< ಎಜ್ರನು 5 >

1 ಈಗ ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.
Now Aggeus the prophet, and Zacharias the son of Addo, prophesied to the Jews that were in Judea and Jerusalem, in the name of the God of Israel.
2 ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಿಸಲು ಪ್ರಾರಂಭಿಸಿದರು. ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
Then rose up Zorobabel the son of Salathiel, and Josue the son of Josedec, and began to build the temple of God in Jerusalem, and with them were the prophets of God helping them.
3 ಆ ವೇಳೆಯಲ್ಲಿ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಪ್ರದೇಶಗಳ ಅಧಿಪತಿಯಾಗಿದ್ದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು, “ಈ ಆಲಯವನ್ನು ಪುನಃ ಕಟ್ಟಿ ತೀರಿಸುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ಕೇಳಿದರು.
And at the same time came to them Thathanai, who was governor beyond the river, and Stharbuzanai, and their counsellors: and said thus to them: Who hath given you counsel to build this house, and to repair the walls thereof?
4 ಇದಲ್ಲದೆ ಅವರು, “ಈ ಕಟ್ಟಡವನ್ನು ಕಟ್ಟಿಸುವವರ ಹೆಸರುಗಳೇನು?” ಎಂದು ವಿಚಾರಿಸಿದರು.
In answer to which we gave them the names of the men who were the promoters of that building.
5 ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವವರೆಗೂ, ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಉತ್ತರವನ್ನು ಪತ್ರದಲ್ಲಿ ಕಳುಹಿಸಿದರು.
But the eye of their God was upon the ancients of the Jews, and they could not hinder them. And it was agreed that the matter should be referred to Darius, and then they should give satisfaction concerning that accusation.
6 ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈನೂ, ಶೆತರ್ ಬೋಜೆನೈಯೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅವನ ಜೊತೆಗಾರರೂ, ಅರಸನಾದ ದಾರ್ಯಾವೆಷನಿಗೆ ಪತ್ರ ಬರೆದು ಕಳುಹಿಸಿದರು.
The copy of the letter that Thathanai governor of the country beyond the river, and Stharbuzanai, and his counsellors the Arphasachites, who dwelt beyond the river, sent to Darius the king.
7 ಅವರು ಅವನ ಬಳಿಗೆ ಕಳುಹಿಸಿದ ಪತ್ರದ ಪ್ರತಿಯಲ್ಲಿ: ಅರಸನಾದ ದಾರ್ಯಾವೆಷನಿಗೆ: ಸರ್ವತಾ ಕ್ಷೇಮ.
The letter which they sent him, was written thus: To Darius the king all peace.
8 ಅರಸನಿಗೆ ತಿಳಿಯಬೇಕಾದದ್ದೇನೆಂದರೆ, ನಾವು ಯೆಹೂದರ ದೇಶದಲ್ಲಿರುವ ಮಹಾ ದೇವರ ಆಲಯಕ್ಕೆ ಹೋದೆವು. ಅದನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನು ಇಡುತ್ತಿದ್ದಾರೆ. ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಿಂದ ವೇಗವಾಗಿ ವೃದ್ಧಿಯಾಗುತ್ತದೆ.
Be it known to the king, that we went to the province of Judea, to the house of the great God, which they are building with unpolished stones, and timber is laid in the walls: and this work is carried on diligently, and advanceth in their hands.
9 “ಆಗ ಈ ಆಲಯವನ್ನು ಕಟ್ಟುವುದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ನಾವು ಆ ಹಿರಿಯರನ್ನು ಕೇಳಿದೆವು.
And we asked those ancients, and said to them thus: Who hath given you authority to build this house, and to repair these walls?
10 ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಹೆಸರುಗಳನ್ನು ನಿಮಗೆ ಬರೆದು ತಿಳಿಸುವಂತೆ ಅವರ ಹೆಸರುಗಳನ್ನು ಕೇಳಿದೆವು.
We asked also of them their names, that we might give thee notice: and we have written the names of the men that are the chief among them.
11 ಅವರು ನಮಗೆ ಕೊಟ್ಟ ಉತ್ತರವೇನೆಂದರೆ: “ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರ್ಷಗಳ ಹಿಂದೆ ಇಸ್ರಾಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿದ್ದ ಆಲಯವನ್ನು ನಾವು ಪುನಃ ಕಟ್ಟುತ್ತಿದ್ದೇವೆ.
And they answered us in these words, saying: We are the servants of the God of heaven and earth, and we are building a temple that was built these many years ago, and which a great king of Israel built and set up.
12 ಆದರೆ ನಮ್ಮ ಪಿತೃಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ಕಾರಣ, ದೇವರು ಅವರನ್ನು ಬಾಬಿಲೋನಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆ ಅರಸನು ಆ ಆಲಯವನ್ನು ಹಾಳು ಮಾಡಿ, ಜನರನ್ನು ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದನು.
But after that our fathers had provoked the God of heaven to wrath, he delivered them into the hands of Nabuchodonosor the king of Babylon the Chaldean: and he destroyed this house, and carried away the people to Babylon.
13 “ಆದರೆ ಬಾಬಿಲೋನಿನ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ದೇವರ ಈ ಆಲಯವನ್ನು ಪುನಃ ಕಟ್ಟಲು ಆಜ್ಞೆಯನ್ನು ಕೊಟ್ಟನು.
But in the first year of Cyrus the king of Babylon, king Cyrus set forth a decree, that this house of God should be built.
14 ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ದೇವಾಲಯದಿಂದ ತೆಗೆದುಕೊಂಡು, ಬಾಬಿಲೋನಿನ ಮಂದಿರಕ್ಕೆ ತಂದ ದೇವಸ್ಥಾನದ ಬೆಳ್ಳಿಬಂಗಾರದ ಸಾಮಗ್ರಿಗಳನ್ನು ಅರಸನಾದ ಕೋರೆಷನು ಬಾಬಿಲೋನಿನ ಮಂದಿರದಿಂದ ತೆಗೆದುಕೊಂಡು, ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿಕೊಟ್ಟನು.
And the vessels also of gold and silver of the temple of God, which Nabuchodonosor had taken out of the temple, that was in Jerusalem, and had brought them to the temple of Babylon, king Cyrus brought out of the temple of Babylon, and they were delivered to one Sassabasar, whom also he appointed governor,
15 ಅವನಿಗೆ, ‘ಈ ಸಾಮಗ್ರಿಗಳನ್ನು ತೆಗೆದುಕೊಂಡು ಯೆರೂಸಲೇಮಿನಲ್ಲಿರುವ ದೇವಾಲಯಕ್ಕೆ ತೆಗೆದುಕೊಂಡು ಹೋಗು. ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟು,’ ಎಂದು ಆಜ್ಞಾಪಿಸಿದನು.
And said to him: Take these vessels, and go, and put them in the temple that is in Jerusalem, and let the house of God be built in its place.
16 “ಆಗ ಶೆಷ್ಬಚ್ಚರನು ಬಂದು, ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ, ಇನ್ನೂ ಮುಗಿಯಲಿಲ್ಲ,” ಎಂದರು.
Then came this same Sassabasar, and laid the foundations of the temple of God in Jerusalem, and from that time until now it is in building, and is not yet finished.
17 “ಆದ್ದರಿಂದ ಅರಸನಿಗೆ ಸರಿ ತೋರುವುದಾದರೆ, ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ, ಇಲ್ಲವೋ ಎಂಬುದನ್ನು ಬಾಬಿಲೋನಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸೋಣವಾಗಲಿ,” ಎಂಬುದಾಗಿ ಉತ್ತರಕೊಟ್ಟರು.
Now therefore if it seem good to the king, let him search in the king’s library, which is in Babylon, whether it hath been decreed by Cyrus the king, that the house of God in Jerusalem should be built, and let the king send his pleasure to us concerning this matter.

< ಎಜ್ರನು 5 >