< ಗಲಾತ್ಯದವರಿಗೆ ಬರೆದ ಪತ್ರಿಕೆ 3 >
1 ಬುದ್ಧಿಯಿಲ್ಲದ ಗಲಾತ್ಯದವರೇ, ನಿಮಗೆ ಮಾಟಮಾಡಿಸಿದವರು ಯಾರು? ಯೇಸು ಕ್ರಿಸ್ತರು ಶಿಲುಬೆಗೆ ಹಾಕಿಸಿಕೊಂಡದ್ದನ್ನು ನಾನು ನಿಮ್ಮ ಕಣ್ಣೆದುರಿನಲ್ಲಿಯೇ ಚಿತ್ರೀಕರಿಸಲಿಲ್ಲವೆ?
O foolish Galatians, who has been bewitching you, before whose eyes Jesus Christ was set forth having been crucified?
2 ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ?
I only wish to learn this from you, Did you receive the Spirit by works of law, or by hearing of faith?
3 ನೀವು ಇಷ್ಟು ಬುದ್ಧಿಯಿಲ್ಲದವರಾಗಿದ್ದೀರಾ? ನೀವು ಪವಿತ್ರ ಆತ್ಮರಲ್ಲಿ ಪ್ರಾರಂಭಿಸಿ ಈಗ ಮಾನವೀಯವಾಗಿ ಪರಿಪೂರ್ಣರಾಗಬೇಕೆಂದ್ದೀರಾ?
Are you so foolish? having begun in the Spirit, are you now made perfect in the flesh?
4 ನೀವು ಎಷ್ಟೋ ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ?
Have you suffered so many things in vain? if indeed in vain.
5 ನಿಜವಾಗಿಯೂ ವ್ಯರ್ಥವಾಯಿತು. ದೇವರು ಪವಿತ್ರ ಆತ್ಮರನ್ನು ನಿಮಗೆ ಕೊಟ್ಟದ್ದು ಮತ್ತು ನಿಮ್ಮಲ್ಲಿ ಅದ್ಭುತಕಾರ್ಯಗಳನ್ನು ನಡೆಸಿದ್ದು ನಿಯಮದ ಕ್ರಿಯೆಗಳಿಂದಲೋ ಅಥವಾ ನೀವು ಕೇಳಿ ನಂಬಿದ್ದರಿಂದಲೋ?
Then did the one imparting to you the Spirit, and working miracles, among you, do it by works of law, or by hearing of faith?
6 ಈ ರೀತಿಯಾಗಿ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅದು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು.”
As Abraham believed God, and it was counted unto him for righteousness.
7 ಆದ್ದರಿಂದ ನಂಬುವವರೇ, ಅಬ್ರಹಾಮನ ಮಕ್ಕಳೆಂದು ನೀವು ಅರ್ಥಮಾಡಿಕೊಳ್ಳಿರಿ.
Then know that those who are of faith, the same are the sons of Abraham.
8 ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.
But the scripture, foreseeing that God would justify the Gentiles by faith, preached the gospel to Abraham beforehand, That in thee shall all the Gentiles be blessed.
9 ಆದ್ದರಿಂದ, ದೇವರನ್ನು ನಂಬುವ ಎಲ್ಲರೂ ಅಬ್ರಹಾಮನು ಆಶೀರ್ವಾದ ಹೊಂದಿದ ಹಾಗೆಯೇ ಆಶೀರ್ವಾದ ಹೊಂದುವರು.
Therefore those who are of faith are blessed with faithful Abraham.
10 ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿದೆ.
For so many as are of works of law are under the curse: for it is written, Cursed is every one who does not abide in all things which have been written in the book of the law, to do the same.
11 ಇದಲ್ಲದೆ ನಿಯಮದಿಂದ ದೇವರ ಮುಂದೆ ಯಾರೂ ನೀತಿವಂತರೆಂಬ ನಿರ್ಣಯವನ್ನು ಹೊಂದುವುದಿಲ್ಲವೆಂಬುದು ಸ್ಪಷ್ಟವಾಗಿದೆ. ಏಕೆಂದರೆ, “ನೀತಿವಂತನು ನಂಬಿಕೆಯಿಂದಲೇ ಬದುಕುವನು.”
But that no one is justified by law in the sight of God, is evident: because, The just shall live by faith:
12 ನಿಯಮವು ನಂಬಿಕೆಯನ್ನು ಆಧಾರಗೊಂಡದ್ದಲ್ಲ. ಆದರೆ, “ನಿಯಮಗಳ ಕ್ರಿಯೆಗಳನ್ನು ಮಾಡುವವನು ಅವುಗಳ ಮೂಲಕ ಬದುಕುವನು.”
though the law is not of faith; but the one having done these things shall live in them.
13 ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.
Christ has redeemed us from the curse of the law, being made a curse for us: because it has been written; Cursed is every one having been hung on the wood:
14 ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.
in order that the blessing of Abraham in Christ Jesus may come to the Gentiles; in order that we may receive the promise of the Spirit through faith.
15 ಪ್ರಿಯರೇ, ನಾನು ದಿನನಿತ್ಯದ ವ್ಯವಹಾರದಂತೆ ಮಾತನಾಡುತ್ತಿದ್ದೇನೆ. ಮತ್ತೊಬ್ಬನೊಡನೆ ಯಾರಾದರೂ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದ ಮೇಲೆ ಯಾರೂ ಅದನ್ನು ರದ್ದು ಮಾಡುವುದಿಲ್ಲ, ಇಲ್ಲವೆ ಕೂಡಿಸುವುದಿಲ್ಲ.
Brethren, I speak according to a man, nevertheless no one disannuls, or adds to, the covenant of a man which has been confirmed.
16 ಹಾಗೆಯೇ ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳು ಮಾಡಲಾದವು. ಅದರಲ್ಲಿ, “ನಿನ್ನ ಸಂತತಿಗಳಿಗೆ,” ಎಂದು ಹೇಳಿ ಅನೇಕರನ್ನು ಸೂಚಿಸದೆ, “ನಿನ್ನ ಸಂತತಿಗೆ,” ಎಂದು ಹೇಳಿದ ಒಬ್ಬರನ್ನೇ ಸೂಚಿಸಿದೆ. ಆ ಒಬ್ಬ ವ್ಯಕ್ತಿ ಕ್ರಿಸ್ತ ಯೇಸುವೇ.
But the promises were spoken to Abraham and his seed. He does not say, And unto seeds, as of many; but as of one; And thy seed, which is Christ.
17 ನಾನು ಹೇಳುವ ಮಾತಿನ ತಾತ್ಪರ್ಯ ಏನೆಂದರೆ, ದೇವರು ಸ್ಥಿರಪಡಿಸಿ ಮುಗಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರ್ಷಗಳ ತರುವಾಯ ಬಂದ ಮೋಶೆಯ ನಿಯಮವು ಆ ವಾಗ್ದಾನವನ್ನು ರದ್ದುಪಡಿಸಲಾಗದು ಮತ್ತು ವ್ಯರ್ಥಪಡಿಸಲಾಗದು.
And I say this; The law which was given after four hundred and thirty years, does not disannul the covenant which had been before confirmed of God, so as to make the promise of none effect.
18 ಏಕೆಂದರೆ ಆ ಬಾಧ್ಯತೆಯು ನಿಯಮದ ಪ್ರಕಾರವಾಗಿದ್ದರೆ, ಅದು ಇನ್ನು ವಾಗ್ದಾನದ ಮೇಲೆ ಆಧಾರವಾದದ್ದಲ್ಲ. ಆದರೆ ದೇವರು ತಮ್ಮ ಕೃಪೆಯಿಂದ ಅಬ್ರಹಾಮನಿಗೆ ವಾಗ್ದಾನದ ಮೂಲಕವೇ ಆ ಬಾಧ್ಯತೆಯನ್ನು ಕೊಟ್ಟಿದ್ದಾರೆ.
For if the inheritance were by law, it is no more by promise: but God gave it to Abraham through the promise.
19 ಹಾಗಾದರೆ ಮೋಶೆಯ ನಿಯಮವನ್ನು ಏಕೆ ಕೊಡಲಾಯಿತು? ಅಪರಾಧಗಳ ಅರಿವನ್ನು ಮೂಡಿಸುವುದಕ್ಕಾಗಿ, ನಿಯಮವು ಸೇರಿಸಲಾಯಿತು. ಇದು ಆ ಸಂತತಿಯಾದಾತನು ಬರುವ ವಾಗ್ದಾನದ ತನಕ ಮಾತ್ರವಾಗಿರುವುದು. ಹೀಗೆ ನಿಯಮವು ದೇವದೂತರ ಮುಖಾಂತರ ಮಧ್ಯಸ್ಥನಾದ ಮೋಶೆಯ ಕೈಯಲ್ಲಿ ಕೊಡಲಾಯಿತು.
Then what is the law? It was added on account of the transgressions, until the seed to whom the promise was made should come; being ordained by angels in the hand of a mediator.
20 ಒಂದು ಪಕ್ಷಕ್ಕಿಂತಲೂ ಹೆಚ್ಚಿನವನಾಗಿದ್ದರೆ ಮಾತ್ರ ಮಧ್ಯಸ್ಥನ ಅಗತ್ಯವಿರುವುದು; ದೇವರಾದರೋ ಒಬ್ಬರೇ.
A mediator is not of one; but God is one.
21 ಹಾಗಾದರೆ ನಿಯಮವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಆಗಬಾರದು! ಕೊಡಲಾಗಿದ್ದ ನಿಯಮವು ಒಂದು ವೇಳೆ ಜೀವವನ್ನು ನೀಡುವುದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ, ನಿಶ್ಚಯವಾಗಿಯೂ ಮೋಶೆಯ ನಿಯಮದಿಂದ ನೀತಿವಂತರಾಗುತ್ತಿದ್ದೆವು.
Then was the law against the promises of God? it could not be so. For if the law was given being able to create life, truly justification would have been by law:
22 ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.
but the scripture has shut up all things unto sin, in order that the promise through faith of Jesus Christ may be given to those who believe.
23 ನಂಬಿಕೆ ಬರುವುದಕ್ಕೆ ಮುಂಚೆ ನಾವು ನಿಯಮದ ಅಧೀನದಲ್ಲಿ ಇದ್ದೆವು. ಬರಲಿರುವ ಆ ನಂಬಿಕೆಯು ಪ್ರಕಟವಾಗುವ ತನಕ ನಾವು ಸೆರೆಯಾದವರಂತೆ ಇದ್ದೆವು.
But before faith came, we were kept under law, being shut up to the faith about to be revealed.
24 ಹೀಗಿರಲಾಗಿ ನಿಯಮವು ನಮ್ಮ ಪೋಷಕನಂತಿತ್ತು. ನಾವು ನಂಬಿಕೆಯ ಮೂಲಕ ನೀತಿವಂತರಾಗುವುದಕ್ಕಾಗಿ ಕ್ರಿಸ್ತ ಯೇಸುವಿನ ಬಳಿಗೆ ತರುವ ತನಕ ನಮ್ಮನ್ನು ಪೋಷಿಸುತ್ತದೆ.
Therefore the law became our schoolmaster to lead us to Christ, in order that we may be justified by faith;
25 ಆದರೆ ಈಗ ನಂಬಿಕೆಯು ಬಂದಿರುವುದರಿಂದ, ಇನ್ನೆಂದಿಗೂ ನಾವು ಪೋಷಕ ಎಂಬ ನಿಯಮದ ಕೆಳಗೆ ಇಲ್ಲ.
but faith having come, we are no longer under the schoolmaster.
26 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.
For you are all the sons of God, through faith, in Christ Jesus;
27 ಹೇಗೆಂದರೆ, ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿರಿ.
for so many of you as were baptized into Christ have put on Christ.
28 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.
There is no longer Jew nor Greek, nor bond nor free, nor male and female: for you are all one in Christ Jesus.
29 ಆದರೆ ನೀವು ಕ್ರಿಸ್ತನವರಾಗಿದ್ದರೆ, ಅಬ್ರಹಾಮನ ಸಂತತಿಯವರಾಗಿದ್ದೀರಿ ಮಾತ್ರವಲ್ಲದೆ ವಾಗ್ದಾನಕ್ಕನುಸಾರವಾಗಿ ವಾರಸುದಾರರೂ ಆಗಿದ್ದೀರಿ.
But if you belong to Christ then you are the seed of Abraham, heirs according to the promise.