< ಯೆಹೆಜ್ಕೇಲನು 29 >
1 ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹನ್ನೆರಡನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,
Ын анул ал зечеля, ын зиуа а доуэспрезечя а луний а зечя, кувынтул Домнулуй мь-а ворбит астфел:
2 “ನರಪುತ್ರನೇ, ನೀನು ಈಜಿಪ್ಟಿನ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನಿಗೂ ಸಮಸ್ತ ಈಜಿಪ್ಟಿಗೂ ವಿರೋಧವಾಗಿ ಪ್ರವಾದಿಸು.
„Фиул омулуй, ынтоарче-те ку фаца спре Фараон, ымпэратул Еӂиптулуй, ши пророчеште ымпотрива луй ши ымпотрива ынтрегулуй Еӂипт!
3 ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಈಜಿಪ್ಟಿನ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
Ворбеште ши спуне: ‘Аша ворбеште Домнул Думнезеу: «Ятэ кэ ам неказ пе тине, Фараоане, ымпэратул Еӂиптулуй, крокодил маре, каре те кулчь ын мижлокул рыурилор тале ши зичь: ‹Рыул меу, Нилул, есте ал меу, еу л-ам фэкут!›
4 ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಯೊಳಗಿಂದ ಮೇಲೆ ಎಳೆದು ನಿನ್ನ ಮೀನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು.
Ыць вой пуне ынсэ ун кырлиг ын фэлчь, вой липи пештий рыурилор тале де солзий тэй ши те вой скоате дин мижлокул рыурилор тале ку тоць пештий каре се афлэ ын еле ши каре се вор липи де солзий тэй.
5 ನಿನ್ನನ್ನೂ ನಿನ್ನ ನದಿಗಳ ಮೀನುಗಳನ್ನೂ ಅರಣ್ಯದಲ್ಲಿ ಹಾಕುವೆನು. ನೀನು ಬಯಲುಗಳ ಮೇಲೆ ಬಿದ್ದಿರುವೆ; ನಿನ್ನನ್ನು ಯಾರೂ ಹೊರುವುದೂ ಇಲ್ಲ, ಸೇರಿಸುವುದೂ ಇಲ್ಲ. ನಿನ್ನನ್ನೂ ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಕಾಡಿನ ಪಾಲುಮಾಡುವೆನು. ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರವನ್ನಾಗಿ ಕೊಟ್ಟಿದ್ದೇನೆ.
Те вой арунка ын пустиу, пе тине ши пе тоць пештий дин рыуриле тале. Вей кэдя пе фаца огоарелор, ну вей фи ридикат, нич ынгропат, чи те вой да де мынкаре фярелор пэмынтулуй ши пэсэрилор черулуй.
6 ಆಗ ಎಲ್ಲಾ ಈಜಿಪ್ಟಿನ ನಿವಾಸಿಗಳು ನಾನೇ ಯೆಹೋವನೆಂದು ತಿಳಿಯುವರು. “‘ಅವರು ಇಸ್ರಾಯೇಲರ ಮನೆತನದವರಿಗೆ ದಂಟಿನ ಊರುಗೋಲಾಗಿದ್ದರು.
Ши тоць локуиторий Еӂиптулуй вор шти кэ Еу сунт Домнул, пентру кэ ау фост о проптя де трестие пентру каса луй Исраел.
7 ಇಸ್ರಾಯೇಲರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದೆ; ಅವರು ನಿನ್ನನ್ನು ಆದರಿಸಿಕೊಂಡಾಗ ನೀನು ಮುರಿದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
Кынд ау пус мына пе тине, те-ай рупт ши ле-ай стрэпунс тот умэрул; кынд с-ау проптит де тине, те-ай сфэрымат ши ле-ай скрынтит шолдуриле.»
8 “‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾನೆ: ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.
Де ачея аша ворбеште Домнул Думнезеу: «Ятэ, вой адуче сабия ымпотрива та ши вой нимичи ку десэвыршире дин мижлокул тэу оамений ши вителе.
9 ನೀನು, “ಆ ನೈಲ್ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು,” ಹೇಳಿಕೊಂಡದ್ದರಿಂದ, “‘ಈಜಿಪ್ಟ್ ದೇಶವು ಹಾಳು ಮರುಭೂಮಿಯಾಗುವುದು. ಆಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.
Цара Еӂиптулуй ва ажунӂе о пустиетате ши ун пустиу ши вор шти кэ Еу сунт Домнул, пентру кэ а зис: ‹Нилул есте ал меу, еу л-ам фэкут!›
10 ಆದ್ದರಿಂದ ಇಗೋ, ನಾನು ನಿನಗೂ ನಿನ್ನ ನದಿಗಳಿಗೂ ವಿರುದ್ಧವಾಗಿದ್ದೇನೆ. ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.
Де ачея, ятэ кэ ам неказ пе тине ши пе рыуриле тале ши вой префаче цара Еӂиптулуй ынтр-ун пустиу ши ынтр-о пустиетате, де ла Мигдол пынэ ла Сиена ши пынэ ла хотареле Етиопией.
11 ಯಾವ ಮನುಷ್ಯನ ಪಾದವಾದರೂ ಅದರಲ್ಲಿ ಹಾದು ಹೋಗುವುದಿಲ್ಲ. ಮೃಗಗಳ ಪಾದವೂ ಅದರಲ್ಲಿ ಹಾದು ಹೋಗುವುದಿಲ್ಲ ಅಥವಾ ನಲವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವುದಿಲ್ಲ.
Нич пичор де ом ну ва трече прин еа, нич пичор де витэ ну ва трече прин еа ши ва рэмыне патрузечь де ань фэрэ сэ фие локуитэ.
12 ನಾನು ಈಜಿಪ್ಟ್ ದೇಶವನ್ನು ಹಾಳುಬಿದ್ದಿರುವ ದೇಶಗಳಲ್ಲಿ ಸೇರಿಸುವೆನು. ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ನಡುವೆ ನಲವತ್ತು ವರ್ಷಗಳು ಹಾಳಾಗಿರುವುವು. ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದುರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.
Вой префаче цара Еӂиптулуй ынтр-о пустиетате ын мижлокул алтор цэрь пустиите, ши четэциле ей вор фи пустий ынтре алте четэць пустий тимп де патрузечь де ань. Яр пе еӂиптень ый вой рисипи принтре нямурь ши-й вой ымпрэштия ын фелурите цэрь.»
13 “‘ಆದರೂ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಲವತ್ತು ವರ್ಷಗಳ ಕೊನೆಯಲ್ಲಿ ನಾನು ಈಜಿಪ್ಟಿನವರನ್ನು ಚದುರಿರುವ ರಾಷ್ಟ್ರಗಳಿಂದ ಒಟ್ಟುಗೂಡಿಸುವೆನು.
Аша ворбеште Домнул Думнезеу: «Дупэ патрузечь де ань, вой стрынӂе пе еӂиптень дин мижлокул попоарелор ынтре каре ый вой рисипи.
14 ನಾನು ಈಜಿಪ್ಟಿನವರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸ್ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡುವೆನು. ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.
Вой адуче ынапой пе принший де рэзбой ай Еӂиптулуй, ый вой адуче ынапой ын цара Патрос, ын цара лор де баштинэ, ши вор алкэтуи аколо о ымпэрэцие слабэ.
15 ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿಸಿಕೊಳ್ಳುವುದು. ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆ ಎತ್ತದು. ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗದಂತೆ ಅದನ್ನು ಕ್ಷೀಣಗತಿಗೆ ತರುವೆನು.
Да, ва фи чя май неынсемнатэ динтре ымпэрэций ши ну се ва май ынэлца песте нямурь; ый вой ымпуцина, ка сэ ну стэпыняскэ песте нямурь.
16 ಇನ್ನು ಅದು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಇವರು ಅವರ ಕಡೆಗೆ ನೋಡಿದಾಗ ಪಾಪವನ್ನು ಜ್ಞಾಪಕಕ್ಕೆ ತರುವರು. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’”
Ымпэрэция ачаста ну ва май фи пентру каса луй Исраел о причинэ де ынкредере, чи ый ва адуче аминте де нелеӂюиря ей, кынд се ынторчя спре ей. Ши вор шти кэ Еу сунт Домнул Думнезеу.»’”
17 ಇಪ್ಪತ್ತೇಳನೆಯ ವರ್ಷದಲ್ಲಿ, ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,
Ын ал доуэзечь ши шаптеля ан, ын зиуа ынтый а луний ынтый, кувынтул Домнулуй мь-а ворбит астфел:
18 “ಮನುಷ್ಯಪುತ್ರನೇ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಟೈರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ಟೈರನಿಂದ ಪ್ರತಿಫಲವೇನೂ ದೊರೆಯಲಿಲ್ಲ.
„Фиул омулуй, Небукаднецар, ымпэратул Бабилонулуй, шь-а пус оастя сэ факэ о службэ гря ымпотрива Тирулуй. Тоате капетеле ау ажунс плешуве, тоць умерий сунт жупуиць ши н-а луат де ла Тир ничо платэ, нич ел, нич оастя луй, пентру служба пе каре а фэкут-о ымпотрива луй.
19 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಅದರ ಕೊಳ್ಳೆಯನ್ನೂ ಅದರ ಸುಲಿಗೆಯನ್ನೂ ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವುದು.
Де ачея, аша ворбеште Домнул Думнезеу: ‘Ятэ кэ дау луй Небукаднецар, ымпэратул Бабилонулуй, цара Еӂиптулуй; ел ый ва ридика богэцииле, о ва прэда ши о ва жефуи; ачаста ва фи плата оштий луй!
20 ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಈಜಿಪ್ಟ್ ದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಸೇವೆಮಾಡಿದ್ದಾರೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
Ка платэ пентру служба фэкутэ ымпотрива Тирулуй, ый дау цара Еӂиптулуй, кэч пентру Мине с-ау остенит, зиче Домнул Думнезеу.
21 “ಆ ದಿನದಲ್ಲಿ ನಾನು ಇಸ್ರಾಯೇಲರ ಮನೆತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ಆಗ ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.”
Ын зиуа ачея, вой да тэрие касей луй Исраел ши-ць вой дескиде гура веселэ ын мижлокул лор; ши вор шти кэ Еу сунт Домнул.’”