< ಎಜ್ರನು 8 >

1 ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಬಾಬಿಲೋನಿನಿಂದ ನನ್ನ ಸಂಗಡ ಹೊರಟು ಬಂದವರ ಕುಟುಂಬಗಳಲ್ಲಿ ಮುಖ್ಯಸ್ಥರು ಯಾರೆಂದರೆ:
Now these are the heads of families who were listed of those who went up with me from Babylon, when Artaxerxes was king.
2 ಫೀನೆಹಾಸನ ವಂಶಜರಲ್ಲಿ ಗೇರ್ಷೋಮನೂ, ಈತಾಮಾರನ ವಂಶಜರಲ್ಲಿ ದಾನಿಯೇಲನೂ; ದಾವೀದನ ವಂಶಜರಲ್ಲಿ ಹಟ್ಟೂಷನೂ.
Of the sons of Phinehas, Gershom; of the sons of Ithamar, Daniel; of the sons of David, Hattush;
3 ಇವನು ಶೆಕನ್ಯನ ವಂಶಜನು. ಪರೋಷಿನ ವಂಶಜರಲ್ಲಿ ಜೆಕರ್ಯನೂ, ಅವನ ಸಂಗಡ ವಂಶಜರಲ್ಲಿ 150 ಮಂದಿ ಗಂಡಸರು.
Of the sons of Shecaniah; of the sons of Parosh, Zechariah; and with him were listed a hundred and fifty males.
4 ಪಹತ್ ಮೋವಾಬನ ವಂಶಜರಲ್ಲಿ ಜೆರಹ್ಯನ ಮಗನಾದ ಎಲಿಹೋಯೇನೈನೂ, ಅವನ ಸಂಗಡ 200 ಮಂದಿ ಗಂಡಸರು.
Of the sons of Pahath-moab, Eliehoenai, the son of Zerahiah; and with him two hundred males.
5 ಜತ್ತುವಿನ ವಂಶಜರಲ್ಲಿ ಯಹಜಿಯೇಲನ ಮಗನಾದ ಶೆಕನ್ಯನು ಮತ್ತು ಅವನ ಸಂಗಡ 300 ಮಂದಿ ಗಂಡಸರು.
Of the sons of Shecaniah, the son of Jahaziel; and with him three hundred males.
6 ಅದೀನನ ವಂಶಜರಲ್ಲಿ ಯೋನಾತಾನನ ಮಗ ಏಬೆದನೂ, ಅವನ ಸಂಗಡ 50 ಮಂದಿ ಗಂಡಸರು.
And of the sons of Adin, Ebed, the son of Jonathan; and with him fifty males.
7 ಏಲಾಮನ ವಂಶಜರಲ್ಲಿ ಅತಲ್ಯನ ಮಗ ಯೆಶಾಯನೂ, ಅವನ ಸಂಗಡ 70 ಮಂದಿ ಗಂಡಸರು.
And of the sons of Elam, Jeshaiah; the son of Athaliah; and with him seventy males.
8 ಶೆಫಟ್ಯನ ವಂಶಜರಲ್ಲಿ ಮೀಕಾಯೇಲನ ಮಗ ಜೆಬದ್ಯನೂ, ಅವನ ಸಂಗಡ 80 ಮಂದಿ ಗಂಡಸರು.
And of the sons of Shephatiah, Zebadiah, the son of Michael; and with him eighty males.
9 ಯೋವಾಬನ ವಂಶಜರಲ್ಲಿ ಯೆಹೀಯೇಲನ ಮಗ ಓಬದ್ಯನೂ, ಅವನ ಸಂಗಡ 218 ಮಂದಿ ಗಂಡಸರು.
Of the sons of Joab, Obadiah, the son of Jehiel; and with him two hundred and eighteen males.
10 ಬಾನೀಯ ವಂಶಜರಲ್ಲಿ ಯೋಸಿಫ್ಯನ ಮಗ ಶೆಲೋಮೀತನು ಮತ್ತು ಅವನ ಸಂಗಡ 160 ಮಂದಿ ಗಂಡಸರು.
And of the sons of Shelomith, the son of Josiphiah; and with him a hundred and sixty males.
11 ಬೇಬೈನ ವಂಶಜರಲ್ಲಿ ಬೆಬಾಯಿಯ ಮಗ ಜೆಕರ್ಯನು; ಅವನ ಸಂಗಡ 28 ಮಂದಿ ಗಂಡಸರು.
And of the sons of Bebai, Zechariah, the son of Bebai; and with him twenty-eight males.
12 ಅಜ್ಗಾದನ ವಂಶಜರಲ್ಲಿ ಹಕ್ಕಾಟಾನನ ಮಗ ಯೋಹಾನಾನನೂ, ಅವನ ಸಂಗಡ 110 ಮಂದಿ ಗಂಡಸರು;
And of the sons of Azgad, Johanan, the son of Hakkatan; and with him a hundred and ten males.
13 ಅದೋನೀಕಾಮಿನ ವಂಶಜರಲ್ಲಿ ಕಡೇ ಪುತ್ರರಾದ ಎಲೀಫೆಲೆಟ್, ಯೆವಿಯೇಲನು, ಶೆಮಾಯನು ಎಂಬ ಹೆಸರುಳ್ಳವರೂ, ಅವರ ಸಂಗಡ 60 ಮಂದಿ ಗಂಡಸರು;
And of the sons of Adonikam, the last, whose names were Eliphelet, Jeuel, and Shemaiah; and with them sixty males.
14 ಬಿಗ್ವೈ ವಂಶಜರಲ್ಲಿ ಜಕ್ಕೂರನ ಮಗನಾದ ಊತೈ ಮತ್ತು ಅವನ ಸಂಗಡ 70 ಮಂದಿ ಗಂಡಸರು.
And of the sons of Bigvai, Uthai and Zabbud; and with them seventy males.
15 ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು, ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ, ಯಾಜಕರನ್ನೂ ಶೋಧಿಸಿ ನೋಡುವಾಗ, ಲೇವಿಯರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.
And I made them come together by the river flowing to Ahava; and we were there in tents for three days: and after viewing the people and the priests I saw that no sons of Levi were there.
16 ಆಗ ನಾನು ಎಲೀಯೆಜೆರನು, ಅರೀಯೇಲನು, ಶೆಮಾಯನು, ಎಲ್ನತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ, ಯೋಯಾರೀಬನು, ಎಲ್ನತಾನನು ಎಂಬ ಗ್ರಹಿಕೆಯುಳ್ಳವರನ್ನೂ ಕರೆಕಳುಹಿಸಿದೆನು.
Then I sent for Eliezer and Ariel and Shemaiah and Elnathan Jarib and Elnathan and Nathan and Zechariah and Meshullam, all responsible men; and for Joiarib and Elnathan, who were wise men.
17 ಕಾಸಿಫ್ಯದಲ್ಲಿರುವ ಅಧಿಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ, ಅವರು ನಮ್ಮ ದೇವರ ಆಲಯಕ್ಕೋಸ್ಕರ ಸೇವಕರನ್ನು ತರುವ ಹಾಗೆ ಅವರು ಕಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ, ಅವನ ಸಹೋದರರಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು.
And I sent them to Iddo the chief at the place Casiphia, and gave them orders what to say to Iddo and his brothers the Nethinim at the place Casiphia, so that they might come back to us with men to do the work of the house of our God.
18 ನಮ್ಮ ದೇವರ ಕೃಪಾಹಸ್ತವು ನಮ್ಮ ಮೇಲೆ ಇದ್ದುದರಿಂದ, ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗ ಮಹ್ಲೀಯ ಪುತ್ರರಲ್ಲಿ ಬುದ್ಧಿವಂತನಾದ ಶೇರೇಬ್ಯನೂ, ಅವನ ಪುತ್ರರೂ, ಸಹೋದರರೂ ಆದ ಹದಿನೆಂಟು ಮಂದಿಯನ್ನೂ,
And by the help of our God they got for us Ish-sechel, one of the sons of Mahli, the son of Levi, the son of Israel; and Sherebiah with his sons and brothers, eighteen;
19 ಹಷಬ್ಯನೂ, ಅವನ ಸಂಗಡ ಮೆರಾರೀಯ ಪುತ್ರರಲ್ಲಿ ಯೆಶಾಯನೂ, ಅವನ ಸಹೋದರರೂ, ಅವರ ಪುತ್ರರೂ ಆದ ಇಪ್ಪತ್ತು ಮಂದಿಯನ್ನೂ,
And Hashabiah, and with him Jeshaiah of the sons of Merari, his brothers and their sons, twenty;
20 ದಾವೀದನೂ, ಪ್ರಧಾನರೂ, ಲೇವಿಯರನ್ನು ಸೇವಿಸುವುದಕ್ಕೆ ನೇಮಿಸಿದ ದೇವಾಲಯದ ಸೇವಕರಲ್ಲಿ ಇನ್ನೂರ ಇಪ್ಪತ್ತು ಮಂದಿ ಸೇವಕರನ್ನೂ, ನಮ್ಮ ಬಳಿಗೆ ಕರೆದುಕೊಂಡು ಬಂದರು. ಅವರೆಲ್ಲರ ಹೆಸರುಗಳು ದಾಖಲೆಯಾಗಿದ್ದವು.
And of the Nethinim, to whom David and the captains had given the work of helping the Levites, two hundred and twenty Nethinim, all of them specially named.
21 ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಳ್ಳುವುದಕ್ಕೂ, ನಮಗೂ ನಮ್ಮ ಮಕ್ಕಳಿಗೂ, ನಮ್ಮ ಎಲ್ಲಾ ಸ್ಥಿತಿಗೂ ಅವರಿಂದ ಸರಿಯಾದ ಮಾರ್ಗವನ್ನು ಹುಡುಕುವುದಕ್ಕೂ, ನಾನು ಅಲ್ಲಿ ಅಹಾವ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಪ್ರಕಟಿಸಿದೆನು.
Then I gave orders for a time of going without food, there by the river Ahava, so that we might make ourselves low before our God in prayer, requesting from him a straight way for us and for our little ones and for all our substance.
22 “ನಮ್ಮ ದೇವರ ಕೃಪಾಹಸ್ತವು ಅವರನ್ನು ಹುಡುಕುವವರೆಲ್ಲರ ಮೇಲೆಯೂ ಇದೆ, ಆದರೆ ಅವರ ಕೋಪವು ಅವರನ್ನು ತ್ಯಜಿಸುವ ಎಲ್ಲರ ವಿರುದ್ಧವಾಗಿರುತ್ತದೆ,” ಎಂದು ನಾವು ಅರಸನಿಗೆ ಹೇಳಿದ್ದರಿಂದ, ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಸೈನ್ಯವನ್ನೂ ಅಶ್ವಬಲವನ್ನೂ ಅರಸನಿಂದ ಕೇಳಲು ನಾಚಿಕೆಪಟ್ಟೆವು.
For I would not, for shame, make request to the king for a band of armed men and horsemen to give us help against those who might make attacks on us on the way: for we had said to the king, The hand of our God is on his servants for good, but his power and his wrath are against all those who are turned away from him.
23 ಆದ್ದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ದೇವರು ನಮ್ಮ ವಿಜ್ಞಾಪನೆಯನ್ನು ಕೇಳಿದರು.
So we went without food, requesting our God for this: and his ear was open to our prayer.
24 ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೇರೇಬ್ಯ, ಹಷಬ್ಯ ಇವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ
So I put on one side twelve of the chiefs of the priests, Sherebiah, Hashabiah, and ten of their brothers with them,
25 ಅರಸನೂ, ಅವನ ಸಲಹೆಗಾರರೂ, ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ, ಬಂಗಾರವನ್ನೂ, ಸಲಕರಣೆಗಳನ್ನೂ ಅವರಿಗೆ ತೂಕಮಾಡಿ ಕೊಟ್ಟೆನು.
And gave to them by weight the silver and the gold and the vessels, all the offering for the house of our God which the king and his wise men and his captains and all Israel there present had given:
26 ಅವರ ಕೈಗೆ ಕೊಟ್ಟ ಸಲಕರಣೆಗಳ ತೂಕ 22 ಬೆಳ್ಳಿ ಮೆಟ್ರಿಕ್ ಟನ್; ಬೆಳ್ಳಿಯ ನೂರು ಸಾಮಗ್ರಿಗಳ ತೂಕ 3.4 ಮೆಟ್ರಿಕ್ ಟನ್; ಬಂಗಾರ 3.4 ಮೆಟ್ರಿಕ್ ಟನ್.
Measuring into their hands six hundred and fifty talents of silver, and silver vessels, a hundred talents' weight, and a hundred talents of gold,
27 ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ 8.4 ಕಿಲೋಗ್ರಾಂ, ಇವುಗಳಲ್ಲದೆ ಶ್ರೇಷ್ಠವಾದ ಕಂಚಿನ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.
And twenty gold basins, of a thousand darics, and two vessels of the best bright brass, equal in value to gold.
28 ನಾನು ಅವರಿಗೆ, “ನೀವು ಯೆಹೋವ ದೇವರಿಗೆ ಪ್ರತಿಷ್ಠಿತರಾಗಿದ್ದೀರಿ. ಈ ವಸ್ತುಗಳು ಹಾಗೆಯೇ ಪ್ರತಿಷ್ಠಿತವು. ಈ ಬೆಳ್ಳಿ ಬಂಗಾರವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರಿಗೆ ಸಮರ್ಪಿತವಾದ ಕಾಣಿಕೆ.
And I said to them, You are holy to the Lord and the vessels are holy: and the silver and the gold are an offering freely given to the Lord, the God of your fathers.
29 ನೀವು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ, ಪ್ರಧಾನರ ಮುಂದೆಯೂ ಇಸ್ರಾಯೇಲ್ ಕುಟುಂಬಗಳ ಪ್ರಧಾನರ ಮುಂದೆಯೂ ತೂಕಮಾಡುವವರೆಗೆ ಜಾಗ್ರತೆಯಾಗಿ ಕಾಪಾಡಿರಿ,” ಎಂದೆನು.
Take care of them and keep them, till you put them on the scales before the chiefs of the priests and the Levites and the chiefs of the families of Israel, in Jerusalem, in the rooms of the house of the Lord.
30 ಹಾಗೆಯೇ ಯಾಜಕರೂ, ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ, ಬಂಗಾರವನ್ನೂ, ವಸ್ತುಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.
So the priests and the Levites took the weight of silver and gold and the vessels, to take them to Jerusalem into the house of our God.
31 ನಾವು ಯೆರೂಸಲೇಮಿಗೆ ಹೋದ ಮೊದಲನೆಯ ತಿಂಗಳ, ಹನ್ನೆರಡನೆಯ ದಿವಸದಲ್ಲಿ ಅಹಾವ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದುದರಿಂದ, ದೇವರು ಶತ್ರುವಿನ ಕೈಗೂ, ಮಾರ್ಗದಲ್ಲಿ ಹೊಂಚುಹಾಕುವವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟರು.
Then we went away from the river of Ahava on the twelfth day of the first month, to go to Jerusalem; and the hand of our God was on us, and he gave us salvation from our haters and those who were waiting to make an attack on us by the way.
32 ನಾವು ಯೆರೂಸಲೇಮಿಗೆ ಬಂದು, ಅಲ್ಲಿ ಮೂರು ದಿವಸ ವಿಶ್ರಮಿಸಿಕೊಂಡೆವು.
And we came to Jerusalem and were there for three days.
33 ತರುವಾಯ ನಾಲ್ಕನೆಯ ದಿವಸದಲ್ಲಿ ಆ ಬೆಳ್ಳಿಯೂ, ಬಂಗಾರವೂ, ಸಲಕರಣೆಗಳೂ ನಮ್ಮ ದೇವರ ಆಲಯದಲ್ಲಿ ಯಾಜಕರಾಗಿರುವ ಊರೀಯನ ಮಗ ಮೆರೇಮೋತನ ಕೈಯಿಂದ ತೂಕಮಾಡಿ ಕೊಟ್ಟೆವು. ಅವನ ಸಂಗಡ ಲೇವಿಯರಾದ ಫೀನೆಹಾಸನ ಮಗನಾಗಿರುವ ಎಲಿಯಾಜರನೂ, ಯೇಷೂವನ ಮಗ ಯೋಜಾಬಾದನೂ, ಬಿನ್ನೂಯ್ ಮಗ ನೋವದ್ಯನೂ ಇದ್ದರು.
And on the fourth day, the silver and the gold and the vessels were measured out by weight in the house of our God into the hands of Meremoth, the son of Uriah, the priest; and with him was Eleazar, the son of Phinehas; and with them were Jozabad, the son of Jeshua, and Noadiah, the son of Binnui, the Levites;
34 ಅದರದರ ಲೆಕ್ಕದ ಪ್ರಕಾರವೂ, ತೂಕದ ಪ್ರಕಾರವೂ ಎಲ್ಲವುಗಳ ತೂಕವು ತಕ್ಷಣವೇ ಲಿಖಿತವಾಯಿತು.
All was handed over by number and by weight: and the weight was put on record at that time.
35 ಸೆರೆಯಿಂದ ಮರಳಿ ಬಂದವರು ಇಸ್ರಾಯೇಲ್ ದೇವರಿಗೆ ದಹನಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲರಿಗೋಸ್ಕರ ಹನ್ನೆರಡು ಹೋರಿಗಳನ್ನೂ, ತೊಂಬತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ದೋಷಪರಿಹಾರಕ್ಕಾಗಿ ಹನ್ನೆರಡು ಹೋತಗಳನ್ನೂ ಅರ್ಪಿಸಿದರು. ಇವೆಲ್ಲಾ ಯೆಹೋವ ದೇವರಿಗೆ ದಹನಬಲಿಯಾಗಿತ್ತು.
And those who had been prisoners, who had come back from a strange land, made burned offerings to the God of Israel, twelve oxen for all Israel, ninety-six male sheep, seventy-seven lambs, twelve he-goats for a sin-offering: all this was a burned offering to the Lord.
36 ಅವರು ಅರಸನ ಆಜ್ಞೆಗಳನ್ನು ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ, ಯಜಮಾನರಿಗೂ ಒಪ್ಪಿಸಿದರು. ಆಗ ಅವರು ಜನರಿಗೂ, ದೇವರ ಆಲಯಕ್ಕೂ ಸಹಾಯ ಮಾಡಿದರು.
And they gave the king's orders to the king's captains and the rulers across the river, and they gave the people and the house of God the help which was needed.

< ಎಜ್ರನು 8 >