< ಯೆಹೆಜ್ಕೇಲನು 32 >
1 ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,
১বাবিলে আমাদের বন্দিত্বের সময়ে দ্বাদশ বৎসরের দ্বাদশ মাসে, মাসের প্রথম দিনের সদাপ্রভুর এই বাক্য আমার কাছে এল এবং বলল,
2 “ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನ ವಿಷಯವಾಗಿ ಪ್ರಲಾಪವನ್ನೆತ್ತಿ ಅವನಿಗೆ ಹೇಳಬೇಕಾದದ್ದೇನೆಂದರೆ: “‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ, ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಮಾಡಿದೆ.
২“মানুষের সন্তান, তুমি মিশরের রাজা ফরৌণের জন্য বিলাপ কর, তাকে বল, ‘জাতিদের মধ্যে তুমি যুবসিংহের মত, সমুদ্রের মধ্যে তুমি দৈত্যের মত; তুমি জলের মধ্যে মন্থন করতে, পা দিয়ে জল নাড়াচাড়া করতে এবং সেখানকার জল কাদা করতে’।”
3 “‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಆದ್ದರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು. ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.
৩প্রভু সদাপ্রভু একথা বলেন: “তাই আমি আমার জাল বহু জাতির সমাজে তোমার উপরে বিস্তার করব এবং তারা আমার টানা জালে তোমাকে তুলব।
4 ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು. ಬಯಲಿನ ಮೇಲೆ ಬಿಸಾಡುವೆನು. ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು.
৪আমি তোমাকে ভূমিতে পরিত্যাগ করব, তোমাকে মাঠের মধ্যে ফেলে দেব; আকাশের পাখীদের তোমার উপরে বসাব, ভূমির সব ক্ষুধার্ত পশুদেরকে তোমাকে দিয়ে তৃপ্ত করব।
5 ನಿನ್ನ ಮಾಂಸವನ್ನು ಬೆಟ್ಟಗಳ ಮೇಲೆ ಹಾಕಿ, ಆ ನಿನ್ನ ರಾಶಿಯಿಂದ ಕಣಿವೆಗಳನ್ನು ತುಂಬಿಸುವೆನು.
৫আমি পর্বতের ওপরে তোমার মাংস ফেলব এবং আমি উপ্যতকা সকল পূর্ন করব তোমার পোকা ভর্তি মৃতদেহ দিয়ে।
6 ನಾನು ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು. ಹಳ್ಳಗಳು ನಿನ್ನ ಮಾಂಸದಿಂದ ತುಂಬುವುವು.
৬তারপর আমি তোমার রক্ত ঢালবো পর্বতের ওপরে এবং জলপ্রবাহ স্তর ভর্তি করবো তোমার রক্ত দিয়ে।
7 ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗಿ ಮಾಡಿ, ನಾನು ಸೂರ್ಯನನ್ನು ಮೋಡದಿಂದ ಮುಚ್ಚಿ ಬಿಡುವೆನು. ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
৭তারপর যখন তোমার বাতি স্থাপন করবো, আমি আকাশকে ঢেকে দেবো এবং তারাকে অন্ধকার করবো; আমি সূর্যকে মেঘ দিয়ে ঢেকে দেবো এবং চাঁদ চকমক করবেনা।;
8 ಆಕಾಶದಲ್ಲಿ ಪ್ರಕಾಶಿಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು. ನಾನು ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
৮আকাশে যত উজ্জ্বল জ্যোতিঃ আছে, সে সবকে আমি তোমার উপরে অন্ধকার করব, তোমার দেশের ওপরে অন্ধকার ঢেকে দেবো,” এটা প্রভু সদাপ্রভু বলেন।
9 ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ವಿನಾಶದ ಸುದ್ದಿಯನ್ನು ಹರಡಿ ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು.
৯“তাই আমি দেশের অনেক লোকের মন আতঙ্কিত করবো যা তুমি জানবে না যখন জাতিদের মধ্যে তোমার পতন আনবো।
10 ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ಭಯಭೀತಿಗೊಳ್ಳುವಂತೆ ಮಾಡುವೆನು, ನಾನು ಅವರ ಮುಂದೆ ನನ್ನ ಖಡ್ಗವನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.
১০আমি আঘাত দেবো অনেক লোককে তোমার বিষয়ে; তাদের রাজারা তোমার জন্য শিহরিত হবে, যখন আমি তাদের সামনে আমি আমার তরোয়াল চালাব। তারা ক্রমাগত কাঁপবে, প্রত্যেক লোক তোমার পতনের দিনের।”
11 “‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಬಾಬಿಲೋನಿನ ಅರಸನ ಖಡ್ಗವು ನಿನ್ನ ವಿರುದ್ಧ ಬರುವುದು.
১১কারণ প্রভু সদাপ্রভু এ কথা বলেন, বাবিল-রাজের তরোয়াল তোমার ওপরে আসবে।
12 ಪರಾಕ್ರಮಶಾಲಿಗಳ ಖಡ್ಗಗಳಿಂದ ಜನಾಂಗಗಳಲ್ಲಿ ಭಯಂಕರರಾಗಿರುವ ನಿನ್ನ ಸಮೂಹವನ್ನು ನಾನು ಬೀಳುವಂತೆ ಮಾಡುವೆನು. ಅವರು ಈಜಿಪ್ಟಿನ ಮಹತ್ತನ್ನು ಕೆಡಿಸುವರು. ಅದರ ಜನಸಮೂಹವೆಲ್ಲಾ ಹಾಳಾಗುವುದು.
১২আমি যোদ্ধাদের তরোয়াল দিয়ে তোমার লোকেদেরকে ধ্বংস করব; প্রত্যেক যোদ্ধা জাতিদের মধ্যে আতঙ্ক; এই যোদ্ধারা মিশরের গর্ব চূর্ন করবে এবং সব লোকেদের ধ্বংস করবে।
13 ನಾನು ಆ ಬಹು ಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು. ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಪಾದವಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವುದಿಲ್ಲ.
১৩কারণ আমি প্রচুর জলের ভেতর থেকে সব পশু ধ্বংস করব; তাতে মানুষের পা দিয়ে জল নাড়াচাড়া করবে না, পশুদের খুরও নাড়াচাড়া করবে না।
14 ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು. ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡುವೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
১৪তারপর আমি তাদের জল শান্ত করব এবং তাদের নদনদী তেলের মত প্রবাহিত করব, এটা প্রভু সদাপ্রভু বলেন।
15 ನಾನು ಈಜಿಪ್ಟ್ ದೇಶವನ್ನು ಹಾಳು ಮಾಡಿ ಅದರ ಸೊತ್ತನ್ನೆಲ್ಲಾ ಧ್ವಂಸಮಾಡಿ ಅದರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿಯುವುದು.’
১৫“যখন আমি মিশর দেশ পুরো ধ্বংস স্থানে পরিণত করে পরিত্যক্ত করবো যখন আমি সব তার অধিবাসীদের আক্রমণ করব, তখন তা জানতে পারবে যে আমি সদা প্রভু।
16 “ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ. ಈಜಿಪ್ಟಿನ ವಿಷಯವಾಗಿಯೂ ಅದರ ಎಲ್ಲಾ ಜನಸಮೂಹದ ವಿಷಯವಾಗಿಯೂ ಜನಾಂಗಗಳ ಪುತ್ರಿಯರು ಇದನ್ನು ಕುರಿತು ಗೋಳಾಡುವರು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
১৬সেখানে কান্নাকাটি হবে জাতিদের মধ্যে মেয়েরা কান্নাকাটি করবে; তারা মিশরের উদ্দেশ্যে কান্নাকাটি করবে। তারা সব লোকেদের উদ্দেশ্যে কান্নাকাটি করবে;” এটা প্রভু সদাপ্রভু বলেন।
17 ಇದಲ್ಲದೆ ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ:
১৭আর দ্বাদশ বৎসরে, সেই মাসের পঞ্চদশ দিনের সদাপ্রভুর এ বাক্য আমার কাছে এল এবং বলল
18 “ಮನುಷ್ಯಪುತ್ರನೇ, ಈಜಿಪ್ಟಿನ ಜನಸಮೂಹದ ವಿಷಯವಾಗಿ ಗೋಳಾಡು; ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಪುತ್ರಿಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಕೆಯೊಳಗೆ ಇಳಿಯುವವರ ಜೊತೆ ತಳ್ಳಿಬಿಡು.
১৮মানুষের সন্তান, তুমি মিশরের লোকেদের জন্য কাঁদ এবং তাদেরকে তার মহত জাতিদের মেয়েদেরকে অধোভুবনে তাদের কাছে নামিয়ে দাও যারা গর্তের মধ্যে গেছে।
19 ‘ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವೆ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು.’
১৯তাদেরকে জিজ্ঞাসা কর তুমি কি অন্যের থেকে বেশি সুন্দরী? নেমে যাও, অচ্ছিন্নত্বকদের সঙ্গে শোও।
20 ಅವರು ಖಡ್ಗದಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಖಡ್ಗವನ್ನು ಎಳೆಯಲಾಗುತ್ತದೆ. ಅವಳನ್ನು ತನ್ನ ಎಲ್ಲಾ ಗುಂಪುಗಳೊಂದಿಗೆ ಎಳೆದುಕೊಂಡು ಹೋಗಲಿ.
২০তারা তরোয়াল দিয়ে নিহত লোকদের মধ্যে পড়বে, মিশরে তরোয়াল সমর্পণ করা হয়েছে; তার শত্রুদের এবং তার লোকেদের টেনে নিয়ে যাও।
21 ಸತ್ತವರ ಕ್ಷೇತ್ರದೊಳಗಿಂದ ಪ್ರಬಲ ನಾಯಕರು ಈಜಿಪ್ಟ್ ಮತ್ತು ಅವಳ ಮಿತ್ರರಾಷ್ಟ್ರಗಳ ಬಗ್ಗೆ ಹೇಳುವರು, ‘ಅವರು ಇಳಿದು ಹೋಗಿ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿ ಮಲಗಿದ್ದಾರೆ.’ (Sheol )
২১সবচেয়ে শক্তিশালী যোদ্ধারা পাতালের মধ্যে থাকে তার ও তার সহকারীদের সঙ্গে মিশর সম্বন্ধে কথা বলবে; তারা নেমে এসেছে এখানে, তারা শোবে অচ্ছিন্নত্বক লোকেদের সঙ্গে যারা তরোয়াল দ্বারা নিহত হয়েছিল। (Sheol )
22 “ಅಲ್ಲಿ ಅಸ್ಸೀರಿಯ ಮತ್ತು ಅದರ ಎಲ್ಲಾ ಗುಂಪು ಇರುವುದು. ಅಸ್ಸೀರಿಯದ ಸುತ್ತಲೂ ಖಡ್ಗದಿಂದ ಹತರಾದವರ ಸಮಾಧಿಗಳಿರುವುವು;
২২সেখানে অশূর ও তার সব জনসমাজ আছে; তার কবর সব তার চারদিকে আছে; তারা সবাই তরোয়াল দ্বারা নিহত হয়েছিল।
23 ಅವರ ಸಮಾಧಿಗಳು ಕುಳಿಯ ಕಡೆಗಳಲ್ಲಿ ಇಡಲಾಗಿವೆ. ಅವಳ ಸೇನೆಯು ಸಮಾಧಿಯ ಸುತ್ತಲೂ ಇವೆ. ಜೀವಿತರ ದೇಶದಲ್ಲಿ ಭಯವನ್ನು ಹರಡಿದವರೆಲ್ಲರೂ ಖಡ್ಗದಿಂದ ಹತರಾದರು.
২৩গর্তের গভীর জায়গায় যাদের কবর দেওয়া হয়েছে, তার সঙ্গে জনসমাজ ছিল। তার কবরের চারপাশে যারা তরোয়াল দ্বারা নিহত হয়েছিল তারাও ছিল, তারা যারা দেশের জীবিত লোকেদের মধ্যে সন্ত্রাস এনেছিল।
24 “ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ. ಅವರೆಲ್ಲರೂ ಖಡ್ಗದಿಂದ ಹತರಾದವರೇ. ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದು ಹೋದವರೇ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
২৪এলম ও তার লোকজনদের নিয়ে সেখানে ছিল, তার কবরের চারদিকে তার সব লোক ছিল; তারা সকলে নিহত, তরোয়ালে পতিত হয়েছে, তারা অচ্ছিন্নত্বক অবস্থায় অধোভুবনে নেমে গেছে; তারা জীবিতদের দেশে সন্ত্রাস এনেছিল এবং এখন তারা নিজেদের লজ্জা বয়ে বেড়াচ্ছিল, তারা গর্তের মধ্যে নেমে যাচ্ছিল।
25 ಅವರು ಅವರ ಎಲ್ಲಾ ಸಮೂಹಕ್ಕೂ ಹತರಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ. ಅದರ ಸುತ್ತಲೂ ಅವರ ಸಮಾಧಿಗಳಿವೆ. ಅವರೆಲ್ಲರೂ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿದ್ದಾರೆ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಕುಳಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡು ಹತರಾದವರ ಮಧ್ಯದಲ್ಲಿ ಇಡಲಾಗಿದೆ.
২৫তারা বিছানা পেতেছিল এলমের জন্য এবং তার লোকজনদের মারা হয়েছিল তার কবর চারদিকে রয়েছে; তারা সব অচ্ছিন্নত্বক অবস্থায় তরোয়ালে নিহত হয়েছে; তারা জীবিতদের দেশে সন্ত্রাস এনেছিল, তাই তারা গর্তগামীদের সঙ্গে লজ্জা বয়ে এনেছিল গর্তে যাওয়া নিহত লোকদের মধ্যেই তারা ছিল। এলম তাদের মধ্যে ছিল যারা মারা গিয়েছে।
26 “ಅಲ್ಲಿ ಮೆಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ. ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಸುನ್ನತಿಯಿಲ್ಲದೆ ಖಡ್ಗದಿಂದ ಹತರಾದವರು.
২৬সেখানে মেশক, তুবল ও তার সব লোকজন আছে; তার চারদিকে তার কবর আছে, তারা সকলে অচ্ছিন্নত্বক অবস্থায় তরোয়ালে নিহত হয়েছে; কারণ তারা জীবিতদের দেশে সন্ত্রাস এনেছিল
27 ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತಹ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಖಡ್ಗಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ. ಅವರ ಗುರಾಣಿಗಳು ಅವರ ಮೂಳೆಗಳ ಮೇಲೆ ಇಡಲಾದವು. ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರರಾಗಿದ್ದರೂ ಅವರ ಅಕ್ರಮಗಳು ಅವರ ಎಲುಬುಗಳ ಮೇಲೆ ಇರುವುವು. (Sheol )
২৭তারা অচ্ছিন্নত্বক লোকদের সঙ্গে পতিত সেই যোদ্ধাদের সঙ্গে শোবে না, তাদের সঙ্গে যুদ্ধের সব অস্ত্র নিয়ে এবং তরোয়াল তাদের মাথার নিচে ছিল এবং তাদের ঢাল তাদের হাড়ের ওপরে ছিল? কারণ তারা জীবিতদের দেশে তারা যোদ্ধাদের কাছে সন্ত্রাস ছিল। (Sheol )
28 “ಫರೋಹನೇ, ನೀನೂ ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲಾಗುವೆ. ಖಡ್ಗದಿಂದ ಹತರಾದವರ ಸಂಗಡ ಮಲಗುವೆ.
২৮তাই তুমি অচ্ছিন্নত্বক লোকদের মধ্যে ধ্বংস হবে ও তরোয়ালে নিহতদের সঙ্গে শোবে।
29 “ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಅದರ ಪ್ರಧಾನರೂ ಶೂರರಾಗಿದ್ದರೂ ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಅವರು ಸುನ್ನತಿಯಿಲ್ಲದವರ ಸಂಗಡ ಮತ್ತು ಕುಣಿಗೆ ಇಳಿಯುವವರ ಸಂಗಡ ಹತರಾದವರು.
২৯সেখানে ইদোম, তার রাজারা ও তার সব অধ্যক্ষ আছে। তারা শক্তিশালী, কিন্তু এখন তারা তরোয়ালনিহত লোকদের সঙ্গে শুয়ে আছে তারা অচ্ছিন্নত্বক লোকদের সঙ্গে ও গর্তগামীদের সঙ্গে শুয়ে আছে।
30 “ಅಲ್ಲಿ ಉತ್ತರದ ರಾಜಕುಮಾರರೂ ಸೀದೋನ್ಯರೆಲ್ಲರೂ ಹತರಾದವರೊಂದಿಗೆ ಇಳಿದು ಅಲ್ಲಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಖಡ್ಗದಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.
৩০সেখানে উত্তর দেশীয় অধ্যক্ষেরা সব ও সীদনীয় সব লোক আছে; যারা নিহত লোকদের সঙ্গে নেমে গেছে, তারা শক্তিশালী ভয়ানক হলেও তারা লজ্জা পেয়েছে; তারা তরোয়াল নিহত লোকদের কাছে অচ্ছিন্নত্বক অবস্থায় শুয়ে আছে এবং গর্তগামীদের সঙ্গে নিজেদের লজ্জা ভোগ করছে।
31 “ಫರೋಹನು ಹಾಗೂ ಆತನ ಸೈನ್ಯವು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಜನಸಮೂಹದ ವಿಷಯವಾಗಿ ಸಮಾಧಾನ ಹೊಂದುವನು, ಫರೋಹನು ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
৩১ফরৌণ দেখবে এবং তার সব দাসদের বিষয়ে সান্ত্বনা পাবে যারা তরোয়ালে নিহত হয়েছে, এটা প্রভু সদাপ্রভু বলেন।
32 ಏಕೆಂದರೆ ನಾನು ಜೀವಿತರ ದೇಶದಲ್ಲಿ ಭಯವನ್ನು ಉಂಟುಮಾಡಿದ್ದೇ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಖಡ್ಗದಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ನಡುವೆ ಸೇರಿಹೋಗುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
৩২“আমি জীবিতদের দেশে তা থেকে সন্ত্রাস তৈরী করেছি, কিন্তু অচ্ছিন্নত্বক লোকদের মধ্যে, তরোয়ালে নিহতদের সঙ্গে শুয়ে থাকবে” এটা প্রভু সদাপ্রভু বলেন।