< ಯೆಹೆಜ್ಕೇಲನು 46 >

1 “‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಒಳಗಿನ ಅಂಗಳದ ಪೂರ್ವದಿಕ್ಕಿನ ಎದುರಾಗಿರುವ ಬಾಗಿಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲಾಗಬೇಕು. ಆದರೆ ಸಬ್ಬತ್ ದಿನದಲ್ಲಿ ಅದು ತೆರೆದಿರಬೇಕು. ಅಮಾವಾಸ್ಯೆಯ ದಿನದಲ್ಲೂ ಅದು ತೆರೆದಿರಬೇಕು.
প্রভু সদাপ্রভু এই কথা বলেন, ভিতরের উঠানের পূর্ব দিকের দরজা কাজের জন্য ছয় দিন বন্ধ থাকবে, কিন্তু বিশ্রামদিনের খোলা হবে এবং অমাবস্যার দিনের ও খোলা হবে।
2 ರಾಜಕುಮಾರನು ಆ ಬಾಗಿಲಿನ ದ್ವಾರಮಂಟಪ ಮಾರ್ಗವಾಗಿ ಹೊರಗಿನಿಂದ ಪ್ರವೇಶಿಸಿ ಬಾಗಿಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು. ಆಗ ಯಾಜಕರು ಅವನ ದಹನಬಲಿಯನ್ನು ಅವನ ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು. ಬಾಗಿಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಿಲು ಸಂಜೆಯವರೆಗೂ ಮುಚ್ಚದಿರಬೇಕು.
নেতা বাইরে থেকে দরজার বারান্দার পথ দিয়ে প্রবেশ করে দরজার চৌকাঠের কাছে দাঁড়াবেন এবং যাজকরা তাঁর হোমবলি ও মঙ্গলার্থক বলি সব উৎসর্গ করবে এবং তিনি ভিতরের দরজার গোবরাটে নত হবেন, পরে বেরিয়ে আসবেন, কিন্তু সন্ধ্যা না হলে দরজা বন্ধ করা যাবে না।
3 ದೇಶದ ಜನರು ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಈ ಬಾಗಿಲಿನ ಕದದ ಹತ್ತಿರ ಯೆಹೋವ ದೇವರ ಮುಂದೆ ಇದೇ ರೀತಿ ಆರಾಧಿಸಬೇಕು.
আর দেশের লোক সব বিশ্রামবারে ও অমাবস্যায় সেই দরজার প্রবেশ স্থানে সদাপ্রভুর কাছে নত হবে।
4 ರಾಜಕುಮಾರನು ಯೆಹೋವ ದೇವರಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು.
সদাপ্রভুর উদ্দেশ্যে নেতাকে এই হোমবলি উৎসর্গ করতে হবে, বিশ্রামবারে নির্দোষ ছয়টী মেষশাবক ও নির্দোষ একটি মেষ।
5 ಟಗರಿನ ಜೊತೆಗೆ ಕೊಡುವ ಧಾನ್ಯ ಸಮರ್ಪಣೆಯು ಸುಮಾರು ಹದಿನಾರು ಕಿಲೋಗ್ರಾಂ ಆಗಿರಬೇಕು ಮತ್ತು ಕುರಿಮರಿಗಳ ಜೊತೆಗೆ ಕೊಡುವ ಧಾನ್ಯ ಸಮರ್ಪಣೆಯು ಅವನ ಕೈಲಾದಷ್ಟು ಆಗಿರಬೇಕು. ಇದರ ಜೊತೆಗೆ ಪ್ರತಿ ಎಫಾ ಪ್ರಮಾಣದ ಧಾನ್ಯ ಸಮರ್ಪಣೆಯಾಗಿ ಸುಮಾರು ಮೂರುವರೆ ಲೀಟರ್ ಎಣ್ಣೆಯನ್ನು ಅರ್ಪಿಸಬೇಕು.
আর শস্য নৈবেদ্যরূপে মেষের সঙ্গে এক ঐফা এবং মেষশাবকদের সঙ্গে তাঁর হাতে যতটা উঠবে এবং ঐফার প্রতি এক হিন তেল।
6 ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗವಾದ ಒಂದು ಎಳೆಯ ಹೋರಿ, ಆರು ಕುರಿಮರಿಗಳು, ಒಂದು ಟಗರನ್ನು ಅರ್ಪಿಸಬೇಕು. ಇವು ದೋಷವಿಲ್ಲದ್ದಾಗಿರಬೇಕು.
আর অমাবস্যার দিনের একটি নির্দোষ গোবৎস এবং ছয়টি মেষশাবক ও একটি মেষ, এরাও নির্দোষ হবে।
7 ಅವನು ಹೋರಿಗೆ ಒಂದು ಎಫವನ್ನೂ ಟಗರಿಗೆ ಒಂದು ಎಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟನ್ನು ಎಫ ಒಂದಕ್ಕೆ ಎಣ್ಣೆಯ ಒಂದು ಹಿನ್ನಿನ ಜೊತೆಗೆ ಅವನು ಧಾನ್ಯ ಸಮರ್ಪಣೆಗಾಗಿ ಸಿದ್ಧಮಾಡಬೇಕು.
আর শস্য নৈবেদ্যরূপে তিনি ষাঁড়ের জন্য এক ঐফা, মেষের জন্য এক ঐফা ও মেষশাবকদের জন্য তাঁর হাতে যতটা উঠবে এবং প্রত্যেক শস্য ঐফার প্রতি এক হিন তেল দেবেন।
8 ರಾಜಕುಮಾರನು ಪ್ರವೇಶಿಸುವಾಗ, ಅವನು ಬಾಗಿಲಿನ ದ್ವಾರಮಂಟಪದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.
শাসক যখন আসবেন, তখন দরজার বারান্দার পথ দিয়ে প্রবেশ করবেন এবং সেই পথ দিয়ে বের হয়ে আসবেন।
9 “‘ಆದರೆ ದೇಶದ ಜನರು ನಿಶ್ಚಿತ ಹಬ್ಬಗಳಲ್ಲಿ ಯೆಹೋವ ದೇವರ ಮುಂದೆ ಬರುವಾಗ ಉತ್ತರದ ಬಾಗಿಲಿನಿಂದ ಪ್ರವೇಶಿಸಿ ಆರಾಧಿಸಿದ ಮೇಲೆ ಅವನು ದಕ್ಷಿಣದ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಮತ್ತು ದಕ್ಷಿಣ ಬಾಗಿಲಿನ ಮಾರ್ಗವಾಗಿ ಪ್ರವೇಶಿಸುವವನು ಉತ್ತರ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನ ಮಾರ್ಗವಾಗಿ ಪ್ರವೇಶಿಸಿದ ಬಾಗಿಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು. ಆದರೆ ಅದಕ್ಕೆ ಎದುರಾಗಿರುವ ಬಾಗಿಲಿನಿಂದ ಹೊರಗೆ ಹೋಗಬೇಕು.
আর দেশের লোক সব পর্বের দিনের যখন সদাপ্রভুর সামনে আসবে, তখন নত হওয়ার জন্যে যে ব্যক্তি উত্তর দরজার পথ দিয়ে প্রবেশ করবে, সে দক্ষিণ দরজার পথ দিয়ে বের হয়ে আসবে এবং যে ব্যক্তি যে দরজার পথ দিয়ে প্রবেশ করবে, সে সেখানে ফিরে যাবে না, কিন্তু নিজের সামনের পথ দিয়ে বের হয়ে আসবে।
10 ರಾಜಕುಮಾರನು ಅವರ ಮಧ್ಯದಲ್ಲೆ ಅವರು ಒಳಗೆ ಹೋಗುವಾಗ ಒಳಗೆ ಹೋಗಬೇಕು, ಹೊರಗೆ ಹೋಗುವಾಗ ಹೊರಗೆ ಬರಬೇಕು.
১০এবং নেতা তাদের মধ্যে থেকে তাদের প্রবেশের দিনের প্রবেশ করবেন ও তাদের বের হয়ে আসার দিন বের হবেন।
11 ನಿಶ್ಚಿತ ಹಬ್ಬಗಳಲ್ಲಿಯೂ ಸಭೆಗಳಲ್ಲಿಯೂ ಧಾನ್ಯ ಸಮರ್ಪಣೆಗೆ ಹೋರಿಗೆ ಒಂದು ಎಫವೂ ಟಗರಿಗೆ ಒಂದು ಎಫವೂ ಕುರಿಮರಿಗಳಿಗೆ ಅವರ ಕೈಲಾಗುವಷ್ಟು ಕೊಡಬೇಕು. ಎಫ ಒಂದಕ್ಕೆ ಎಣ್ಣೆಯ ಒಂದು ಹಿನ್ನು ಇರಬೇಕು.
১১আর পর্বে শস্য নৈবেদ্য ষাঁড়ের প্রতি এক ঐফা, মেষের প্রতি এক ঐফা ও মেষশাবকদের জন্য তাঁর হাতে যতটা উঠবে এবং ঐফার জন্য এক হিন তেল লাগবে।
12 “‘ರಾಜಕುಮಾರನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಯೆಹೋವ ದೇವರಿಗೆ ಸಮರ್ಪಿಸುವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಿಲನ್ನು ಅವನಿಗೆ ತೆರೆಯಬೇಕು. ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಹಾಗೆ ಸಮರ್ಪಣೆಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಿಲನ್ನು ಮುಚ್ಚಬೇಕು.
১২শাসক যখন নিজের ইচ্ছায় দেওয়া দান, সদাপ্রভুর উদ্দেশ্যে হোমবলি বা মঙ্গলার্থক বলিরূপ নিজের ইচ্ছায় দেওয়া দান উৎসর্গ করবেন, তখন তাঁর জন্য পূর্ব দিকের দরজা খুলে দিতে হবে। আর তিনি বিশ্রামবারে যেমন করেন, তেমনি নিজের হোমবলি ও মঙ্গলার্থক বলি উৎসর্গ করবেন, পরে বের হয়ে আসবেন এবং তাঁর বের হবার পর সেই দরজা বন্ধ করা যাবে।
13 “‘ನೀನು ಪ್ರತಿದಿನವೂ ಯೆಹೋವ ದೇವರಿಗೆ ಒಂದು ವರ್ಷದ ದೋಷರಹಿತವಾದ ಕುರಿಮರಿಯ ದಹನಬಲಿಯನ್ನು ಸಿದ್ಧಮಾಡಬೇಕು. ಹೀಗೆ ಪ್ರತಿದಿನವೂ ಮುಂಜಾನೆ ನಡೆಯಬೇಕು.
১৩এছাড়া, তুমি নিয়মিত সদাপ্রভুর উদ্দেশ্যে হোমবলির জন্য এক বছরের নির্দোষ একটি মেষশাবক উৎসর্গ করবে; প্রতি সকালে তা উৎসর্গ করবে।
14 ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಸುಮಾರು ಎರಡುವರೆ ಕಿಲೋಗ್ರಾಂ ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಸುಮಾರು ಒಂದುವರೆ ಲೀಟರ್ ಎಣ್ಣೆಯನ್ನು ಸಿದ್ಧಮಾಡಬೇಕು. ಇದು ಯೆಹೋವ ದೇವರಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದ ಧಾನ್ಯ ಸಮರ್ಪಣೆಯಾಗಿದೆ.
১৪এবং তুমি প্রতি সকালে তার সঙ্গে শস্য নৈবেদ্যরূপে ঐফার ষষ্ঠাংশ ও সেই সূক্ষ্ম সূজী আর্দ্র করার জন্যে হিনের তৃতীয়াংশ তেল, এই শস্য নৈবেদ্য সদাপ্রভুর উদ্দেশ্যে উৎসর্গ করবে, এই নিয়ম চিরকাল স্থায়ী।
15 ಹೀಗೆ ಅವರು ಕುರಿಮರಿಯನ್ನು ಧಾನ್ಯ ಸಮರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದ ದಹನಬಲಿಯನ್ನಾಗಿ ಸಿದ್ಧಮಾಡಬೇಕು.
১৫এই ভাবে প্রতি সকালে সেই মেষশাবক, নৈবেদ্য ও তেল উৎসর্গ করা যাবে। এটা চিরস্থায়ী হোমবলি।
16 “‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ರಾಜಕುಮಾರನು ತನ್ನ ಪುತ್ರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಏಕೆಂದರೆ ಅದು ಬಾಧ್ಯವಾಗಿ ಅವರ ಸೊತ್ತಾಗಿದೆ.
১৬প্রভু সদাপ্রভু এই কথা বলেন, শাসনকর্ত্তা যদি নিজের ছেলেদের মধ্যে কোনো এক জনকে কিছু দান করেন, তবে তা তার অধিকার হবে, তা তাঁর ছেলেদের হবে; এটা একটা অধিকার।
17 ಆದರೆ ಆತನು ತನ್ನ ಸೊತ್ತಿನೊಳಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರ್ಷದವರೆಗೂ ಅವನಿಗಾಗಿದ್ದು ಆಮೇಲೆ ಮತ್ತೆ ರಾಜಕುಮಾರನಿಗೆ ಸೇರಬೇಕು. ಅವನ ಸೊತ್ತು ಅವನ ಮಕ್ಕಳಿಗೆ ಮಾತ್ರ ಸೇರಬೇಕು. ಇದು ಅವರದೇ.
১৭কিন্তু তিনি যদি নিজের কোনো দাসকে নিজের অধিকারের কিছু দান করেন, তবে তা স্বাধীনতার বছর পর্যন্ত তার থাকবে, পরে আবার নেতার হবে; শুধু তাঁর ছেলেরা তাঁর অধিকার পাবে।
18 ಇದಾದ ಮೇಲೆ ರಾಜಕುಮಾರನು ಜನರ ಸೊತ್ತನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆಯೊಳಗಿಂದ ಅವರನ್ನು ತಳ್ಳಬಾರದು. ನನ್ನ ಜನರು ತಮ್ಮ ತಮ್ಮ ಬಾಧ್ಯತೆಯನ್ನು ಕಳೆದುಕೊಳ್ಳಬಾರದು. ತಂದೆಯು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಪುತ್ರರಿಗೆ ಸೊತ್ತನ್ನು ಕೊಡಬೇಕು.’”
১৮নেতা লোকদেরকে অধিকারচ্যুত করার জন্যে তাদের সম্পত্তি থেকে কিছু নেবেন না; তিনি নিজেরই অধিকারের মধ্যে থেকে নিজের ছেলেদেরকে অধিকার দেবেন; যেন আমার লোকেরা নিজেদের অধিকার থেকে ছিন্নভিন্ন হয়ে না যায়।
19 ಆಮೇಲೆ ಅವನು ನನ್ನನ್ನು ಬಾಗಿಲಿನ ಪಕ್ಕದಲ್ಲಿದ್ದ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಅವುಗಳ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.
১৯পরে শাসক দরজার পাশের প্রবেশের পথ দিয়ে আমাকে যাজকদের উত্তর দিকের পবিত্র ঘরগুলিতে আনলেন এবং দেখ! পশ্চিমদিকে এক জায়গা ছিল।
20 ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಬೇಯಿಸಿದ ಧಾನ್ಯ ಸಮರ್ಪಣೆಯನ್ನು ಸುಡುವಂತೆ ಏರ್ಪಡಿಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡುವುದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು,” ಎಂದು ಹೇಳಿದನು.
২০তিনি আমাকে বললেন, “এই জায়গায় যাজকেরা দোষার্থক বলি ও পাপের বলি সিদ্ধ করবে ও যেখানে তারা অবশ্যই শস্য নৈবেদ্য সেঁকবে; যেন তারা লোকদেরকে পবিত্র করার জন্য তা বাইরের উঠানে নিয়ে না যায়।”
21 ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆಗಳನ್ನು ಹಾದುಹೋಗುವಂತೆ ಮಾಡಿದನು. ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳವನ್ನು ನಾನು ಕಂಡೆನು.
২১পরে তিনি আমাকে বাইরের উঠানে এনে সেই উঠানের চার কোণ দিয়ে অতিক্রম করালেন; আর দেখ, সেখানে এক উঠান ছিল এর প্রত্যেক কোনায় উঠান ছিল।
22 ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು.
২২উঠানের চার কোণে চল্লিশ হাত দীর্ঘ ও ত্রিশ হাত প্রস্থ ছিল। সেই চার কোণের উঠানগুলির একই পরিমাণ ছিল;
23 ಅವುಗಳಲ್ಲಿ ಎಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಒಲೆಗಳಿದ್ದವು.
২৩চারটীর মধ্যে প্রত্যেকের চারিদিকে পাথরের শ্রেণী ছিল এবং পাথরের-শ্রেণীর তলায় রান্নার উনুন ছিল।
24 ಆಮೇಲೆ ಅವನು ನನಗೆ, “ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂಥ ಸ್ಥಳಗಳು ಎಂದು ಹೇಳಿದನು.”
২৪তিনি আমাকে বললেন, “এই জায়গায় গৃহের পরিচারকেরা লোকদের বলি সিদ্ধ করবে।”

< ಯೆಹೆಜ್ಕೇಲನು 46 >