< ಯೆಹೆಜ್ಕೇಲನು 48 >

1 “ಗೋತ್ರಗಳ ಹೆಸರುಗಳು ಯಾವುವೆಂದರೆ: “ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಯೂ ಹಾಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಕಡೆಗಳು, ದಾನ್ ಗೋತ್ರಕ್ಕೆ ಒಂದು ಭಾಗವಾಗಿದೆ.
সেই বংশগুলির নাম হল এই। উত্তরপ্রান্ত থেকে হিৎলোনের পথের পাশ ও হমাতের প্রবেশস্থানের কাছ দিয়ে হৎসর-ঐনন পর্যন্ত দম্মেশকের সীমাতে, উত্তরদিকে হমাতের পাশে পূর্বপ্রান্ত থেকে মহাসমুদ্র পর্যন্ত দানের এক অংশ হবে।
2 ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದವರೆಗೂ ಆಶೇರನಿಗೆ ಒಂದು ಭಾಗವಾಗಿದೆ.
আর দানের সীমার কাছে পূর্বপ্রান্ত হইতে পশ্চিমপ্রান্ত পর্যন্ত আশেরের এক অংশ হবে।
3 ಆಶೇರನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೆ ನಫ್ತಾಲಿಗೆ ಒಂದು ಭಾಗವಾಗಿದೆ.
দক্ষিণ সীমার কাছে আশের নপ্তালির এক অংশ হবে, যা পূর্বপ্রান্ত থেকে পশ্চিমপ্রান্ত পর্যন্ত ব্যাপ্ত।
4 ನಫ್ತಾಲಿಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೆ ಮನಸ್ಸೆಗೆ ಒಂದು ಭಾಗ.
দক্ষিণ সীমার কাছে নপ্তালি মনঃশির এক অংশ হবে, যা পূর্বপ্রান্ত থেকে পশ্চিমপ্রান্ত পর্যন্ত ব্যাপ্ত।
5 ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಎಫ್ರಾಯೀಮಿಗೆ ಒಂದು ಭಾಗ.
মনঃশির দক্ষিণ সীমা পূর্বপ্রান্ত থেকে পশ্চিমপ্রান্ত পর্যন্ত ইফ্রয়িমের এক অংশ হবে।
6 ಎಫ್ರಾಯೀಮ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದವರೆಗೆ ರೂಬೇನ್ ಗೆ ಒಂದು ಭಾಗ.
ইফ্রয়িমের দক্ষিণ সীমা পূর্বপ্রান্ত থেকে পশ্চিমপ্রান্ত পর্যন্ত রুবেণের এক অংশ হবে।
7 ರೂಬೇನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ, ಪಶ್ಚಿಮದ ಕಡೆಯವರೆಗೂ ಯೆಹೂದಕ್ಕೆ ಒಂದು ಭಾಗ.
রুবেণের সীমার কাছে পূর্বপ্রান্ত থেকে পশ্চিমপ্রান্ত পর্যন্ত যিহূদার এক অংশ হবে।
8 “ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯವರೆಗೂ ಇರಬೇಕು.
যিহূদার সীমার কাছে পূর্বপ্রান্ত থেকে পশ্চিমপ্রান্ত পর্যন্ত উপহার-ভূমি থাকবে; তোমার প্রস্থে পঁচিশ হাজার হাত ও পূর্বপ্রান্ত থেকে পশ্চিমপ্রান্ত পর্যন্ত দীর্ঘতায় অন্যান্য অংশের মতো এক অংশ উপহারের জন্য দেবে ও তার মাঝখানে মন্দির থাকবে।
9 “ನೀವು ಯೆಹೋವ ದೇವರಿಗೆ ಅರ್ಪಿಸುವಂತಹ ಕಾಣಿಕೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಗಿರಬೇಕು.
সদাপ্রভুর উদ্দেশ্যে তোমার যে ভূমি নিবেদন করবে, তা পঁচিশ হাজার হাত দীর্ঘ ও দশ হাজার হাত প্রস্থ হবে।
10 ಅವರಿಗಾಗಿ ಎಂದರೆ ಯಾಜಕರಿಗಾಗಿ ಇದೇ ಪರಿಶುದ್ಧ ಕಾಣಿಕೆ ಆಗಿರಬೇಕು. ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು. ಅದರ ಮಧ್ಯದಲ್ಲಿ ಯೆಹೋವ ದೇವರ ಪರಿಶುದ್ಧ ಸ್ಥಳವೂ ಇರಬೇಕು.
১০সেই পবিত্র উপহার-ভূমির অংশ যাজকদের জন্য হবে; তা উত্তরদিকে পঁচিশ হাজার হাত দীর্ঘ, পশ্চিমদিকে দশ হাজার হাত প্রস্থ, পূর্বদিকে দশ হাজার হাত প্রস্থ ও দক্ষিণদিকে পঁচিশ হাজার হাত দীর্ঘ; তার মাঝখানে সদাপ্রভুর পবিত্র স্থানে থাকবে।
11 ಇದು ನನಗೆ ನಂಬಿಗಸ್ತರಾಗಿ ನಡೆದುಕೊಂಡ ಚಾದೋಕನ ಪುತ್ರರಲ್ಲಿ ಪ್ರತಿಷ್ಠಿತರಾಗಿರುವ ಯಾಜಕರದಾಗಿರಬೇಕು; ಇಸ್ರಾಯೇಲರು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ಚಾದೋಕಿನವರು ತಪ್ಪಿಹೋಗಲಿಲ್ಲ.
১১তা সাদোক-সন্তানদের মধ্যে পবিত্রীকৃত যাজকদের জন্য হবে, তারা আমার সেবা বিশ্বস্তভাবে করেছে; ইস্রায়েল-সন্তানদের ভ্রান্তির দিনের লেবীয়েরা যেমন ভ্রান্ত হয়েছিল ওরা তেমন ভ্রান্ত হয়নি।
12 ಮೀಸಲಾಗಿರುವ ಈ ನಾಡಿನ ವಿಶೇಷ ಕಾಣಿಕೆಯು ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧವಾದದ್ದಾಗಿರಬೇಕು.
১২লেবীয়দের সীমার কাছে দেশের উপহার-ভূমি তাদের হবে, তা খুব পবিত্র।
13 “ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಒಟ್ಟು ಉದ್ದ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ.
১৩আর যাজকদের সীমার পাশে লেবীয়েরা পঁচিশ হাজার হাত দীর্ঘ ও দশ হাজার হাত প্রস্থ ভূমি পাবে; সমগ্রের দীর্ঘতা পঁচিশ হাজার ও প্রস্থ দশ হাজার হাত হবে।
14 ಅವರು ಅದರಲ್ಲಿ ಏನನ್ನೂ ಮಾರಬಾರದು, ಏನನ್ನೂ ಬದಲಾಯಿಸಬಾರದು. ದೇಶದ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವ ದೇವರಿಗೆ ಪರಿಶುದ್ಧವಾಗಿದೆ.
১৪তারা তার কিছু বিক্রি করবে না বা পরিবর্তন করবে না এবং দেশের সেই প্রথম ফল বিভক্ত হবে না, কারণ এটা সম্পূর্ণ সদাপ্রভুর উদ্দেশ্যে পবিত্র।
15 “ಸುಮಾರು ಎರಡೂವರೆ ಕಿಲೋಮೀಟರ್ ಅಗಲ ಮತ್ತು ಸುಮಾರು ಹದಿಮೂರು ಕಿಲೋಮೀಟರ್ ಉದ್ದದ ಉಳಿದ ಪ್ರದೇಶವು ನಗರದ ಸಾಮಾನ್ಯ ಬಳಕೆಗಾಗಿ, ಇದು ಮನೆಗಳು ಮತ್ತು ಹುಲ್ಲುಗಾವಲುಗಳನ್ನು ಹೊಂದಿರುತ್ತದೆ. ನಗರವು ಅದರ ಮಧ್ಯದಲ್ಲಿ ಇರುತ್ತದೆ;
১৫আর পঁচিশ হাজার হাত দীর্ঘ সেই ভূমির সামনে প্রস্থ পরিমাণে যে পাঁচ হাজার হাত বাকি থাকে, তা সাধারণ স্থান বলে শহরের, বসবাসের ও পশু চরাবার জন্য হবে; শহরটি তার মাঝখানে থাকবে।
16 ಮತ್ತು ಅದರ ಅಳತೆಯು ಈ ರೀತಿ ಇರುತ್ತದೆ: ಉತ್ತರದ ಕಡೆಗೆ ಸುಮಾರು ಎರಡೂವರೆ ಕಿಲೋಮೀಟರ್, ದಕ್ಷಿಣದ ಕಡೆಗೆ ಸುಮಾರು ಎರಡೂವರೆ ಕಿಲೋಮೀಟರ್, ಪೂರ್ವಕ್ಕೆ ಸುಮಾರು ಎರಡೂವರೆ ಕಿಲೋಮೀಟರ್, ಪಶ್ಚಿಮಕ್ಕೆ ಸುಮಾರು ಎರಡೂವರೆ ಕಿಲೋಮೀಟರ್.
১৬তার পরিমাণ এইরকম হবে; উত্তরদিকের চার হাজার পাঁচশো হাত, দক্ষিণদিকের চার হাজার পাঁচশো হাত ও পশ্চিমদিকের চার হাজার পাঁচশো হাত।
17 ಪಟ್ಟಣದ ಹುಲ್ಲುಗಾವಲು ಹೀಗಿರಬೇಕು. ಉತ್ತರದಲ್ಲಿ 135 ಮೀಟರ್ ದಕ್ಷಿಣದಲ್ಲಿ 135 ಮೀಟರ್ ಪೂರ್ವದಲ್ಲಿ 135 ಮೀಟರ್; ಪಶ್ಚಿಮದಲ್ಲಿ 135 ಮೀಟರ್.
১৭আর শহরের তৃণক্ষেত্র থাকবে; উত্তরদিকে দুশো পঞ্চাশ হাত, দক্ষিণদিকে দুশো পঞ্চাশ হাত, পূর্বদিকে দুশো পঞ্চাশ হাত ও পশ্চিমদিকে দুশো পঞ্চাশ হাত।
18 ಕಾಣಿಕೆಯಾದ ಪರಿಶುದ್ಧಭಾಗಕ್ಕೆ ಎದುರಾಗಿರುವಂಥದ್ದೂ ಉದ್ದದಲ್ಲಿ ಉಳಿದ ಭೂಮಿಯು ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧಭಾಗಕ್ಕೆ ಎದುರಾಗಿರಬೇಕು. ಅದರ ಆದಾಯವು ಪಟ್ಟಣದಲ್ಲಿ ಸೇವೆಮಾಡುವವರ ಆಹಾರಕ್ಕಾಗುವಷ್ಟು ಇರಬೇಕು.
১৮আর পবিত্র উপহার-ভূমির সামনে বাকি জায়গা দীর্ঘ পরিমাণে পূর্বদিকে দশ হাজার হাত ও পশ্চিমে দশ হাজার হাত হবে, আর তা পবিত্র উপহার-ভূমির সামনে থাকবে, এর উৎপন্ন জিনিসস শহরের কর্মচারী লোকদের খাবারের জন্য হবে।
19 ಪಟ್ಟಣದಲ್ಲಿ ಸೇವೆಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದಲೇ ಅದರಲ್ಲಿಯೇ ಸೇವೆಮಾಡಬೇಕು.
১৯আর ইস্রায়েলের সমস্ত বংশের মধ্যে থেকে শহরের শ্রমজীবীরা তা চাষ করবে।
20 ಎಲ್ಲಾ ಕಾಣಿಕೆಯ ಸ್ಥಳವು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು. ನೀವು ಪರಿಶುದ್ಧ ವಿಶೇಷ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸೊತ್ತಿನ ಸಂಗಡ ಅರ್ಪಿಸಬೇಕು.
২০সেই উপহার-ভূমি সবশুদ্ধ পঁচিশ হাজার হাত দীর্ঘ ও পঁচিশ হাজার হাত প্রস্থ হবে; তোমার শহরের অধিকারশুদ্ধ পবিত্র উপহার ভূমি নিবেদন করবে।
21 “ಪರಿಶುದ್ಧ ಭಾಗವೂ ಪಟ್ಟಣದ ಸೊತ್ತಿಗೂ ಈ ಕಡೆಗೂ ಆ ಕಡೆಗೂ ಉಳಿದ ಭೂಮಿಯು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರುವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂಥದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಮೀಸಲಾದ ಪವಿತ್ರ ಕ್ಷೇತ್ರವೂ ಪವಿತ್ರಾಲಯವೂ ಅದರ ಮಧ್ಯದಲ್ಲಿರುವುವು.
২১পবিত্র উপহার-ভূমির ও শহরের অধিকারের দুই পাশে যে সব অবশিষ্ট ভূমি, তা নেতার হবে; অর্থাৎ পঁচিশ হাজার হাত বিস্তৃত উপহার-ভূমি থেকে পূর্বসীমা পর্যন্ত ও পশ্চিমদিকে পঁচিশ হাজার হাত বিস্তৃত সেই উপহার-ভূমি থেকে পশ্চিমসীমা পর্যন্ত অন্য সব অংশের সামনে নেতার অংশ হবে এবং পবিত্র উপহার-ভূমি ও গৃহের পবিত্র স্থান তার মধ্যে অবস্থিত হবে।
22 ಇದಲ್ಲದೆ ಲೇವಿಯರ ಸೊತ್ತಿನಿಂದ ಮೊದಲುಗೊಂಡು ಪಟ್ಟಣದ ಸೊತ್ತಿನಿಂದ ಪ್ರಧಾನನ ನಡುವೆ ಇರುವಂಥದ್ದು ಯೆಹೂದದ ಮೇರೆಗೂ ಬೆನ್ಯಾಮೀನನ ಮೇರೆಗೂ ಮಧ್ಯದಲ್ಲಿರುವಂಥದ್ದೂ ಪ್ರಧಾನನಿಗೆ ಸಲ್ಲಬೇಕು.
২২আর নেতার পাওয়া অংশের মধ্যে অবস্থিত লেবীয়দের অধিকার ও শহরের অধিকার ছাড়া যা যিহূদার সীমার ও বিন্যামীনের সীমার মধ্যে আছে, তা নেতার হবে।
23 “ಮಿಕ್ಕ ಗೋತ್ರಗಳ ವಿಷಯವೇನೆಂದರೆ: “ಪೂರ್ವದ ಕಡೆಯಿಂದ ಪಶ್ಚಿಮದವರೆಗೂ ಬೆನ್ಯಾಮೀನನ ಒಂದು ಭಾಗವಾಗಿದೆ.
২৩আর বাকি বংশগুলির এই সব অংশ হবে; পূর্বপ্রান্ত থেকে পশ্চিমপ্রান্ত পর্যন্ত বিন্যামীনের এক অংশ।
24 ಬೆನ್ಯಾಮೀನನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದವರೆಗೂ ಸಿಮೆಯೋನ್ ಒಂದು ಭಾಗವಾಗಿದೆ.
২৪বিন্যামীনের সীমার কাছে পূর্বপ্রান্ত থেকে পশ্চিমপ্রান্ত পর্যন্ত শিমিয়োনের এক অংশ হবে।
25 ಸಿಮೆಯೋನ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಇಸ್ಸಾಕಾರ್ ನ ಒಂದು ಭಾಗವಾಗಿದೆ.
২৫শিমিয়োনের সীমার কাছে পূর্বপ্রান্ত থেকে পশ্চিমপ্রান্ত পর্যন্ত ইষাখরের এক অংশ হবে।
26 ಇಸ್ಸಾಕಾರ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಜೆಬುಲೂನ್ ನ ಒಂದು ಭಾಗವಾದೆ;
২৬ইষাখরের সীমার কাছে পূর্বপ্রান্ত থেকে পশ্চিমপ্রান্ত পর্যন্ত সবূলূনের এক অংশ হবে।
27 ಜೆಬುಲೂನ್ ನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಗಾದ್ ನ ಒಂದು ಭಾಗವಾಗಿದೆ.
২৭সবূলূনের সীমার কাছে পূর্বপ্রান্ত থেকে পশ্চিমপ্রান্ত পর্যন্ত গাদের এক অংশ হবে।
28 ಗಾದಿನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು.
২৮আর গাদের সীমার কাছে দক্ষিণপ্রান্তের দিকে তামর থেকে কাদেশে অবস্থিত মরীবৎ জলাশয় মিশরের ছোট নদী ও মহাসমুদ্র পর্যন্ত দক্ষিণ সীমা হবে।
29 “ನೀವು ಇಸ್ರಾಯೇಲಿನ ಗೋತ್ರಗಳಿಗೆ ಚೀಟುಹಾಕಿ ಬಾಧ್ಯವಾಗಿ ಹಂಚಿಕೊಡಬೇಕಾದ ದೇಶವು ಇದೆ. ಅದರ ಭಾಗಗಳು ಇವೇ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
২৯তোমার ইস্রায়েল-বংশগুলির অধিকারের জন্য যে দেশ গুলিবাঁটের মাধ্যমে বিভাগ করবে, তা এই এবং তাদের ঐ সব অংশ, এটা প্রভু সদাপ্রভু বলেন।
30 “ಪಟ್ಟಣದ ಹೊರಗೆ ನಿರ್ಗಮನ ಹೀಗಿರಬೇಕು: “ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು.
৩০আর শহরের এই সব বাইরে যাওয়ার রাস্তা হবে; উত্তর পাশে পরিমাপে চার হাজার পাঁচশো হাত হবে।
31 ಪಟ್ಟಣದ ಬಾಗಿಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು. ಉತ್ತರಕ್ಕೆ ಮೂರು ಬಾಗಿಲುಗಳು: ರೂಬೇನ್ ಬಾಗಿಲು ಒಂದು, ಯೆಹೂದ ಬಾಗಿಲು ಒಂದು, ಲೇವಿ ಬಾಗಿಲು ಒಂದು.
৩১আর শহরের তিনটে দরজা ইস্রায়েল-বংশগুলির নাম অনুসারে হবে; রুবেণের জন্য এক দরজা, যিহূদার জন্য এক দরজা ও লেবির জন্য এক দরজা।
32 ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ಪೂರ್ವದಲ್ಲಿ ಮೂರು ಬಾಗಿಲುಗಳಿರುತ್ತವೆ: ಯೋಸೇಫ್ ಬಾಗಿಲು ಒಂದು, ಬೆನ್ಯಾಮೀನನ ಬಾಗಿಲು, ಒಂದು ದಾನ್ ಬಾಗಿಲು ಒಂದು.
৩২পূর্ব পাশে চার হাজার পাঁচশো হাত, আর তিনটে দরজা হবে; যোষেফের জন্য এক দরজা, বিন্যামীনের জন্য এক দরজা, দানের জন্য এক দরজা।
33 ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ದಕ್ಷಿಣದಲ್ಲಿ ಮೂರು ಬಾಗಿಲುಗಳಿರುತ್ತವೆ: ಒಂದು ಸಿಮೆಯೋನ್ ಬಾಗಿಲು, ಒಂದು ಇಸ್ಸಾಕಾರ್ ನ ಬಾಗಿಲು, ಒಂದು ಜೆಬುಲೂನ್ ನ ಬಾಗಿಲು.
৩৩পূর্ব দিকে পরিমাণে চার হাজার পাঁচশো হাত, আর তিনটে দরজা হবে; শিমিয়োনের জন্য এক দরজা, ইষাখরের জন্য এক দরজা ও সবূলূনের জন্য এক দরজা।
34 ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ಪಶ್ಚಿಮದಲ್ಲಿ ಮೂರು ಬಾಗಿಲುಗಳಿರುತ್ತವೆ: ಒಂದು ಗಾದ್ ಬಾಗಿಲು, ಇನ್ನೊಂದು ಆಶೇರ್ ಬಾಗಿಲು, ಮತ್ತೊಂದು ನಫ್ತಾಲಿ ಬಾಗಿಲು.
৩৪আর পশ্চিম দিকে চার হাজার পাঁচশো হাত ও তার তিনটে দরজা হবে; গাদের জন্য এক দরজা, আশেরের জন্য এক দরজা ও নপ্তালির জন্য এক দরজা।
35 “ಸುತ್ತಲೂ ಹದಿನೆಂಟು ಸಾವಿರ ಅಳತೆಗಳು. “ಆ ದಿನದಿಂದ ಆ ಪಟ್ಟಣದ ಹೆಸರು, ‘ಯೆಹೋವ ದೇವರ ನೆಲೆ’” ಎಂಬುದೇ ಆಗಿರುವುದು.
৩৫শহরের সবদিকের আঠার হাজার হাত দূরত্ব হবে; আর সেই দিন থেকে শহরটির এই নাম হবে, “সদাপ্রভু সমা।”

< ಯೆಹೆಜ್ಕೇಲನು 48 >