< ಯೆಹೆಜ್ಕೇಲನು 26 >

1 ಹನ್ನೊಂದನೆಯ ವರ್ಷ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು.
וַיְהִי בְּעַשְׁתֵּֽי־עֶשְׂרֵה שָׁנָה בְּאֶחָד לַחֹדֶשׁ הָיָה דְבַר־יְהוָה אֵלַי לֵאמֹֽר׃
2 “ಮನುಷ್ಯಪುತ್ರನೇ, ಟೈರ್, ಯೆರೂಸಲೇಮಿನ ವಿಷಯವಾಗಿ, ‘ಆಹಾ, ಜನರ ದ್ವಾರವಾಗಿದ್ದದ್ದು ಮುರಿದುಹೋಯಿತು, ಅದು ನನ್ನ ಕಡೆಗೆ ತೆರೆದುಕೊಂಡಿದೆ. ಯೆರೂಸಲೇಮು ಹಾಳಾದದ್ದರಿಂದ ನಾನು ವೃದ್ಧಿಗೊಳ್ಳುವೆನು,’
בֶּן־אָדָם יַעַן אֲשֶׁר־אָמְרָה צֹּר עַל־יְרוּשָׁלִַם הֶאָח נִשְׁבְּרָה דַּלְתוֹת הָעַמִּים נָסֵבָּה אֵלָי אִמָּלְאָה הָחֳרָֽבָה׃
3 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಟೈರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವುದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.
לָכֵן כֹּה אָמַר אֲדֹנָי יְהוִה הִנְנִי עָלַיִךְ צֹר וְהַעֲלֵיתִי עָלַיִךְ גּוֹיִם רַבִּים כְּהַעֲלוֹת הַיָּם לְגַלָּֽיו׃
4 ಅವರು ಟೈರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ಧೂಳನ್ನು ಒರಸಿ ಅದನ್ನು ಬೋಳು ಬಂಡೆಯಂತೆ ಮಾಡುವೆನು.
וְשִׁחֲתוּ חֹמוֹת צֹר וְהָֽרְסוּ מִגְדָּלֶיהָ וְסִֽחֵיתִי עֲפָרָהּ מִמֶּנָּה וְנָתַתִּי אוֹתָהּ לִצְחִיחַ סָֽלַע׃
5 ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅದು ಜನಾಂಗಗಳಿಗೆ ಕೊಳ್ಳೆಯಾಗಿರುವುದು,
מִשְׁטַח חֲרָמִים תִּֽהְיֶה בְּתוֹךְ הַיָּם כִּי אֲנִי דִבַּרְתִּי נְאֻם אֲדֹנָי יְהוִה וְהָיְתָה לְבַז לַגּוֹיִֽם׃
6 ಮತ್ತು ಪ್ರಧಾನ ಭೂಮಿಯಲ್ಲಿರುವ ಅದರ ಪುತ್ರಿಯರು ಖಡ್ಗದಿಂದ ಹತರಾಗುವರು. ಆಗ ನಾನೇ ಯೆಹೋವ ದೇವರೆಂದು ಎಲ್ಲರಿಗೂ ತಿಳಿಯುವುದು.
וּבְנוֹתֶיהָ אֲשֶׁר בַּשָּׂדֶה בַּחֶרֶב תֵּהָרַגְנָה וְיָדְעוּ כִּי־אֲנִי יְהוָֽה׃
7 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಉತ್ತರದ ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡವೂ ಸವಾರರ ಸಂಗಡವೂ ರಥಗಳ ಸಂಗಡವೂ ಬಹುಜನರ ಸಂಗಡವೂ ಟೈರಿನ ಮೇಲೆ ತರುತ್ತೇನೆ.
כִּי כֹה אָמַר אֲדֹנָי יְהוִה הִנְנִי מֵבִיא אֶל־צֹר נְבוּכַדְרֶאצַּר מֶֽלֶךְ־בָּבֶל מִצָּפוֹן מֶלֶךְ מְלָכִים בְּסוּס וּבְרֶכֶב וּבְפָרָשִׁים וְקָהָל וְעַם־רָֽב׃
8 ಅವನು ಪ್ರಧಾನ ಭೂಮಿಯಲ್ಲಿನ ನಿನ್ನ ಪುತ್ರಿಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಗುರಾಣಿಯನ್ನು ಎತ್ತುವನು.
בְּנוֹתַיִךְ בַּשָּׂדֶה בַּחֶרֶב יַהֲרֹג וְנָתַן עָלַיִךְ דָּיֵק וְשָׁפַךְ עָלַיִךְ סֹֽלְלָה וְהֵקִים עָלַיִךְ צִנָּֽה׃
9 ತನ್ನ ಯುದ್ಧ ಯಂತ್ರಗಳನ್ನು ನಿನ್ನ ಗೋಡೆಗಳಿಗೆ ತಾಕಿಸುವನು. ತನ್ನ ಆಯುಧಗಳಿಂದ ನಿನ್ನ ಗೋಪುರಗಳನ್ನು ಕೆಡವಿಬಿಡುವನು.
וּמְחִי קָֽבָלּוֹ יִתֵּן בְּחֹֽמוֹתָיִךְ וּמִגְדְּלֹתַיִךְ יִתֹּץ בְּחַרְבוֹתָֽיו׃
10 ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಸುಕುವದು, ಒಡಕು ಬಿದ್ದ ಕೋಟೆಯೊಳಗೆ ಶತ್ರುಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲುಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವುವು.
מִשִּׁפְעַת סוּסָיו יְכַסֵּךְ אֲבָקָם מִקּוֹל פָּרַשׁ וְגַלְגַּל וָרֶכֶב תִּרְעַשְׁנָה חֽוֹמוֹתַיִךְ בְּבֹאוֹ בִּשְׁעָרַיִךְ כִּמְבוֹאֵי עִיר מְבֻקָּעָֽה׃
11 ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ನಿನ್ನ ಜನರನ್ನು ಖಡ್ಗದಿಂದ ಕೊಲ್ಲುವನು; ನಿನ್ನ ಬಲವಾದ ಕಂಬಗಳು ನೆಲಕ್ಕೆ ಬೀಳುವುವು.
בְּפַרְסוֹת סוּסָיו יִרְמֹס אֶת־כָּל־חֽוּצוֹתָיִךְ עַמֵּךְ בַּחֶרֶב יַהֲרֹג וּמַצְּבוֹת עֻזֵּךְ לָאָרֶץ תֵּרֵֽד׃
12 ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಒಡೆದು, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ ನಿನ್ನ ಮರಗಳನ್ನೂ ಧೂಳನ್ನೂ ನೀರಿನಲ್ಲಿ ಹಾಕುವರು.
וְשָׁלְלוּ חֵילֵךְ וּבָֽזְזוּ רְכֻלָּתֵךְ וְהָֽרְסוּ חוֹמוֹתַיִךְ וּבָתֵּי חֶמְדָּתֵךְ יִתֹּצוּ וַאֲבָנַיִךְ וְעֵצַיִךְ וַֽעֲפָרֵךְ בְּתוֹךְ מַיִם יָשִֽׂימוּ׃
13 ಆಗ ನಿನ್ನ ಹಾಡುಗಳ ಶಬ್ದವನ್ನು ನಿಲ್ಲಿಸುವೆನು. ನಿನ್ನ ಕಿನ್ನರಿಗಳ ಧ್ವನಿ ಇನ್ನು ಕೇಳಿಸುವುದಿಲ್ಲ.
וְהִשְׁבַּתִּי הֲמוֹן שִׁירָיִךְ וְקוֹל כִּנּוֹרַיִךְ לֹא יִשָּׁמַע עֽוֹד׃
14 ನಿನ್ನನ್ನು ಬೋಳು ಬಂಡೆಯಂತೆ ಮಾಡುವೆನು. ನೀನು ಅಲ್ಲಿ ಬಲೆಹಾಸುವ ಸ್ಥಳವಾಗುವೆ. ನೀನು ಪುನಃ ಕಟ್ಟಲಾಗದೆ ಹೋಗುವಿ. ಯೆಹೋವ ದೇವರಾದ ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
וּנְתַתִּיךְ לִצְחִיחַ סֶלַע מִשְׁטַח חֲרָמִים תִּֽהְיֶה לֹא תִבָּנֶה עוֹד כִּי אֲנִי יְהוָה דִּבַּרְתִּי נְאֻם אֲדֹנָי יְהוִֽה׃
15 “ಸಾರ್ವಭೌಮ ಯೆಹೋವ ದೇವರು ಟೈರಿಗೆ ಹೀಗೆ ಹೇಳುತ್ತಾರೆ: ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ಸಮುದ್ರತೀರದ ಪ್ರದೇಶಗಳು ನಡುಗುವುದಿಲ್ಲವೇ?
כֹּה אָמַר אֲדֹנָי יְהוִה לְצוֹר הֲלֹא ׀ מִקּוֹל מַפַּלְתֵּךְ בֶּאֱנֹק חָלָל בֵּהָרֵֽג הֶרֶג בְּתוֹכֵךְ יִרְעֲשׁוּ הָאִיִּֽים׃
16 ಆಮೇಲೆ ಸಮುದ್ರತೀರದ ಎಲ್ಲಾ ರಾಜಕುಮಾರರು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲುವಂಗಿಗಳನ್ನು ತೆಗೆದುಹಾಕುವರು, ಕಸೂತಿ ಕೆಲಸದಿಂದ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು. ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳುವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯವಾಗಿ ಭಯಭೀತರಾದರು.
וֽ͏ְיָרְדוּ מֵעַל כִּסְאוֹתָם כֹּל נְשִׂיאֵי הַיָּם וְהֵסִירוּ אֶת־מְעִילֵיהֶם וְאֶת־בִּגְדֵי רִקְמָתָם יִפְשֹׁטוּ חֲרָדוֹת ׀ יִלְבָּשׁוּ עַל־הָאָרֶץ יֵשֵׁבוּ וְחָֽרְדוּ לִרְגָעִים וְשָׁמְמוּ עָלָֽיִךְ׃
17 ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವುದೇನೆಂದರೆ: “‘ಸಮುದ್ರಗಳ ಬಳಿಯಲ್ಲಿ ವಾಸಿಸಿದವಳೇ, ಪ್ರಸಿದ್ಧ ಪಟ್ಟಣವೇ, ಸಮುದ್ರದ ಮೇಲೆ ಬಲಗೊಂಡ ನಗರವೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದೆ?
וְנָשְׂאוּ עָלַיִךְ קִינָה וְאָמְרוּ לָךְ אֵיךְ אָבַדְתְּ נוֹשֶׁבֶת מִיַּמִּים הָעִיר הַהֻלָּלָה אֲשֶׁר הָיְתָה חֲזָקָה בַיָּם הִיא וְיֹשְׁבֶיהָ אֲשֶׁר־נָתְנוּ חִתִּיתָם לְכָל־יוֹשְׁבֶֽיהָ׃
18 ಈಗ ನೀನು ಬೀಳುವ ದಿವಸದಲ್ಲಿ ಸಮುದ್ರ ತೀರಗಳು ನಡುಗುವುವು. ಹೌದು, ನೀನು ಅಳಿದು ಹೋದುದ್ದಕ್ಕೆ ಸಮುದ್ರ ತೀರಗಳು ಗಾಬರಿಯಾಗುವುವು.’
עַתָּה יֶחְרְדוּ הָֽאִיִּן יוֹם מַפַּלְתֵּךְ וְנִבְהֲלוּ הָאִיִּים אֲשֶׁר־בַּיָּם מִצֵּאתֵֽךְ׃
19 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧ ಜಲರಾಶಿಯನ್ನು ನಿನ್ನ ಮೇಲೆ ಬರಮಾಡುವೆನು.
כִּי כֹה אָמַר אֲדֹנָי יְהוִה בְּתִתִּי אֹתָךְ עִיר נֶחֱרֶבֶת כֶּעָרִים אֲשֶׁר לֹֽא־נוֹשָׁבוּ בְּהַעֲלוֹת עָלַיִךְ אֶת־תְּהוֹם וְכִסּוּךְ הַמַּיִם הָרַבִּֽים׃
20 ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವವುಳ್ಳವರ ಲೋಕದಲ್ಲಿ ನೆಲೆಗೊಳಿಸದೆ ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರೊಂದಿಗೆ ವಾಸಿಸುವಂತೆ ಸೇರಿಸುವೆನು.
וְהוֹרַדְתִּיךְ אֶת־יוֹרְדֵי בוֹר אֶל־עַם עוֹלָם וְהוֹשַׁבְתִּיךְ בְּאֶרֶץ תַּחְתִּיּוֹת כָּחֳרָבוֹת מֵֽעוֹלָם אֶת־יוֹרְדֵי בוֹר לְמַעַן לֹא תֵשֵׁבִי וְנָתַתִּי צְבִי בְּאֶרֶץ חַיִּֽים׃
21 ನಾನೂ ನಿನ್ನನ್ನು ಭಯಂಕರವಾದ ಅಂತ್ಯಕ್ಕೆ ತರುವೆನು. ಇನ್ನು ಮೇಲೆ ನೀನು ಇರುವುದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡುಕಿದರೂ ನೀನು ಸಿಗುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
בַּלָּהוֹת אֶתְּנֵךְ וְאֵינֵךְ וּֽתְבֻקְשִׁי וְלֹֽא־תִמָּצְאִי עוֹד לְעוֹלָם נְאֻם אֲדֹנָי יְהֹוִֽה׃

< ಯೆಹೆಜ್ಕೇಲನು 26 >