< ಯೆಹೆಜ್ಕೇಲನು 36 >

1 “ನರಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು. ಹೇಳು, ‘ಇಸ್ರಾಯೇಲ್ ಪರ್ವತಗಳೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ.
וְאַתָּה בֶן־אָדָם הִנָּבֵא אֶל־הָרֵי יִשְׂרָאֵל וְאָמַרְתָּ הָרֵי יִשְׂרָאֵל שִׁמְעוּ דְּבַר־יְהֹוָֽה׃
2 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಏಕೆಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ, “ಆಹಾ, ಪೂರ್ವದ ಉತ್ತಮ ಸ್ಥಳಗಳು ನಮ್ಮ ಸೊತ್ತಾದವು,” ಎಂದು ಹೇಳುವರು.’
כֹּה אָמַר אֲדֹנָי יֱהֹוִה יַעַן אָמַר הָאוֹיֵב עֲלֵיכֶם הֶאָח וּבָמוֹת עוֹלָם לְמוֹרָשָׁה הָיְתָה לָּֽנוּ׃
3 ಆದ್ದರಿಂದ ನೀನು ಪ್ರವಾದಿಸಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರು ನಿನ್ನನ್ನು ಹಾಳು ಮಾಡಿ ಎಲ್ಲಾ ಕಡೆಗಳಿಂದಲೂ ನಿನ್ನನ್ನು ತುಳಿದುಬಿಟ್ಟರು. ನೀವು ಇತರ ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಗಾರರ ಬಾಯಿಗೆ ಬಿದ್ದು ಜನರ ನಿಂದೆಗೆ ಗುರಿಯಾಗಿದ್ದೀರಿ.
לָכֵן הִנָּבֵא וְאָמַרְתָּ כֹּה אָמַר אֲדֹנָי יֱהֹוִה יַעַן בְּיַעַן שַׁמּוֹת וְשָׁאֹף אֶתְכֶם מִסָּבִיב לִֽהְיֽוֹתְכֶם מֽוֹרָשָׁה לִשְׁאֵרִית הַגּוֹיִם וַתֵּעֲלוּ עַל־שְׂפַת לָשׁוֹן וְדִבַּת־עָֽם׃
4 ಆದ್ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ, ಪರ್ವತಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ
לָכֵן הָרֵי יִשְׂרָאֵל שִׁמְעוּ דְּבַר־אֲדֹנָי יֱהֹוִה כֹּה־אָמַר אֲדֹנָי יֱהֹוִה לֶהָרִים וְלַגְּבָעוֹת לָאֲפִיקִים וְלַגֵּאָיוֹת וְלֶחֳרָבוֹת הַשֹּֽׁמְמוֹת וְלֶעָרִים הַנֶּעֱזָבוֹת אֲשֶׁר הָיוּ לְבַז וּלְלַעַג לִשְׁאֵרִית הַגּוֹיִם אֲשֶׁר מִסָּבִֽיב׃
5 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಶ್ಚಯವಾಗಿ ನನ್ನ ರೋಷದ ಬೆಂಕಿಯಿಂದ ಇತರ ಜನಾಂಗಗಳಲ್ಲಿ ಉಳಿದವರಿಗೂ ಎದೋಮಿನವರೆಲ್ಲರಿಗೂ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡಿದ್ದಾರೆ. ಅವರು ಅದರ ಹುಲ್ಲುಗಾವಲನ್ನು ಸಹ ಸೂರೆಮಾಡಬೇಕೆಂದಿದ್ದಾರೆ.’
לָכֵן כֹּֽה־אָמַר אֲדֹנָי יֱהֹוִה אִם־לֹא בְּאֵשׁ קִנְאָתִי דִבַּרְתִּי עַל־שְׁאֵרִית הַגּוֹיִם וְעַל־אֱדוֹם כֻּלָּא אֲשֶׁר נָתְנֽוּ־אֶת־אַרְצִי ׀ לָהֶם לְמוֹרָשָׁה בְּשִׂמְחַת כׇּל־לֵבָב בִּשְׁאָט נֶפֶשׁ לְמַעַן מִגְרָשָׁהּ לָבַֽז׃
6 ಆದ್ದರಿಂದ ಇಸ್ರಾಯೇಲ್ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು. ಪರ್ವತಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಇಂತೆನ್ನುತ್ತಾರೆ: ಇತರ ಜನಾಂಗಗಳ ಅವಮಾನವನ್ನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರದಿಂದಲೂ ಮಾತನಾಡಿದ್ದೇನೆ.
לָכֵן הִנָּבֵא עַל־אַדְמַת יִשְׂרָאֵל וְאָמַרְתָּ לֶהָרִים וְלַגְּבָעוֹת לָאֲפִיקִים וְלַגֵּאָיוֹת כֹּה־אָמַר ׀ אֲדֹנָי יֱהֹוִה הִנְנִי בְקִנְאָתִי וּבַֽחֲמָתִי דִּבַּרְתִּי יַעַן כְּלִמַּת גּוֹיִם נְשָׂאתֶֽם׃
7 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನನ್ನ ಕೈಯೆತ್ತಿ ಪ್ರಮಾಣ ಮಾಡಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿರುವ ಆ ಜನಾಂಗಗಳು ತಮ್ಮ ನಿಂದೆಯನ್ನು ಹೊರುವರು.
לָכֵן כֹּה אָמַר אֲדֹנָי יֱהֹוִה אֲנִי נָשָׂאתִי אֶת־יָדִי אִם־לֹא הַגּוֹיִם אֲשֶׁר לָכֶם מִסָּבִיב הֵמָּה כְּלִמָּתָם יִשָּֽׂאוּ׃
8 “‘ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹರಡಿಸಿ ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವಿರಿ. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.
וְאַתֶּם הָרֵי יִשְׂרָאֵל עַנְפְּכֶם תִּתֵּנוּ וּפֶרְיְכֶם תִּשְׂאוּ לְעַמִּי יִשְׂרָאֵל כִּי קֵרְבוּ לָבֽוֹא׃
9 ನಾನು ನಿಮ್ಮವನಾಗಿದ್ದೇನೆ ನಾನು ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನಿಮ್ಮಲ್ಲಿ ಉಳುಮೆ ಮಾಡಿ ಬಿತ್ತಲಾಗುತ್ತದೆ.
כִּי הִנְנִי אֲלֵיכֶם וּפָנִיתִי אֲלֵיכֶם וְנֶעֱבַדְתֶּם וְנִזְרַעְתֶּֽם׃
10 ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದವರನ್ನೂ ಎಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿಸುತ್ತೇನೆ. ಪಟ್ಟಣಗಳು ಜನಭರಿತವಾಗುವುವು. ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವುವು.
וְהִרְבֵּיתִי עֲלֵיכֶם אָדָם כׇּל־בֵּית יִשְׂרָאֵל כֻּלֹּה וְנֹֽשְׁבוּ הֶעָרִים וְהֶחֳרָבוֹת תִּבָּנֶֽינָה׃
11 ನಾನು ನಿಮ್ಮ ಮೇಲೆ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡುವೆನು. ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವುವು. ನಾನು ನಿಮ್ಮನ್ನು ಮೊದಲಿನ ಸ್ಥಿತಿಗಿಂತ ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.
וְהִרְבֵּיתִי עֲלֵיכֶם אָדָם וּבְהֵמָה וְרָבוּ וּפָרוּ וְהוֹשַׁבְתִּי אֶתְכֶם כְּקַדְמֽוֹתֵיכֶם וְהֵיטִֽבֹתִי מֵרִאשֹׁתֵיכֶם וִידַעְתֶּם כִּֽי־אֲנִי יְהֹוָֽה׃
12 ನನ್ನ ಜನರಾದ ಇಸ್ರಾಯೇಲ್ಯರನ್ನು ನಿಮ್ಮಲ್ಲಿ ವಾಸಿಸುವಂತೆ ಮಾಡುವೆನು. ಅವರು ನಿನ್ನನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ನೀವು ಅವರ ಸೊತ್ತಾಗಿರುವಿರಿ; ನೀವು ಎಂದಿಗೂ ಅವರ ಮಕ್ಕಳಿಂದ ವಂಚಿತರಾಗುವುದಿಲ್ಲ.
וְהוֹלַכְתִּי עֲלֵיכֶם אָדָם אֶת־עַמִּי יִשְׂרָאֵל וִירֵשׁוּךָ וְהָיִיתָ לָהֶם לְנַחֲלָה וְלֹא־תוֹסִף עוֹד לְשַׁכְּלָֽם׃
13 “‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀನು ಮನುಷ್ಯರನ್ನು ನುಂಗುವಂಥ ದೇಶ ಮತ್ತು ನಿನ್ನ ಜನಗಳನ್ನು ಮಕ್ಕಳಿಲ್ಲದಂಥ ಜನಾಂಗಗಳನ್ನಾಗಿ ಮಾಡುವಂಥದ್ದು ಆಗಿರುವೆ,” ಎಂದು ಅವರು ನಿನಗೆ ಹೇಳುವರು.
כֹּה אָמַר אֲדֹנָי יֱהֹוִה יַעַן אֹמְרִים לָכֶם אֹכֶלֶת אָדָם (אתי) [אָתְּ] וּמְשַׁכֶּלֶת (גויך) [גּוֹיַיִךְ] הָיִֽית׃
14 ಆದ್ದರಿಂದ ಇನ್ನು ಮೇಲೆ ನೀನು ಮನುಷ್ಯರನ್ನು ನುಂಗುವುದಿಲ್ಲ. ಇನ್ನು ಮೇಲೆ ನಿನ್ನ ಜನಾಂಗದವರನ್ನೂ ಮಕ್ಕಳಿಲ್ಲದವರನ್ನಾಗಿ ಮಾಡುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
לָכֵן אָדָם לֹא־תֹאכְלִי עוֹד (וגויך) [וְגוֹיַיִךְ] לֹא (תכשלי) [תְשַׁכְּלִי־]עוֹד נְאֻם אֲדֹנָי יֱהֹוִֽה׃
15 ಅಲ್ಲದೆ ಇನ್ನು ಮೇಲೆ ನೀನು ಇತರ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗಗಳಿಂದ ಅವಮಾನ ಅನುಭವಿಸುವುದಿಲ್ಲ. ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’”
וְלֹא־אַשְׁמִיעַ אֵלַיִךְ עוֹד כְּלִמַּת הַגּוֹיִם וְחֶרְפַּת עַמִּים לֹא תִשְׂאִי־עוֹד (וגויך) [וְגוֹיַיִךְ] לֹא־תַכְשִׁלִי עוֹד נְאֻם אֲדֹנָי יֱהֹוִֽה׃
16 ಯೆಹೋವ ದೇವರ ವಾಕ್ಯವು ನನಗೆ ಬಂದಿತು,
וַיְהִי דְבַר־יְהֹוָה אֵלַי לֵאמֹֽר׃
17 “ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.
בֶּן־אָדָם בֵּית יִשְׂרָאֵל יֹשְׁבִים עַל־אַדְמָתָם וַיְטַמְּאוּ אוֹתָהּ בְּדַרְכָּם וּבַעֲלִֽילוֹתָם כְּטֻמְאַת הַנִּדָּה הָיְתָה דַרְכָּם לְפָנָֽי׃
18 ಆದ್ದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷವನ್ನು ಅವರ ಮೇಲೆ ಸುರಿಸಿದೆನು.
וָאֶשְׁפֹּךְ חֲמָתִי עֲלֵיהֶם עַל־הַדָּם אֲשֶׁר־שָׁפְכוּ עַל־הָאָרֶץ וּבְגִלּוּלֵיהֶם טִמְּאֽוּהָ׃
19 ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶಗಳಲ್ಲಿ ಚದರಿಹೋದರು. ಅವರ ದುರ್ಮಾರ್ಗ ದುರಾಚಾರಗಳಿಗೆ ಅನುಸಾರವಾಗಿ ಅವರನ್ನು ನ್ಯಾಯತೀರಿಸಿದೆನು.
וָאָפִיץ אֹתָם בַּגּוֹיִם וַיִּזָּרוּ בָּאֲרָצוֹת כְּדַרְכָּם וְכַעֲלִילוֹתָם שְׁפַטְתִּֽים׃
20 ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ ಇವರೇ, ‘ಯೆಹೋವ ದೇವರ ಜನರು ಮತ್ತು ಇವರು ಆತನ ದೇಶದಿಂದ ಹೊರಟು ಹೋದರು,’ ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡಿದರು.
וַיָּבוֹא אֶל־הַגּוֹיִם אֲשֶׁר־בָּאוּ שָׁם וַֽיְחַלְּלוּ אֶת־שֵׁם קׇדְשִׁי בֶּאֱמֹר לָהֶם עַם־יְהֹוָה אֵלֶּה וּמֵאַרְצוֹ יָצָֽאוּ׃
21 ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ಕುರಿತು ಮನಮರುಗಿದೆನು.
וָאֶחְמֹל עַל־שֵׁם קׇדְשִׁי אֲשֶׁר חִלְּלֻהוּ בֵּית יִשְׂרָאֵל בַּגּוֹיִם אֲשֶׁר־בָּאוּ שָֽׁמָּה׃
22 “ಆದ್ದರಿಂದ ನೀನು ಇಸ್ರಾಯೇಲರ ಮನೆತನದವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡುತ್ತಿಲ್ಲ. ಆದರೆ ನೀವು ಇತರ ಜನಾಂಗಗಳ ನಡುವೆ ಅಪವಿತ್ರಪಡಿಸಿದ ನನ್ನ ಪರಿಶುದ್ಧ ನಾಮಕ್ಕಾಗಿ ಮಾಡುತ್ತೇನೆ.
לָכֵן אֱמֹר לְבֵֽית־יִשְׂרָאֵל כֹּה אָמַר אֲדֹנָי יֱהֹוִה לֹא לְמַעַנְכֶם אֲנִי עֹשֶׂה בֵּית יִשְׂרָאֵל כִּי אִם־לְשֵׁם־קׇדְשִׁי אֲשֶׁר חִלַּלְתֶּם בַּגּוֹיִם אֲשֶׁר־בָּאתֶם שָֽׁם׃
23 ನೀನು ನನ್ನ ಮಹತ್ವದ ನಾಮವನ್ನು ಅಪವಿತ್ರತೆಗೆ ಗುರಿಮಾಡಿದ ಇತರ ಜನಾಂಗಗಳಲ್ಲಿ ನನ್ನ ಪವಿತ್ರ ನಾಮವನ್ನು ತೋರಿಸುವೆನು. ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮೂಲಕವಾಗಿ ನನ್ನನ್ನು ಪವಿತ್ರನೆಂದು ತೋರಿಸುವಾಗ ಅವರು ನಾನು ಯೆಹೋವ ದೇವರೆಂಬುದನ್ನು ತಿಳಿದುಕೊಳ್ಳುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
וְקִדַּשְׁתִּי אֶת־שְׁמִי הַגָּדוֹל הַֽמְחֻלָּל בַּגּוֹיִם אֲשֶׁר חִלַּלְתֶּם בְּתוֹכָם וְיָדְעוּ הַגּוֹיִם כִּֽי־אֲנִי יְהֹוָה נְאֻם אֲדֹנָי יֱהֹוִה בְּהִקָּדְשִׁי בָכֶם לְעֵינֵיהֶֽם׃
24 “‘ನಾನು ನಿಮ್ಮನ್ನು ಇತರ ಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.
וְלָקַחְתִּי אֶתְכֶם מִן־הַגּוֹיִם וְקִבַּצְתִּי אֶתְכֶם מִכׇּל־הָאֲרָצוֹת וְהֵבֵאתִי אֶתְכֶם אֶל־אַדְמַתְכֶֽם׃
25 ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
וְזָרַקְתִּי עֲלֵיכֶם מַיִם טְהוֹרִים וּטְהַרְתֶּם מִכֹּל טֻמְאוֹתֵיכֶם וּמִכׇּל־גִּלּוּלֵיכֶם אֲטַהֵר אֶתְכֶֽם׃
26 ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
וְנָתַתִּי לָכֶם לֵב חָדָשׁ וְרוּחַ חֲדָשָׁה אֶתֵּן בְּקִרְבְּכֶם וַהֲסִרֹתִי אֶת־לֵב הָאֶבֶן מִבְּשַׂרְכֶם וְנָתַתִּי לָכֶם לֵב בָּשָֽׂר׃
27 ನನ್ನ ಆತ್ಮವನ್ನು ನಿಮ್ಮೊಳಗೆ ಇಡುವೆನು. ನೀವು ನನ್ನ ನಿಯಮಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಜಾಗರೂಕತೆಯಿಂದ ಅನುಸರಿಸಿ ನಡೆಯುವಿರಿ.
וְאֶת־רוּחִי אֶתֵּן בְּקִרְבְּכֶם וְעָשִׂיתִי אֵת אֲשֶׁר־בְּחֻקַּי תֵּלֵכוּ וּמִשְׁפָּטַי תִּשְׁמְרוּ וַעֲשִׂיתֶֽם׃
28 ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿಸುವಿರಿ; ನೀವು ನನ್ನ ಜನರಾಗಿರುವಿರಿ. ನಾನು ನಿಮ್ಮ ದೇವರಾಗಿರುವೆನು.
וִישַׁבְתֶּם בָּאָרֶץ אֲשֶׁר נָתַתִּי לַאֲבֹֽתֵיכֶם וִהְיִיתֶם לִי לְעָם וְאָנֹכִי אֶהְיֶה לָכֶם לֵאלֹהִֽים׃
29 ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು. ಬೆಳೆ ಬೆಳೆಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವುದಿಲ್ಲ.
וְהוֹשַׁעְתִּי אֶתְכֶם מִכֹּל טֻמְאֽוֹתֵיכֶם וְקָרָאתִי אֶל־הַדָּגָן וְהִרְבֵּיתִי אֹתוֹ וְלֹא־אֶתֵּן עֲלֵיכֶם רָעָֽב׃
30 ಜನಾಂಗಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನೂ ಹೆಚ್ಚಿಸುವೆನು.
וְהִרְבֵּיתִי אֶת־פְּרִי הָעֵץ וּתְנוּבַת הַשָּׂדֶה לְמַעַן אֲשֶׁר לֹא תִקְחוּ עוֹד חֶרְפַּת רָעָב בַּגּוֹיִֽם׃
31 ಆಮೇಲೆ ನೀವು ನಿಮ್ಮ ನಿಮ್ಮ ದುರ್ಮಾರ್ಗಗಳನ್ನೂ ದುರಾಚಾರಗಳನ್ನೂ ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.
וּזְכַרְתֶּם אֶת־דַּרְכֵיכֶם הָרָעִים וּמַעַלְלֵיכֶם אֲשֶׁר לֹֽא־טוֹבִים וּנְקֹֽטֹתֶם בִּפְנֵיכֶם עַל עֲוֺנֹתֵיכֶם וְעַל תּוֹעֲבוֹתֵיכֶֽם׃
32 ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳಿಗೆ ನಾಚಿಕೆಪಟ್ಟು ಲಜ್ಜೆಹೊಂದಿರಿ.
לֹא לְמַעַנְכֶם אֲנִֽי־עֹשֶׂה נְאֻם אֲדֹנָי יֱהֹוִה יִוָּדַע לָכֶם בּוֹשׁוּ וְהִכָּֽלְמוּ מִדַּרְכֵיכֶם בֵּית יִשְׂרָאֵֽל׃
33 “‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು. ಹಾಳಾಗಿರುವ ಸ್ಥಳಗಳಲ್ಲಿಯೂ ಕಟ್ಟಡಗಳು ಪುನಃ ಏಳುವುವು.
כֹּה אָמַר אֲדֹנָי יֱהֹוִה בְּיוֹם טַהֲרִי אֶתְכֶם מִכֹּל עֲוֺנֽוֹתֵיכֶם וְהֽוֹשַׁבְתִּי אֶת־הֶעָרִים וְנִבְנוּ הֶחֳרָבֽוֹת׃
34 ದೇಶವು ಅಲ್ಲಿ ಹಾದುಹೋಗುವ ಜನರೆಲ್ಲರ ಮುಂದೆ ಹಾಳುಬಿದ್ದ ಹಾಗೆ ಕಾಣದೆ ಉಳುಮೆಗೊಂಡಿರುವುದು.
וְהָאָרֶץ הַנְּשַׁמָּה תֵּעָבֵד תַּחַת אֲשֶׁר הָיְתָה שְׁמָמָה לְעֵינֵי כׇּל־עוֹבֵֽר׃
35 “ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ,” ಎಂದು ಹೇಳುವರು.
וְאָמְרוּ הָאָרֶץ הַלֵּזוּ הַנְּשַׁמָּה הָיְתָה כְּגַן־עֵדֶן וְהֶעָרִים הֶחֳרֵבוֹת וְהַֽנְשַׁמּוֹת וְהַנֶּהֱרָסוֹת בְּצוּרוֹת יָשָֽׁבוּ׃
36 ಯೆಹೋವ ದೇವರಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ ಮತ್ತು ನಾನೇ ಇದನ್ನು ಮಾಡುತ್ತೇನೆ.’
וְיָדְעוּ הַגּוֹיִם אֲשֶׁר יִֽשָּׁאֲרוּ סְבִיבֽוֹתֵיכֶם כִּי ׀ אֲנִי יְהֹוָה בָּנִיתִי הַנֶּהֱרָסוֹת נָטַעְתִּי הַנְּשַׁמָּה אֲנִי יְהֹוָה דִּבַּרְתִּי וְעָשִֽׂיתִי׃
37 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇನ್ನೊಂದು ವಿಷಯದಲ್ಲಿ, ಇಸ್ರಾಯೇಲರ ಮತ್ತೊಂದು ಕೋರಿಕೆಯನ್ನು ಆಲಿಸಿ ನೆರವೇರಿಸುವೆನು. ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.
כֹּה אָמַר אֲדֹנָי יֱהֹוִה עוֹד זֹאת אִדָּרֵשׁ לְבֵֽית־יִשְׂרָאֵל לַעֲשׂוֹת לָהֶם אַרְבֶּה אֹתָם כַּצֹּאן אָדָֽם׃
38 ಮೀಸಲಾದ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು. ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವುವು. ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.”
כְּצֹאן קׇדָשִׁים כְּצֹאן יְרוּשָׁלַ͏ִם בְּמוֹעֲדֶיהָ כֵּן תִּֽהְיֶינָה הֶעָרִים הֶחֳרֵבוֹת מְלֵאוֹת צֹאן אָדָם וְיָדְעוּ כִּֽי־אֲנִי יְהֹוָֽה׃

< ಯೆಹೆಜ್ಕೇಲನು 36 >