< ಯೆಹೆಜ್ಕೇಲನು 7 >

1 ಯೆಹೋವ ದೇವರ ವಾಕ್ಯವು ನನಗೆ ಬಂದಿತು:
Opet mi dođe riječ Jahvina i reče:
2 “ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಇಸ್ರಾಯೇಲ್ ದೇಶಕ್ಕೆ ಹೀಗೆ ಹೇಳುತ್ತಾರೆ: “‘ಅಂತ್ಯವು ಬಂದಿದೆ! ಈ ದೇಶದ ನಾಲ್ಕು ಮೂಲೆಗಳಲ್ಲಿಯೂ ಅಂತ್ಯವು ಬಂದಿದೆ!
“Ti, sine čovječji, reci: Ovako govori Jahve Gospod zemlji Izraelovoj: 'Primiče se kraj: bliži se konac zemlji na sve četiri strane svijeta!
3 ಈಗಲೇ ನಿನಗೆ ಅಂತ್ಯವು ಬಂದಿದೆ. ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡುತ್ತೇನೆ. ನಿನ್ನ ನಡತೆಯ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯ ಕಾರ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿತೀರಿಸುವೆನು.
Sada je i tebi kraj: gnjev ću svoj na te izliti, sudit ću ti prema putovima tvojim i na te ću oboriti sve gadosti tvoje!
4 ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’
I moje te oči neće požaliti, neću ti se smilovati, nego ću te nagraditi prema putovima tvojim, tvoje će gadosti u tebi ostati. I znat ćete da sam ja Jahve.'”
5 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಕೇಡು! ಎಂದೂ ಕೇಳದ ಕೇಡು, ಇಗೋ ಬಂದಿತು.
Ovako govori Jahve: “Jedna nesreća, evo, dolazi!
6 ಅಂತ್ಯವು ಬಂದಿತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ ಬಂದೇ ಬಂತು.
Kraj dolazi, dolazi ti kraj, evo, dolazi!
7 ಓ ದೇಶ ನಿವಾಸಿಯೇ, ನಿನಗಾಗಿ ವಿನಾಶದ ದಿನ ಬಂದಿತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು. ಪರ್ವತಗಳ ಮೇಲೆ ಸಂತೋಷವಲ್ಲ ಭೀತಿಯಿದೆ.
Kolo ti udesa dolazi, stanovniče zemlje! Dolazi tvoj čas, bliži se dan: strava je, a ne radost u gorama.
8 ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.
Eto, uskoro ću na te izliti gnjev i iskalit ću na tebi srdžbu svoju! Sudit ću ti prema putovima tvojim i oborit ću na te sve gadosti tvoje.
9 ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.
I moje te oči neće požaliti, neću ti se smilovati, nego ću ti platiti prema putovima tvojim i tvoje će gadosti u tebi ostati! I spoznat ćete da sam ja Jahve koji bije.
10 “‘ಇಗೋ ಆ ದಿನವು ಬಂತು, ನೋಡು ವಿನಾಶದ ದಿನ ಹೊರಟುಹೋಯಿತು, ಕೋಲು ಚಿಗುರಿತು, ಅಹಂಕಾರವು ಅರಳಿತು,
Evo, evo dolazi, kolo ti udesa dolazi, prut već cvjeta i oholost pupa,
11 ಬಲಾತ್ಕಾರವು ದುಷ್ಟತನದ ಕೋಲಿನಲ್ಲಿ ಬೆಳೆದಿತ್ತು. ಅವರಲ್ಲಿಯೂ ಅವರ ಜನಸಮೂಹದಲ್ಲಿಯೂ, ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಮೌಲ್ಯವು ಇರುವುದಿಲ್ಲ.
a nasilje se podiže kao žezlo bezbožnosti! I nitko neće ostati od njih, nitko od njihova mnoštva. Ništa od njihove buke, nema u njima vrijednosti.
12 ಸಮಯವು ಬಂತು, ದಿನವು ಬಂದೇಬಿಟ್ಟಿತು. ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, ಮಾರುವವನು ದುಃಖಿಸದಿರಲಿ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ.
Ide vrijeme, bliži se dan! Tko kupuje, neka se ne raduje, a tko prodaje, neka ne tuguje, jer se gnjev izlijeva na sve bogatstvo njegovo.
13 ಮಾರಿದವನು ಎಷ್ಟು ವರ್ಷ ಬದುಕಿದರೂ, ಮಾರಿದ ಸೊತ್ತು ಅವನ ವಶಕ್ಕೆ ತಿರುಗಿ ಬಾರದು. ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಎಂದಿಗೂ ತಿರುಗದು, ಯಾರೂ ತಮ್ಮ ಪಾಪಗಳಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು.
Jer tko proda, neće više dobiti što je prodao, i nitko neće bezakonjem ojačati život!
14 “‘ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧ ಮಾಡಿಕೊಂಡಿದ್ದಾರೆ. ಆದರೆ ಯಾರೂ ಯುದ್ಧಕ್ಕೆ ಹೋಗುವುದಿಲ್ಲ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ಕೋಪವಿದೆ.
Trube trublje i sve je spremno, ali nitko ne kreće u boj, jer gnjev se moj izlijeva na sve bučno mnoštvo.
15 ಹೊರಗೆ ಖಡ್ಗವೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊರಗಿರುವವರನ್ನು ಖಡ್ಗವು ಸಾಯಿಸುವುದು, ಪಟ್ಟಣದಲ್ಲಿರುವವರನ್ನು ವ್ಯಾಧಿಯೂ ಕ್ಷಾಮವೂ ತಿಂದುಬಿಡುವುದು.
Vani - mač, a unutra - kuga i glad! I tko je u polju, od mača će poginuti, a tko u gradu, glad će ga i kuga uništiti.
16 ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು. ಪ್ರತಿಯೊಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಗೋಳಾಡಿ, ಪರ್ವತಗಳ ಮೇಲೆ ಇರುವರು.
Koji uteku, sklonit će se u gore kao dolinski golubovi, a ja ću ih sve istrijebiti, svakoga zbog bezakonja njegova,
17 ಕೈಗಳೆಲ್ಲಾ ಜೋತಾಡುವುವು, ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ಆಗುವುವು.
i sve će ruke klonuti, a koljena će svima malaksati.
18 ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡುವುದು. ಎಲ್ಲಾ ಮುಖಗಳ ಮೇಲೆ ನಾಚಿಕೆಯೂ, ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವುವು.
U kostrijet će se odjenuti, trepet će ih obuzeti, sva će lica sramota pokriti, sve će im glave oćelavjeti!
19 “‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ವಸ್ತುವಿನಂತಿರುವುದು. ಅವರ ಬೆಳ್ಳಿ ಬಂಗಾರಗಳು ಯೆಹೋವ ದೇವರ ಕೋಪದ ದಿವಸದಲ್ಲಿ ಅವರನ್ನು ಪಾರು ಮಾಡಲಾರವು. ಇದರಿಂದ ಅವರ ಹಸಿವು ನೀಗುವುದಿಲ್ಲ, ಅವರ ಹೊಟ್ಟೆಗಳನ್ನು ತುಂಬಿಸುವುದಿಲ್ಲ. ಏಕೆಂದರೆ ಅವರ ಆಸ್ತಿಯು ಪಾಪ ಕೃತ್ಯಗಳಿಗೆ ಕಾರಣವಾಗಿತ್ತು.
Srebro svoje pobacat će na ulice, a zlato će smatrati izmetom: u dan srdžbe Jahvine ni srebro ni zlato neće ih izbaviti, duše im neće moći nasititi ni trbuha napuniti, jer se o to spotakoše na grijeh.
20 ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ
Uzoholiše se zbog divnoga nakita svojega; od njega napraviše kumire - grozote i gadosti svoje: zato im ga pretvorih u izmet.
21 ನಾನು ಅದನ್ನು ವಿದೇಶಿಯರ ಕೈಗೆ ಕೊಳ್ಳೆಯಾಗಿಯೂ, ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು. ಅವರು ಅದನ್ನು ಅಪವಿತ್ರಪಡಿಸುವರು.
Dat ću ga u ruke tuđincima da oplijene, razgrabe i oskvrnu.
22 ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು. ನನ್ನ ಅತ್ಯಂತ ಅಮೂಲ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರಪಡಿಸುವರು.
Odvratit ću od njih lice svoje: i neka se samo oskvrnjuje moja dragocjenost, neka u nju uđu provalnici i neka je oskvrnu!
23 “‘ಸರಪಳಿಯನ್ನು ತಯಾರುಮಾಡು. ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.
Spremaj lance, jer je zemlja puna krvi i zločina koji zaslužuju smrt i grad prepun nasilja!
24 ಆದಕಾರಣ ನಾನು ಇತರ ಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶಪಡಿಸಿಕೊಳ್ಳುವರು. ನಾನು ಬಲಿಷ್ಠರ ಅಹಂಕಾರವನ್ನು ನಿಲ್ಲಿಸುತ್ತೇನೆ. ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವುವು.
Zato ću dovesti najgore narode da baštine njihove domove. Slomit ću oholost nasilnika, i svetišta njihova bit će oskvrnjena.
25 ನಾಶವು ಬರುತ್ತದೆ. ಅವರು ಸಮಾಧಾನವನ್ನು ಹುಡುಕುತ್ತಾರೆ, ಆದರೆ ಅದು ಇರುವುದಿಲ್ಲ.
Dolazi tjeskoba! Tražit će mir, a mira biti neće!
26 ಕೇಡಿನ ಮೇಲೆ ಕೇಡು ಬರುವುದು, ಸುದ್ದಿಯ ಮೇಲೆ ಸುದ್ದಿ ಬರುವುದು, ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು. ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು, ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು.
Dolazit će nevolja za nevoljom, jedna zla vijest za drugom! I tražit će se viđenje u proroka; u svećenika neće više biti Zakona ni u starješina savjeta!
27 ಅರಸನು ದುಃಖಿಸುವನು, ರಾಜಕುಮಾರನಿಗೆ ನಿರಾಶೆಯು ಅವನ ಉಡುಪಾಗಿರುತ್ತದೆ. ದೇಶದ ಜನರ ಕೈಗಳು ತತ್ತರಿಸುವುವು, ಅವರ ದುರ್ನಡತೆಗೆ ತಕ್ಕ ಪ್ರತೀಕಾರ ಮಾಡುವೆನು. ಅವರ ದುಷ್ಕರ್ಮಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. “‘ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’”
Kralj će protužiti, a kneza će spopasti užas i ruke će puku zadrhtati, jer ću ih nagraditi prema putovima njihovim i sudit ću im prema sudovima njihovim. I znat će da sam ja Jahve.”

< ಯೆಹೆಜ್ಕೇಲನು 7 >