< ಆದಿಕಾಂಡ 15 >
1 ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”
После сих происшествий было слово Господа к Авраму в видении ночью, и сказано: не бойся, Аврам; Я твой щит; награда твоя будет весьма велика.
2 ಅದಕ್ಕೆ ಅಬ್ರಾಮನು, “ಸಾರ್ವಭೌಮ ಯೆಹೋವ ದೇವರೇ, ಮಕ್ಕಳಿಲ್ಲದವನಾಗಿರುವ ನನಗೆ ಏನು ಕೊಡುವಿರಿ? ಈ ದಮಸ್ಕದ ಎಲೀಯೆಜೆರನಿಗೆ ನನ್ನ ಆಸ್ತಿ ಪಾಲಾಗಿಬಿಡುವುದು,” ಎಂದನು.
Аврам сказал: Владыка Господи! что Ты дашь мне? я остаюсь бездетным; распорядитель в доме моем этот Елиезер из Дамаска.
3 ಅನಂತರ ಅಬ್ರಾಮನು, “ನೀವು ನನಗೆ ಸಂತಾನವನ್ನು ಕೊಡಲಿಲ್ಲ. ನನ್ನ ಮನೆಯಲ್ಲಿರುವ ದಾಸನೇ ಉತ್ತರಾಧಿಕಾರಿಯಾಗಿರುವನು,” ಎಂದನು.
И сказал Аврам: вот, Ты не дал мне потомства, и вот, домочадец мой наследник мой.
4 ಆಗ ಯೆಹೋವ ದೇವರ ವಾಕ್ಯವು, “ಈ ಮನುಷ್ಯನು ನಿನ್ನ ಉತ್ತರಾಧಿಕಾರಿಯಾಗುವುದಿಲ್ಲ. ನಿನ್ನಿಂದಲೇ ಹುಟ್ಟಿಬರುವ ನಿನ್ನ ಮಗನು ನಿನ್ನ ವಾರಸುದಾರನಾಗುವನು,” ಎಂದು ಹೇಳಿ,
И было слово Господа к нему, и сказано: не будет он твоим наследником, но тот, кто произойдет из чресл твоих, будет твоим наследником.
5 ಯೆಹೋವ ದೇವರು ಅವನನ್ನು ಹೊರಗೆ ಕರೆದುಕೊಂಡು ಬಂದು, “ಈಗ ನೀನು ಆಕಾಶವನ್ನು ದೃಷ್ಟಿಸಿ, ನಕ್ಷತ್ರಗಳನ್ನು ಲೆಕ್ಕಿಸಲು ನಿನ್ನಿಂದಾದರೆ, ಲೆಕ್ಕಿಸು. ಅದರಂತೆಯೇ ನಿನ್ನ ಸಂತತಿಯು ಆಗುವುದು,” ಎಂದು ಹೇಳಿದರು.
И вывел его вон и сказал ему: посмотри на небо и сосчитай звезды, если ты можешь счесть их. И сказал ему: столько будет у тебя потомков.
6 ಅಬ್ರಾಮನು ಯೆಹೋವ ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು.
Аврам поверил Господу, и Он вменил ему это в праведность.
7 ದೇವರು ಅವನಿಗೆ, “ಈ ದೇಶವನ್ನು ಸೊತ್ತಾಗಿ ನಿನಗೆ ಕೊಡಲು, ಕಸ್ದೀಯರ ಊರ್ ಎಂಬ ಪ್ರದೇಶದಿಂದ ನಿನ್ನನ್ನು ಹೊರಗೆ ತಂದ ಯೆಹೋವ ದೇವರು ನಾನೇ,” ಎಂದು ಹೇಳಿದರು.
И сказал ему: Я Господь, Который вывел тебя из Ура Халдейского, чтобы дать тебе землю сию во владение.
8 ಅದಕ್ಕೆ ಅವನು, “ಸಾರ್ವಭೌಮ ಯೆಹೋವ ದೇವರೇ ನಾನು ಅದನ್ನು ನನ್ನ ಸೊತ್ತಾಗಿ ಹೊಂದುವೆನೆಂದು ಯಾವುದರಿಂದ ತಿಳಿದುಕೊಳ್ಳಲಿ?” ಎಂದನು.
Он сказал: Владыка Господи! по чему мне узнать, что я буду владеть ею?
9 ಅದಕ್ಕೆ ಯೆಹೋವ ದೇವರು ಅಬ್ರಾಮನಿಗೆ, “ಮೂರು ವರ್ಷದ ಕಡಸನ್ನು, ಮೂರು ವರ್ಷದ ಮೇಕೆಯನ್ನು, ಮೂರು ವರ್ಷದ ಟಗರನ್ನು, ಒಂದು ಬೆಳವಕ್ಕಿಯನ್ನು, ಒಂದು ಪಾರಿವಾಳವನ್ನು ನನಗಾಗಿ ತೆಗೆದುಕೊಂಡು ಬಾ,” ಎಂದರು.
Господь сказал ему: возьми Мне трехлетнюю телицу, трехлетнюю козу, трехлетнего овна, горлицу и молодого голубя.
10 ಅನಂತರ ಅವನು ಇವುಗಳನ್ನೆಲ್ಲಾ ಯೆಹೋವ ದೇವರಿಗಾಗಿ ತೆಗೆದುಕೊಂಡು ಬಂದು ಎರಡೆರಡು ಹೋಳುಮಾಡಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು. ಆದರೆ ಅವನು ಪಕ್ಷಿಗಳನ್ನು ತುಂಡು ಮಾಡಲಿಲ್ಲ.
Он взял всех их, рассек их пополам и положил одну часть против другой; только птиц не рассек.
11 ರಣಹದ್ದುಗಳು ಆ ಶವಗಳ ಮೇಲೆ ಇಳಿದು ಬಂದಾಗ, ಅಬ್ರಾಮನು ಅವುಗಳನ್ನು ಓಡಿಸಿದನು.
И налетели на трупы хищные птицы; но Аврам отгонял их.
12 ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತ್ತು. ಭೀಕರವಾದ ಕಾರ್ಗತ್ತಲು ಅವನ ಮೇಲೆ ಕವಿಯಿತು.
При захождении солнца крепкий сон напал на Аврама, и вот, напал на него ужас и мрак великий.
13 ಯೆಹೋವ ದೇವರು ಅಬ್ರಾಮನಿಗೆ, “ನಿನ್ನ ಸಂತತಿಯವರು ತಮ್ಮದಲ್ಲದ ದೇಶದಲ್ಲಿ ಪ್ರವಾಸಿಗಳಾಗಿರುವರು, ಅವರು ಗುಲಾಮರಾಗಿ ನಾಲ್ಕುನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಗುರಿಯಾಗುವರು ಎಂಬುದನ್ನು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
И сказал Господь Авраму: знай, что потомки твои будут пришельцами в земле не своей, и поработят их, и будут угнетать их четыреста лет,
14 ಆದರೆ ಅವರು ಗುಲಾಮರಾಗಿ ಸೇವೆ ಸಲ್ಲಿಸುತ್ತಿದ್ದ ದೇಶಕ್ಕೆ ನಾನು ನ್ಯಾಯತೀರಿಸುವೆನು. ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.
но Я произведу суд над народом, у которого они будут в порабощении; после сего они выйдут сюда с большим имуществом,
15 ನೀನಾದರೋ ಸಮಾಧಾನದಿಂದ ನಿನ್ನ ಪಿತೃಗಳ ಬಳಿಗೆ ಸೇರುವೆ. ಬಹಳ ಮುದಿ ಪ್ರಾಯದವನಾಗಿ ಮರಣಹೊಂದುವೆ.
а ты отойдешь к отцам твоим в мире и будешь погребен в старости доброй;
16 ಆಗ ನಾಲ್ಕನೆಯ ಸಂತಾನದವರು ಇಲ್ಲಿಗೆ ತಿರುಗಿ ಬರುವರು. ಏಕೆಂದರೆ ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ,” ಎಂದು ಹೇಳಿದರು.
в четвертом роде возвратятся они сюда: ибо мера беззаконий Аморреев доселе еще не наполнилась.
17 ಇದಾದ ಮೇಲೆ ಹೊತ್ತು ಮುಳುಗಿ ಕತ್ತಲಾಗುತ್ತಿರಲು, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.
Когда зашло солнце и наступила тьма, вот, дым как бы из печи и пламя огня прошли между рассеченными животными.
18 ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ
В этот день заключил Господь завет с Аврамом, сказав: потомству твоему даю Я землю сию, от реки Египетской до великой реки, реки Евфрата:
19 ಕೇನ್ಯರೂ ಕೆನಿಜ್ಜೀಯರೂ ಕದ್ಮೋನಿಯರೂ
Кенеев, Кенезеев, Кедмонеев,
20 ಹಿತ್ತಿಯರೂ ಪೆರಿಜೀಯರೂ ರೆಫಾಯರೂ
Хеттеев, Ферезеев, Рефаимов,
21 ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ಹೇಳಿದರು.
Аморреев, Хананеев, Евеев, Гергесеев и Иевусеев.