ಖಡ್ಗವು ತಿರಸ್ಕರಿಸುತ್ತದೆ.
לְמַ֨עַן טְבֹ֤חַ טֶ֙בַח֙ הוּחַ֔דָּה לְמַעַן־הֱיֵה־לָ֥הּ בָּ֖רָק מֹרָ֑טָּה אֹ֣ו נָשִׂ֔ישׂ שֵׁ֥בֶט בְּנִ֖י מֹאֶ֥סֶת כָּל־עֵֽץ׃
11 “‘ಖಡ್ಗವು ಕೈಯಲ್ಲಿ ಅದು ಹಿಡಿಯಲಾಗುವ ಹಾಗೆ ಮಸೆಯಲು ಕೊಡಲಾಗಿದೆ. ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಖಡ್ಗಕ್ಕೆ ಹದವನ್ನೂ, ಸಾಣೆಯನ್ನೂ ಮಾಡಲಾಗಿದೆ.
וַיִּתֵּ֥ן אֹתָ֛הּ לְמָרְטָ֖ה לִתְפֹּ֣שׂ בַּכָּ֑ף הִֽיא־הוּחַ֤דָּה חֶ֙רֶב֙ וְהִ֣יא מֹרָ֔טָּה לָתֵ֥ת אֹותָ֖הּ בְּיַד־הֹורֵֽג׃
12 ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು. ಏಕೆಂದರೆ ಅದು ನನ್ನ ಜನರ ಮೇಲೆಯೂ, ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಇರುವುದು. ಖಡ್ಗದ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವುದು. ಆದ್ದರಿಂದ ನಿನ್ನ ಎದೆಯನ್ನು ಬಡಿದುಕೋ.
זְעַ֤ק וְהֵילֵל֙ בֶּן־אָדָ֔ם כִּי־הִיא֙ הָיתָ֣ה בְעַמִּ֔י הִ֖יא בְּכָל־נְשִׂיאֵ֣י יִשְׂרָאֵ֑ל מְגוּרֵ֤י אֶל־חֶ֙רֶב֙ הָי֣וּ אֶת־עַמִּ֔י לָכֵ֖ן סְפֹ֥ק אֶל־יָרֵֽךְ׃
13 “‘ಪರಿಶೋಧನೆಯು ಖಂಡಿತವಾಗಿ ಬರುವುದಿಲ್ಲ. ಖಡ್ಗವು ತಿರಸ್ಕರಿಸುವ ಯೆಹೂದದ ರಾಜದಂಡವು ಮುಂದುವರಿಯದಿದ್ದರೆ ಹೇಗೆ? ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’
כִּ֣י בֹ֔חַן וּמָ֕ה אִם־גַּם־שֵׁ֥בֶט מֹאֶ֖סֶת לֹ֣א יִֽהְיֶ֑ה נְאֻ֖ם אֲדֹנָ֥י יְהוִֽה׃ פ
14 “ಆದ್ದರಿಂದ ನೀನು ಮನುಷ್ಯಪುತ್ರನೇ, ಕೈಗೆ ಕೈತಟ್ಟಿ ಪ್ರವಾದಿಸು. ಹತರಾದವರ ಖಡ್ಗವಾದ ಆ ಖಡ್ಗವೇ ಎರಡರಷ್ಟು, ಮೂರರಷ್ಟು ಸಂಹರಿಸಲಿ. ಪ್ರಜೆಯನ್ನು ಹತಿಸುವ ಆ ಖಡ್ಗ ಸುತ್ತಲೂ ಬೀಸಿ ಆ ಕೊಠಡಿಗಳಲ್ಲಿ ಸೇರುವವರನ್ನು ಆ ದೊಡ್ಡ ಖಡ್ಗ ಸಂಹರಿಸುವುದು.
וְאַתָּ֣ה בֶן־אָדָ֔ם הִנָּבֵ֕א וְהַ֖ךְ כַּ֣ף אֶל־כָּ֑ף וְתִכָּפֵ֞ל חֶ֤רֶב שְׁלִישִׁ֙תָה֙ חֶ֣רֶב חֲלָלִ֔ים הִ֗יא חֶ֚רֶב חָלָ֣ל הַגָּדֹ֔ול הַחֹדֶ֖רֶת לָהֶֽם׃
15 ಅವರ ಹೃದಯವು ಕರಗುವ ಹಾಗೆಯೂ, ಅವರ ಎಲ್ಲಾ ಬಾಗಿಲುಗಳಲ್ಲಿ ಪತನವು ಹೆಚ್ಚಾಗುವ ಹಾಗೆಯೂ ಖಡ್ಗದ ಮೊನೆ ಇಟ್ಟಿದ್ದೇನೆ. ಆಹಾ, ಮಿಂಚಿನಂತೆ ಹೊಡೆಯಲು ಈ ಬಲೆ ಹೆಣೆಯಲಾಗಿದೆ ಅದನ್ನು ಕೊಲೆಮಾಡುವುದಕ್ಕೆ ಮಸೆಯಲಾಗಿದೆ.
לְמַ֣עַן ׀ לָמ֣וּג לֵ֗ב וְהַרְבֵּה֙ הַמִּכְשֹׁלִ֔ים עַ֚ל כָּל־שַׁ֣עֲרֵיהֶ֔ם נָתַ֖תִּי אִבְחַת־חָ֑רֶב אָ֛ח עֲשׂוּיָ֥ה לְבָרָ֖ק מְעֻטָּ֥ה לְטָֽבַח׃
16 ಖಡ್ಗವೇ ಬಲಕ್ಕೆ ಹೊಡೆ, ಎಡಕ್ಕೆ ಹೊಡೆ, ನಿನ್ನ ಅಲಗು ತಿರುಗಿದ ಕಡೆಗೆಲ್ಲಾ ಹೊಡೆ.
הִתְאַחֲדִ֥י הֵימִ֖נִי הָשִׂ֣ימִי הַשְׂמִ֑ילִי אָ֖נָה פָּנַ֥יִךְ מֻעָדֹֽות׃
17 ನಾನೂ ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು, ಎಂದು ಯೆಹೋವ ದೇವರಾದ ನಾನು ಹೇಳಿದ್ದೇನೆ.”
וְגַם־אֲנִ֗י אַכֶּ֤ה כַפִּי֙ אֶל־כַּפִּ֔י וַהֲנִחֹתִ֖י חֲמָתִ֑י אֲנִ֥י יְהוָ֖ה דִּבַּֽרְתִּי׃ פ
18 ಯೆಹೋವ ದೇವರ ವಾಕ್ಯವು ನನಗೆ ಬಂದಿತು:
וַיְהִ֥י דְבַר־יְהוָ֖ה אֵלַ֥י לֵאמֹֽר׃
19 “ಮನುಷ್ಯಪುತ್ರನೇ, ಬಾಬಿಲೋನಿನ ಅರಸನ ಖಡ್ಗವು ಬರುವ ಹಾಗೆ ನೀನು ಎರಡು ಮಾರ್ಗಗಳನ್ನು ನೇಮಿಸಿಕೋ. ಅವೆರಡು ದಾರಿಗಳು ಒಂದೇ ದೇಶದಿಂದ ಹೊರಟ ಹಾಗಿರಲಿ. ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.
וְאַתָּ֨ה בֶן־אָדָ֜ם שִׂים־לְךָ֣ ׀ שְׁנַ֣יִם דְּרָכִ֗ים לָבֹוא֙ חֶ֣רֶב מֶֽלֶךְ־בָּבֶ֔ל מֵאֶ֥רֶץ אֶחָ֖ד יֵצְא֣וּ שְׁנֵיהֶ֑ם וְיָ֣ד בָּרֵ֔א בְּרֹ֥אשׁ דֶּֽרֶךְ־עִ֖יר בָּרֵֽא׃
20 ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ, ಯೆಹೂದದ ಕೋಟೆ ಕೊತ್ತಲಗಳಿಂದ ಕುಡಿದ ಯೆರೂಸಲೇಮಿಗೂ ಆ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.
דֶּ֣רֶךְ תָּשִׂ֔ים לָבֹ֣וא חֶ֔רֶב אֵ֖ת רַבַּ֣ת בְּנֵֽי־עַמֹּ֑ון וְאֶת־יְהוּדָ֥ה בִירוּשָׁלַ֖͏ִם בְּצוּרָֽה׃
21 ಬಾಬಿಲೋನಿನ ಅರಸನು, ಮಾರ್ಗವು ಒಡೆಯುವ ಸ್ಥಳದಲ್ಲಿ ಶಕುನವನ್ನು ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿದನು; ಮೂರ್ತಿಗಳ ಹತ್ತಿರ ವಿಚಾರಿಸಿದನು; ಅವನು ಹತ್ಯೆ ಮಾಡಿದ ಪ್ರಾಣಿಯ ಯಕೃತ್ತನ್ನು ಪರೀಕ್ಷಿಸುತ್ತಾರೆ.
כִּֽי־עָמַ֨ד מֶלֶךְ־בָּבֶ֜ל אֶל־אֵ֣ם הַדֶּ֗רֶךְ בְּרֹ֛אשׁ שְׁנֵ֥י הַדְּרָכִ֖ים לִקְסָם־קָ֑סֶם קִלְקַ֤ל בַּֽחִצִּים֙ שָׁאַ֣ל בַּתְּרָפִ֔ים רָאָ֖ה בַּכָּבֵֽד׃
22 ಅವನ ಬಲಗೈಯಲ್ಲಿ ಯೆರೂಸಲೇಮಿಗಾಗಿ ಶಕುನವು ಇತ್ತು. ಅಲ್ಲಿ ಅವನು ಬಡಿಯುವ ಆಯುಧಗಳನ್ನಿಟ್ಟು, ಬಾಯಿಬಿಟ್ಟು ಸಂಹಾರ ಧ್ವನಿಗೈದು, ಆರ್ಭಟವಿಟ್ಟು ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ದಿಬ್ಬ ಹಾಕಿ, ಒಡ್ಡು ಕಟ್ಟಿದ್ದು ಸೂಚನೆಯಾಗಿದೆ.
בִּֽימִינֹ֞ו הָיָ֣ה ׀ הַקֶּ֣סֶם יְרוּשָׁלַ֗͏ִם לָשׂ֤וּם כָּרִים֙ לִפְתֹּ֤חַ פֶּה֙ בְּרֶ֔צַח לְהָרִ֥ים קֹ֖ול בִּתְרוּעָ֑ה לָשׂ֤וּם כָּרִים֙ עַל־שְׁעָרִ֔ים לִשְׁפֹּ֥ךְ סֹלְלָ֖ה לִבְנֹ֥ות דָּיֵֽק׃
23 ಆದರೆ ಅವರು ತಾವು ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ನಂಬಿಕೆ ಇಟ್ಟಿದ್ದರಿಂದ, ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವುದು. ಆದರೆ ಅವನು ಅವರ ಅಕ್ರಮವನ್ನು ಜ್ಞಾಪಕಪಡಿಸಿ, ಅವರನ್ನು ಸೆರೆಯಾಗಿ ಒಯ್ಯುವನು.
וְהָיָ֨ה לָהֶ֤ם כִּקְסֹום־ (כִּקְסָם)־שָׁוְא֙ בְּעֵ֣ינֵיהֶ֔ם שְׁבֻעֵ֥י שְׁבֻעֹ֖ות לָהֶ֑ם וְהֽוּא־מַזְכִּ֥יר עָוֹ֖ן לְהִתָּפֵֽשׂ׃ פ
24 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಿಮ್ಮ ದ್ರೋಹಗಳು ಪ್ರಕಟವಾಗಿ, ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ, ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಗೆ ಸಿಕ್ಕಿ ಬೀಳುವಿರಿ.
לָכֵ֗ן כֹּֽה־אָמַר֮ אֲדֹנָ֣י יְהוִה֒ יַ֗עַן הַזְכַּרְכֶם֙ עֲוֹ֣נְכֶ֔ם בְּהִגָּלֹ֣ות פִּשְׁעֵיכֶ֗ם לְהֵֽרָאֹות֙ חַטֹּ֣אותֵיכֶ֔ם בְּכֹ֖ל עֲלִילֹֽותֵיכֶ֑ם יַ֚עַן הִזָּ֣כֶרְכֶ֔ם בַּכַּ֖ף תִּתָּפֵֽשׂוּ׃ פ
25 “‘ದುಷ್ಟನಾದ ಭ್ರಷ್ಟ ಇಸ್ರಾಯೇಲಿನ ರಾಜಕುಮಾರನೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.
וְאַתָּה֙ חָלָ֣ל רָשָׁ֔ע נְשִׂ֖יא יִשְׂרָאֵ֑ל אֲשֶׁר־בָּ֣א יֹומֹ֔ו בְּעֵ֖ת עֲוֹ֥ן קֵֽץ׃ ס
26 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಮೊದಲಿದ್ದ ಹಾಗೆಯೇ ಇರುವುದಿಲ್ಲ; ತಗ್ಗಿಸಿಕೊಂಡವನನ್ನು ಹೆಚ್ಚಿಸಿ, ಹೆಚ್ಚಿಸಿಕೊಂಡವನನ್ನು ತಗ್ಗಿಸು.
כֹּ֤ה אָמַר֙ אֲדֹנָ֣י יְהוִ֔ה הָסִיר֙ הַמִּצְנֶ֔פֶת וְהָרִ֖ים הָֽעֲטָרָ֑ה זֹ֣את לֹא־זֹ֔את הַשָּׁפָ֣לָה הַגְבֵּ֔הַ וְהַגָּבֹ֖הַ הַשְׁפִּֽיל׃
27 ಬಾ, ನಾಶನ! ನಾಶನ! ನಾನು ಅದನ್ನು ಪಾಳು ಬೀಳುವಂತೆ ಮಾಡುವೆನು. ಅದು ಯಾರದೋ, ಅವನು ಬರುವವರೆಗೆ ನಾನು ಅದನ್ನು ಪುನಃ ಕಟ್ಟಿಸುವುದಿಲ್ಲ; ಅವನಿಗೆ ನಾನು ಅದನ್ನು ಒಪ್ಪಿಸುವೆನು.’
עַוָּ֥ה עַוָּ֖ה עַוָּ֣ה אֲשִׂימֶ֑נָּה גַּם־זֹאת֙ לֹ֣א הָיָ֔ה עַד־בֹּ֛א אֲשֶׁר־לֹ֥ו הַמִּשְׁפָּ֖ט וּנְתַתִּֽיו׃ פ
28 “ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: “‘ಒಂದು ಖಡ್ಗವು, ಒಂದು ಖಡ್ಗವು ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಬಹಳವಾಗಿ ಮಸೆಯಲಾಗಿದೆ. ಥಳಥಳಿಸುತ್ತಾ ನುಂಗುವಹಾಗಿದೆ.
וְאַתָּ֣ה בֶן־אָדָ֗ם הִנָּבֵ֤א וְאָֽמַרְתָּ֙ כֹּ֤ה אָמַר֙ אֲדֹנָ֣י יְהֹוִ֔ה אֶל־בְּנֵ֥י עַמֹּ֖ון וְאֶל־חֶרְפָּתָ֑ם וְאָמַרְתָּ֗ חֶ֣רֶב חֶ֤רֶב פְּתוּחָה֙ לְטֶ֣בַח מְרוּטָ֔ה לְהָכִ֖יל לְמַ֥עַן בָּרָֽק׃
29 ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ, ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಹೀಗೆ ನಿನ್ನನ್ನು ಹತರಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ. ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.
בַּחֲזֹ֥ות לָךְ֙ שָׁ֔וְא בִּקְסָם־לָ֖ךְ כָּזָ֑ב לָתֵ֣ת אֹותָ֗ךְ אֶֽל־צַוְּארֵי֙ חַֽלְלֵ֣י רְשָׁעִ֔ים אֲשֶׁר־בָּ֣א יֹומָ֔ם בְּעֵ֖ת עֲוֹ֥ן קֵֽץ׃
30 “‘ಖಡ್ಗವನ್ನು ಒರೆಗೆ ಸೇರಿಸು, ನೀನು ಸೃಷ್ಟಿಯಾದ ಸ್ಥಳದಲ್ಲಿಯೇ ನಿನ್ನ ಪೂರ್ವಜರ ನಾಡಿನಲ್ಲಿಯೇ ನಿನಗೆ ನ್ಯಾಯತೀರಿಸುವೆನು.
הָשַׁ֖ב אֶל־תַּעְרָ֑הּ בִּמְקֹ֧ום אֲשֶׁר־נִבְרֵ֛את בְּאֶ֥רֶץ מְכֻרֹותַ֖יִךְ אֶשְׁפֹּ֥ט אֹתָֽךְ׃
31 ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರವಾದ ಬೆಂಕಿ ನಿನ್ನ ಮೇಲೆ ಊದಿ ನಾಶಪಡಿಸುವುದರಲ್ಲಿ ಗಟ್ಟಿಗರಾದ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು.
וְשָׁפַכְתִּ֤י עָלַ֙יִךְ֙ זַעְמִ֔י בְּאֵ֥שׁ עֶבְרָתִ֖י אָפִ֣יחַ עָלָ֑יִךְ וּנְתַתִּ֗יךְ בְּיַד֙ אֲנָשִׁ֣ים בֹּֽעֲרִ֔ים חָרָשֵׁ֖י מַשְׁחִֽית׃
32 ನೀನು ಅಗ್ನಿಗೆ ಆಹುತಿಯಾಗುವೆ. ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು. ಇನ್ನು ಮೇಲೆ ನೀನು ಜ್ಞಾಪಕಕ್ಕೆ ಬರುವುದಿಲ್ಲವೆಂದು, ಯೆಹೋವ ದೇವರಾದ ನಾನೇ ಹೇಳಿದ್ದೇನೆ.’”
לָאֵ֤שׁ תִּֽהְיֶה֙ לְאָכְלָ֔ה דָּמֵ֥ךְ יִהְיֶ֖ה בְּתֹ֣וךְ הָאָ֑רֶץ לֹ֣א תִזָּכֵ֔רִי כִּ֛י אֲנִ֥י יְהוָ֖ה דִּבַּֽרְתִּי׃ פ

< ಯೆಹೆಜ್ಕೇಲನು 21 >