< ಯೆಹೆಜ್ಕೇಲನು 24 >

1 ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು:
A shekara ta tara, a wata na goma, a rana ta goma, maganar Ubangiji ta zo mini cewa,
2 “ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ. ಅದೇ ದಿನದಲ್ಲಿ ಬಾಬಿಲೋನಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.
“Ɗan mutum, ka rubuta wannan rana, wannan rana, domin sarkin Babilon ya yi ƙawanya wa Urushalima a wannan rana.
3 ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಟ್ಟು ಅದರಲ್ಲಿ ನೀರನ್ನು ಸುರಿ.
Ka faɗa wa wannan gidan’yan tawaye wani misali ka kuma faɗa musu cewa, ‘Ga abin da Ubangiji Mai Iko Duka yana cewa, “‘Ka sa tukunyar dahuwa; ka sa ta a kan wuta ka kuma zuba ruwa a cikinta.
4 ಮಾಂಸದ ತುಂಡುಗಳನ್ನೂ ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೆಯ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆಯ ಎಲುಬುಗಳ ಜೊತೆ ಅದನ್ನು ತುಂಬಿಸು.
Ka sa gunduwoyin nama a cikinta dukan gunduwoyi masu kyau, cinya da kafaɗa. Ka cika ta da waɗannan ƙasusuwa mafi kyau;
5 ಹಿಂಡಿನಲ್ಲಿ ಶ್ರೇಷ್ಠವಾದದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.
ka kama mafi kyau daga cikin garken. Ka tara itace a ƙarƙashinta saboda ƙasusuwan; ka sa ta tafasa ka kuma dafa ƙasusuwan a cikinta.
6 “‘ಆದಕಾರಣ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ರಕ್ತಮಯವಾದ ಆ ಪಟ್ಟಣಕ್ಕೆ ಕಷ್ಟ! ಯಾವುದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವುದೋ ಆ ಹಂಡೆಗೆ ಕಷ್ಟ! ಅದರಿಂದ ತುಂಡುತುಂಡಾಗಿ ಹೊರಗೆ ತೆಗೆ. ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.
“‘Gama wannan shi ne abin da Ubangiji Mai Iko Duka yana cewa, “‘Kaito birnin nan mai zubar da jini, ga tukunya wadda take da tsatsa, wadda tsatsarta ba za tă fita ba! Ka fitar da shi gunduwa-gunduwa ba tare da jefa ƙuri’a a kansu ba.
7 “‘ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.
“‘Gama zubar da jini yana a tsakiyarta, ta zubar da shi a dutsen da yake a fili; ba tă zubar da shi a ƙasa ba, inda ƙura za tă rufe shi.
8 ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ ರೋಷವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.
Don a zuga hasala a kuma yi sakayya na sa jininta a dutsen da ba a rufe ba, saboda kada a rufe.
9 “‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಆ ರಕ್ತಾಪರಾಧವುಳ್ಳ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
“‘Saboda haka ga abin da Ubangiji Mai Iko Duka yana cewa, “‘Kaito birnin nan mai zubar da jini! Ni ma zan jibge itace da yawa.
10 ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸವನ್ನು ಚೆನ್ನಾಗಿ ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಎಲುಬುಗಳು ಸುಡಲಿ.
Ka tula gumagumai ka kuma ƙuna wuta. Ka dafa naman da kyau, kana haɗawa da yaji; ka kuma bar ƙasusuwan su ƙone.
11 ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಣ ಕಲ್ಮಶವು ಕರಗಿ ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.
Sa’an nan ka sa tukunyan nan da babu kome a kan garwashi sai ta yi zafi har darmarta ta yi ja wur domin dattinta ya narke tsatsarta kuma ta ƙone.
12 ಅದರ ಕಲ್ಮಶವು ನನ್ನಲ್ಲಿ ಆಯಾಸವನ್ನುಂಟು ಮಾಡೀತೆ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ. ಅದು ಬೆಂಕಿಯಿಂದಲೂ ನೀಗಲಿಲ್ಲ.
Ta gajiyar da dukan ƙoƙari; ba a fid da tsatsarta nan mai yawa ba, kai, ko a wuta ma.
13 “‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.
“‘Yanzu ƙazantarki ita ce lalaci. Domin na yi ƙoƙari in tsabtacce ke amma ba ki tsabtattu daga ƙazantarki ba, ba za ki ƙara yin tsabta ba sai hasalata a kanki ya kwanta.
14 “‘ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ. ನಾನು ಕೆಲಸ ಮಾಡುವ ಸಮಯ ಬಂದಿದೆ. ನಾನು ಅದನ್ನು ಮಾಡದೆ ಬಿಡುವುದಿಲ್ಲ. ಕಟಾಕ್ಷ ತೋರಿಸುವುದಿಲ್ಲ. ಹಿಂದೆಗೆಯೆನು. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯತೀರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’”
“‘Ni Ubangiji na faɗa. Lokaci ya zo da zan aikata. Ba zan janye ba; ba zan ji tausayi ba, ba kuwa zan bari ba. Za a hukunta ki bisa ga hali da ayyukanki, in ji Ubangiji Mai Iko Duka.’”
15 ಯೆಹೋವ ದೇವರ ವಾಕ್ಯವು ನನಗೆ ಬಂದಿತು:
Maganar Ubangiji ta zo mini cewa,
16 “ಮನುಷ್ಯಪುತ್ರನೇ, ಒಂದೇ ಏಟಿನಿಂದ ನೇತ್ರಾನಂದವಾಗಿರುವುದನ್ನು ನಿನ್ನಿಂದ ತೆಗೆಯುತ್ತೇನೆ. ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.
“Ɗan mutum, da farat ɗaya ina gab da ɗauke abin da idanunka suke jin daɗin gani. Duk da haka kada ka yi makoki ko ka yi kuka ko ka zub da hawaye.
17 ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖ ತೋರಿಸಬೇಡ. ಮುಂಡಾಸವನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ನಿನ್ನ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳಬೇಡ, ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನಬೇಡಿರಿ.”
Ka yi nishi shiru; kada ka yi makoki saboda matacciyar. Ka naɗa rawaninka ka kuma sa takalmanka a ƙafa; kada ka rufe sashen fuskarka daga ƙasa ko ka ci abincin da masu kuka sukan ci.”
18 ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನರೊಂದಿಗೆ ಮಾತನಾಡಿದೆನು. ಸಂಜೆ ನನ್ನ ಹೆಂಡತಿ ಸತ್ತಳು. ಮರುದಿನ ಬೆಳಿಗ್ಗೆ ನಾನು ಆಜ್ಞಾಪಿಸಿದಂತೆ ಮಾಡಿದೆನು.
Da gari ya waye, sai na yi magana da mutane, da yamma kuwa matata ta rasu. Kashegari na yi yadda aka umarce ni.
19 ಆಗ ಜನರು, “ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ? ಯಾಕೆ ಹೀಗೆ ವರ್ತಿಸುತ್ತಿದ್ದೀಯಾ?” ಎಂದು ಕೇಳಿದರು.
Sai mutane suka tambaye ni suka ce, “Ba za ka faɗa mana abin da waɗannan abubuwa suke nufi a gare mu ba?”
20 ಆದ್ದರಿಂದ ನಾನು ಅವರಿಗೆ ಹೀಗೆ ಹೇಳಿದೆನು, “ಯೆಹೋವ ದೇವರ ವಾಕ್ಯವು ನನಗೆ ಬಂದಿತು,
Sai na ce musu, “Maganar Ubangiji ta zo mini cewa
21 ಇಸ್ರಾಯೇಲರ ಮನೆತನದವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ ಎಂದು ಹೇಳು: ಇಗೋ, ನಾನು ನನ್ನ ಪವಿತ್ರಾಲಯವನ್ನೂ, ನಿಮ್ಮ ಮುಖ್ಯಬಲವನ್ನೂ, ನಿಮ್ಮ ನೇತ್ರಾನಂದಕರವಾದದ್ದನ್ನೂ, ನಿಮ್ಮ ಮನಸ್ಸು ಅಭಿಲಾಷಿಸುವುದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳು ಖಡ್ಗದಿಂದ ಬೀಳುವರು.
faɗa wa gidan Isra’ila, ‘Ga abin da Ubangiji Mai Iko Duka yana cewa ina gab da ƙazantar da wuri mai tsarkina, kagarar da kuke taƙama, abin da idanunku suke jin daɗin gani, abin faranta zuciyarku.’Ya’yanku maza da mata waɗanda kun bari a baya za su mutu ta wurin takobi.
22 ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳುವುದಿಲ್ಲ ಅಥವಾ ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನುವುದಿಲ್ಲ.
Za ku kuma yi yadda na yi. Ba za ku rufe sashe ƙasa na fuskarku ko ku ci abinci da masu kuka sukan ci ba.
23 ನಿಮ್ಮ ಮುಂಡಾಸಗಳು ನಿಮ್ಮ ತಲೆಯ ಮೇಲೆಯೂ ನಿಮ್ಮ ಪಾದರಕ್ಷೆಯು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವುವು. ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರಳುವಿರಿ.
Za ku naɗa rawunanku a kai ku sa takalmanku a ƙafafunku. Ba za ku yi kuka ko makoki ba amma za ku lalace saboda zunubanku ku kuma yi ta yin nishi.
24 ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವು ಮಾಡುವಿರಿ. ಈ ರೀತಿ ಆದಾಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ತಿಳಿಯುವಿರಿ.’
Ezekiyel zai zama alama gare ku; za ku yi daidai yadda ya yi. Sa’ad da wannan ya faru, za ku san cewa ni ne Ubangiji Mai Iko Duka.’
25 “ಮನುಷ್ಯಪುತ್ರನೇ, ಅವರ ಮಹತ್ತರ ಸಂತೋಷವನ್ನೂ ಅವರ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವುದನ್ನೂ ಅವರ ಪುತ್ರಪುತ್ರಿಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ ದಿನದಲ್ಲಿ,
“Kai kuma ɗan mutum, a ranar da zan ɗauke musu kagararsu, farin cikinsu da darajarsu, abin da idanunsu ke jin daɗin gani, abin da yake faranta musu zuciya, da kuka’ya’yansu maza da mata,
26 ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?
a ranan nan wanda ya tsere zai zo don yă ba ka labari.
27 ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ, ಆಗ ನಾನೇ ಯೆಹೋವ ದೇವರೆಂದು ತಿಳಿಯುವರು.”
A lokacin bakinka zai buɗe, za ka yi magana da shi ba kuwa za ka ƙara yin shiru ba. Ta haka za ka zama alama gare su, za su kuwa san cewa ni ne Ubangiji.”

< ಯೆಹೆಜ್ಕೇಲನು 24 >