< ಆದಿಕಾಂಡ 13 >
1 ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತೆಗೆದುಕೊಂಡು ಲೋಟನ ಸಂಗಡ ಈಜಿಪ್ಟನ್ನು ಬಿಟ್ಟು ನೆಗೆವಕ್ಕೆ ಪ್ರಯಾಣಮಾಡಿದನು.
亞巴郎帶了妻子和他所有的一切,與羅特一同由埃及上來,往乃革布去。
2 ಅಬ್ರಾಮನು ಪಶುಗಳು, ಬೆಳ್ಳಿ ಮತ್ತು ಬಂಗಾರವನ್ನು ಹೊಂದಿ ಬಹು ಧನವಂತನಾಗಿದ್ದನು.
亞巴郎有許多牲畜和金銀。
3 ಅವನು ತನ್ನ ಪ್ರಯಾಣಗಳಲ್ಲಿ ನೆಗೆವದಿಂದ ಬೇತೇಲಿಗೆ, ಎಂದರೆ ಮೊದಲು ಬೇತೇಲಿಗೂ ಆಯಿ ಎಂಬ ಊರಿಗೂ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೆ ಬಂದನು.
他由乃革布逐漸往貝特耳移動帳幕,到了先前他在貝特耳與哈依之間,支搭帳幕的地方,
4 ಅಲ್ಲಿ ಅಬ್ರಾಮನು ಯೆಹೋವ ದೇವರ ಹೆಸರನ್ನು ಹೇಳಿಕೊಂಡು ಆರಾಧಿಸಿದನು.
亦即他先前築了祭壇,呼求上主之名的地方。
5 ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.
與亞巴郎同行的羅特,也有羊群、牛群和帳幕,
6 ಆಗ ಅವರು ಒಂದಾಗಿ ವಾಸಿಸಲಿಕ್ಕೆ ಆ ಸ್ಥಳ ಸಾಲದೆ ಹೋಯಿತು. ಅವರಿಬ್ಬರ ಸಂಪತ್ತು ಬಹಳವಾಗಿದ್ದರಿಂದ ಒಂದೇ ಸ್ಥಳದಲ್ಲಿ ಅವರು ವಾಸವಾಗಿರಲು ಆಗಲಿಲ್ಲ.
那地方容不下他們住在一起,因為他們的產業太多,無法住在一起。
7 ಆಗ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
牧放亞巴郎牲畜的人與牧放羅特牲畜的人,時常發生口角--當時客納罕人和培黎齊人尚住在那裏。
8 ಅಬ್ರಾಮನು ಲೋಟನಿಗೆ, “ನನಗೂ, ನಿನಗೂ; ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಿರಬಾರದು. ಏಕೆಂದರೆ ನಾವು ಬಳಗದವರು.
亞巴郎遂對羅特說:「在我與你,我的牧人與你的牧人之間,請不要發生口角,因為我們是至親。
9 ದೇಶವೆಲ್ಲಾ ನಿನ್ನ ಮುಂದೆ ಇರುತ್ತದೆಯಲ್ಲವೆ? ನಾವು ಪ್ರತ್ಯೇಕವಾಗೋಣ. ನೀನು ಎಡಕ್ಕೆ ಹೋದರೆ, ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ, ನಾನು ಎಡಕ್ಕೆ ಹೋಗುವೆನು,” ಎಂದನು.
所有的地方不是都在你面前嗎﹖請你與我分開。你若往左,我就往右;你若往右,我就往左。」
10 ಲೋಟನು ತನ್ನ ಕಣ್ಣುಗಳನ್ನೆತ್ತಿ ನೋಡಿ ಯೊರ್ದನಿನ ಮೈದಾನವನ್ನೆಲ್ಲಾ ಕಂಡನು. ಏಕೆಂದರೆ ಯೆಹೋವ ದೇವರು ಸೊದೋಮನ್ನೂ ಗೊಮೋರವನ್ನೂ ನಾಶ ಮಾಡುವುದಕ್ಕಿಂತ ಮುಂಚೆ, ಅದೆಲ್ಲಾ ಚೋಗರಿನವರೆಗೆ ನೀರಾವರಿ ಪ್ರದೇಶವಾಗಿದ್ದು, ಯೆಹೋವ ದೇವರ ತೋಟದಂತೆಯೂ ಈಜಿಪ್ಟ್ ದೇಶದಂತೆಯೂ ಇತ್ತು.
羅特舉目看見約但河整個平原,直到左哈爾一帶全有水灌溉,--這是在上主消滅索多瑪和哈摩辣以前的事,--有如上主的樂園,有如埃及地。
11 ಆದುದರಿಂದ ಲೋಟನು ಯೊರ್ದನಿನ ಕಣಿವೆಯನ್ನೆಲ್ಲಾ ತನಗಾಗಿ ಆರಿಸಿಕೊಂಡನು. ಲೋಟನು ಪೂರ್ವದಿಕ್ಕಿನ ಕಡೆಗೆ ಹೊರಟಿದ್ದರಿಂದ, ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾದರು.
羅特選了約但河的整個平原,遂興東方遷移;這樣,他們就彼此分開了:
12 ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನಾದರೋ ಸಮತಟ್ಟಾದ ಊರುಗಳಲ್ಲಿ ವಾಸಿಸುತ್ತಾ ಸೊದೋಮಿನ ಬಳಿ ತನ್ನ ಗುಡಾರವನ್ನು ಹಾಕಿದನು.
亞巴郎住在客納罕地;羅特住在平原的城市中,漸漸移動帳幕,直到索多瑪。
13 ಸೊದೋಮಿನ ಜನರು ದುಷ್ಟರಾಗಿದ್ದರು ಮತ್ತು ಯೆಹೋವ ದೇವರ ವಿರುದ್ಧ ಬಹಳ ಪಾಪಮಾಡುತ್ತಿದ್ದರು.
索多瑪人在上主面前罪大惡極。
14 ಲೋಟನು ಅಬ್ರಾಮನಿಂದ ಹೋದ ಮೇಲೆ ಯೆಹೋವ ದೇವರು ಅವನಿಗೆ, “ಈಗ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ಕಣ್ಣೆತ್ತಿ ನೋಡು.
羅特與亞巴郎分離以後,上主對亞巴郎說:「請你舉起眼來,由你所在的地方,向東西南北觀看;
15 ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
凡你看見的地方,我都要永遠賜給你和你的後裔。
16 ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ, ನಿನ್ನ ಸಂತಾನದವರನ್ನು ಸಹ ಲೆಕ್ಕಿಸಲು ಸಾಧ್ಯವಾಗುವುದು.
我要使你的後裔有如地上的灰塵;如果人能數清地上的灰塵,也能數清你的後裔。
17 ಎದ್ದು ದೇಶದ ಉದ್ದಗಲಕ್ಕೂ ನಡೆದಾಡು. ನಾನು ನಿನಗೆ ಅದನ್ನು ಕೊಡುವೆನು,” ಎಂದರು.
你起來,縱橫走遍這地,因為我要將這地賜給你。」
18 ಅನಂತರ ಅಬ್ರಾಮನು ತನ್ನ ಗುಡಾರವನ್ನು ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆಯ ತೋಪಿಗೆ ಬಂದು, ಅಲ್ಲಿ ವಾಸವಾಗಿದ್ದನು. ಅಲ್ಲಿ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.
於是亞巴郎移動了帳幕,來到赫貝龍的瑪默勒橡樹區居住,在那裏給上主築了一座祭壇。