< ಯೆಹೆಜ್ಕೇಲನು 43 >

1 ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಬಾಗಿಲಿಗೆ ಕರೆದುಕೊಂಡು ಹೋದನು.
וַיּוֹלִכֵנִי אֶל־הַשָּׁעַר שַׁעַר אֲשֶׁר פֹּנֶה דֶּרֶךְ הַקָּדִֽים׃
2 ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವಮಾರ್ಗವಾಗಿ ಬಂದಿತು ಮತ್ತು ಅವರ ಧ್ವನಿಯು ಹರಿಯುವ ನೀರಿನ ಘರ್ಜನೆಯಂತಿತ್ತು; ಭೂಮಿಯು ಅವರ ಮಹಿಮೆಯಿಂದ ಪ್ರಕಾಶಿಸುತ್ತಿತ್ತು.
וְהִנֵּה כְּבוֹד אֱלֹהֵי יִשְׂרָאֵל בָּא מִדֶּרֶךְ הַקָּדִים וְקוֹלוֹ כְּקוֹל מַיִם רַבִּים וְהָאָרֶץ הֵאִירָה מִכְּבֹדֽוֹ׃
3 ನಾನು ಕಂಡ ದರ್ಶನವು, ಅವನು ಪಟ್ಟಣವನ್ನು ನಾಶಮಾಡಲು ಬಂದಾಗ ನಾನು ನೋಡಿದ ದೃಷ್ಟಿಯಂತೆ ಮತ್ತು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ದರ್ಶನಗಳಂತೆ ಮತ್ತು ಆಗ ನಾನು ಬೋರಲು ಬಿದ್ದೆನು.
וּכְמַרְאֵה הַמַּרְאֶה אֲשֶׁר רָאִיתִי כַּמַּרְאֶה אֲשֶׁר־רָאִיתִי בְּבֹאִי לְשַׁחֵת אֶת־הָעִיר וּמַרְאוֹת כַּמַּרְאֶה אֲשֶׁר רָאִיתִי אֶל־נְהַר־כְּבָר וָאֶפֹּל אֶל־פָּנָֽי׃
4 ಆಗ ಯೆಹೋವ ದೇವರ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿಸಿತು.
וּכְבוֹד יְהוָה בָּא אֶל־הַבָּיִת דֶּרֶךְ שַׁעַר אֲשֶׁר פָּנָיו דֶּרֶךְ הַקָּדִֽים׃
5 ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆತಂದಿತು. ಯೆಹೋವ ದೇವರ ಮಹಿಮೆಯಿಂದ ಆಲಯವು ತುಂಬಿಕೊಂಡಿತು.
וַתִּשָּׂאֵנִי רוּחַ וַתְּבִיאֵנִי אֶל־הֶֽחָצֵר הַפְּנִימִי וְהִנֵּה מָלֵא כְבוֹד־יְהוָה הַבָּֽיִת׃
6 ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವುದನ್ನು ಕೇಳಿದೆನು. ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿದ್ದನು.
וָאֶשְׁמַע מִדַּבֵּר אֵלַי מֵהַבָּיִת וְאִישׁ הָיָה עֹמֵד אֶצְלִֽי׃
7 ಅವರು ನನಗೆ, “ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ನನ್ನ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲರ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಎಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರದಿಂದಲೂ ಅವರ ಅರಸರ ಮರಣದ ಸಮಯದಲ್ಲಿ ಅವರ ಅಂತ್ಯಕ್ರಿಯೆಯ ವಿಧಿಗಳ ಅರ್ಪಣೆಯಿಂದ ಅಪವಿತ್ರಗೊಳಿಸುವುದಿಲ್ಲ.
וַיֹּאמֶר אֵלַי בֶּן־אָדָם אֶת־מְקוֹם כִּסְאִי וְאֶת־מְקוֹם כַּפּוֹת רַגְלַי אֲשֶׁר אֶשְׁכָּן־שָׁם בְּתוֹךְ בְּנֵֽי־יִשְׂרָאֵל לְעוֹלָם וְלֹא יְטַמְּאוּ עוֹד בֵּֽית־יִשְׂרָאֵל שֵׁם קָדְשִׁי הֵמָּה וּמַלְכֵיהֶם בִּזְנוּתָם וּבְפִגְרֵי מַלְכֵיהֶם בָּמוֹתָֽם׃
8 ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ. ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿಬಿಟ್ಟಿದ್ದೇನೆ.
בְּתִתָּם סִפָּם אֶת־סִפִּי וּמְזֽוּזָתָם אֵצֶל מְזוּזָתִי וְהַקִּיר בֵּינִי וּבֵֽינֵיהֶם וְטִמְּאוּ ׀ אֶת־שֵׁם קָדְשִׁי בְּתֽוֹעֲבוֹתָם אֲשֶׁר עָשׂוּ וָאֲכַל אֹתָם בְּאַפִּֽי׃
9 ಈಗ ಅವರು ತಮ್ಮ ವ್ಯಭಿಚಾರವನ್ನು ಮತ್ತು ನಿಮ್ಮ ರಾಜರ ಅಂತ್ಯಕ್ರಿಯೆಯ ವಿಧಿಗಳನ್ನು ಬಿಟ್ಟುಬಿಡಿ, ನಾನು ಅವರ ಮಧ್ಯದಲ್ಲಿ ಎಂದೆಂದಿಗೂ ವಾಸಿಸುತ್ತೇನೆ.
עַתָּה יְרַחֲקוּ אֶת־זְנוּתָם וּפִגְרֵי מַלְכֵיהֶם מִמֶּנִּי וְשָׁכַנְתִּי בְתוֹכָם לְעוֹלָֽם׃
10 “ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ದೇವಾಲಯನ್ನು ವಿವರಿಸಿರಿ. ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಅದರ ಪರಿಪೂರ್ಣತೆಯನ್ನು ಪರಿಗಣಿಸಲಿ.
אַתָּה בֶן־אָדָם הַגֵּד אֶת־בֵּֽית־יִשְׂרָאֵל אֶת־הַבַּיִת וְיִכָּלְמוּ מֵעֲוֺנֽוֹתֵיהֶם וּמָדְדוּ אֶת־תָּכְנִֽית׃
11 ಅವರು ಮಾಡಿದ ಎಲ್ಲದಕ್ಕಾಗಿ ನಾಚಿಕೆಪಟ್ಟರೆ, ದೇವಾಲಯದ ರೂಪವನ್ನೂ, ಅದರ ಆಕಾರವನ್ನೂ, ಅದರ ಆಗಮನ ನಿರ್ಗಮನಗಳನ್ನೂ, ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ಕಟ್ಟಳೆಗಳನ್ನೂ ಅವರಿಗೆ ವಿವರಿಸು. ಅವರು ಅದರ ರಚನಾವಿಧಾನಗಳಿಗೆ ನಂಬಿಗಸ್ತರಾಗಿರುವಂತೆಯೂ ಅವರು ಅದರ ಎಲ್ಲಾ ಕಟ್ಟಳೆಗಳನ್ನೂ ಅನುಸರಿಸುವಂತೆಯೂ ಅವರ ಮುಂದೆಯೇ ಇವುಗಳನ್ನು ಬರೆ.
וְאִֽם־נִכְלְמוּ מִכֹּל אֲשֶׁר־עָשׂוּ צוּרַת הַבַּיִת וּתְכוּנָתוֹ וּמוֹצָאָיו וּמוֹבָאָיו וְֽכָל־צֽוּרֹתָו וְאֵת כָּל־חֻקֹּתָיו וְכָל־צורתי צוּרֹתָיו וְכָל־תורתו תּוֹרֹתָיו הוֹדַע אוֹתָם וּכְתֹב לְעֵֽינֵיהֶם וְיִשְׁמְרוּ אֶת־כָּל־צוּרָתוֹ וְאֶת־כָּל־חֻקֹּתָיו וְעָשׂוּ אוֹתָֽם׃
12 “ಇದು ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿ ಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧವಾಗಿದೆ. ಇಗೋ, ಇದೇ ಆ ಆಲಯದ ನಿಯಮವಾಗಿದೆ.
זֹאת תּוֹרַת הַבָּיִת עַל־רֹאשׁ הָהָר כָּל־גְּבֻלוֹ סָבִיב ׀ סָבִיב קֹדֶשׁ קָדָשִׁים הִנֵּה־זֹאת תּוֹרַת הַבָּֽיִת׃
13 “ಬಲಿಪೀಠವು ಮೀಟರ್ ಅಳತೆಯ ಪ್ರಕಾರ ಹೀಗಿರಬೇಕು. ಕೆಳಭಾಗದ ಎತ್ತರ ಐವತ್ತು ಸೆಂಟಿಮೀಟರ್, ಮೇಲಿನ ಬಿಡುವಿನ ಅಗಲವು ಸುತ್ತಲೂ ಐವತ್ತು ಸೆಂಟಿಮೀಟರ್, ಬಿಡುವಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಇಪ್ಪತ್ತೈದು ಸೆಂಟಿಮೀಟರ್;
וְאֵלֶּה מִדּוֹת הַמִּזְבֵּחַ בָּֽאַמּוֹת אַמָּה אַמָּה וָטֹפַח וְחֵיק הָאַמָּה וְאַמָּה־רֹחַב וּגְבוּלָהּ אֶל־שְׂפָתָהּ סָבִיב זֶרֶת הָאֶחָד וְזֶה גַּב הַמִּזְבֵּֽחַ׃
14 ಕೆಳಭಾಗದ ಎತ್ತರವು ಒಂದು ಮೊಳ ಮೇಲಿನ ಕೈ ಅಗಲದಷ್ಟು ಅಂಚಿನ ಉದ್ದವು ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ ಸುತ್ತಲೂ ದಿಂಡಿನ ಅಗಲವು ಒಂದು ಮೊಳ. ಇದೇ ಬಲಿಪೀಠ. ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರವು ಎರಡು ಮೊಳ, ಅದರ ಮೇಲಣ ಬಿಡುವಿನ ಅಗಲ ಒಂದು ಮೊಳ. ಸಣ್ಣ ಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ.
וּמֵחֵיק הָאָרֶץ עַד־הָעֲזָרָה הַתַּחְתּוֹנָה שְׁתַּיִם אַמּוֹת וְרֹחַב אַמָּה אֶחָת וּמֵהֳעֲזָרָה הַקְּטַנָּה עַד־הָעֲזָרָה הַגְּדוֹלָה אַרְבַּע אַמּוֹת וְרֹחַב הָאַמָּֽה׃
15 ಅಗ್ನಿಕುಂಡದ ಅಂತಸ್ತಿನ ಎತ್ತರವು ಎರಡು ಮೀಟರ್ ಆ ಅಗ್ನಿಕುಂಡದ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.
וְהַֽהַרְאֵל אַרְבַּע אַמּוֹת וּמֵהָאֲרִאֵיל וּלְמַעְלָה הַקְּרָנוֹת אַרְבַּֽע׃
16 ಬಲಿಪೀಠದ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು, ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು.
והאראיל וְהָאֲרִיאֵל שְׁתֵּים עֶשְׂרֵה אֹרֶךְ בִּשְׁתֵּים עֶשְׂרֵה רֹחַב רָבוּעַ אֶל אַרְבַּעַת רְבָעָֽיו׃
17 ಅದರ ಅಂಚು ನಾಲ್ಕು ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ಅದರ ತಳವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಎದುರಾಗಿರಬೇಕು.”
וְהָעֲזָרָה אַרְבַּע עֶשְׂרֵה אֹרֶךְ בְּאַרְבַּע עֶשְׂרֵה רֹחַב אֶל אַרְבַּעַת רְבָעֶיהָ וְהַגְּבוּל סָבִיב אוֹתָהּ חֲצִי הָאַמָּה וְהַֽחֵיק־לָהּ אַמָּה סָבִיב וּמַעֲלֹתֵהוּ פְּנוֹת קָדִֽים׃
18 ಅವರು ನನಗೆ ಹೇಳಿದ್ದೇನೆಂದರೆ: “ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಬಲಿಪೀಠವನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ.
וַיֹּאמֶר אֵלַי בֶּן־אָדָם כֹּה אָמַר אֲדֹנָי יְהוִה אֵלֶּה חֻקּוֹת הַמִּזְבֵּחַ בְּיוֹם הֵעָֽשׂוֹתוֹ לְהַעֲלוֹת עָלָיו עוֹלָה וְלִזְרֹק עָלָיו דָּֽם׃
19 ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಸೇವೆ ಮಾಡುವುದಕ್ಕಾಗಿ ನನ್ನ ಬಳಿಗೆ ಸಮೀಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯರಿಗೂ ದೋಷಪರಿಹಾರ ಬಲಿಗಾಗಿ ಎಳೆಯ ಹೋರಿಯನ್ನು ಕೊಡಬೇಕು.
וְנָתַתָּה אֶל־הַכֹּהֲנִים הַלְוִיִּם אֲשֶׁר הֵם מִזֶּרַע צָדוֹק הַקְּרֹבִים אֵלַי נְאֻם אֲדֹנָי יְהוִה לְשָֽׁרְתֵנִי פַּר בֶּן־בָּקָר לְחַטָּֽאת׃
20 ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಬಲಿಪೀಠವನ್ನು ಶುದ್ಧೀಕರಿಸಿ ಮತ್ತು ಅದಕ್ಕೆ ಪ್ರಾಯಶ್ಚಿತ್ತವನ್ನು ಮಾಡಿರಿ.
וְלָקַחְתָּ מִדָּמוֹ וְנָתַתָּה עַל־אַרְבַּע קַרְנֹתָיו וְאֶל־אַרְבַּע פִּנּוֹת הָעֲזָרָה וְאֶֽל־הַגְּבוּל סָבִיב וְחִטֵּאתָ אוֹתוֹ וְכִפַּרְתָּֽהוּ׃
21 ಇದಲ್ಲದೆ ನೀನು ಹೋರಿಯನ್ನೂ ಸಹ ದೋಷಪರಿಹಾರ ಬಲಿಗೆ ತೆಗೆದುಕೊಂಡು ಆಲಯದ ನೇಮಕವಾದ ಸ್ಥಳದಲ್ಲಿ, ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು.
וְלָקַחְתָּ אֵת הַפָּר הַֽחַטָּאת וּשְׂרָפוֹ בְּמִפְקַד הַבַּיִת מִחוּץ לַמִּקְדָּֽשׁ׃
22 “ಎರಡನೆಯ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ದೋಷಪರಿಹಾರ ಬಲಿಯಾಗಿ ಅರ್ಪಿಸಬೇಕು. ಅವರು ಬಲಿಪೀಠವನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು.
וּבַיּוֹם הַשֵּׁנִי תַּקְרִיב שְׂעִיר־עִזִּים תָּמִים לְחַטָּאת וְחִטְּאוּ אֶת־הַמִּזְבֵּחַ כַּאֲשֶׁר חִטְּאוּ בַּפָּֽר׃
23 ಹೀಗೆ ಅವರು ಶುದ್ಧಮಾಡಿದಾಗ ಕೊನೆಯಲ್ಲಿ ದೋಷವಿಲ್ಲದ ಒಂದು ಪ್ರಾಯದ ಹೋರಿಯನ್ನೂ ಪೂರ್ಣಾಂಗವಾದ ಮಂದೆಯೊಳಗಿರುವ ಒಂದು ಟಗರನ್ನೂ ಅರ್ಪಿಸಬೇಕು.
בְּכַלּוֹתְךָ מֵֽחַטֵּא תַּקְרִיב פַּר בֶּן־בָּקָר תָּמִים וְאַיִל מִן־הַצֹּאן תָּמִֽים׃
24 ನೀನು ಅವುಗಳನ್ನು ಯೆಹೋವ ದೇವರ ಮುಂದೆ ಅರ್ಪಿಸಬೇಕು. ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ ಅವುಗಳನ್ನು ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಬೇಕು.
וְהִקְרַבְתָּם לִפְנֵי יְהוָה וְהִשְׁלִיכוּ הַכֹּהֲנִים עֲלֵיהֶם מֶלַח וְהֶעֱלוּ אוֹתָם עֹלָה לַֽיהוָֽה׃
25 “ಏಳು ದಿನಗಳ ತನಕ ಪ್ರತಿದಿನವೂ ನೀನು ದೋಷಪರಿಹಾರ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ಧಮಾಡಬೇಕು.
שִׁבְעַת יָמִים תַּעֲשֶׂה שְׂעִיר־חַטָּאת לַיּוֹם וּפַר בֶּן־בָּקָר וְאַיִל מִן־הַצֹּאן תְּמִימִים יַעֲשֽׂוּ׃
26 ಏಳು ದಿನಗಳ ತನಕ ಅವರು ಬಲಿಪೀಠವನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.
שִׁבְעַת יָמִים יְכַפְּרוּ אֶת־הַמִּזְבֵּחַ וְטִֽהֲרוּ אֹתוֹ וּמִלְאוּ ידו יָדָֽיו׃
27 ಈ ದಿನಗಳು ತೀರಿದಾಗ ಎಂಟನೆಯ ದಿನದ ತರುವಾಯ ಯಾಜಕರು ಬಲಿಪೀಠದ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
וִֽיכַלּוּ אֶת־הַיָּמִים וְהָיָה בַיּוֹם הַשְּׁמִינִי וָהָלְאָה יַעֲשׂוּ הַכֹּהֲנִים עַל־הַמִּזְבֵּחַ אֶת־עוֹלֽוֹתֵיכֶם וְאֶת־שַׁלְמֵיכֶם וְרָצִאתִי אֶתְכֶם נְאֻם אֲדֹנָי יְהֹוִֽה׃

< ಯೆಹೆಜ್ಕೇಲನು 43 >