< ಯೆಹೆಜ್ಕೇಲನು 34 >

1 ಯೆಹೋವ ದೇವರ ವಾಕ್ಯವು ನನಗೆ ಬಂದಿತು:
তারপর সদাপ্রভুর এই বাক্য আমার কাছে এল এবং বলল
2 “ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸಿ ಅವರಿಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬರಿಗೆ ಕಷ್ಟ! ಕುರುಬರು ಮಂದೆಗಳನ್ನು ಮೇಯಿಸಬಾರದೋ?
মানুষের সন্তান, তুমি ইস্রায়েলের পালকদের বিরুদ্ধে ভাববাণী বল, তাদেরকে ভাববাণী বল, সেই পালকদেরকে বল, প্রভু সদাপ্রভু এই কথা বলেন, ইস্রায়েলের সেই পালকদেরকে ধিক, পালকদের কি উচিত নয় মেষদেরকে পালন করা?।
3 ನೀವು ಮೊಸರನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ನೀವು ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿಸುವುದಿಲ್ಲ.
তোমার মেদ খাও এবং মেষলোমের পোশাক পর, পুষ্ট মেষ বলিদান করো কিন্তু মেষদেরকে পালন কর না।
4 ನೀವು ದುರ್ಬಲರನ್ನು ಬಲಪಡಿಸಲಿಲ್ಲ ಅಥವಾ ರೋಗಿಗಳನ್ನು ಗುಣಪಡಿಸಲಿಲ್ಲ ಅಥವಾ ಮುರಿದದ್ದನ್ನು ಕಟ್ಟುವುದಿಲ್ಲ. ಕಳೆದುಹೋದದ್ದನ್ನು ಹುಡುಕುವುದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರುವುದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
তোমার দুর্বলদের সবল কর না, পীড়িতের চিকিৎসা কর নি, ভাঙা ক্ষত বাঁধনি, দূরের মানুষকে ফিরিয়ে আন নি, হারানের খোঁজ কর নি, কিন্তু শক্তি ও উপদ্রব করে তাদের শাসন করেছ।
5 ಅವು ಚದರಿಹೋದವು. ಏಕೆಂದರೆ ಅಲ್ಲಿ ಕುರುಬರಿಲ್ಲ; ಅವರು ಚದರಿಹೋದಾಗ ಎಲ್ಲಾ ಕಾಡುಮೃಗಗಳಿಗೆ ಆಹಾರವಾದವು.
তারপর পালকের অভাবে মেষরা ছিন্নভিন্ন হয়েছে; তারা বন্য পশু সকলের খাদ্য হয়েছে, তারপর ছিন্নভিন্ন হয়েছ।
6 ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ. ಹೌದು, ನನ್ನ ಮಂದೆಯು ಎಲ್ಲಾ ಭೂಮಿಯ ಮೇಲೆಲ್ಲಾ ಚದರಿಹೋಗಿದೆ. ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
আমার মেষেরা সব পর্বতে ও সব উচ্চ গিরির ওপরে ঘুরে বেড়াচ্ছে; সব ভূতলে আমার মেষেরা ছিন্নভিন্ন হয়েছে; তাদের খোঁজার কেউ নেই।
7 “‘ಆದ್ದರಿಂದ ಕುರುಬರೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ.
তাই, পালকেরা, সদাপ্রভুর বাক্য শোন।
8 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದುದರಿಂದಲೂ ನನ್ನ ಮಂದೆಯು ಕುರುಬನಿಲ್ಲದೆ ಕಾಡುಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರುಬರು ನನ್ನ ಮಂದೆಯನ್ನು ಹುಡುಕದೆ ಇದ್ದುದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದೆ ಇದ್ದುದರಿಂದಲೂ
“প্রভু সদাপ্রভু বলেন, আমার জীবনের দিব্য”, “কারণ আমার পাল লুটদ্রব্য হয়েছে এবং আমার মেষের মাঠের সব পশুদের খাদ্য হবে; (কারণ সেখানে কোনো মেষ পালক ছিল না এবং কোনো পালক আমার পালকে চাইতনা কিন্তু পালকেরা নিজেদের পাহারা দিত এবং আমার পালকে পালন করত না)”
9 ಕುರುಬರೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ.
তাই, পালকরা শোন, তোমার সদাপ্রভুর বাক্য শোন।
10 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ. ನನ್ನ ಮಂದೆಯನ್ನು ಅವರ ಕೈಯಿಂದ ವಿಚಾರಿಸುವೆನು. ಅವರು ಮಂದೆ ಮೇಯಿಸುವುದನ್ನು ನಿಲ್ಲಿಸಿಬಿಡುತ್ತೇನೆ, ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿಕೊಳ್ಳರು. ಏಕೆಂದರೆ ನಾನು ನನ್ನ ಮಂದೆಯನ್ನು ಅವರಿಗೆ ಆಹಾರವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.
১০প্রভু সদাপ্রভু এই কথা বলেন, দেখ, আমি সেই পালকদের বিরুদ্ধে; আমি তাদের হাত থেকে আমার মেষদেরকে আদায় করব। তারপর তাদেরকে মেষপালকের কাজ থেকে বরখাস্ত করব, সেই পালকেরা আর নিজেদেরকে পালন করবে না; আর আমি আপন মেষদেরকে তাদের মুখ থেকে উদ্ধার করব, যাতে আমার পাল আর তাদের খাদ্য হবে না
11 “‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ ನನ್ನ ಕುರಿಗಳನ್ನು ಹುಡುಕಿ ಅವುಗಳನ್ನು ಮೇಯಿಸುತ್ತೇನೆ.
১১কারণ প্রভু সদাপ্রভু এই কথা বলেন, দেখ, আমি, নিজে মেষদের খোঁজ করব, তাদেরকে দেখাশোনা করব।
12 ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ, ಕಾರ್ಮುಗಿಲಿನ ಕಾರ್ಗತ್ತಲಿನ ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
১২পালক ছিন্নভিন্ন মেষদের মধ্যে থাকবার দিনের নিজের পাল খুঁজে বের করে এবং যে সব জায়গায় তারা মেঘাছন্ন অন্ধকার দিনের ছিন্নভিন্ন হয়েছে, সে সব জায়গা থেকে তাদেরকে উদ্ধার করব।
13 ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳನ್ನು ಸ್ವಂತ ದೇಶಕ್ಕೆ ತರುವೆನು. ಅವುಗಳನ್ನು ಇಸ್ರಾಯೇಲಿನ ಪರ್ವತಗಳ ಮೇಲೆ ಹಳ್ಳಗಳಲ್ಲಿ ನಿವಾಸಿಗಳುಳ್ಳ ಎಲ್ಲಾ ದೇಶಗಳಲ್ಲಿಯೂ ಮೇಯಿಸುವೆನು.
১৩তারপর আমি জাতিদের মধ্য থেকে বের করে আনব, দেশ থেকে জড়ো করব এবং তাদের তোমার ভূমিতে আনব। ইস্রায়েলের পর্বতসমূহের ওপরে, জল প্রবাহগুলর কাছে এবং দেশের সব জায়গায় তাদেরকে চরাব।
14 ನಾನು ಒಳ್ಳೆಯ ಮೇವಿನಲ್ಲಿ ಅವುಗಳನ್ನು ಮೇಯಿಸುವೆನು. ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಮಂದೆಯು ಇರುವುದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವುವು.
১৪আমি উত্তম চরানিতে তাদেরকে চরাব এবং ইস্রায়েলের উঁচুঁ পর্বতে একমাত্র চরানোর জায়গা করব, তারা সুন্দর চরানোর প্রচুর জায়গায় শুয়ে থাকবে, তারা ইস্রায়েলের পর্বতে চরবে।
15 ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
১৫আমি নিজে মেষদেরকে চরাব এবং আমি তাদেরকে শোয়াব এটা প্রভু সদাপ্রভু বলেন।
16 ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.
১৬আমি হারানোদের খোঁজ করব, দূরে চলে যাওয়াদের ফিরিয়ে আনব ভাঙা মেষদের ক্ষত বাঁধব ও পীড়িতকে আরোগ্য দেবো এবং হৃষ্ট পুষ্ট ও শক্তিশালী সংহার করব; আমি বিচারমতে তাদেরকে পালন করব।
17 “‘ನಿಮಗೆ ನನ್ನ ಮಂದೆಯೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಕುರಿಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.
১৭এবং তুমি, আমার মেষপাল, (প্রভু সদাপ্রভু এই কথা বলেন) দেখ, আমি মেষ, আবার মেষদের ও ছাগলদের মধ্যে বিচার করব।
18 ಒಳ್ಳೆಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?
১৮এটা কি তোমাদের কাছে তুচ্ছ বিষয় মনে হয় যে ভালো চরানিতে চরাচ্ছ, যাতে নিজেদের পদতলে দলিত করছ বাকি ঘাস? অথবা পরিষ্কার জল পান করছ, তুমি পা দিয়ে নদীর জল কাদা করছো
19 ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವುವು. ನಿನ್ನ ಕಾಲಿನಿಂದ ಕಲಕಿ ಹೊಲಸಾದದ್ದನ್ನು ಕುಡಿಯುವುವು.
১৯কিন্তু আমার মেষগনের অবস্থা এই, যেখানে তুমি পা দিয়ে দলন করেছ; তোমার পা দিয়ে যা কাদা করেছ, তারা তাই পান করে।
20 “‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ, ನಾನು, ನಾನೇ ಕೊಬ್ಬಿದ ಕುರಿಗಳಿಗೂ ಮತ್ತು ಬಡಕಲಾದ ಕುರಿಗಳಿಗೂ ನ್ಯಾಯತೀರಿಸುತ್ತೇನೆ.
২০তাই প্রভু সদাপ্রভু তাদেরকে এ কথা বলেন, দেখ, আমি, নিজে মোটা মেষের ও রোগা মেষের মধ্যে বিচার করব।
21 ಏಕೆಂದರೆ ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿಬಿಟ್ಟಿರಿ.
২১তোমার পাশ ও কাঁধ দিয়ে দুর্বল কে ঠেলছ, শিং দিয়ে গোঁতাচ্ছ যতক্ষণ না দেশ থেকে ছিন্নভিন্ন হয়।
22 ಆದ್ದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ. ಅವು ಎಂದೆಂದೂ ಕೊಳ್ಳೆಯಾಗುವುದಿಲ್ಲ. ನಾನು ಕುರಿಮೇಕೆಗಳ ಮಧ್ಯೆ ನ್ಯಾಯತೀರಿಸುವೆನು.
২২তাই আমি আমার মেষপালকে রক্ষা করব, তারা আর লুটদ্রব্য হবে না এবং আমি মেষ ও মেষের মধ্যে বিচার করব।
23 ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
২৩আমি তাদের ওপরে একমাত্র পালককে ওঠাবো তিনি তাদের পালক হবেন।
24 ಯೆಹೋವ ದೇವರಾದ ನಾನೇ ಅವುಗಳಿಗೆ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವೆನೆಂದು ಯೆಹೋವ ದೇವರಾದ ನಾನೇ ಅದನ್ನು ಮಾತಾಡಿದ್ದೇನೆ.
২৪আমি সদাপ্রভু তাদের ঈশ্বর হব এবং আমার দাস দায়ূদ তাদের অধ্যক্ষ হবেন; আমি সদাপ্রভু এটা বললাম।
25 “‘ಅವರ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ದುಷ್ಟಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು. ಆದ್ದರಿಂದ ಅವರು ನಿರ್ಭಯವಾಗಿ ಮರುಭೂಮಿಯಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
২৫তারপর আমি তাদের পক্ষে শান্তির নিয়ম স্থির করব ও হিংস্র পশুদেরকে দেশ থেকে তাড়াবো তাতে তারা নির্ভয়ে প্রান্তরে বাস করবে ও বনে ঘুমাবে।
26 ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವಾದವನ್ನಾಗಿ ಮಾಡುವೆನು. ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು. ದಿವ್ಯಾಶೀರ್ವಾದದ ಮಳೆಯಾಗುವುದು.
২৬আমি তাদেরকে ও গিরির চারদিকের পরিসীমাকে আশীর্বাদ করব, ঠিকদিনের জলধারা বইয়ে দেবো,
27 ಬಯಲಿನ ಮರವು ಅದರ ಫಲವನ್ನು ಕೊಡುವುದು. ಭೂಮಿಯು ಅದರ ಆದಾಯವನ್ನು ಕೊಡುವುದು. ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು. ನಾನೇ ಅದರ ನೊಗದ ಬಂಧನಗಳ್ನು ಬಿಡಿಸಿ ಅವರಿಂದ ಸೇವೆಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.
২৭তারপর ক্ষেতের গাছ ফল উৎপন্ন করবে ও ভূমি শস্য দেবে এবং আমার মেষ নির্ভয়ে স্বদেশে থাকবে, তাতে তারা জানবে যে, আমি সদাপ্রভু, যখন আমি তাদের দাসত্ব ভেঙে ফেলব এবং যারা তাদেরকে দাসত্ব করিয়েছে, তাদের হাত থেকে উদ্ধার করবো।
28 ಅವರು ಇನ್ನು ಮೇಲೆ ಇತರ ಜನಾಂಗಗಳಿಗೆ ಕೊಳ್ಳೆಯಾಗುವುದಿಲ್ಲ; ಕಾಡುಮೃಗಗಳು ಅವರನ್ನು ತಿನ್ನುವುದಿಲ್ಲ. ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯವಾಗಿ ವಾಸಿಸುವರು.
২৮তারা আর জাতিদেরর লুটদ্রব্য হবে না এবং বন্য পশুরা তাদেরকে আর গ্রাস করবে না; কিন্তু তারা নির্ভয়ে বাস করবে, কেউ তাদেরকে ভয় দেখাবে না।
29 ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು. ಇನ್ನು ಮೇಲೆ ಅವರು ದೇಶದಲ್ಲಿ ಬರಗಾಲದಿಂದ ನಾಶವಾಗುವುದಿಲ್ಲ. ಅವರು ಇತರ ಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವುದೇ ಇಲ್ಲ.
২৯কারণ আমি তাদের জন্য শান্তির বাগান তৈরী করব; যাতে তারা দেশের মধ্যে ক্ষুধায় তাদের সংহার আর হবে না এবং তারা জাতিদের করা অপমান আর ভোগ করবে না।
30 ಆಗ ಅವರು ತಮ್ಮ ಯೆಹೋವ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
৩০তারপর তারা জানবে যে, আমি সদাপ্রভু, তাদের ঈশ্বর, তাদের সঙ্গে ও তারা আমার প্রজা ইস্রায়েল-কুল, এটা প্রভু সদাপ্রভু বলেন।
31 ನೀವು ನನ್ನ ಕುರಿಗಳು, ನನ್ನ ಹುಲ್ಲುಗಾವಲಿನ ಕುರಿಗಳು, ಮತ್ತು ನಾನು ನಿಮ್ಮ ದೇವರು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’”
৩১তোমার আমার মেষ, আমার চরানির মেষ; আমার লোক, আমি তোমাদের ঈশ্বর হব; এটা প্রভু সদাপ্রভু বলেন।

< ಯೆಹೆಜ್ಕೇಲನು 34 >