< ಯೆಹೆಜ್ಕೇಲನು 9 >

1 ಆಗ ಅವರು ದೊಡ್ಡ ಧ್ವನಿಯಿಂದ, “ನಗರದ ಜನರಿಗೆ ನ್ಯಾಯತೀರಿಸಲು ನೇಮಕವಾಗಿರುವವರೇ, ನಿಮ್ಮ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ,” ಎಂದು ಹೇಳುವುದನ್ನು ನಾನು ಕೇಳಿದೆನು.
以後我聽見他高聲喊說:「懲罰此城的,快來! 每人手中應拿著毀滅的工具。」
2 ಕೂಡಲೇ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು. ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.
看,有六個人從上邊朝北的門走來,每人拿著破壞的武器。他們中間有一個人身穿細麻衣,腰間帶著書記的墨盒。他們來到,就站在銅祭壇旁。
3 ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ, ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು. ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಯೆಹೋವ ದೇವರು ಕೂಗಿ ಅವನಿಗೆ,
那停在革魯賓上的以色列的天主光榮,就由革魯賓身上升起,來到聖殿的門限上,叫將那身穿細麻衣,腰間帶著墨盒的人召來。
4 “ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು.
上主對他說:「你要走遍此城,即走遍耶路撒冷,凡因城充發生的醜惡之事而悲痛哀號的人,要在他們額上劃一個十字記號。」
5 ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ, ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ,
以後我聽見他向其餘的人說:「你們也跟著他走遍全城擊殺,你們的眼不要憐視,一點也不要顧惜;
6 ವೃದ್ಧ, ಯುವಕ, ಯುವತಿಯರನ್ನು ಮತ್ತು ಎಳೆಗೂಸುಗಳನ್ನು ಮತ್ತು ಹೆಂಗಸರನ್ನು ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ, ಅವನನ್ನು ಮುಟ್ಟಬೇಡಿರಿ. ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ” ಎಂದಾಗ, ಅವರು ಆಲಯದ ಮುಂದೆ ಇದ್ದ ಹಿರಿಯರಿಂದ ಪ್ರಾರಂಭಿಸಿದರು.
把老人、少年、處女、嬰兒和婦女都要殺盡滅絕;但凡額上有十字記號的人,不可走近。你們從聖所這裏開始。」果然他們就從在聖殿前的長老開始。
7 ದೇವರು ಅವರಿಗೆ, “ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿರಿ, ಹೊರಡಿರಿ,” ಎಂದು ಹೇಳಿದರು. ಆಗ ಅವರು ಹೊರಟು ನಗರದಲ್ಲಿದ್ದವರನ್ನು ಕೊಂದರು.
以後又向他們說:「你們要玷污這聖殿,使被殺者充塞整個庭院,然後出去!」他們就出去,在城中擊殺。
8 ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನೀವು ಯೆರೂಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿರಾ?” ಎಂದೆನು.
他們去擊殺時,只留下我一人。我就伏地掩面呼求說:「哎! 吾主上主,你在耶路撒冷發洩你的憤怒,要滅絕以色列的遺民嗎﹖」
9 ಆಗ ಅವರು ನನಗೆ, “ಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ. ದೇಶವು ರಕ್ತದಿಂದ ತುಂಬಿದೆ, ಪಟ್ಟಣವು ಅಧರ್ಮದಿಂದ ತುಂಬಿದೆ. ‘ಯೆಹೋವ ದೇವರು ದೇಶವನ್ನು ತೊರೆದುಬಿಟ್ಟಿದ್ದಾರೆ, ಯೆಹೋವ ದೇವರು ನೋಡುವುದಿಲ್ಲ,’ ಎಂದು ಅವರು ಹೇಳುತ್ತಾರೆ.
他回答我說:「以色列和猶大的家族,實在罪大惡極;此地充滿了血債,滿城都是暴行,他們還說:上主已離棄了此地,上主看不見。
10 ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.
因此,我的眼也決不憐視,一點也不顧惜;反而我要把他們的行為,歸在他們頭上。」
11 ನಾರುಮಡಿಯನ್ನು ಧರಿಸಿಕೊಂಡು ದೌತಿಯನ್ನು ತನ್ನ ನಡುವಿಗೆ ಕಟ್ಟಿಕೊಂಡಂಥ ಆ ಮನುಷ್ಯನು, “ವರ್ತಮಾನವನ್ನು ತಂದು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ,” ಎಂದನು.
看啊,那身穿細麻衣,腰間帶著墨盒的人,回來報告說:「我已照你的吩咐的做了。」

< ಯೆಹೆಜ್ಕೇಲನು 9 >