< ಯೆಹೆಜ್ಕೇಲನು 31 >
1 ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು:
১তেতিয়া আমাৰ নিৰ্বাসনৰ একাদশ বছৰৰ তৃতীয় মাহৰ প্ৰথম দিনা যিহোৱাৰ বাক্য মোৰ ওচৰলৈ আহিল, আৰু ক’লে,
2 “ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನೊಂದಿಗೂ ಮತ್ತು ಅವನ ಸಮೂಹದೊಂದಿಗೂ ಮಾತನಾಡಿ, “‘ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನವಾಗಿರುವೆ?
২“হে মনুষ্য সন্তান, মিচৰৰ ৰজা ফৰৌণক আৰু তেওঁৰ চাৰিওফালে থকা দাস সমূহক কোৱা, ‘তুমি তোমাৰ মহত্ত্বত কাৰ নিচিনা?
3 ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಬಹಳ ಎತ್ತರವಾಗಿದೆ, ಅದರ ತುದಿಯು ದಟ್ಟವಾದ ಕೊಂಬೆಗಳ ನಡುವೆಯಿತ್ತು.
৩চোৱা! অচূৰ লিবানোনত সুন্দৰ ডাল, ঘন ছাঁ আৰু ওখ হৈ থকা এজোপা এৰচ গছৰ দৰে আছিল; আৰু তাৰ ওপৰ ভাগ মেঘস্পৰ্শী যেন হৈছিল।
4 ಅದನ್ನು ಜಲಪ್ರವಾಹಗಳು ಬೆಳೆಸಿದವು, ಆಳವಾದ ಬುಗ್ಗೆಗಳು ಅದನ್ನು ಎತ್ತರಕ್ಕೆ ಬೆಳೆಸಿದವು. ಅವುಗಳ ತೊರೆಗಳು ಅದರ ಬುಡದ ಸುತ್ತಲೂ ಹರಿದು ತಮ್ಮ ಕಾಲುವೆಗಳನ್ನು ಹೊಲದ ಎಲ್ಲಾ ಮರಗಳಿಗೆ ಕಳುಹಿಸಿದವು.
৪জল সমূহে তাক ডাঙৰ-দীঘল কৰিছিল; অগাধ জলে তাক বঢ়াইছিল। তাৰ সুঁতিবোৰ তাৰ ৰোৱা ঠাইৰ চাৰিওফালে বৈছিল, আৰু সি নিজৰ সুঁতিবোৰ পথাৰৰ আটাই গছৰ গুৰিলৈ পঠাইছিল।
5 ಆದ್ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರಗಳಿಗಿಂತ ಎತ್ತರವಾಗಿತ್ತು. ಅದು ಹಬ್ಬಿದ್ದುದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು.
৫এই হেতুকে ওখই সি পথাৰৰ আটাই গছতকৈ ওখ আছিল; সি পঠোৱা অনেক পানীৰ কাৰণে তাৰ ডালবোৰ বৃদ্ধি হৈছিল, আৰু প্রচুৰ জল পোৱাত তাৰ শাখাবোৰ দীঘল আৰু অনেক হৈছিল।
6 ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು. ಅದರ ರೆಂಬೆಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮ ಕೊಟ್ಟವು. ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.
৬তাৰ ডালবোৰত আকাশৰ আটাই পক্ষীয়ে বাহ লৈছিল, তাৰ শাখাবোৰৰ তলত আটাই বনৰীয়া জন্তুৱে পোৱালি জগাইছিল। আৰু তাৰ ছাঁত আটাই মহাজাতিয়ে বাস কৰিছিল।
7 ಹೀಗೆ ಅದರ ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ನೀಳವಾದ ಕೊಂಬೆಗಳಿಂದ ಸುಂದರವಾಗಿತ್ತು. ಏಕೆಂದರೆ ಅದರ ಬೇರು ಸಾಕಷ್ಟು ನೀರಿನ ಆಸರೆ ಪಡೆದಿತ್ತು.
৭এইদৰে, তাৰ শিপা অনেক জল সমূহৰ কাষত থকাত, সি নিজ মহত্ত্বত আৰু নিজ ডালবোৰৰ দৈৰ্ঘত সুন্দৰ আছিল।
8 ದೇವರ ತೋಟದ ದೇವದಾರುಗಳು ಅದನ್ನು ಮರೆಮಾಡಲಿಲ್ಲ. ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ. ಆಲದ ಮರಗಳು ಅದರ ರೆಂಬೆಗಳಷ್ಟೂ ಇಲ್ಲ. ಆ ದೇವರ ತೋಟದ ಯಾವುದೇ ಮರವು ಇದರ ಸೌಂದರ್ಯಕ್ಕೆ ಸಮವಾಗಿಲ್ಲ.
৮ঈশ্বৰৰ উদ্যানৰ এৰচ গছবোৰে তাক লুকুৱাব নোৱাৰিছিল! দেৱদাৰু গছবোৰ তাৰ ডালবোৰৰ নিচিনা নাছিল, আৰু অৰ্ম্মোন গছবোৰ তাৰ শাখাবোৰৰ নিচিনা নাছিল; আৰু ঈশ্বৰৰ উদ্যানত থকা কোনো গছ সৌন্দৰ্য্যত তাৰ নিচিনা নাছিল।
9 ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು. ಅದರಿಂದ ದೇವರ ತೋಟದಲ್ಲಿನ ಏದೆನಿನ ಮರಗಳೆಲ್ಲಾ ಅದರ ಮೇಲೆ ಹೊಟ್ಟೆಕಿಚ್ಚು ಪಟ್ಟವು.
৯মই তাক অধিক ডালবোৰেৰে তাক এনে সুন্দৰ কৰিছিলোঁ; যে, ঈশ্বৰৰ উদ্যানত থকা এদনৰ সকলো গছে তাক ঈৰ্ষা কৰিছিল’!”
10 “‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಅವನು ಎತ್ತರವಾಗಿ ಬೆಳೆದು ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟನು.
১০এই হেতুকে প্ৰভু যিহোৱাই এই কথা কৈছে: সি উচ্চতাত ওখ হোৱাৰ, আৰু সি তাৰ ওপৰ ভাগ মেঘস্পৰ্শী কৰাৰ, আৰু তাৰ হৃদয় নিজৰ উচ্চতাত গৰ্ব্বিত হোৱাৰ কাৰণে,
11 ಆದ್ದರಿಂದ ನಾನು ಅವನನ್ನು ಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಕೊಟ್ಟಿದ್ದೇನೆ. ಇವನು ನಿಶ್ಚಯವಾಗಿ ಅದನ್ನು ದಂಡಿಸುತ್ತಾನೆ ಅದರ ದುಷ್ಟತ್ವದ ನಿಮಿತ್ತ ನಾನು ಅದನ್ನು ತಳ್ಳಿಹಾಕಿದ್ದೇನೆ.
১১মই তাক জাতিবোৰ পৰাক্ৰমী জনৰ হাতত সমৰ্পণ কৰিলোঁ! এই শাসনকৰ্ত্তাই তেওঁৰ বিৰুদ্ধে উচিত কাৰ্য কৰিলে আৰু তাৰ দুষ্টতাৰ কাৰণে তাক দূৰ কৰি দিয়া হ’ল!
12 ಜನಾಂಗಗಳಲ್ಲಿ ಭಯಂಕರವಾದ ವಿದೇಶಿಯರು ಅದನ್ನು ಕಡಿದುಹಾಕುವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅದರ ಕೊಂಬೆಗಳು ಬೀಳುವುವು. ದೇಶದ ಹಳ್ಳಗಳಲ್ಲೆಲ್ಲಾ ಅದರ ರೆಂಬೆಗಳು ಮುರಿದು ಹೋಗುವುವು. ಭೂಮಿಯ ಜನಗಳೆಲ್ಲಾ ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಡುವರು.
১২আৰু জাতিবোৰৰ ভয়ানক বিদেশীসকলে তেওঁক কাটি এৰি থৈ গ’ল। পৰ্ব্বতবোৰৰ ওপৰত আৰু আটাই উপত্যকাত তাৰ ডালবোৰ পৰি আছে, আৰু দেশৰ আটাই জুৰিবোৰৰ কাষত তাৰ শাখবোৰ ভাগি গ’ল। আৰু তেতিয়া পৃথিৱীৰ সকলো জাতিবোৰে তেওঁৰ ছাঁৰ পৰা নামি গ’ল আৰু এৰি গুচি গ’ল।
13 ಕೆಳಗೆ ಬಿದ್ದ ಮರದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವುವು. ಎಲ್ಲಾ ಕಾಡುಮೃಗಗಳು ಅದರ ರೆಂಬೆಗಳ ಬಳಿಯಲ್ಲಿರುವುವು.
১৩পৰি থকা সেই গছডালত আকাশৰ আটাই পক্ষীবোৰে তাত বাস কৰিছে, আৰু তাৰ শাখাৰ ওপৰত আটাই বনৰীয়া জন্তু বহি আছে।
14 ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ ಇರುವುದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವುವು. ಅವುಗಳಿಗೆ ಅಧೋಲೋಕವೇ ಗತಿಯಾಗುವುದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವುವು.
১৪জল সমূহৰ কাষত থকা গছবোৰৰ কোনো গছে নিজ উচ্চতাত গৰ্ব্ব নকৰিবৰ নিমিত্তে, বা তাৰ ওপৰ ভাগ মেঘস্পৰ্শী নকৰিবলৈ, নাইবা সেইবোৰৰ বৃহৎবোৰৰ মাজৰ পানী পান কৰাসকলৰ মাজৰ কোনেও উচ্চতাত নিজকে ওখ নেদেখুৱাবৰ বাবে, মই ইয়াকে কৰিলোঁ। কিয়নো সেই আটাইবোৰ মৃত্যুলৈ, পৃথিৱীৰ আধা ভাগলৈ, গাতলৈ নামিব লগাবোৰে সৈতে মনুষ্য সন্তান সকলৰ মাজত সমৰ্পিত হ’ল।”
15 “‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮಾಧಿಗೆ ಇಳಿದ ದಿನದಲ್ಲಿ ನಾನು ಆಳವಾದ ಬುಗ್ಗೆಗಳನ್ನು ದುಃಖದಿಂದ ಮುಚ್ಚಿದೆನು; ನಾನು ಅದರ ಪ್ರವಾಹವನ್ನು ತಡೆಹಿಡಿದೆನು. ಮಹಾಜಲವನ್ನು ನಿಲ್ಲಿಸಿದೆನು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಿಡುವಂತೆ ಮಾಡಿದೆನು. ಬಯಲಿನ ಮರಗಳೆಲ್ಲಾ ಕುಗ್ಗಿಹೋದವು. (Sheol )
১৫প্ৰভু যিহোৱাই এই কথা কৈছে: “সি চিয়োললৈ নামি যোৱা দিনা মই শোকৰ আজ্ঞা দিলোঁ; মই তাৰ কাৰণে অগাধ জলক ঢাকিলোঁ, তাক সুঁতিবোৰ বন্ধ কৰিলোঁ, আৰু মহাজল সমূহক স্থগিত কৰা হ’ল; মই তাৰ বাবে লিবানোনক শোক কৰালোঁ, আৰু পথাৰৰ আটাই গছ তাৰ বাবে জঁয় পৰিল। (Sheol )
16 ನಾನು ಅದನ್ನು ಕುಳಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು. ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವುವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿಕೊಂಡವು. (Sheol )
১৬গাতলৈ নামিব লগাবোৰে সৈতে মই তাক চিয়োললৈ পেলোৱা সময়ত তাৰ পতনৰ শব্দত মই জাতিবোৰক কঁপালো; আৰু এদনৰ আটাই গছে, লিবানোনৰ মনোনীত আৰু উৎকৃষ্ট পানী পান কৰা আটাইবোৰে পৃথিৱীৰ অৰ্ধভাগত শান্তনা পালে। (Sheol )
17 ಇದಲ್ಲದೆ, ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯೆ ಅದರ ನೆರಳನ್ನು ಆಶ್ರಯಿಸಿದವರು, ಅದರೊಂದಿಗೆ ಪಾತಾಳಕ್ಕಿಳಿದು, ಖಡ್ಗಹತರ ಜೊತೆಗೆ ಸೇರಿದರು. (Sheol )
১৭যিসকলে তাৰ বাহুস্বৰূপ আছিল, যিসকলে জাতিবোৰৰ মাজত তাৰ ছাঁত বাস কৰিছিল, তেওঁলোকো তৰোৱালৰ দ্বাৰাই হত হোৱা লোকৰ গুৰিলৈ তাৰে সৈতে চিয়োললৈ নামি গ’ল। (Sheol )
18 “‘ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆಯಿಂದಲೂ ಏದೆನಿನ ಯಾವ ಮರಗಳಿಗೆ ಸಮನಾಗಿರುವೆ? ಆದರೂ ನೀನು ಏದೆನಿನ ಮರಗಳ ಸಂಗಡ ಭೂಮಿಯ ಕೆಳಭಾಗಗಳಿಗೆ ದೂಡಿದವನಾಗುವೆ. ಸುನ್ನತಿಯಿಲ್ಲದವರ ಮಧ್ಯದಲ್ಲಿ ಖಡ್ಗದಿಂದ ಹತರಾದವರ ಸಂಗಡ ಮಲಗುವೆ. “‘ಇದೇ ಫರೋಹನನೂ ಅವನ ಎಲ್ಲಾ ಜನಸಮೂಹವೂ ಆಗಿವೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’”
১৮এইদৰে তুমি প্ৰতাপত আৰু মহত্ত্বত এদনৰ গছবোৰৰ মাজত কাৰ সদৃশ? তথাপি পৃথিৱীৰ অধোভাগলৈ এদনৰ গছবোৰে সৈতে তোমাকো নমোৱা হ’ব; তৰোৱালৰ দ্বাৰাই হত হোৱাসকলে সৈতে অচুন্নৎসকলৰ মাজত তুমিও পৰি থাকিবা! ফৰৌণ আৰু তাৰ আটাই লোক সকলৰ এইৰূপ গতি হ’ব!” এয়েই প্ৰভু যিহোৱাই কৰা ঘোষণা!