< ಯೆಹೆಜ್ಕೇಲನು 35 >

1 ಯೆಹೋವ ದೇವರ ವಾಕ್ಯವು ನನಗೆ ಬಂದಿತು,
וַיְהִי דְבַר־יְהֹוָה אֵלַי לֵאמֹֽר׃
2 “ಮನುಷ್ಯಪುತ್ರನೇ, ನೀನು ಸೇಯೀರ್ ಪರ್ವತಕ್ಕೆ ಅಭಿಮುಖನಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸಿ,
בֶּן־אָדָם שִׂים פָּנֶיךָ עַל־הַר שֵׂעִיר וְהִנָּבֵא עָלָֽיו׃
3 ಅದಕ್ಕೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.
וְאָמַרְתָּ לּוֹ כֹּה אָמַר אֲדֹנָי יֱהֹוִה הִנְנִי אֵלֶיךָ הַר־שֵׂעִיר וְנָטִיתִי יָדִי עָלֶיךָ וּנְתַתִּיךָ שְׁמָמָה וּמְשַׁמָּֽה׃
4 ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವೆ; ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.
עָרֶיךָ חׇרְבָּה אָשִׂים וְאַתָּה שְׁמָמָה תִֽהְיֶה וְיָדַעְתָּ כִּֽי־אֲנִי יְהֹוָֽה׃
5 “‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕಾಲದಲ್ಲಿ ಅವರನ್ನು ಖಡ್ಗದ ಬಾಯಿಗೆ ಗುರಿಮಾಡಿದ ಕಾರಣ ಅವರ ಶಿಕ್ಷೆಯು ತಪ್ಪದು.
יַעַן הֱיוֹת לְךָ אֵיבַת עוֹלָם וַתַּגֵּר אֶת־בְּנֵֽי־יִשְׂרָאֵל עַל־יְדֵי־חָרֶב בְּעֵת אֵידָם בְּעֵת עֲוֺן קֵֽץ׃
6 ಆದುದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು. ರಕ್ತಪಾತವು ನಿನ್ನನ್ನು ಬೆನ್ನಟ್ಟುವುದು. ನೀನು ರಕ್ತಪಾತಕ್ಕೆ ಹೇಸದೆ ಹೋದಕಾರಣ ರಕ್ತ ಪ್ರವಾಹವೇ ನಿನ್ನ ಬೆನ್ನು ಹತ್ತುವುದು.
לָכֵן חַי־אָנִי נְאֻם אֲדֹנָי יֱהֹוִה כִּֽי־לְדָם אֶעֶשְׂךָ וְדָם יִרְדְּפֶךָ אִם־לֹא דָם שָׂנֵאתָ וְדָם יִרְדְּפֶֽךָ׃
7 ಹೀಗೆ ನಾನು ಸೇಯೀರ್ ಪರ್ವತವನ್ನು ಸಂಪೂರ್ಣ ಹಾಳುಮಾಡುವೆನು. ಅದರೊಳಗೆ ಹಾದುಹೋಗುವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು.
וְנָֽתַתִּי אֶת־הַר שֵׂעִיר לְשִֽׁמְמָה וּשְׁמָמָה וְהִכְרַתִּי מִמֶּנּוּ עֹבֵר וָשָֽׁב׃
8 ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವರು. ನಿನ್ನ ಖಡ್ಗದಿಂದ ಹತರಾದವರು ನಿನ್ನ ಹಳ್ಳಕೊಳ್ಳಗಳಲ್ಲಿಯೂ ಪರ್ವತಗಳ ಮೇಲೆಯೂ ಬೀಳುವರು.
וּמִלֵּאתִי אֶת־הָרָיו חֲלָלָיו גִּבְעוֹתֶיךָ וְגֵיאוֹתֶיךָ וְכׇל־אֲפִיקֶיךָ חַלְלֵי־חֶרֶב יִפְּלוּ בָהֶֽם׃
9 ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ನಿನ್ನ ನಗರಗಳು ನಿರ್ಜನವಾಗುವುವು, ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.
שִֽׁמְמוֹת עוֹלָם אֶתֶּנְךָ וְעָרֶיךָ לֹא (תישבנה) [תָשֹׁבְנָה] וִידַעְתֶּם כִּֽי־אֲנִי יְהֹוָֽה׃
10 “‘ಯೆಹೋವ ದೇವರು ಅವುಗಳಲ್ಲಿದ್ದರೂ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನ ವಶವಾಗುವುವು. ಎಂದೂ ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.
יַעַן אֲמׇרְךָ אֶת־שְׁנֵי הַגּוֹיִם וְאֶת־שְׁתֵּי הָאֲרָצוֹת לִי תִהְיֶינָה וִֽירַשְׁנוּהָ וַיהֹוָה שָׁם הָיָֽה׃
11 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೆಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದಾಗ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.
לָכֵן חַי־אָנִי נְאֻם אֲדֹנָי יֱהֹוִה וְעָשִׂיתִי כְּאַפְּךָ וּכְקִנְאָתְךָ אֲשֶׁר עָשִׂיתָה מִשִּׂנְאָתֶיךָ בָּם וְנוֹדַעְתִּי בָם כַּאֲשֶׁר אֶשְׁפְּטֶֽךָ׃
12 ಆಗ ನಾನೇ ಯೆಹೋವನೆಂದು ನೀನು ತಿಳಿಯುವೆ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ, “ಅವು ಹಾಳಾಗಿವೆ ನಮಗೆ ನುಂಗುವುದಕ್ಕೆ ಕೊಡಲಾಗಿವೆ,” ಎಂದು ಹೇಳಿ ಮಾತನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಯೆಹೋವ ದೇವರೆಂಬ ನಾನೇ ಕೇಳಿರುವೆನೆಂದು ತಿಳಿಯುವೆ.
וְֽיָדַעְתָּ כִּי אֲנִי יְהֹוָה שָׁמַעְתִּי ׀ אֶת־כׇּל־נָאָֽצוֹתֶיךָ אֲשֶׁר אָמַרְתָּ עַל־הָרֵי יִשְׂרָאֵל לֵאמֹר ׀ [שָׁמֵמוּ] (שממה) לָנוּ נִתְּנוּ לְאׇכְלָֽה׃
13 ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.
וַתַּגְדִּילוּ עָלַי בְּפִיכֶם וְהַעְתַּרְתֶּם עָלַי דִּבְרֵיכֶם אֲנִי שָׁמָֽעְתִּי׃
14 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡುತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.
כֹּה אָמַר אֲדֹנָי יֱהֹוִה כִּשְׂמֹחַ כׇּל־הָאָרֶץ שְׁמָמָה אֶעֱשֶׂה־לָּֽךְ׃
15 ಹೇಗೆ ನೀನು ಇಸ್ರಾಯೇಲರ ಸ್ವಾಸ್ತ್ಯದ ನಾಶನಕ್ಕೆ ಹೇಗೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಸೇಯೀರ್ ಪರ್ವತವೇ ಮತ್ತು ಸಮಸ್ತ ಎದೋಮೇ ಸಂಪೂರ್ಣವಾಗಿ ಹಾಳಾಗುವೆ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.’”
כְּשִׂמְחָתְךָ לְנַחֲלַת בֵּֽית־יִשְׂרָאֵל עַל אֲשֶׁר־שָׁמֵמָה כֵּן אֶעֱשֶׂה־לָּךְ שְׁמָמָה תִֽהְיֶה הַר־שֵׂעִיר וְכׇל־אֱדוֹם כֻּלָּהּ וְיָדְעוּ כִּי־אֲנִי יְהֹוָֽה׃

< ಯೆಹೆಜ್ಕೇಲನು 35 >