< ಗಲಾತ್ಯದವರಿಗೆ ಬರೆದ ಪತ್ರಿಕೆ 2 >

1 ಹದಿನಾಲ್ಕು ವರ್ಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ಪುನಃ ಯೆರೂಸಲೇಮಿಗೆ ಹೋದೆನು.
Then fourteen years after I went up again to Jerusalem with Barnabas, and took Titus with me also.
2 ನಾನು ನನಗೆ ದೊರೆತ ಪ್ರಕಟನೆಗೆ ಅನುಸಾರವಾಗಿ ಅಲ್ಲಿಗೆ ಹೋದೆನು. ಅಲ್ಲಿ ಇರುವ ಸಭೆಗೆ ಹೋಗಿ ಯೆಹೂದ್ಯರಲ್ಲದ ಜನರಿಗೆ ನಾನು ಸಾರುವ ಸುವಾರ್ತೆಯ ಬಗ್ಗೆ ವಿವರಿಸಿದೆನು. ಅಲ್ಲಿರುವ ಗಣ್ಯನಾಯಕರಿಗೆ ವೈಯಕ್ತಿಕವಾಗಿ ಅದರ ಬಗ್ಗೆ ವರದಿಮಾಡಿದೆನು. ಏಕೆಂದರೆ ನಾನು ಮಾಡಿದ ಸೇವೆ ಮತ್ತು ಮುಂದೆ ಮಾಡಲಿರುವ ಸೇವೆಯು ನಿಷ್ಫಲವಾಗಬಾರದೆಂಬ ಕಾರಣಕ್ಕಾಗಿ ಹೀಗೆ ಮಾಡಿದೆ.
And I went up by revelation, and communicated to them that gospel which I preach among the Gentiles, but privately to them which were of reputation, lest by any means I should run, or had run, in vain.
3 ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಅವನನ್ನು ಬಲಾತ್ಕಾರ ಮಾಡಲಿಲ್ಲ.
But neither Titus, who was with me, being a Greek, was compelled to be circumcised:
4 ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ವಿಶ್ವಾಸಿಗಳು ನಮ್ಮನ್ನು ದಾಸತ್ವದಲ್ಲಿ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.
And that because of false brothers unawares brought in, who came in privately to spy out our liberty which we have in Christ Jesus, that they might bring us into bondage:
5 ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲು ಒಪ್ಪಲಿಲ್ಲ.
To whom we gave place by subjection, no, not for an hour; that the truth of the gospel might continue with you.
6 ಅಲ್ಲಿದ್ದ ಸಭೆಯ ನಾಯಕರೂ ಸಹ ನನ್ನ ಸಂದೇಶದ ಬಗ್ಗೆ ನನಗೆ ಏನೂ ಹೇಳಲಿಲ್ಲ. ಅವರು ಎಂಥವರು ಎಂಬುದು ನನಗೆ ಮುಖ್ಯವಲ್ಲ; ಏಕೆಂದರೆ, ದೇವರು ಪಕ್ಷಪಾತಿಯಲ್ಲ.
But of these who seemed to be somewhat, (whatever they were, it makes no matter to me: God accepts no man’s person: ) for they who seemed to be somewhat in conference added nothing to me:
7 ಅದಕ್ಕೆ ಬದಲಾಗಿ, ಯೆಹೂದ್ಯರಿಗೆ ಸುವಾರ್ತೆ ಸಾರುವುದು ಪೇತ್ರನಿಗೆ ಒಪ್ಪಿಸಿಕೊಟ್ಟಂತೆಯೇ, ಯೆಹೂದ್ಯರಲ್ಲದವರಿಗೆ ಸುವಾರ್ತೆ ಸಾರುವುದು ನನಗೆ ಒಪ್ಪಿಸಲಾಯಿತು ಎಂಬುದನ್ನು ಸಭೆಯ ನಾಯಕರು ಸಹ ಗ್ರಹಿಸಿಕೊಂಡರು.
But contrariwise, when they saw that the gospel of the uncircumcision was committed to me, as the gospel of the circumcision was to Peter;
8 ಏಕೆಂದರೆ, ಯೆಹೂದ್ಯರಿಗೆ ಅಪೊಸ್ತಲನಾಗಿರುವ ಪೇತ್ರನಲ್ಲಿ ಕಾರ್ಯಮಾಡಿದ ದೇವರೇ, ಯೆಹೂದ್ಯರಲ್ಲದವರಿಗೆ ನಾನು ಅಪೊಸ್ತಲನಾಗಿರಲು ನನ್ನಲ್ಲಿ ಕಾರ್ಯಮಾಡಿದರು.
(For he that worked effectually in Peter to the apostleship of the circumcision, the same was mighty in me toward the Gentiles: )
9 ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.
And when James, Cephas, and John, who seemed to be pillars, perceived the grace that was given to me, they gave to me and Barnabas the right hands of fellowship; that we should go to the heathen, and they to the circumcision.
10 ಅವರು ನಾವು ಬಡವರನ್ನು ಜ್ಞಾಪಕಮಾಡಿಕೊಳ್ಳಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಇದನ್ನು ಮಾಡುವುದರಲ್ಲಿ ಆಸಕ್ತನಾಗಿದ್ದೆನು.
Only they would that we should remember the poor; the same which I also was forward to do.
11 ಕೇಫನು ಅಂತಿಯೋಕ್ಯ ಎಂಬ ಪಟ್ಟಣಕ್ಕೆ ಬಂದಾಗ ಅವನು ತಪ್ಪುಮಾಡಿದವನಾಗಿ ಇದ್ದುದರಿಂದ, ನಾನು ಅವನನ್ನು ಬಹಿರಂಗವಾಗಿ ಎದುರಿಸಿದೆನು.
But when Peter was come to Antioch, I withstood him to the face, because he was to be blamed.
12 ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮುಂಚೆ ಪೇತ್ರನು ಯೆಹೂದ್ಯರಲ್ಲದವರೊಡನೆ ಊಟಮಾಡುತ್ತಿದ್ದನು. ಅವರು ಬಂದ ಮೇಲೆ ಯೆಹೂದ್ಯರಿಗೆ ಅವನು ಭಯಪಟ್ಟು ಯೆಹೂದ್ಯರಲ್ಲದವರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು.
For before that certain came from James, he did eat with the Gentiles: but when they were come, he withdrew and separated himself, fearing them which were of the circumcision.
13 ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಕಪಟಮಾಡಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಒಳಗಾದನು.
And the other Jews dissembled likewise with him; so that Barnabas also was carried away with their dissimulation.
14 ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ.
But when I saw that they walked not uprightly according to the truth of the gospel, I said to Peter before them all, If you, being a Jew, live after the manner of Gentiles, and not as do the Jews, why compel you the Gentiles to live as do the Jews?
15 “ನಾವಂತೂ ಹುಟ್ಟು ಯೆಹೂದ್ಯರು, ಪಾಪಿಗಳೆಂದು ಕರೆಯಲಾಗುವ ಯೆಹೂದ್ಯರಲ್ಲದವರಲ್ಲ.
We who are Jews by nature, and not sinners of the Gentiles,
16 ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.
Knowing that a man is not justified by the works of the law, but by the faith of Jesus Christ, even we have believed in Jesus Christ, that we might be justified by the faith of Christ, and not by the works of the law: for by the works of the law shall no flesh be justified.
17 “ಆದರೆ, ನಾವು ಕ್ರಿಸ್ತ ಯೇಸುವಿನಲ್ಲಿ ನೀತಿವಂತರಾಗಲು ಪ್ರಯತ್ನಿಸುವ ನಾವೂ ಪಾಪಿಗಳಾಗಿ ಇರುವುದಾದರೆ, ಕ್ರಿಸ್ತ ಯೇಸು ಪಾಪಕ್ಕೆ ಪ್ರೋತ್ಸಾಹ ನೀಡಿದ ಹಾಗಾಗುವುದೋ? ಎಂದಿಗೂ ಇಲ್ಲ.
But if, while we seek to be justified by Christ, we ourselves also are found sinners, is therefore Christ the minister of sin? God forbid.
18 ನಾನು ಕೆಡವಿದ್ದನ್ನೇ ಪುನಃ ನಾನೇ ಕಟ್ಟಿದರೆ, ನನ್ನನ್ನು ನಿಯಮ ಉಲ್ಲಂಘಿಸಿದವನು ಎಂದು ರುಜುಪಡಿಸಿಕೊಳ್ಳುತ್ತೇನಲ್ಲಾ?
For if I build again the things which I destroyed, I make myself a transgressor.
19 “ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ನಿಯಮದ ಮೂಲಕ, ನಿಯಮದ ಪಾಲಿಗೆ ಸತ್ತವನಾಗಿದ್ದೇನೆ.
For I through the law am dead to the law, that I might live to God.
20 ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.
I am crucified with Christ: nevertheless I live; yet not I, but Christ lives in me: and the life which I now live in the flesh I live by the faith of the Son of God, who loved me, and gave himself for me.
21 ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಏಕೆಂದರೆ ನಿಯಮದ ಮೂಲಕ ನೀತಿಯು ಬರುವುದಾದರೆ, ಕ್ರಿಸ್ತ ಯೇಸು ಕಾರಣವಿಲ್ಲದೆ ಸತ್ತಂತಾಯಿತು!”
I do not frustrate the grace of God: for if righteousness come by the law, then Christ is dead in vain.

< ಗಲಾತ್ಯದವರಿಗೆ ಬರೆದ ಪತ್ರಿಕೆ 2 >