< ಯೆಹೆಜ್ಕೇಲನು 41 >

1 ಆಮೇಲೆ, ಆ ಮನುಷ್ಯನು ನನ್ನನ್ನು ದೇವಾಲಯಕ್ಕೆ ಕರೆತಂದು ಕಂಬಗಳನ್ನು ಎರಡೂ ಕಡೆಯಲ್ಲಿ ಸುಮಾರು 3.2 ಮೀಟರ್ ಎಂದು ಅಳೆದನು. ಇದೇ ಆ ಗುಡಾರದ ಉದ್ದಗಲವಾಗಿತ್ತು.
Opět přivedl mne k chrámu, a změřil veřeje, šesti loket zšíří s jedné strany, a šesti loket zšíří s druhé strany, podlé širokosti stánku.
2 ಬಾಗಿಲಿನ ಅಗಲವು ಸುಮಾರು ಐದು ಮೀಟರ್ ಮತ್ತು ಅದರ ಎರಡೂ ಬದಿಗಳಲ್ಲಿ ಗೋಡೆಗಳ ಅಗಲ ಸುಮಾರು ಎರಡೂವರೆ ಮೀಟರ್. ಅವನು ಮುಖ್ಯಸಭಾಂಗಣವನ್ನೂ ಅಳೆದನು. ಅದು ಸುಮಾರು ಇಪ್ಪತ್ತೊಂದು ಮೀಟರ್ ಉದ್ದ ಮತ್ತು ಸುಮಾರು ಹನ್ನೊಂದು ಮೀಟರ್ ಅಗಲವಿತ್ತು.
A širokost dveří desíti loket, boky pak dveří pěti loket s jedné a pěti loket s druhé strany. Změřil také i dlouhost jejich čtyřidcíti loket, širokost pak dvadcíti loket.
3 ಅನಂತರ ಅವನು ಒಳಗೆ ಹೋಗಿ ಪರಿಶುದ್ಧಸ್ಥಳದ ಪ್ರವೇಶದ್ವಾರದ ಕಂಬಗಳನ್ನು ಅಳೆದನು; ಒಂದೊಂದು ಕಂಬವು ಸುಮಾರು ಒಂದು ಮೀಟರ್ ಅಗಲವಿತ್ತು. ಪ್ರವೇಶದ್ವಾರವು ಸುಮಾರು ಮೂರು ಮೀಟರ್ ಅಗಲವಾಗಿತ್ತು ಮತ್ತು ಅದರ ಎರಡೂ ಬದಿಯ ಗೋಡೆಯು ಸುಮಾರು ನಾಲ್ಕು ಮೀಟರ್ ಅಗಲವಾಗಿತ್ತು.
Přišel také do vnitřku, a změřil veřeje dveří dvou loket, a dvéře šesti loket, širokost pak dveří sedmi loket.
4 ಅವನು ಒಳಗಿನ ಪರಿಶುದ್ಧಸ್ಥಳದ ಉದ್ದವನ್ನು ಅಳೆದನು; ಅದು ಸುಮಾರು ಹತ್ತು ಮೀಟರ್ ಆಗಿತ್ತು; ಅದರ ಅಗಲವು ಮುಖ್ಯ ಸಭಾಂಗಣದ ಕೊನೆಯವರೆಗೂ ಸುಮಾರು ಹತ್ತು ಮೀಟರ್ ಆಗಿತ್ತು. ಅವನು ನನಗೆ, “ಇದು ಅತ್ಯಂತ ಪವಿತ್ರ ಸ್ಥಳವಾಗಿದೆ” ಎಂದು ಹೇಳಿದನು.
Změřil také dlouhost svatyně dvadcíti loket, a širokost dvadcíti loket v chrámě, a řekl mi: Tato jest svatyně svatých.
5 ಅನಂತರ ಅವನು ಆಲಯದ ಗೋಡೆಯನ್ನು ಅಳೆದನು; ಅದು ಸುಮಾರು ಮೂರು ಮೀಟರ್ ದಪ್ಪವಾಗಿತ್ತು, ಮತ್ತು ಆಲಯದ ಸುತ್ತಲಿನ ಕೋಣೆಗಳ ಅಗಲವು ಪ್ರತಿ ಬದಿಯಲ್ಲಿ ಸುಮಾರು ಎರಡು ಮೀಟರ್ ಆಗಿತ್ತು.
Změřil též zed domu šesti loket, a širokost pavlače čtyř loket, vůkol a vůkol okolo domu.
6 ಆ ಕೊಠಡಿಗಳು ಒಂದರ ಮೇಲೊಂದು ಮೂರು ಅಂತಸ್ತಾಗಿದ್ದವು; ಒಂದೊಂದು ಅಂತಸ್ತಿನಲ್ಲಿ ಮೂವತ್ತು ಮೂವತ್ತು ಕೊಠಡಿಗಳಿದ್ದವು. ಪಕ್ಕದ ಕೋಣೆಗಳಿಗೆ ಆಧಾರವಾಗಿ ದೇವಾಲಯದ ಗೋಡೆಯ ಸುತ್ತಲೂ ಮುಂಚಾಚಿರುವಿಕೆಗಳು ಇದ್ದವು. ಇದರಿಂದಾಗಿ ಪೋಷಕ ಭಾಗಗಳನ್ನು ದೇವಾಲಯದ ಗೋಡೆಯೊಳಗೆ ಸೇರಿಸಲಾಗಿಲ್ಲ.
Ty pak pavlače, pavlač nad pavlačí, byly tři, a třidcíti noh zdélí, a scházely se při zdi domu vespolek, tak že se pavlače vůkol a vůkol držely, a nedržely se na zdi domu.
7 ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು. ಅವು ಮನೆಯನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದ ಹಾಗೆಲ್ಲಾ ಅದನ್ನು ಬಿಗಿಯಾಗಿ ಹಿಡಿದುಕೊಂಡಂತೆ ಇದ್ದವು; ಹೀಗೆ ಮೇಲಿನ ಅಂತಸ್ತುಗಳು ಮನೆಯ ಕಡೆಗೆ ಅಗಲವಾಗುತ್ತಾ ಬಂದವು; ಕೆಳಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದವು.
Nebo se rozšiřovala vůkol více a více, svrchu pro pavlače, kteréž byly okolo domu, od vrchu až dolů, vůkol a vůkol domu, poněvadž nejširší dům byl na hoře, a tak nejnižší porozšiřovala se k vrchu pro prostřední.
8 ಆಲಯದ ಸುತ್ತಮುತ್ತಲೂ ಒಂದು ಜಗಲಿಯನ್ನು ನಾನು ನೋಡಿದೆನು. ಅದು ಪಕ್ಕದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮೊಳದ ಅಳತೆಯ ಕೋಲಿನಷ್ಟು ಎತ್ತರವಾಗಿತ್ತು.
Tak podobně spatřil jsem při domu pavlače, i nejvyšší vůkol a vůkol, jejichž půdy zouplna odměřeny byly šesti loket k výstupkům.
9 ಹೊರಗಡೆಯಲ್ಲಿ ಪಕ್ಕದ ಕೊಠಡಿಗಳಿಗಾದ ಗೋಡೆಯ ದಪ್ಪವು ಐದು ಮೊಳ ಮತ್ತು ಉಳಿದದ್ದು ಒಳಗಿನ ಕಡೆಯ ಕೊಠಡಿಗಳ ಸ್ಥಳವಾಗಿತ್ತು.
Širokost zdi, kteráž byla při pavlačích zevnitř, pěti loket byla, i plac pavlačí, kteréž byly při domu.
10 ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು;
Mezi nimiž a komůrkami byla širokost dvadcíti loket okolo domu vůkol a vůkol.
11 ಪಕ್ಕದ ಕೊಠಡಿಗಳ ಬಾಗಿಲುಗಳು ತೆರೆದ ಸ್ಥಳದ ಕಡೆಗೆ ಇದ್ದವು. ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು; ತೆರೆದ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು.
A dvéře pavlačí byly k placu, dvéře jedny na půlnoci, a druhé dvéře na poledne, a širokost placu byla pěti loket vůkol a vůkol.
12 ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು. ಅದರ ಉದ್ದವು ತೊಂಬತ್ತು ಮೊಳವಾಗಿತ್ತು.
Stavení pak, kteréž bylo před příhradkem v úhlu k západu, širokost byla sedmdesáti loket, a zed téhož stavení pěti loket zšíří vůkol a vůkol, a zdélí devadesáti loket.
13 ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದೂ ಅಳೆದನು;
Potom změřil dům, zdélí sto loket, totiž příhradek i stavení, a zdi jeho zdélí sto loket.
14 ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು.
Též širokost předku domu i příhradku k východu sto loket.
15 ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂಥ ಕಟ್ಟಡವನ್ನು ಅಂದರೆ ಶಾಲೆಗಳನ್ನೂ ಆ ಕಡೆ ಮತ್ತು ಈ ಕಡೆ ನೂರು ಮೊಳವೆಂದೂ ಅಳೆದನು. ಮುಖ್ಯ ಸಭಾಂಗಣ, ಗರ್ಭಗೃಹ ಮತ್ತು ಅಂಗಳದ ಮುಂಭಾಗದಲ್ಲಿ ದ್ವಾರಮಂಟಪ,
Změřil i dlouhost stavení před příhradkem, kteréž bylo za ním, též i paláce jeho s jedné i s druhé strany, a bylo sto loket; též chrám vnitř i síňce s síní,
16 ಹಾಗೆಯೇ ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಿಲುಗಳು ಮತ್ತು ಇಕ್ಕಟ್ಟಾದ ಕಿಟಕಿಗಳನ್ನೂ ಮತ್ತು ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತುಗಳಲ್ಲಿ ಬಾಗಿಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಕೆಯಾಗಿದ್ದವು. ನೆಲ, ಕಿಟಕಿಯವರೆಗಿನ ಗೋಡೆ ಮತ್ತು ಕಿಟಕಿಗಳನ್ನು ಮುಚ್ಚಲಾಯಿತು.
Prahy i okna possoužená, i paláce vůkol po třech stranách jejich, naproti prahu taflování dřevěné vůkol a vůkol, i od země až do oken, též i okna otaflovaná,
17 ಬಾಗಿಲಿನ ಮೇಲಕ್ಕೂ ಒಳಗಿನ ಆಲಯದವರೆಗೂ ಮತ್ತು ಹೊರಗೂ ಸುತ್ತಲೂ ಇದ್ದ ಗೋಡೆ, ಹೀಗೆ ಒಳಗೂ ಹೊರಗೂ ಎಲ್ಲವನ್ನೂ ಅಳೆದನು.
Od svrchku dveří až do vnitřní i zevnitřní strany domu, i všecku zed vůkol a vůkol vnitř i zevnitř změřené.
18 ಅದು ಕೆರೂಬಿಗಳು ಮತ್ತು ಖರ್ಜೂರದ ಮರಗಳ ಚಿತ್ರಗಳಿಂದ ಕೂಡಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಮತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖಗಳು ಇದ್ದವು.
Kteréž taflování bylo uděláno s cherubíny a palmami, a to vše palma mezi cherubínem a cherubínem. A cherubín měl dvě tváře.
19 ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಮನುಷ್ಯನ ಮುಖವು, ಆ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಮತ್ತು ಸುತ್ತಮುತ್ತಲೂ ಚಿತ್ರಮಯವಾಗಿತ್ತು.
Totiž tvář lidskou naproti palmě s jedné strany, a tvář lvíčete naproti palmě s druhé strany. Tak uděláno bylo ve všem domu vůkol a vůkol.
20 ನೆಲವು ಮೊದಲುಗೊಂಡು ಬಾಗಿಲಿನ ಮೇಲಿನವರೆಗೂ ದೇವಾಲಯದ ಗೋಡೆಯಲ್ಲಿಯೂ ಕೆರೂಬಿಗಳು ಮತ್ತು ಖರ್ಜೂರದ ಮರಗಳು ಚಿತ್ರಮಯವಾಗಿದ್ದವು.
Od země až do vrchu dveří cherubínové a palmy zdělány byly i na zdi chrámu.
21 ಮುಖ್ಯ ಸಭಾಂಗಣದ ಕಂಬಗಳು ಚಚ್ಚೌಕವಾಗಿದ್ದವು. ಮಹಾಪರಿಶುದ್ಧ ಸ್ಥಳವೂ ಸಹ ಹಾಗೆಯೇ ಇತ್ತು.
Chrámu veřeje byly čtverhrané, a předek svatyně podobný jemu.
22 ಸುಮಾರು ಒಂದೂವರೆ ಮೀಟರ್ ಎತ್ತರ ಮತ್ತು ಸುಮಾರು ಒಂದು ಮೀಟರ್ ಉದ್ದ ಮತ್ತು ಅಗಲವಿರುವ ಮರದ ಬಲಿಪೀಠವಿತ್ತು. ಅದರ ಮೂಲೆಗಳು, ಅದರ ತಳ ಮತ್ತು ಅದರ ಬದಿಗಳು ಮರದಿಂದ ಆಗಿದ್ದವು. ಆ ಮನುಷ್ಯನು ನನಗೆ, “ಇದು ಯೆಹೋವ ದೇವರ ಮುಂದೆ ಇರುವ ಮೇಜು” ಎಂದು ಹೇಳಿದನು.
Oltář dřevěný tří loket zvýší, zdélí pak dvou loket s úhly svými, jehož dlouhost i pobočnice jeho dřevěné byly. I mluvil ke mně: Tento jest stůl, kterýž stojí před Hospodinem.
23 ದೇವಾಲಯಕ್ಕೂ ಮಹಾಪರಿಶುದ್ಧ ಸ್ಥಳಕ್ಕೂ ಎರಡು ಬಾಗಿಲುಗಳಿದ್ದವು.
A dvojnásobní dvéře byly u chrámu i u svatyně,
24 ಆ ಎರಡು ಬಾಗಿಲುಗಳಿಗೆ ಎರಡು ಕದಗಳಿದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಿಲಿಗೆ ಎರಡು, ಇನ್ನೊಂದು ಬಾಗಿಲಿಗೆ ಎರಡು ಇದ್ದವು.
A dvojnásobní dvéře ve vratech, totiž dvojnásobní dvéře obracející se, dvojnásobní ve vratech jedněch, a dvojnásobní dvéře v druhých.
25 ಆಲಯದ ಬಾಗಿಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಚಿತ್ರಿತವಾಗುವ ಹಾಗೆಯೇ ಚಿತ್ರಿತವಾಗಿದ್ದವು. ದ್ವಾರಾಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು.
Byli pak uděláni na nich, na těch dveřích chrámu, cherubínové a palmy, tak jakž uděláni byli na stěnách, trámové také dřevění byli před síňcí vně.
26 ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗಣದ ಪಕ್ಕಕ್ಕೂ ಆಲಯದ ಪಕ್ಕದ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪದ ಹಲಗೆಗಳೂ ಸಹ ಇದ್ದವು.
Též na oknech possoužených byly palmy s obou stran po bocích síňce, i na pavlačích domu toho i trámích.

< ಯೆಹೆಜ್ಕೇಲನು 41 >