< ಆದಿಕಾಂಡ 11 >
1 ಆ ಕಾಲದಲ್ಲಿ ಭೂಲೋಕದಲ್ಲೆಲ್ಲಾ ಒಂದೇ ಭಾಷೆಯಿತ್ತು. ಭಾಷಾಭೇದವೇನೂ ಇರಲಿಲ್ಲ.
온 땅의 구음이 하나이요 언어가 하나이었더라
2 ಜನರು ಪೂರ್ವದಿಕ್ಕಿಗೆ ಪ್ರಯಾಣ ಮಾಡುವಾಗ, ಶಿನಾರ್ ದೇಶದ ಬಯಲನ್ನು ಕಂಡು ಅಲ್ಲಿ ವಾಸಮಾಡಿದರು.
이에 그들이 동방으로 옮기다가 시날 평지를 만나 거기 거하고
3 ಅಲ್ಲಿ ಅವರು, “ಬನ್ನಿರಿ ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.
서로 말하되 자, 벽돌을 만들어 견고히 굽자 하고 이에 벽돌로 돌을 대신하며 역청으로 진흙을 대신하고
4 ಅನಂತರ ಅವರು, “ಬನ್ನಿರಿ, ನಾವು ಭೂಮಿಯ ಮೇಲೆ ಪಟ್ಟಣವನ್ನು ಕಟ್ಟೋಣ. ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನು ನಮಗೋಸ್ಕರವಾಗಿ ಕಟ್ಟಿಕೊಂಡು, ನಮಗೆ ಹೆಸರು ಸಂಪಾದಿಸಿಕೊಳ್ಳೋಣ. ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರುವುದಕ್ಕೆ ಆಸ್ಪದವಾಗುವದಿಲ್ಲ,” ಎಂದುಕೊಂಡರು.
또 말하되 자, 성과 대를 쌓아 대 꼭대기를 하늘에 닿게 하여 우리 이름을 내고 온 지면에 흩어짐을 면하자 하였더니
5 ಜನರು ಕಟ್ಟುತ್ತಿದ್ದ ಪಟ್ಟಣವನ್ನೂ ಗೋಪುರವನ್ನೂ ನೋಡುವುದಕ್ಕೆ ಯೆಹೋವ ದೇವರು ಇಳಿದು ಬಂದರು.
여호와께서 인생들의 쌓는 성과 대를 보시려고 강림하셨더라
6 ಯೆಹೋವ ದೇವರು, “ಇವರಿಗೆ ಒಂದೇ ಜನಾಂಗವೂ ಒಂದೇ ಭಾಷೆಯೂ ಇದೆ. ಇವರು ಇದನ್ನು ಮಾಡಲಾರಂಭಿಸಿದ್ದಾರೆ. ಈಗ ಇನ್ನು ಮುಂದೆ ಇವರು ಮಾಡುವುದಕ್ಕೆ ಉದ್ದೇಶಿಸುವುದು ಇವರಿಗೆ ಅಸಾಧ್ಯವಾಗುವುದಿಲ್ಲ.
여호와께서 가라사대 이 무리가 한 족속이요 언어도 하나이므로 이같이 시작하였으니 이후로는 그 경영하는 일을 금지할 수 없으리로다
7 ನಾವು ಇಳಿದು ಹೋಗಿ, ಇವರು ಒಬ್ಬರ ಮಾತನ್ನು ಒಬ್ಬರು ತಿಳಿಯದಂತೆ, ಇವರ ಭಾಷೆಯನ್ನು ಗಲಿಬಿಲಿ ಮಾಡೋಣ,” ಎಂದರು.
자, 우리가 내려가서 거기서 그들의 언어를 혼잡케 하여 그들로 서로 알아듣지 못하게 하자 하시고
8 ಆದ್ದರಿಂದ ಯೆಹೋವ ದೇವರು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿದರು. ಆಗ ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು.
여호와께서 거기서 그들을 온 지면에 흩으신 고로 그들이 성 쌓기를 그쳤더라
9 ಆದಕಾರಣ ಅದಕ್ಕೆ, ಬಾಬೆಲ್ ಎಂದು ಹೆಸರಾಯಿತು. ಏಕೆಂದರೆ ಅಲ್ಲಿ ಯೆಹೋವ ದೇವರು ಇಡೀ ಜಗತ್ತಿನ ಭಾಷೆಗಳನ್ನು ಗಲಿಬಿಲಿ ಮಾಡಿದರು. ಅಲ್ಲಿಂದ ಯೆಹೋವ ದೇವರು ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿಬಿಟ್ಟರು.
그러므로 그 이름을 바벨이라 하니 이는 여호와께서 거기서 온 땅의 언어를 혼잡케 하셨음이라 여호와께서 거기서 그들을 온 지면에 흩으셨더라
10 ಶೇಮನ ವಂಶಾವಳಿ: ಶೇಮನು ನೂರು ವರ್ಷದವನಾಗಿದ್ದಾಗ, ಎಂದರೆ, ಪ್ರಳಯವಾಗಿ ಎರಡು ವರ್ಷಗಳಾದ ಮೇಲೆ ಅವನಿಂದ ಅರ್ಪಕ್ಷದನು ಹುಟ್ಟಿದನು.
셈의 후예는 이러하니라 셈은 일백 세 곧 홍수 후 이 년에 아르박삿을 낳았고
11 ಶೇಮನಿಂದ ಅರ್ಪಕ್ಷದನು ಹುಟ್ಟಿದ ಮೇಲೆ, ಶೇಮನು ಐನೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.
아르박삿을 낳은 후에 오백 년을 지내며 자녀를 낳았으며
12 ಅರ್ಪಕ್ಷದನು ಮೂವತ್ತೈದು ವರ್ಷದವನಾಗಿರುವಾಗ, ಅವನಿಂದ ಶೆಲಹನು ಹುಟ್ಟಿದನು.
아르박삿은 삼십오 세에 셀라를 낳았고
13 ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.
셀라를 낳은 후에 사백삼 년을 지내며 자녀를 낳았으며
14 ಶೆಲಹನು ಮೂವತ್ತು ವರ್ಷದವನಾಗಿದ್ದಾಗ, ಅವನಿಂದ ಏಬೆರನು ಹುಟ್ಟಿದನು.
셀라는 삼십 세에 에벨을 낳았고
15 ಶೆಲಹನಿಂದ ಏಬೆರನು ಹುಟ್ಟಿದ ಮೇಲೆ, ಶೆಲಹನು ನಾನೂರ ಮೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.
에벨을 낳은 후에 사백삼 년을 지내며 자녀를 낳았으며
16 ಏಬೆರನು ಮೂವತ್ತ ನಾಲ್ಕು ವರ್ಷದವನಾಗಿದ್ದಾಗ, ಅವನಿಂದ ಪೆಲೆಗನು ಹುಟ್ಟಿದನು.
에벨은 삼십사 세에 벨렉을 낳았고
17 ಏಬೆರನಿಂದ ಪೆಲೆಗನು ಹುಟ್ಟಿದ ಮೇಲೆ, ಏಬೆರನು ನಾನೂರ ಮೂವತ್ತು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.
벨렉을 낳은 후에 사백삼십 년을 지내며 자녀를 낳았으며
18 ಪೆಲೆಗನು ಮೂವತ್ತು ವರ್ಷದವನಾಗಿದ್ದಾಗ, ಅವನಿಂದ ರೆಗೂವನು ಹುಟ್ಟಿದನು.
벨렉은 삼십 세에 르우를 낳았고
19 ಪೆಲೆಗನಿಂದ ರೆಗೂವನು ಹುಟ್ಟಿದ ಮೇಲೆ, ಪೆಲೆಗನು ಇನ್ನೂರ ಒಂಬತ್ತು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.
르우를 낳은 후에 이백구 년을 지내며 자녀를 낳았으며
20 ರೆಗೂವನು ಮೂವತ್ತೆರಡು ವರ್ಷದವನಾಗಿದ್ದಾಗ, ಅವನಿಂದ ಸೆರೂಗನು ಹುಟ್ಟಿದನು.
르우는 삼십이 세에 스룩을 낳았고
21 ರೆಗೂವನಿಂದ ಸೆರೂಗನು ಹುಟ್ಟಿದ ಮೇಲೆ, ರೆಗೂವನು ಇನ್ನೂರ ಏಳು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.
스룩을 낳은 후에 이백칠 년을 지내며 자녀를 낳았으며
22 ಸೆರೂಗನು ಮೂವತ್ತು ವರ್ಷದವನಾಗಿದ್ದಾಗ, ಅವನಿಂದ ನಾಹೋರನು ಹುಟ್ಟಿದನು.
스룩은 삼십 세에 나홀을 낳았고
23 ಸೆರೂಗನಿಂದ ನಾಹೋರನು ಹುಟ್ಟಿದ ಮೇಲೆ, ಸೆರೂಗನು ಇನ್ನೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.
나홀을 낳은 후에 이백 년을 지내며 자녀를 낳았으며
24 ನಾಹೋರನು ಇಪ್ಪತ್ತೊಂಬತ್ತು ವರ್ಷದವನಾಗಿದ್ದಾಗ, ಅವನಿಂದ ತೆರಹನು ಹುಟ್ಟಿದನು.
나홀은 이십구 세에 데라를 낳았고
25 ನಾಹೋರನಿಂದ ತೆರಹನು ಹುಟ್ಟಿದ ಮೇಲೆ, ನಾಹೋರನು ನೂರ ಹತ್ತೊಂಬತ್ತು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.
데라를 낳은 후에 일백십구 년을 지내며 자녀를 낳았으며
26 ತೆರಹನು ಎಪ್ಪತ್ತು ವರ್ಷದವನಾಗಿದ್ದಾಗ, ಅವನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು.
데라는 칠십 세에 아브람과 나홀과 하란을 낳았더라
27 ತೆರಹನ ವಂಶಾವಳಿ: ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು.
데라의 후예는 이러하니라 데라는 아브람과 나홀과 하란을 낳았고 하란은 롯을 낳았으며
28 ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಸ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆ ತೆರಹನಿಗಿಂತ ಮೊದಲು ಸತ್ತನು.
하란은 그 아비 데라보다 먼저 본토 갈대아 우르에서 죽었더라
29 ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು. ಹಾರಾನನು ಮಿಲ್ಕಾಳಿಗೂ ಇಸ್ಕಳಿಗೂ ತಂದೆ.
아브람과 나홀이 장가 들었으니 아브람의 아내 이름은 사래며 나홀의 아내 이름은 밀가니 하란의 딸이요 하란은 밀가의 아비며 또 이스가의 아비더라
30 ಸಾರಯಳು ಬಂಜೆಯಾದದ್ದರಿಂದ ಆಕೆಗೆ ಮಕ್ಕಳಿರಲಿಲ್ಲ.
사래는 잉태하지 못하므로 자식이 없었더라
31 ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗೂ ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗುವುದಕ್ಕಾಗಿ ಕಸ್ದೀಯರ ಊರ್ ಪಟ್ಟಣವನ್ನು ಬಿಟ್ಟು, ಹಾರಾನ್ ಎಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸವಾಗಿದ್ದನು.
데라가 그 아들 아브람과 하란의 아들 그 손자 롯과 그 자부 아브람의 아내 사래를 데리고 갈대아 우르에서 떠나 가나안 땅으로 가고자 하더니 하란에 이르러 거기 거하였으며
32 ತೆರಹನು ಇನ್ನೂರ ಐದು ವರ್ಷ ಜೀವಿಸಿ, ಹಾರಾನಿನಲ್ಲಿ ಮರಣಹೊಂದಿದನು.
데라는 이백오 세를 향수하고 하란에서 죽었더라